< בְּרֵאשִׁית 48 >
וַיְהִ֗י אַחֲרֵי֙ הַדְּבָרִ֣ים הָאֵ֔לֶּה וַיֹּ֣אמֶר לְיוֹסֵ֔ף הִנֵּ֥ה אָבִ֖יךָ חֹלֶ֑ה וַיִּקַּ֞ח אֶת־שְׁנֵ֤י בָנָיו֙ עִמּ֔וֹ אֶת־מְנַשֶּׁ֖ה וְאֶת־אֶפְרָֽיִם׃ | 1 |
ಕೆಲವು ಕಾಲದ ನಂತರ ಯೋಸೇಫನಿಗೆ, “ನಿನ್ನ ತಂದೆ ಅಸ್ವಸ್ಥನಾಗಿದ್ದಾನೆ,” ಎಂಬ ಸುದ್ದಿ ಬಂದಿತು. ಆಗ ಅವನು ತನ್ನ ಇಬ್ಬರು ಪುತ್ರರಾದ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಕರೆದುಕೊಂಡು ತಂದೆಯ ಬಳಿಗೆ ಬಂದನು.
וַיַּגֵּ֣ד לְיַעֲקֹ֔ב וַיֹּ֕אמֶר הִנֵּ֛ה בִּנְךָ֥ יוֹסֵ֖ף בָּ֣א אֵלֶ֑יךָ וַיִּתְחַזֵּק֙ יִשְׂרָאֵ֔ל וַיֵּ֖שֶׁב עַל־הַמִּטָּֽה׃ | 2 |
ಯಾಕೋಬನಿಗೆ, “ನಿನ್ನ ಮಗ ಯೋಸೇಫನು ಬಂದಿದ್ದಾನೆ,” ಎಂದು ತಿಳಿಸಿದಾಗ, ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕುಳಿತುಕೊಂಡನು.
וַיֹּ֤אמֶר יַעֲקֹב֙ אֶל־יוֹסֵ֔ף אֵ֥ל שַׁדַּ֛י נִרְאָֽה־אֵלַ֥י בְּל֖וּז בְּאֶ֣רֶץ כְּנָ֑עַן וַיְבָ֖רֶךְ אֹתִֽי׃ | 3 |
ಆಗ ಯಾಕೋಬನು ಯೋಸೇಫನಿಗೆ, “ಸರ್ವಶಕ್ತ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು, ನನ್ನನ್ನು ಆಶೀರ್ವದಿಸಿದರು.
וַיֹּ֣אמֶר אֵלַ֗י הִנְנִ֤י מַפְרְךָ֙ וְהִרְבִּיתִ֔ךָ וּנְתַתִּ֖יךָ לִקְהַ֣ל עַמִּ֑ים וְנָ֨תַתִּ֜י אֶת־הָאָ֧רֶץ הַזֹּ֛את לְזַרְעֲךָ֥ אַחֲרֶ֖יךָ אֲחֻזַּ֥ת עוֹלָֽם׃ | 4 |
ದೇವರು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು, ನಿನ್ನ ತರುವಾಯ ನಿನ್ನ ಸಂತತಿಗೂ ಈ ದೇಶವನ್ನು ಶಾಶ್ವತವಾದ ಸ್ವತ್ತನ್ನಾಗಿ ಕೊಡುತ್ತೇನೆ,’ ಎಂದು ಹೇಳಿದರು.
וְעַתָּ֡ה שְׁנֵֽי־בָנֶיךָ֩ הַנּוֹלָדִ֨ים לְךָ֜ בְּאֶ֣רֶץ מִצְרַ֗יִם עַד־בֹּאִ֥י אֵלֶ֛יךָ מִצְרַ֖יְמָה לִי־הֵ֑ם אֶפְרַ֙יִם֙ וּמְנַשֶּׁ֔ה כִּרְאוּבֵ֥ן וְשִׁמְע֖וֹן יִֽהְיוּ־לִֽי׃ | 5 |
“ಈಗ ನಾನು ನಿನ್ನ ಬಳಿಗೆ ಈಜಿಪ್ಟಿಗೆ ಬರುವ ಮೊದಲು ಈಜಿಪ್ಟಿನಲ್ಲಿ ನಿನಗೆ ಹುಟ್ಟಿದ ಇಬ್ಬರು ಪುತ್ರರಾದ ಎಫ್ರಾಯೀಮ್ ಮನಸ್ಸೆಯರು ನನ್ನವರಾಗಿರಬೇಕು. ಅವರು ರೂಬೇನ್ ಮತ್ತು ಸಿಮೆಯೋನರಂತೆ ನನ್ನವರಾಗಿರಬೇಕು.
וּמוֹלַדְתְּךָ֛ אֲשֶׁר־הוֹלַ֥דְתָּ אַחֲרֵיהֶ֖ם לְךָ֣ יִהְי֑וּ עַ֣ל שֵׁ֧ם אֲחֵיהֶ֛ם יִקָּרְא֖וּ בְּנַחֲלָתָֽם׃ | 6 |
ಆದರೆ ಅವರ ತರುವಾಯ ನಿನ್ನಿಂದ ಹುಟ್ಟುವ ಸಂತಾನವು ನಿನ್ನದಾಗಿರಲಿ. ಅವರು ತಮ್ಮ ಸಹೋದರರ ಸೊತ್ತಿಗೆ ಬಾಧ್ಯತೆಯನ್ನು ಪಡೆದು ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ.
וַאֲנִ֣י ׀ בְּבֹאִ֣י מִפַּדָּ֗ן מֵ֩תָה֩ עָלַ֨י רָחֵ֜ל בְּאֶ֤רֶץ כְּנַ֙עַן֙ בַּדֶּ֔רֶךְ בְּע֥וֹד כִּבְרַת־אֶ֖רֶץ לָבֹ֣א אֶפְרָ֑תָה וָאֶקְבְּרֶ֤הָ שָּׁם֙ בְּדֶ֣רֶךְ אֶפְרָ֔ת הִ֖וא בֵּ֥ית לָֽחֶם׃ | 7 |
ನಾನು ಪದ್ದನ್ ಅರಾಮಿನಿಂದ ಬಂದಾಗ, ಕಾನಾನ್ ದೇಶದಲ್ಲಿ ಎಫ್ರಾತಿನಿಂದ ಸ್ವಲ್ಪ ದೂರವಾಗಿರುವಾಗ, ರಾಹೇಲಳು ಸತ್ತುಹೋದಳು. ಅಲ್ಲಿ ಅಂದರೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಆಕೆಯನ್ನು ಸಮಾಧಿಮಾಡಿದೆನು,” ಎಂದನು.
וַיַּ֥רְא יִשְׂרָאֵ֖ל אֶת־בְּנֵ֣י יוֹסֵ֑ף וַיֹּ֖אמֶר מִי־אֵֽלֶּה׃ | 8 |
ಆಗ ಇಸ್ರಾಯೇಲನು ಯೋಸೇಫನ ಮಕ್ಕಳನ್ನು ಕಂಡು, “ಇವರು ಯಾರು?” ಎಂದನು.
וַיֹּ֤אמֶר יוֹסֵף֙ אֶל־אָבִ֔יו בָּנַ֣י הֵ֔ם אֲשֶׁר־נָֽתַן־לִ֥י אֱלֹהִ֖ים בָּזֶ֑ה וַיֹּאמַ֕ר קָֽחֶם־נָ֥א אֵלַ֖י וַאֲבָרֲכֵֽם׃ | 9 |
ಅದಕ್ಕೆ ಯೋಸೇಫನು ತನ್ನ ತಂದೆಗೆ, “ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಪುತ್ರರು,” ಎಂದನು. ಆಗ ಇಸ್ರಾಯೇಲನು, “ಅವರನ್ನು ನನ್ನ ಬಳಿಗೆ ಕರೆದುಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ,” ಎಂದನು.
וְעֵינֵ֤י יִשְׂרָאֵל֙ כָּבְד֣וּ מִזֹּ֔קֶן לֹ֥א יוּכַ֖ל לִרְא֑וֹת וַיַּגֵּ֤שׁ אֹתָם֙ אֵלָ֔יו וַיִּשַּׁ֥ק לָהֶ֖ם וַיְחַבֵּ֥ק לָהֶֽם׃ | 10 |
ಇಸ್ರಾಯೇಲನು ಮುದುಕನಾಗಿದ್ದದ್ದರಿಂದ, ಅವನ ಕಣ್ಣುಗಳು ಕಾಣದಷ್ಟು ಮಬ್ಬಾಗಿದ್ದವು. ಯೋಸೇಫನು ಅವರನ್ನು ಅವನ ಸಮೀಪಕ್ಕೆ ತಂದಾಗ, ಅವನು ಅವರನ್ನು ಮುದ್ದಿಟ್ಟು, ಅಪ್ಪಿಕೊಂಡನು.
וַיֹּ֤אמֶר יִשְׂרָאֵל֙ אֶל־יוֹסֵ֔ף רְאֹ֥ה פָנֶ֖יךָ לֹ֣א פִלָּ֑לְתִּי וְהִנֵּ֨ה הֶרְאָ֥ה אֹתִ֛י אֱלֹהִ֖ים גַּ֥ם אֶת־זַרְעֶֽךָ׃ | 11 |
ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ಕಾಣುವೆನೆಂದು ನಾನು ನೆನಸಿರಲಿಲ್ಲ. ಆದರೆ ನಿನ್ನ ಸಂತಾನವನ್ನು ಸಹ ದೇವರು ನನಗೆ ಕಾಣುವಂತೆ ಅನುಗ್ರಹಿಸಿದ್ದಾನೆ,” ಎಂದನು.
וַיּוֹצֵ֥א יוֹסֵ֛ף אֹתָ֖ם מֵעִ֣ם בִּרְכָּ֑יו וַיִּשְׁתַּ֥חוּ לְאַפָּ֖יו אָֽרְצָה׃ | 12 |
ಆಗ ಯೋಸೇಫನು ಅವರನ್ನು ಮೊಣಕಾಲುಗಳ ಬಳಿಯಿಂದ ಬರಮಾಡಿ ತಂದೆಗೆ ಅಡ್ಡಬಿದ್ದನು.
וַיִּקַּ֣ח יוֹסֵף֮ אֶת־שְׁנֵיהֶם֒ אֶת־אֶפְרַ֤יִם בִּֽימִינוֹ֙ מִשְּׂמֹ֣אל יִשְׂרָאֵ֔ל וְאֶת־מְנַשֶּׁ֥ה בִשְׂמֹאל֖וֹ מִימִ֣ין יִשְׂרָאֵ֑ל וַיַּגֵּ֖שׁ אֵלָֽיו׃ | 13 |
ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯೀಮನನ್ನೂ, ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ, ಅವರಿಬ್ಬರನ್ನೂ ತನ್ನ ತಂದೆಯ ಬಳಿಗೆ ತಂದನು.
וַיִּשְׁלַח֩ יִשְׂרָאֵ֨ל אֶת־יְמִינ֜וֹ וַיָּ֨שֶׁת עַל־רֹ֤אשׁ אֶפְרַ֙יִם֙ וְה֣וּא הַצָּעִ֔יר וְאֶת־שְׂמֹאל֖וֹ עַל־רֹ֣אשׁ מְנַשֶּׁ֑ה שִׂכֵּל֙ אֶת־יָדָ֔יו כִּ֥י מְנַשֶּׁ֖ה הַבְּכֽוֹר׃ | 14 |
ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯೀಮನ ತಲೆಯ ಮೇಲೆಯೂ, ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ, ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.
וַיְבָ֥רֶךְ אֶת־יוֹסֵ֖ף וַיֹּאמַ֑ר הָֽאֱלֹהִ֡ים אֲשֶׁר֩ הִתְהַלְּכ֨וּ אֲבֹתַ֤י לְפָנָיו֙ אַבְרָהָ֣ם וְיִצְחָ֔ק הָֽאֱלֹהִים֙ הָרֹעֶ֣ה אֹתִ֔י מֵעוֹדִ֖י עַד־הַיּ֥וֹם הַזֶּֽה׃ | 15 |
ಆಗ ಅವನು ಯೋಸೇಫನನ್ನು ಹೀಗೆ ಆಶೀರ್ವದಿಸಿದನು, “ನನ್ನ ತಂದೆ ಅಬ್ರಹಾಮನೂ ಇಸಾಕನೂ ಯಾವ ದೇವರ ಮುಂದೆ ನಡೆದುಕೊಂಡರೋ, ಆ ದೇವರೇ ನಾನು ಹುಟ್ಟಿದಂದಿನಿಂದ ಇಂದಿನವರೆಗೆ ನನಗೆ ಕುರುಬ ಆಗಿದ್ದ ದೇವರು.
הַמַּלְאָךְ֩ הַגֹּאֵ֨ל אֹתִ֜י מִכָּל־רָ֗ע יְבָרֵךְ֮ אֶת־הַנְּעָרִים֒ וְיִקָּרֵ֤א בָהֶם֙ שְׁמִ֔י וְשֵׁ֥ם אֲבֹתַ֖י אַבְרָהָ֣ם וְיִצְחָ֑ק וְיִדְגּ֥וּ לָרֹ֖ב בְּקֶ֥רֶב הָאָֽרֶץ׃ | 16 |
ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”
וַיַּ֣רְא יוֹסֵ֗ף כִּי־יָשִׁ֨ית אָבִ֧יו יַד־יְמִינ֛וֹ עַל־רֹ֥אשׁ אֶפְרַ֖יִם וַיֵּ֣רַע בְּעֵינָ֑יו וַיִּתְמֹ֣ךְ יַד־אָבִ֗יו לְהָסִ֥יר אֹתָ֛הּ מֵעַ֥ל רֹאשׁ־אֶפְרַ֖יִם עַל־רֹ֥אשׁ מְנַשֶּֽׁה׃ | 17 |
ತನ್ನ ತಂದೆಯು ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನು ಇಟ್ಟದ್ದನ್ನು ಯೋಸೇಫನು ಕಂಡಾಗ, ಅದು ಅವನಿಗೆ ಇಷ್ಟವಾಗಿರಲಿಲ್ಲ. ಆದ್ದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು, ಎಫ್ರಾಯೀಮನ ತಲೆಯ ಮೇಲಿಂದ ತೆಗೆದು, ಮನಸ್ಸೆಯ ತಲೆಯ ಮೇಲೆ ಇಡುವುದರಲ್ಲಿದ್ದನು.
וַיֹּ֧אמֶר יוֹסֵ֛ף אֶל־אָבִ֖יו לֹא־כֵ֣ן אָבִ֑י כִּי־זֶ֣ה הַבְּכֹ֔ר שִׂ֥ים יְמִינְךָ֖ עַל־רֹאשֽׁוֹ׃ | 18 |
ಯೋಸೇಫನು ತನ್ನ ತಂದೆಗೆ, “ಅಪ್ಪಾ, ಹಾಗಲ್ಲ, ಇವನೇ ಜೇಷ್ಠಪುತ್ರನು. ಇವನ ತಲೆಯ ಮೇಲೆ ಬಲಗೈ ಇಡು,” ಎಂದನು.
וַיְמָאֵ֣ן אָבִ֗יו וַיֹּ֙אמֶר֙ יָדַ֤עְתִּֽי בְנִי֙ יָדַ֔עְתִּי גַּם־ה֥וּא יִֽהְיֶה־לְּעָ֖ם וְגַם־ה֣וּא יִגְדָּ֑ל וְאוּלָ֗ם אָחִ֤יו הַקָּטֹן֙ יִגְדַּ֣ל מִמֶּ֔נּוּ וְזַרְע֖וֹ יִהְיֶ֥ה מְלֹֽא־הַגּוֹיִֽם׃ | 19 |
ಅದಕ್ಕೆ ಅವನ ತಂದೆಯು ಒಪ್ಪದೆ, “ನನಗೆ ಗೊತ್ತು. ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವುದಲ್ಲದೆ ಅವನು ದೊಡ್ಡವನಾಗುವನು. ಆದರೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತತಿಯು ಜನಾಂಗಗಳ ಸಮೂಹವಾಗುವುದು,” ಎಂದನು.
וַיְבָ֨רֲכֵ֜ם בַּיּ֣וֹם הַהוּא֮ לֵאמוֹר֒ בְּךָ֗ יְבָרֵ֤ךְ יִשְׂרָאֵל֙ לֵאמֹ֔ר יְשִֽׂמְךָ֣ אֱלֹהִ֔ים כְּאֶפְרַ֖יִם וְכִמְנַשֶּׁ֑ה וַיָּ֥שֶׂם אֶת־אֶפְרַ֖יִם לִפְנֵ֥י מְנַשֶּֽׁה׃ | 20 |
ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವದಿಸಿ, ಹೀಗೆಂದನು: “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಈ ಆಶೀರ್ವಾದವನ್ನು ಹೇಳುವರು: ‘ಎಫ್ರಾಯೀಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲಿ.’” ಹೀಗೆ ಹೇಳುತ್ತಾ ಯಾಕೋಬನು ಎಫ್ರಾಯೀಮನಿಗೆ ಮನಸ್ಸೆಗಿಂತಲೂ ಉನ್ನತಸ್ಥಾನವನ್ನು ಕೊಟ್ಟನು.
וַיֹּ֤אמֶר יִשְׂרָאֵל֙ אֶל־יוֹסֵ֔ף הִנֵּ֥ה אָנֹכִ֖י מֵ֑ת וְהָיָ֤ה אֱלֹהִים֙ עִמָּכֶ֔ם וְהֵשִׁ֣יב אֶתְכֶ֔ם אֶל־אֶ֖רֶץ אֲבֹתֵיכֶֽם׃ | 21 |
ಆಗ ಇಸ್ರಾಯೇಲನು ಯೋಸೇಫನಿಗೆ, “ನಾನು ಸಾಯುತ್ತೇನೆ, ಆದರೆ ದೇವರು ನಿಮ್ಮ ಸಂಗಡವಿದ್ದು, ನಿಮ್ಮನ್ನು ನಿಮ್ಮ ಪಿತೃಗಳ ದೇಶಕ್ಕೆ ಮತ್ತೆ ಸೇರಿಸುವರು.
וַאֲנִ֞י נָתַ֧תִּֽי לְךָ֛ שְׁכֶ֥ם אַחַ֖ד עַל־אַחֶ֑יךָ אֲשֶׁ֤ר לָקַ֙חְתִּי֙ מִיַּ֣ד הָֽאֱמֹרִ֔י בְּחַרְבִּ֖י וּבְקַשְׁתִּֽי׃ פ | 22 |
ಇದಲ್ಲದೆ ನಾನು ನನ್ನ ಖಡ್ಗದಿಂದಲೂ ಬಿಲ್ಲಿನಿಂದಲೂ ಅಮೋರಿಯರ ಕೈಯಿಂದ ತೆಗೆದುಕೊಂಡ ಒಂದು ಹೊಲವನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ,” ಎಂದನು.