< יְשַׁעְיָהוּ 25 >
יְהוָ֤ה אֱלֹהַי֙ אַתָּ֔ה אֲרֽוֹמִמְךָ֙ אוֹדֶ֣ה שִׁמְךָ֔ כִּ֥י עָשִׂ֖יתָ פֶּ֑לֶא עֵצ֥וֹת מֵֽרָח֖וֹק אֱמ֥וּנָה אֹֽמֶן׃ | 1 |
೧ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು.
כִּ֣י שַׂ֤מְתָּ מֵעִיר֙ לַגָּ֔ל קִרְיָ֥ה בְצוּרָ֖ה לְמַפֵּלָ֑ה אַרְמ֤וֹן זָרִים֙ מֵעִ֔יר לְעוֹלָ֖ם לֹ֥א יִבָּנֶֽה׃ | 2 |
೨ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ, ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ.
עַל־כֵּ֖ן יְכַבְּד֣וּךָ עַם־עָ֑ז קִרְיַ֛ת גּוֹיִ֥ם עָרִיצִ֖ים יִירָאֽוּךָ׃ | 3 |
೩ಆದಕಾರಣ ಬಲಿಷ್ಠವಾದ ಜನಾಂಗವು ನಿನ್ನನ್ನು ಘನಪಡಿಸುವುದು, ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವುದು.
כִּֽי־הָיִ֨יתָ מָע֥וֹז לַדָּ֛ל מָע֥וֹז לָאֶבְי֖וֹן בַּצַּר־ל֑וֹ מַחְסֶ֤ה מִזֶּ֙רֶם֙ צֵ֣ל מֵחֹ֔רֶב כִּ֛י ר֥וּחַ עָרִיצִ֖ים כְּזֶ֥רֶם קִֽיר׃ | 4 |
೪ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.
כְּחֹ֣רֶב בְּצָי֔וֹן שְׁא֥וֹן זָרִ֖ים תַּכְנִ֑יעַ חֹ֚רֶב בְּצֵ֣ל עָ֔ב זְמִ֥יר עָֽרִיצִ֖ים יַעֲנֶֽה׃ פ | 5 |
೫ಮೋಡಗಳು ಒಣನೆಲದ ಕಾವನ್ನು ತಂಪಾಗಿಸುವಂತೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೆ ಕಡಿಮೆಯಾಗುವುದೋ ಹಾಗೆ ನಿನ್ನಿಂದ ಭೀಕರರ ಉತ್ಸಾಹ ಗಾನವು ಕ್ರಮೇಣ ನಿಂತುಹೋಗುವುದು.
וְעָשָׂה֩ יְהוָ֨ה צְבָא֜וֹת לְכָל־הָֽעַמִּים֙ בָּהָ֣ר הַזֶּ֔ה מִשְׁתֵּ֥ה שְׁמָנִ֖ים מִשְׁתֵּ֣ה שְׁמָרִ֑ים שְׁמָנִים֙ מְמֻ֣חָיִ֔ם שְׁמָרִ֖ים מְזֻקָּקִֽים׃ | 6 |
೬ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು.
וּבִלַּע֙ בָּהָ֣ר הַזֶּ֔ה פְּנֵֽי־הַלּ֥וֹט ׀ הַלּ֖וֹט עַל־כָּל־הָֽעַמִּ֑ים וְהַמַּסֵּכָ֥ה הַנְּסוּכָ֖ה עַל־כָּל־הַגּוֹיִֽם׃ | 7 |
೭ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ, ಸಕಲ ದೇಶದವರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವನು.
בִּלַּ֤ע הַמָּ֙וֶת֙ לָנֶ֔צַח וּמָחָ֨ה אֲדֹנָ֧י יְהוִ֛ה דִּמְעָ֖ה מֵעַ֣ל כָּל־פָּנִ֑ים וְחֶרְפַּ֣ת עַמּ֗וֹ יָסִיר֙ מֵעַ֣ל כָּל־הָאָ֔רֶץ כִּ֥י יְהוָ֖ה דִּבֵּֽר׃ פ | 8 |
೮ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.
וְאָמַר֙ בַּיּ֣וֹם הַה֔וּא הִנֵּ֨ה אֱלֹהֵ֥ינוּ זֶ֛ה קִוִּ֥ינוּ ל֖וֹ וְיֽוֹשִׁיעֵ֑נוּ זֶ֤ה יְהוָה֙ קִוִּ֣ינוּ ל֔וֹ נָגִ֥ילָה וְנִשְׂמְחָ֖ה בִּישׁוּעָתֽוֹ׃ | 9 |
೯ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.
כִּֽי־תָנ֥וּחַ יַד־יְהוָ֖ה בָּהָ֣ר הַזֶּ֑ה וְנָ֤דוֹשׁ מוֹאָב֙ תַּחְתָּ֔יו כְּהִדּ֥וּשׁ מַתְבֵּ֖ן במי מַדְמֵנָֽה׃ | 10 |
೧೦ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು.
וּפֵרַ֤שׂ יָדָיו֙ בְּקִרְבּ֔וֹ כַּאֲשֶׁ֛ר יְפָרֵ֥שׂ הַשֹּׂחֶ֖ה לִשְׂח֑וֹת וְהִשְׁפִּיל֙ גַּֽאֲוָת֔וֹ עִ֖ם אָרְבּ֥וֹת יָדָֽיו׃ | 11 |
೧೧ಈಜುವವನು ಕೈಯಾಡಿಸುವಂತೆ ಅವರು ಅದರಲ್ಲಿಯೇ ಕೈಯಾಡಿಸುವರು; ಆದರೆ ಯೆಹೋವನು ಅವರ ಗರ್ವವನ್ನೂ, ಕೈಯ ಚಮತ್ಕಾರವನ್ನೂ ತಗ್ಗಿಸಿಬಿಡುವನು.
וּמִבְצַ֞ר מִשְׂגַּ֣ב חוֹמֹתֶ֗יךָ הֵשַׁ֥ח הִשְׁפִּ֛יל הִגִּ֥יעַ לָאָ֖רֶץ עַד־עָפָֽר׃ ס | 12 |
೧೨ದುರ್ಗಮವಾಗಿಯೂ, ಎತ್ತರವಾಗಿಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲ ಸಮಮಾಡಿ ಧೂಳಿಗೆ ತರುವನು.