< יִרְמְיָהוּ 3 >
לֵאמֹ֡ר הֵ֣ן יְשַׁלַּ֣ח אִ֣ישׁ אֶת־אִשְׁתּוֹ֩ וְהָלְכָ֨ה מֵאִתּ֜וֹ וְהָיְתָ֣ה לְאִישׁ־אַחֵ֗ר הֲיָשׁ֤וּב אֵלֶ֙יהָ֙ ע֔וֹד הֲל֛וֹא חָנ֥וֹף תֶּחֱנַ֖ף הָאָ֣רֶץ הַהִ֑יא וְאַ֗תְּ זָנִית֙ רֵעִ֣ים רַבִּ֔ים וְשׁ֥וֹב אֵלַ֖י נְאֻם־יְהֹוָֽה׃ | 1 |
೧ಯೆಹೋವನು ಹೀಗೆನ್ನುತ್ತಾನೆ, “ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ? ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?
שְׂאִֽי־עֵינַ֨יִךְ עַל־שְׁפָיִ֜ם וּרְאִ֗י אֵיפֹה֙ לֹ֣א שגלת עַל־דְּרָכִים֙ יָשַׁ֣בְתְּ לָהֶ֔ם כַּעֲרָבִ֖י בַּמִּדְבָּ֑ר וַתַּחֲנִ֣יפִי אֶ֔רֶץ בִּזְנוּתַ֖יִךְ וּבְרָעָתֵֽךְ׃ | 2 |
೨ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ; ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ.
וַיִּמָּנְע֣וּ רְבִבִ֔ים וּמַלְק֖וֹשׁ ל֣וֹא הָיָ֑ה וּמֵ֨צַח אִשָּׁ֤ה זוֹנָה֙ הָ֣יָה לָ֔ךְ מֵאַ֖נְתְּ הִכָּלֵֽם׃ | 3 |
೩ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ವ್ಯಭಿಚಾರಿಯಾಗಿ ನಾಚಿಕೆಗೆಟ್ಟಿದ್ದಿ.
הֲל֣וֹא מֵעַ֔תָּה קראתי לִ֖י אָבִ֑י אַלּ֥וּף נְעֻרַ֖י אָֽתָּה׃ | 4 |
೪ಈಗ ನನ್ನನ್ನು, ‘ನನ್ನ ತಂದೆ, ನನ್ನ ಯೌವನದ ಆಪ್ತನು’ ಎಂದು ಕರೆಯುತ್ತೀಯಲ್ಲಾ.
הֲיִנְטֹ֣ר לְעוֹלָ֔ם אִם־יִשְׁמֹ֖ר לָנֶ֑צַח הִנֵּ֥ה דברתי וַתַּעֲשִׂ֥י הָרָע֖וֹת וַתּוּכָֽל׃ פ | 5 |
೫‘ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?’ ಎಂದು ಅಂದುಕೊಳ್ಳುತ್ತಿದ್ದಿ. ಇಗೋ, ನೀನು ಹೀಗೆ ಮಾತನಾಡಿದರೇನು? ಅನೇಕ ದುಷ್ಕೃತ್ಯಗಳನ್ನು ನಡೆಸಿ ಕೃತಾರ್ಥಳಾಗಿರುವೆ.” ಎಂಬುದೇ.
וַיֹּ֨אמֶר יְהוָ֜ה אֵלַ֗י בִּימֵי֙ יֹאשִׁיָּ֣הוּ הַמֶּ֔לֶךְ הֲֽרָאִ֔יתָ אֲשֶׁ֥ר עָשְׂתָ֖ה מְשֻׁבָ֣ה יִשְׂרָאֵ֑ל הֹלְכָ֨ה הִ֜יא עַל־כָּל־הַ֣ר גָּבֹ֗הַּ וְאֶל־תַּ֛חַת כָּל־עֵ֥ץ רַעֲנָ֖ן וַתִּזְנִי־שָֽׁם׃ | 6 |
೬ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.
וָאֹמַ֗ר אַחֲרֵ֨י עֲשׂוֹתָ֧הּ אֶת־כָּל־אֵ֛לֶּה אֵלַ֥י תָּשׁ֖וּב וְלֹא־שָׁ֑בָה ותראה בָּגוֹדָ֥ה אֲחוֹתָ֖הּ יְהוּדָֽה׃ | 7 |
೭ಅವಳು ಇವುಗಳನ್ನೆಲ್ಲಾ ನಡೆಸಿದ ಮೇಲೆ ನನ್ನ ಬಳಿಗೆ ಪುನಃ ಬಂದಾಳು ಅಂದುಕೊಂಡೆನು. ಆದರೆ ಬರಲಿಲ್ಲ. ಆಗ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ಇದನ್ನು ನೋಡಿದಳು.
וָאֵ֗רֶא כִּ֤י עַל־כָּל־אֹדוֹת֙ אֲשֶׁ֤ר נִֽאֲפָה֙ מְשֻׁבָ֣ה יִשְׂרָאֵ֔ל שִׁלַּחְתִּ֕יהָ וָאֶתֵּ֛ן אֶת־סֵ֥פֶר כְּרִיתֻתֶ֖יהָ אֵלֶ֑יהָ וְלֹ֨א יָֽרְאָ֜ה בֹּֽגֵדָ֤ה יְהוּדָה֙ אֲחוֹתָ֔הּ וַתֵּ֖לֶךְ וַתִּ֥זֶן גַּם־הִֽיא׃ | 8 |
೮ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು.
וְהָיָה֙ מִקֹּ֣ל זְנוּתָ֔הּ וַתֶּחֱנַ֖ף אֶת־הָאָ֑רֶץ וַתִּנְאַ֥ף אֶת־הָאֶ֖בֶן וְאֶת־הָעֵֽץ׃ | 9 |
೯ಕಲ್ಲು ಮರಗಳನ್ನು ಪೂಜಿಸಿ ವ್ಯಭಿಚಾರ ಮಾಡುವುದು ಲಘುವೆಂದು ಭಾವಿಸಿಕೊಂಡ ಆಕೆ ತನ್ನ ವ್ಯಭಿಚಾರದಿಂದ ದೇಶವನ್ನು ಅಪವಿತ್ರಪಡಿಸಿದಳು.
וְגַם־בְּכָל־זֹ֗את לֹא־שָׁ֨בָה אֵלַ֜י בָּגוֹדָ֧ה אֲחוֹתָ֛הּ יְהוּדָ֖ה בְּכָל־לִבָּ֑הּ כִּ֥י אִם־בְּשֶׁ֖קֶר נְאֻם־יְהוָֽה׃ פ | 10 |
೧೦ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ.
וַיֹּ֤אמֶר יְהוָה֙ אֵלַ֔י צִדְּקָ֥ה נַפְשָׁ֖הּ מְשֻׁבָ֣ה יִשְׂרָאֵ֑ל מִבֹּגֵדָ֖ה יְהוּדָֽה׃ | 11 |
೧೧ಮತ್ತು ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ.
הָלֹ֡ךְ וְקָֽרָאתָ֩ אֶת־הַדְּבָרִ֨ים הָאֵ֜לֶּה צָפ֗וֹנָה וְ֠אָמַרְתָּ שׁ֣וּבָה מְשֻׁבָ֤ה יִשְׂרָאֵל֙ נְאֻם־יְהוָ֔ה לֽוֹא־אַפִּ֥יל פָּנַ֖י בָּכֶ֑ם כִּֽי־חָסִ֤יד אֲנִי֙ נְאֻם־יְהוָ֔ה לֹ֥א אֶטּ֖וֹר לְעוֹלָֽם׃ | 12 |
೧೨ನೀನು ಹೋಗಿ ಉತ್ತರದಿಕ್ಕಿಗೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ಭ್ರಷ್ಟಳಾದ ಇಸ್ರಾಯೇಲೇ, ಹಿಂದಿರುಗು, ನಾನು ಕೋಪದ ಮುಖದಿಂದ ನಿನ್ನನ್ನು ನೋಡೆನು, ನಾನು ಕರುಣಾಶಾಲಿ, ನಿತ್ಯಕೋಪಿಯಲ್ಲ.
אַ֚ךְ דְּעִ֣י עֲוֺנֵ֔ךְ כִּ֛י בַּיהוָ֥ה אֱלֹהַ֖יִךְ פָּשָׁ֑עַתְּ וַתְּפַזְּרִ֨י אֶת־דְּרָכַ֜יִךְ לַזָּרִ֗ים תַּ֚חַת כָּל־עֵ֣ץ רַעֲנָ֔ן וּבְקוֹלִ֥י לֹא־שְׁמַעְתֶּ֖ם נְאֻם־יְהֹוָֽה׃ | 13 |
೧೩ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.
שׁ֣וּבוּ בָנִ֤ים שׁוֹבָבִים֙ נְאֻם־יְהוָ֔ה כִּ֥י אָנֹכִ֖י בָּעַ֣לְתִּי בָכֶ֑ם וְלָקַחְתִּ֨י אֶתְכֶ֜ם אֶחָ֣ד מֵעִ֗יר וּשְׁנַ֙יִם֙ מִמִּשְׁפָּחָ֔ה וְהֵבֵאתִ֥י אֶתְכֶ֖ם צִיּֽוֹן׃ | 14 |
೧೪ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ. ಒಂದು ಪಟ್ಟಣಕ್ಕೆ ಒಬ್ಬನಂತೆಯೂ, ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರೆತರುವೆನು.
וְנָתַתִּ֥י לָכֶ֛ם רֹעִ֖ים כְּלִבִּ֑י וְרָע֥וּ אֶתְכֶ֖ם דֵּעָ֥ה וְהַשְׂכֵּֽיל׃ | 15 |
೧೫ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು.
וְהָיָ֡ה כִּ֣י תִרְבּוּ֩ וּפְרִיתֶ֨ם בָּאָ֜רֶץ בַּיָּמִ֤ים הָהֵ֙מָּה֙ נְאֻם־יְהוָ֔ה לֹא־יֹ֣אמְרוּ ע֗וֹד אֲרוֹן֙ בְּרִית־יְהוָ֔ה וְלֹ֥א יַעֲלֶ֖ה עַל־לֵ֑ב וְלֹ֤א יִזְכְּרוּ־בוֹ֙ וְלֹ֣א יִפְקֹ֔דוּ וְלֹ֥א יֵעָשֶׂ֖ה עֽוֹד׃ | 16 |
೧೬ನೀವು ದೇಶದಲ್ಲಿ ಹೆಚ್ಚಿ ಅಭಿವೃದ್ಧಿಗೆ ಬಂದ ಕಾಲದಲ್ಲಿ, ‘ಯೆಹೋವನ ನಿಬಂಧನ ಮಂಜೂಷ’ ಇದರ ಪ್ರಸ್ತಾವವಿರದು. ಅದು ಜ್ಞಾಪಕಕ್ಕೆ ಬಾರದು, ಯಾರೂ ಸ್ಮರಿಸರು, ಅದು ಇಲ್ಲವಲ್ಲಾ ಎಂದು ದುಃಖಿಸರು, ಹೊಸದಾಗಿ ಕಲ್ಪಿಸಿಕೊಳ್ಳರು” ಇದು ಯೆಹೋವನ ನುಡಿ.
בָּעֵ֣ת הַהִ֗יא יִקְרְא֤וּ לִירוּשָׁלִַ֙ם֙ כִּסֵּ֣א יְהוָ֔ה וְנִקְוּ֨וּ אֵלֶ֧יהָ כָֽל־הַגּוֹיִ֛ם לְשֵׁ֥ם יְהוָ֖ה לִירוּשָׁלִָ֑ם וְלֹא־יֵלְכ֣וּ ע֔וֹד אַחֲרֵ֕י שְׁרִר֖וּת לִבָּ֥ם הָרָֽע׃ ס | 17 |
೧೭ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.
בַּיָּמִ֣ים הָהֵ֔מָּה יֵלְכ֥וּ בֵית־יְהוּדָ֖ה עַל־בֵּ֣ית יִשְׂרָאֵ֑ל וְיָבֹ֤אוּ יַחְדָּו֙ מֵאֶ֣רֶץ צָפ֔וֹן עַל־הָאָ֕רֶץ אֲשֶׁ֥ר הִנְחַ֖לְתִּי אֶת־אֲבוֹתֵיכֶֽם׃ | 18 |
೧೮ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು ಬಿಟ್ಟು ಬರುವವು.
וְאָנֹכִ֣י אָמַ֗רְתִּי אֵ֚יךְ אֲשִׁיתֵ֣ךְ בַּבָּנִ֔ים וְאֶתֶּן־לָךְ֙ אֶ֣רֶץ חֶמְדָּ֔ה נַחֲלַ֥ת צְבִ֖י צִבְא֣וֹת גּוֹיִ֑ם וָאֹמַ֗ר אָבִי֙ תקראו ־לִ֔י וּמֵאַחֲרַ֖י לֹ֥א תשובו׃ | 19 |
೧೯“ಇಸ್ರಾಯೇಲೇ, ನಾನು ಎಷ್ಟೋ ಸಂತೋಷದಿಂದ ಗಂಡು ಮಕ್ಕಳೊಳಗೆ ನಿನ್ನನ್ನೂ ಆರಿಸಿಕೊಂಡು, ನಿನಗೆ ಮನೋಹರವಾದ ದೇಶವನ್ನು ಅಂದರೆ ಸಮಸ್ತ ಜನಾಂಗಗಳ ಬಾಧ್ಯತೆಗಳಲ್ಲಿ ರಮಣೀಯವಾದದ್ದನ್ನು ಕೊಡುವೆನು; ನೀನು ನನ್ನ ಅನುಸರಣೆಯನ್ನು ಬಿಟ್ಟು ಓರೆಯಾಗದೆ ನನ್ನನ್ನು ‘ತಂದೆ’ ಎನ್ನುವಿ ಅಂದುಕೊಂಡೆನು.
אָכֵ֛ן בָּגְדָ֥ה אִשָּׁ֖ה מֵרֵעָ֑הּ כֵּ֣ן בְּגַדְתֶּ֥ם בִּ֛י בֵּ֥ית יִשְׂרָאֵ֖ל נְאֻם־יְהוָֽה׃ | 20 |
೨೦ಆದರೆ ಇಸ್ರಾಯೇಲ್ ವಂಶದವರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹವನ್ನು ಮಾಡಿದ್ದೀರಿ” ಎಂದು ಯೆಹೋವನು ನುಡಿಯುತ್ತಾನೆ.
ק֚וֹל עַל־שְׁפָיִ֣ים נִשְׁמָ֔ע בְּכִ֥י תַחֲנוּנֵ֖י בְּנֵ֣י יִשְׂרָאֵ֑ל כִּ֤י הֶעֱוּוּ֙ אֶת־דַּרְכָּ֔ם שָׁכְח֖וּ אֶת־יְהֹוָ֥ה אֱלֹהֵיהֶֽם׃ | 21 |
೨೧ಆಹಾ, ಬೋಳುಗುಡ್ಡಗಳಲ್ಲಿ ಒಂದು ಶಬ್ದ! ತಾವು ಡೊಂಕು ದಾರಿಯನ್ನು ಹಿಡಿದು ತಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟಿದ್ದೇವೆಂದು ಇಸ್ರಾಯೇಲರು ಕಣ್ಣೀರು ಸುರಿಸಿ ದೇವರ ಕೃಪೆಯನ್ನು ಬೇಡುತ್ತಿದ್ದಾರಲ್ಲಾ.
שׁ֚וּבוּ בָּנִ֣ים שׁוֹבָבִ֔ים אֶרְפָּ֖ה מְשׁוּבֹֽתֵיכֶ֑ם הִנְנוּ֙ אָתָ֣נוּ לָ֔ךְ כִּ֥י אַתָּ֖ה יְהֹוָ֥ה אֱלֹהֵֽינוּ׃ | 22 |
೨೨“ಭ್ರಷ್ಟರಾದ ಮಕ್ಕಳೇ, ಹಿಂದಿರುಗಿರಿ, ನಿಮ್ಮ ಭ್ರಷ್ಟತ್ವವನ್ನು ಪರಿಹರಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. ಅದಕ್ಕೆ ಜನರು, “ಇಗೋ, ನಿನ್ನ ಬಳಿಗೆ ಬಂದೆವು, ನೀನು ಯೆಹೋವನು, ನಮ್ಮ ದೇವರು.
אָכֵ֥ן לַשֶּׁ֛קֶר מִגְּבָע֖וֹת הָמ֣וֹן הָרִ֑ים אָכֵן֙ בַּיהֹוָ֣ה אֱלֹהֵ֔ינוּ תְּשׁוּעַ֖ת יִשְׂרָאֵֽל׃ | 23 |
೨೩ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.
וְהַבֹּ֗שֶׁת אָֽכְלָ֛ה אֶת־יְגִ֥יעַ אֲבוֹתֵ֖ינוּ מִנְּעוּרֵ֑ינוּ אֶת־צֹאנָם֙ וְאֶת־בְּקָרָ֔ם אֶת־בְּנֵיהֶ֖ם וְאֶת־בְּנוֹתֵיהֶֽם׃ | 24 |
೨೪ನಮ್ಮ ಪೂರ್ವಿಕರು ದುಡಿದದ್ದನ್ನೂ, ಅವರ ದನ ಮತ್ತು ಕುರಿಗಳನ್ನೂ ಅವರ ಗಂಡು, ಹೆಣ್ಣು ಮಕ್ಕಳನ್ನೂ ಬಾಳ್ ದೇವತೆಯು ನಮ್ಮ ಬಾಲ್ಯಾರಭ್ಯ ನುಂಗುತ್ತಾ ಬಂದಿದೆ.
נִשְׁכְּבָ֣ה בְּבָשְׁתֵּ֗נוּ וּֽתְכַסֵּנוּ֮ כְּלִמָּתֵנוּ֒ כִּי֩ לַיהוָ֨ה אֱלֹהֵ֜ינוּ חָטָ֗אנוּ אֲנַ֙חְנוּ֙ וַאֲבוֹתֵ֔ינוּ מִנְּעוּרֵ֖ינוּ וְעַד־הַיּ֣וֹם הַזֶּ֑ה וְלֹ֣א שָׁמַ֔עְנוּ בְּק֖וֹל יְהֹוָ֥ה אֱלֹהֵֽינוּ׃ ס | 25 |
೨೫ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ.