< יְשַׁעְיָהוּ 37 >
וַיְהִ֗י כִּשְׁמֹ֙עַ֙ הַמֶּ֣לֶךְ חִזְקִיָּ֔הוּ וַיִּקְרַ֖ע אֶת־בְּגָדָ֑יו וַיִּתְכַּ֣ס בַּשָּׂ֔ק וַיָּבֹ֖א בֵּ֥ית יְהוָֽה׃ | 1 |
ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು.
וַ֠יִּשְׁלַח אֶת־אֶלְיָקִ֨ים אֲשֶׁר־עַל־הַבַּ֜יִת וְאֵ֣ת ׀ שֶׁבְנָ֣א הַסּוֹפֵ֗ר וְאֵת֙ זִקְנֵ֣י הַכֹּהֲנִ֔ים מִתְכַּסִּ֖ים בַּשַּׂקִּ֑ים אֶל־יְשַֽׁעְיָ֥הוּ בֶן־אָמ֖וֹץ הַנָּבִֽיא׃ | 2 |
ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.
וַיֹּאמְר֣וּ אֵלָ֗יו כֹּ֚ה אָמַ֣ר חִזְקִיָּ֔הוּ יוֹם־צָרָ֧ה וְתוֹכֵחָ֛ה וּנְאָצָ֖ה הַיּ֣וֹם הַזֶּ֑ה כִּ֣י בָ֤אוּ בָנִים֙ עַד־מַשְׁבֵּ֔ר וְכֹ֥חַ אַ֖יִן לְלֵדָֽה׃ | 3 |
ಆಗ ಅವರು ಯೆಶಾಯನಿಗೆ, “ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.
אוּלַ֡י יִשְׁמַע֩ יְהוָ֨ה אֱלֹהֶ֜יךָ אֵ֣ת ׀ דִּבְרֵ֣י רַב־שָׁקֵ֗ה אֲשֶׁר֩ שְׁלָח֨וֹ מֶֽלֶךְ־אַשּׁ֤וּר ׀ אֲדֹנָיו֙ לְחָרֵף֙ אֱלֹהִ֣ים חַ֔י וְהוֹכִ֙יחַ֙ בַּדְּבָרִ֔ים אֲשֶׁ֥ר שָׁמַ֖ע יְהוָ֣ה אֱלֹהֶ֑יךָ וְנָשָׂ֣אתָ תְפִלָּ֔ה בְּעַ֥ד הַשְּׁאֵרִ֖ית הַנִּמְצָאָֽה׃ | 4 |
ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು, ಎಂಬುದಾಗಿ ಹಿಜ್ಕೀಯನು ಅನ್ನುತ್ತಾನೆ,” ಎಂದು ಹೇಳಿದರು.
וַיָּבֹ֗אוּ עַבְדֵ֛י הַמֶּ֥לֶךְ חִזְקִיָּ֖הוּ אֶל־יְשַׁעְיָֽהוּ׃ | 5 |
ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದು ಹೇಳಿದಾಗ,
וַיֹּ֤אמֶר אֲלֵיהֶם֙ יְשַֽׁעְיָ֔הוּ כֹּ֥ה תֹאמְר֖וּן אֶל־אֲדֹנֵיכֶ֑ם כֹּ֣ה ׀ אָמַ֣ר יְהוָ֗ה אַל־תִּירָא֙ מִפְּנֵ֤י הַדְּבָרִים֙ אֲשֶׁ֣ר שָׁמַ֔עְתָּ אֲשֶׁ֧ר גִּדְּפ֛וּ נַעֲרֵ֥י מֶלֶךְ־אַשּׁ֖וּר אוֹתִֽי׃ | 6 |
ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
הִנְנִ֨י נוֹתֵ֥ן בּוֹ֙ ר֔וּחַ וְשָׁמַ֥ע שְׁמוּעָ֖ה וְשָׁ֣ב אֶל־אַרְצ֑וֹ וְהִפַּלְתִּ֥יו בַּחֶ֖רֶב בְּאַרְצֽוֹ׃ | 7 |
ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’” ಎಂದು ಹೇಳಿದನು.
וַיָּ֙שָׁב֙ רַב־שָׁקֵ֔ה וַיִּמְצָא֙ אֶת־מֶ֣לֶךְ אַשּׁ֔וּר נִלְחָ֖ם עַל־לִבְנָ֑ה כִּ֣י שָׁמַ֔ע כִּ֥י נָסַ֖ע מִלָּכִֽישׁ׃ | 8 |
ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು.
וַיִּשְׁמַ֗ע עַל־תִּרְהָ֤קָה מֶֽלֶךְ־כּוּשׁ֙ לֵאמֹ֔ר יָצָ֖א לְהִלָּחֵ֣ם אִתָּ֑ךְ וַיִּשְׁמַע֙ וַיִּשְׁלַ֣ח מַלְאָכִ֔ים אֶל־חִזְקִיָּ֖הוּ לֵאמֹֽר׃ | 9 |
ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ,
כֹּ֣ה תֹאמְר֗וּן אֶל־חִזְקִיָּ֤הוּ מֶֽלֶךְ־יְהוּדָה֙ לֵאמֹ֔ר אַל־יַשִּֽׁאֲךָ֣ אֱלֹהֶ֔יךָ אֲשֶׁ֥ר אַתָּ֛ה בּוֹטֵ֥חַ בּ֖וֹ לֵאמֹ֑ר לֹ֤א תִנָּתֵן֙ יְר֣וּשָׁלִַ֔ם בְּיַ֖ד מֶ֥לֶךְ אַשּֽׁוּר׃ | 10 |
“ಹಿಜ್ಕೀಯನೇ, ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು.
הִנֵּ֣ה ׀ אַתָּ֣ה שָׁמַ֗עְתָּ אֲשֶׁ֨ר עָשׂ֜וּ מַלְכֵ֥י אַשּׁ֛וּר לְכָל־הָאֲרָצ֖וֹת לְהַחֲרִימָ֑ם וְאַתָּ֖ה תִּנָּצֵֽל׃ | 11 |
ಇಗೋ, ಅಸ್ಸೀರಿಯದ ಅರಸರು ಸಮಸ್ತ ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ನೀನು ಕೇಳಿದಿಯಲ್ಲಾ. ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವೆಯೋ?
הַהִצִּ֨ילוּ אוֹתָ֜ם אֱלֹהֵ֤י הַגּוֹיִם֙ אֲשֶׁ֣ר הִשְׁחִ֣יתוּ אֲבוֹתַ֔י אֶת־גּוֹזָ֖ן וְאֶת־חָרָ֑ן וְרֶ֥צֶף וּבְנֵי־עֶ֖דֶן אֲשֶׁ֥ר בִּתְלַשָּֽׂר׃ | 12 |
ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?
אַיֵּ֤ה מֶֽלֶךְ־חֲמָת֙ וּמֶ֣לֶךְ אַרְפָּ֔ד וּמֶ֖לֶךְ לָעִ֣יר סְפַרְוָ֑יִם הֵנַ֖ע וְעִוָּֽה׃ | 13 |
ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.
וַיִּקַּ֨ח חִזְקִיָּ֧הוּ אֶת־הַסְּפָרִ֛ים מִיַּ֥ד הַמַּלְאָכִ֖ים וַיִּקְרָאֵ֑הוּ וַיַּ֙עַל֙ בֵּ֣ית יְהוָ֔ה וַיִּפְרְשֵׂ֥הוּ חִזְקִיָּ֖הוּ לִפְנֵ֥י יְהוָֽה׃ | 14 |
ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.
וַיִּתְפַּלֵּל֙ חִזְקִיָּ֔הוּ אֶל־יְהוָ֖ה לֵאמֹֽר׃ | 15 |
ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ,
יְהוָ֨ה צְבָא֜וֹת אֱלֹהֵ֤י יִשְׂרָאֵל֙ יֹשֵׁ֣ב הַכְּרֻבִ֔ים אַתָּה־ה֤וּא הָֽאֱלֹהִים֙ לְבַדְּךָ֔ לְכֹ֖ל מַמְלְכ֣וֹת הָאָ֑רֶץ אַתָּ֣ה עָשִׂ֔יתָ אֶת־הַשָּׁמַ֖יִם וְאֶת־הָאָֽרֶץ׃ | 16 |
“ಸೇನಾಧೀಶ್ವರ ಯೆಹೋವ ದೇವರೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.
הַטֵּ֨ה יְהוָ֤ה ׀ אָזְנְךָ֙ וּֽשְׁמָ֔ע פְּקַ֧ח יְהוָ֛ה עֵינֶ֖ךָ וּרְאֵ֑ה וּשְׁמַ֗ע אֵ֚ת כָּל־דִּבְרֵ֣י סַנְחֵרִ֔יב אֲשֶׁ֣ר שָׁלַ֔ח לְחָרֵ֖ף אֱלֹהִ֥ים חָֽי׃ | 17 |
ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ.
אָמְנָ֖ם יְהוָ֑ה הֶחֱרִ֜יבוּ מַלְכֵ֥י אַשּׁ֛וּר אֶת־כָּל־הָאֲרָצ֖וֹת וְאֶת־אַרְצָֽם׃ | 18 |
“ಯೆಹೋವ ದೇವರೇ, ಅಸ್ಸೀರಿಯದ ಅರಸರು ಸಕಲ ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ, ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ.
וְנָתֹ֥ן אֶת־אֱלֹהֵיהֶ֖ם בָּאֵ֑שׁ כִּי֩ לֹ֨א אֱלֹהִ֜ים הֵ֗מָּה כִּ֣י אִם־מַעֲשֵׂ֧ה יְדֵֽי־אָדָ֛ם עֵ֥ץ וָאֶ֖בֶן וַֽיְאַבְּדֽוּם׃ | 19 |
ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.
וְעַתָּה֙ יְהוָ֣ה אֱלֹהֵ֔ינוּ הוֹשִׁיעֵ֖נוּ מִיָד֑וֹ וְיֵֽדְעוּ֙ כָּל־מַמְלְכ֣וֹת הָאָ֔רֶץ כִּֽי־אַתָּ֥ה יְהוָ֖ה לְבַדֶּֽךָ׃ | 20 |
ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.
וַיִּשְׁלַח֙ יְשַֽׁעְיָ֣הוּ בֶן־אָמ֔וֹץ אֶל־חִזְקִיָּ֖הוּ לֵאמֹ֑ר כֹּֽה־אָמַ֤ר יְהוָה֙ אֱלֹהֵ֣י יִשְׂרָאֵ֔ל אֲשֶׁר֙ הִתְפַּלַּ֣לְתָּ אֵלַ֔י אֶל־סַנְחֵרִ֖יב מֶ֥לֶךְ אַשּֽׁוּר׃ | 21 |
ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ, “ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು, ಇಸ್ರಾಯೇಲಿನ ಯೆಹೋವ ದೇವರಿಗೆ ಪ್ರಾರ್ಥನೆ ಮಾಡಿದ್ದನ್ನು ಕೇಳಿ,
זֶ֣ה הַדָּבָ֔ר אֲשֶׁר־דִּבֶּ֥ר יְהוָ֖ה עָלָ֑יו בָּזָ֨ה לְךָ֜ לָעֲגָ֣ה לְךָ֗ בְּתוּלַת֙ בַּת־צִיּ֔וֹן אַחֲרֶ֙יךָ֙ רֹ֣אשׁ הֵנִ֔יעָה בַּ֖ת יְרוּשָׁלִָֽם׃ | 22 |
ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.
אֶת־מִ֤י חֵרַ֙פְתָּ֙ וְגִדַּ֔פְתָּ וְעַל־מִ֖י הֲרִימ֣וֹתָה קּ֑וֹל וַתִּשָּׂ֥א מָר֛וֹם עֵינֶ֖יךָ אֶל־קְד֥וֹשׁ יִשְׂרָאֵֽל׃ | 23 |
ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?
בְּיַ֣ד עֲבָדֶיךָ֮ חֵרַ֣פְתָּ ׀ אֲדֹנָי֒ וַתֹּ֗אמֶר בְּרֹ֥ב רִכְבִּ֛י אֲנִ֥י עָלִ֛יתִי מְר֥וֹם הָרִ֖ים יַרְכְּתֵ֣י לְבָנ֑וֹן וְאֶכְרֹ֞ת קוֹמַ֤ת אֲרָזָיו֙ מִבְחַ֣ר בְּרֹשָׁ֔יו וְאָבוֹא֙ מְר֣וֹם קִצּ֔וֹ יַ֖עַר כַּרְמִלּֽוֹ׃ | 24 |
ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು, ‘ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಉನ್ನತವಾದ ಸ್ಥಳವನ್ನೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.
אֲנִ֥י קַ֖רְתִּי וְשָׁתִ֣יתִי מָ֑יִם וְאַחְרִב֙ בְּכַף־פְּעָמַ֔י כֹּ֖ל יְאֹרֵ֥י מָצֽוֹר׃ | 25 |
ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ, ಎಂದು ಕೊಚ್ಚಿಕೊಂಡಿದ್ದೀ.’
הֲלֽוֹא־שָׁמַ֤עְתָּ לְמֵֽרָחוֹק֙ אוֹתָ֣הּ עָשִׂ֔יתִי מִ֥ימֵי קֶ֖דֶם וִיצַרְתִּ֑יהָ עַתָּ֣ה הֲבֵאתִ֔יהָ וּתְהִ֗י לְהַשְׁא֛וֹת גַּלִּ֥ים נִצִּ֖ים עָרִ֥ים בְּצֻרֽוֹת׃ | 26 |
“ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ
וְיֹֽשְׁבֵיהֶן֙ קִצְרֵי־יָ֔ד חַ֖תּוּ וָבֹ֑שׁוּ הָי֞וּ עֵ֤שֶׂב שָׂדֶה֙ וִ֣ירַק דֶּ֔שֶׁא חֲצִ֣יר גַּגּ֔וֹת וּשְׁדֵמָ֖ה לִפְנֵ֥י קָמָֽה׃ | 27 |
ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ.
וְשִׁבְתְּךָ֛ וְצֵאתְךָ֥ וּבוֹאֲךָ֖ יָדָ֑עְתִּי וְאֵ֖ת הִֽתְרַגֶּזְךָ֥ אֵלָֽי׃ | 28 |
“ಆದರೆ ನೀನು ಎಲ್ಲಿ ವಾಸಿಸುವೆಯೆಂಬುದನ್ನು ನೀನು ಯಾವಾಗ ಬರುವೆ ಹೋಗುವೆ ಎಂಬುದನ್ನು ನೀನು ನನ್ನ ಮೇಲೆ ಹೇಗೆ ಕೋಪಿಸಿಕೊಳ್ಳುವೆ? ಎಂಬುದನ್ನು ನಾನು ಬಲ್ಲೆನು.
יַ֚עַן הִתְרַגֶּזְךָ֣ אֵלַ֔י וְשַׁאֲנַנְךָ֖ עָלָ֣ה בְאָזְנָ֑י וְשַׂמְתִּ֨י חַחִ֜י בְּאַפֶּ֗ךָ וּמִתְגִּי֙ בִּשְׂפָתֶ֔יךָ וַהֲשִׁ֣יבֹתִ֔יךָ בַּדֶּ֖רֶךְ אֲשֶׁר־בָּ֥אתָ בָּֽהּ׃ | 29 |
ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ; ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.
וְזֶה־לְּךָ֣ הָא֔וֹת אָכ֤וֹל הַשָּׁנָה֙ סָפִ֔יחַ וּבַשָּׁנָ֥ה הַשֵּׁנִ֖ית שָׁחִ֑יס וּבַשָּׁנָ֣ה הַשְּׁלִישִׁ֗ית זִרְע֧וּ וְקִצְר֛וּ וְנִטְע֥וּ כְרָמִ֖ים ואכול פִרְיָֽם׃ | 30 |
“ಹಿಜ್ಕೀಯನೇ, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವುದೇ ನಿಮಗೆ ಸಂಕೇತವಾಗಿರುವದು.
וְיָ֨סְפָ֜ה פְּלֵיטַ֧ת בֵּית־יְהוּדָ֛ה הַנִּשְׁאָרָ֖ה שֹׁ֣רֶשׁ לְמָ֑טָּה וְעָשָׂ֥ה פְרִ֖י לְמָֽעְלָה׃ | 31 |
ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ, ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.
כִּ֤י מִירֽוּשָׁלִַ֙ם֙ תֵּצֵ֣א שְׁאֵרִ֔ית וּפְלֵיטָ֖ה מֵהַ֣ר צִיּ֑וֹן קִנְאַ֛ת יְהוָ֥ה צְבָא֖וֹת תַּֽעֲשֶׂה־זֹּֽאת׃ ס | 32 |
ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು.
לָכֵ֗ן כֹּֽה־אָמַ֤ר יְהוָה֙ אֶל־מֶ֣לֶךְ אַשּׁ֔וּר לֹ֤א יָבוֹא֙ אֶל־הָעִ֣יר הַזֹּ֔את וְלֹֽא־יוֹרֶ֥ה שָׁ֖ם חֵ֑ץ וְלֹֽא־יְקַדְּמֶ֣נָּה מָגֵ֔ן וְלֹֽא־יִשְׁפֹּ֥ךְ עֳלֶ֖יהָ סֹלְלָֽה׃ | 33 |
“ಆದ್ದರಿಂದ ಯೆಹೋವ ದೇವರು ಅಸ್ಸೀರಿಯದ ಅರಸನನ್ನು ಕುರಿತು ಹೀಗೆ ಹೇಳುತ್ತಾರೆ: “ಅವನು ಈ ಪಟ್ಟಣದೊಳಗೆ ಬರುವುದಿಲ್ಲ. ಅಲ್ಲಿ ಬಾಣವನ್ನು ಎಸೆಯುವುದಿಲ್ಲ. ಗುರಾಣಿಯೊಂದಿಗೆ ಅದರ ಮುಂದೆ ಬರಲಾರನು. ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಲು ದಿಬ್ಬವನ್ನು ನಿರ್ಮಿಸುವುದಿಲ್ಲ.
בַּדֶּ֥רֶךְ אֲשֶׁר־בָּ֖א בָּ֣הּ יָשׁ֑וּב וְאֶל־הָעִ֥יר הַזֹּ֛את לֹ֥א יָב֖וֹא נְאֻם־יְהוָֽה׃ | 34 |
ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು, ಈ ಪಟ್ಟಣದೊಳಗೆ ಬರುವುದೇ ಇಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.
וְגַנּוֹתִ֛י עַל־הָעִ֥יר הַזֹּ֖את לְהֽוֹשִׁיעָ֑הּ לְמַֽעֲנִ֔י וּלְמַ֖עַן דָּוִ֥ד עַבְדִּֽי׃ ס | 35 |
“ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.”
וַיֵּצֵ֣א ׀ מַלְאַ֣ךְ יְהוָ֗ה וַיַּכֶּה֙ בְּמַחֲנֵ֣ה אַשּׁ֔וּר מֵאָ֛ה וּשְׁמֹנִ֥ים וַחֲמִשָּׁ֖ה אָ֑לֶף וַיַּשְׁכִּ֣ימוּ בַבֹּ֔קֶר וְהִנֵּ֥ה כֻלָּ֖ם פְּגָרִ֥ים מֵתִֽים׃ | 36 |
ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.
וַיִּסַּ֣ע וַיֵּ֔לֶךְ וַיָּ֖שָׁב סַנְחֵרִ֣יב מֶֽלֶךְ־אַשּׁ֑וּר וַיֵּ֖שֶׁב בְּנִֽינְוֵֽה׃ | 37 |
ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.
וַיְהִי֩ ה֨וּא מִֽשְׁתַּחֲוֶ֜ה בֵּ֣ית ׀ נִסְרֹ֣ךְ אֱלֹהָ֗יו וְֽאַדְרַמֶּ֨לֶךְ וְשַׂרְאֶ֤צֶר בָּנָיו֙ הִכֻּ֣הוּ בַחֶ֔רֶב וְהֵ֥מָּה נִמְלְט֖וּ אֶ֣רֶץ אֲרָרָ֑ט וַיִּמְלֹ֛ךְ אֵֽסַר־חַדֹּ֥ן בְּנ֖וֹ תַּחְתָּֽיו׃ ס | 38 |
ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.