< וַיִּקְרָא 10 >
וַיִּקְח֣וּ בְנֵֽי־אַ֠הֲרֹן נָדָ֨ב וַאֲבִיה֜וּא אִ֣ישׁ מַחְתָּת֗וֹ וַיִּתְּנ֤וּ בָהֵן֙ אֵ֔שׁ וַיָּשִׂ֥ימוּ עָלֶ֖יהָ קְטֹ֑רֶת וַיַּקְרִ֜בוּ לִפְנֵ֤י יְהוָה֙ אֵ֣שׁ זָרָ֔ה אֲשֶׁ֧ר לֹ֦א צִוָּ֖ה אֹתָֽם׃ | 1 |
೧ಆರೋನನ ಮಕ್ಕಳಲ್ಲಿ ನಾದಾಬ್ ಹಾಗೂ ಅಬೀಹೂ ಎಂಬ ಇಬ್ಬರು ತಮ್ಮ ತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿದರು.
וַתֵּ֥צֵא אֵ֛שׁ מִלִּפְנֵ֥י יְהוָ֖ה וַתֹּ֣אכַל אוֹתָ֑ם וַיָּמֻ֖תוּ לִפְנֵ֥י יְהוָֽה׃ | 2 |
೨ಆಗ ಯೆಹೋವನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ದಹಿಸಿಬಿಟ್ಟಿತು; ಅವರು ಯೆಹೋವನ ಸನ್ನಿಧಿಯಲ್ಲಿಯೇ ಸತ್ತರು.
וַיֹּ֨אמֶר מֹשֶׁ֜ה אֶֽל־אַהֲרֹ֗ן הוּא֩ אֲשֶׁר־דִּבֶּ֨ר יְהוָ֤ה ׀ לֵאמֹר֙ בִּקְרֹבַ֣י אֶקָּדֵ֔שׁ וְעַל־פְּנֵ֥י כָל־הָעָ֖ם אֶכָּבֵ֑ד וַיִּדֹּ֖ם אַהֲרֹֽן׃ | 3 |
೩ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.
וַיִּקְרָ֣א מֹשֶׁ֗ה אֶל־מִֽישָׁאֵל֙ וְאֶ֣ל אֶלְצָפָ֔ן בְּנֵ֥י עֻזִּיאֵ֖ל דֹּ֣ד אַהֲרֹ֑ן וַיֹּ֣אמֶר אֲלֵהֶ֗ם קִ֠רְב֞וּ שְׂא֤וּ אֶת־אֲחֵיכֶם֙ מֵאֵ֣ת פְּנֵי־הַקֹּ֔דֶשׁ אֶל־מִח֖וּץ לַֽמַּחֲנֶֽה׃ | 4 |
೪ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫಾನನನ್ನು ಕರೆಯಿಸಿ, “ನೀವು ಸಮೀಪಕ್ಕೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದ ಎದುರಿನಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಬೇಕು” ಅಂದನು.
וַֽיִּקְרְב֗וּ וַיִּשָּׂאֻם֙ בְּכֻתֳּנֹתָ֔ם אֶל־מִח֖וּץ לַֽמַּחֲנֶ֑ה כַּאֲשֶׁ֖ר דִּבֶּ֥ר מֹשֶֽׁה׃ | 5 |
೫ಮೋಶೆಯ ಅಪ್ಪಣೆಯ ಮೇರೆಗೆ ಅವರು ಸಮೀಪಕ್ಕೆ ಬಂದು ಸತ್ತವರು ತೊಟ್ಟುಕೊಂಡಿದ್ದ ನಿಲುವಂಗಿಗಳನ್ನು ತೆಗೆಯದೆ ಅವರ ಶವಗಳನ್ನು ಎತ್ತಿ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋದರು.
וַיֹּ֣אמֶר מֹשֶׁ֣ה אֶֽל־אַהֲרֹ֡ן וּלְאֶלְעָזָר֩ וּלְאִֽיתָמָ֨ר ׀ בָּנָ֜יו רָֽאשֵׁיכֶ֥ם אַל־תִּפְרָ֣עוּ ׀ וּבִגְדֵיכֶ֤ם לֹֽא־תִפְרֹ֙מוּ֙ וְלֹ֣א תָמֻ֔תוּ וְעַ֥ל כָּל־הָעֵדָ֖ה יִקְצֹ֑ף וַאֲחֵיכֶם֙ כָּל־בֵּ֣ית יִשְׂרָאֵ֔ל יִבְכּוּ֙ אֶת־הַשְּׂרֵפָ֔ה אֲשֶׁ֖ר שָׂרַ֥ף יְהוָֽה׃ | 6 |
೬ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.
וּמִפֶּתַח֩ אֹ֨הֶל מוֹעֵ֜ד לֹ֤א תֵֽצְאוּ֙ פֶּן־תָּמֻ֔תוּ כִּי־שֶׁ֛מֶן מִשְׁחַ֥ת יְהוָ֖ה עֲלֵיכֶ֑ם וַֽיַּעֲשׂ֖וּ כִּדְבַ֥ר מֹשֶֽׁה׃ פ | 7 |
೭ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು; ಹೋದರೆ ಸಾಯುವಿರಿ” ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು.
וַיְדַבֵּ֣ר יְהוָ֔ה אֶֽל־אַהֲרֹ֖ן לֵאמֹֽר׃ | 8 |
೮ಯೆಹೋವನು ಆರೋನನೊಂದಿಗೆ ಮಾತನಾಡಿ,
יַ֣יִן וְשֵׁכָ֞ר אַל־תֵּ֣שְׁתְּ ׀ אַתָּ֣ה ׀ וּבָנֶ֣יךָ אִתָּ֗ךְ בְּבֹאֲכֶ֛ם אֶל־אֹ֥הֶל מוֹעֵ֖ד וְלֹ֣א תָמֻ֑תוּ חֻקַּ֥ת עוֹלָ֖ם לְדֹרֹתֵיכֶֽם׃ | 9 |
೯“ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ.
וּֽלֲהַבְדִּ֔יל בֵּ֥ין הַקֹּ֖דֶשׁ וּבֵ֣ין הַחֹ֑ל וּבֵ֥ין הַטָּמֵ֖א וּבֵ֥ין הַטָּהֽוֹר׃ | 10 |
೧೦ಅದಲ್ಲದೆ ದೇವರಿಗೆ ಮೀಸಲಾದ ವಸ್ತುಗಳನ್ನು ಅಲ್ಲದ ವಸ್ತುಗಳನ್ನು, ಶುದ್ಧವಾದವುಗಳನ್ನು, ಅಶುದ್ಧವಾದವುಗಳನ್ನು ವಿವೇಚಿಸುವುದೂ,
וּלְהוֹרֹ֖ת אֶת־בְּנֵ֣י יִשְׂרָאֵ֑ל אֵ֚ת כָּל־הַ֣חֻקִּ֔ים אֲשֶׁ֨ר דִּבֶּ֧ר יְהוָ֛ה אֲלֵיהֶ֖ם בְּיַד־מֹשֶֽׁה׃ פ | 11 |
೧೧ಯೆಹೋವನು ಮೋಶೆಯ ಮೂಲಕ ಇಸ್ರಾಯೇಲರಿಗೆ ಮಾಡಿದ ಎಲ್ಲಾ ಆಜ್ಞೆಗಳನ್ನು ಜನರಿಗೆ ಬೋಧಿಸುವುದೂ ನಿಮ್ಮ ಕರ್ತವ್ಯವಾಗಿದೆ” ಎಂದು ಹೇಳಿದನು.
וַיְדַבֵּ֨ר מֹשֶׁ֜ה אֶֽל־אַהֲרֹ֗ן וְאֶ֣ל אֶ֠לְעָזָר וְאֶל־אִ֨יתָמָ֥ר ׀ בָּנָיו֮ הַנּֽוֹתָרִים֒ קְח֣וּ אֶת־הַמִּנְחָ֗ה הַנּוֹתֶ֙רֶת֙ מֵאִשֵּׁ֣י יְהוָ֔ה וְאִכְל֥וּהָ מַצּ֖וֹת אֵ֣צֶל הַמִּזְבֵּ֑חַ כִּ֛י קֹ֥דֶשׁ קָֽדָשִׁ֖ים הִֽוא׃ | 12 |
೧೨ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೆ, “ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ಉಳಿದಿರುವ ಧಾನ್ಯನೈವೇದ್ಯ ದ್ರವ್ಯವನ್ನು ತೆಗೆದುಕೊಂಡು, ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ, ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು. ಅದು ಮಹಾಪರಿಶುದ್ಧವಾಗಿದೆ.
וַאֲכַלְתֶּ֤ם אֹתָהּ֙ בְּמָק֣וֹם קָדֹ֔שׁ כִּ֣י חָקְךָ֤ וְחָק־בָּנֶ֙יךָ֙ הִ֔וא מֵאִשֵּׁ֖י יְהוָ֑ה כִּי־כֵ֖ן צֻוֵּֽיתִי׃ | 13 |
೧೩ಪವಿತ್ರಸ್ಥಳದೊಳಗೇ ಅದನ್ನು ಊಟಮಾಡಬೇಕು. ಜನರು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳಲ್ಲಿ ಅದು ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲತಕ್ಕದ್ದೆಂದು ಅಪ್ಪಣೆಯಾಗಿದೆ.
וְאֵת֩ חֲזֵ֨ה הַתְּנוּפָ֜ה וְאֵ֣ת ׀ שׁ֣וֹק הַתְּרוּמָ֗ה תֹּֽאכְלוּ֙ בְּמָק֣וֹם טָה֔וֹר אַתָּ֕ה וּבָנֶ֥יךָ וּבְנֹתֶ֖יךָ אִתָּ֑ךְ כִּֽי־חָקְךָ֤ וְחָק־בָּנֶ֙יךָ֙ נִתְּנ֔וּ מִזִּבְחֵ֥י שַׁלְמֵ֖י בְּנֵ֥י יִשְׂרָאֵֽל׃ | 14 |
೧೪ನೀವು ನೈವೇದ್ಯ ಮಾಡಿದ ಎದೆಯ ಭಾಗವನ್ನು, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ತೊಡೆಯನ್ನು ಯಾವುದಾದರೂ ಒಂದು ಶುದ್ಧಸ್ಥಳದಲ್ಲಿ ಊಟಮಾಡಬಹುದು. ನೀನೂ, ನಿನ್ನ ಗಂಡುಮಕ್ಕಳೂ ಹಾಗು ಹೆಣ್ಣುಮಕ್ಕಳೂ ಅದನ್ನು ತಿನ್ನಬಹುದು. ಏಕೆಂದರೆ ಇಸ್ರಾಯೇಲರು ಸಮರ್ಪಿಸುವ ಸಮಾಧಾನಯಜ್ಞದ್ರವ್ಯಗಳಲ್ಲಿ ಇವೇ ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.
שׁ֣וֹק הַתְּרוּמָ֞ה וַחֲזֵ֣ה הַתְּנוּפָ֗ה עַ֣ל אִשֵּׁ֤י הַחֲלָבִים֙ יָבִ֔יאוּ לְהָנִ֥יף תְּנוּפָ֖ה לִפְנֵ֣י יְהוָ֑ה וְהָיָ֨ה לְךָ֜ וּלְבָנֶ֤יךָ אִתְּךָ֙ לְחָק־עוֹלָ֔ם כַּאֲשֶׁ֖ר צִוָּ֥ה יְהוָֽה׃ | 15 |
೧೫ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗೆಲ್ಲಾ ಯಾಜಕರಿಗೋಸ್ಕರ ಪ್ರತ್ಯೇಕಿಸಬೇಕಾದ ಆ ತೊಡೆಯನ್ನು ನೈವೇದ್ಯವಾಗಿ ನಿವಾಳಿಸಬೇಕಾದ ಆ ಎದೆಯ ಭಾಗವನ್ನು ಯೆಹೋವನ ಸನ್ನಿಧಿಯಲ್ಲಿ ತರಬೇಕು. ಯೆಹೋವನು ಆಜ್ಞಾಪಿಸಿದಂತೆ ಅವು ನಿನಗೂ ಮತ್ತು ನಿನ್ನ ವಂಶದವರಿಗೂ ಸಲ್ಲತಕ್ಕದ್ದು; ಇದು ಶಾಶ್ವತನಿಯಮ” ಎಂದು ಹೇಳಿದನು.
וְאֵ֣ת ׀ שְׂעִ֣יר הַֽחַטָּ֗את דָּרֹ֥שׁ דָּרַ֛שׁ מֹשֶׁ֖ה וְהִנֵּ֣ה שֹׂרָ֑ף וַ֠יִּקְצֹף עַל־אֶלְעָזָ֤ר וְעַל־אִֽיתָמָר֙ בְּנֵ֣י אַהֲרֹ֔ן הַנּוֹתָרִ֖ם לֵאמֹֽר׃ | 16 |
೧೬ಜನರೆಲ್ಲರಿಗೋಸ್ಕರ ದೋಷಪರಿಹಾರ ಮಾಡಲು ಸಮರ್ಪಿತವಾದ ಹೋತದ ವಿಷಯದಲ್ಲಿ ಅದು ಏನಾಯಿತೆಂದು ಮೋಶೆ ವಿಚಾರಿಸಲಾಗಿ ಅದನ್ನು ಸುಟ್ಟುಬಿಟ್ಟರೆಂದು ತಿಳಿಯಬಂತು. ಇದನ್ನು ಕೇಳಿದಾಗ ಅವನು ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡು,
מַדּ֗וּעַ לֹֽא־אֲכַלְתֶּ֤ם אֶת־הַֽחַטָּאת֙ בִּמְק֣וֹם הַקֹּ֔דֶשׁ כִּ֛י קֹ֥דֶשׁ קָֽדָשִׁ֖ים הִ֑וא וְאֹתָ֣הּ ׀ נָתַ֣ן לָכֶ֗ם לָשֵׂאת֙ אֶת־עֲוֺ֣ן הָעֵדָ֔ה לְכַפֵּ֥ר עֲלֵיהֶ֖ם לִפְנֵ֥י יְהוָֽה׃ | 17 |
೧೭“ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?
הֵ֚ן לֹא־הוּבָ֣א אֶת־דָּמָ֔הּ אֶל־הַקֹּ֖דֶשׁ פְּנִ֑ימָה אָכ֨וֹל תֹּאכְל֥וּ אֹתָ֛הּ בַּקֹּ֖דֶשׁ כַּאֲשֶׁ֥ר צִוֵּֽיתִי׃ | 18 |
೧೮ಅದರ ರಕ್ತವು ಪವಿತ್ರಸ್ಥಾನದೊಳಗೆ ತರಬಾರದಾಗಿತ್ತು, ನಾನು ಆಜ್ಞಾಪಿಸಿದಂತೆ ನೀವು ದೇವಸ್ಥಾನದ ಪ್ರಾಕಾರದೊಳಗೆ ಅದನ್ನು ತಿನ್ನಬೇಕಾಗಿತ್ತು” ಅಂದನು.
וַיְדַבֵּ֨ר אַהֲרֹ֜ן אֶל־מֹשֶׁ֗ה הֵ֣ן הַ֠יּוֹם הִקְרִ֨יבוּ אֶת־חַטָּאתָ֤ם וְאֶת־עֹֽלָתָם֙ לִפְנֵ֣י יְהוָ֔ה וַתִּקְרֶ֥אנָה אֹתִ֖י כָּאֵ֑לֶּה וְאָכַ֤לְתִּי חַטָּאת֙ הַיּ֔וֹם הַיִּיטַ֖ב בְּעֵינֵ֥י יְהוָֽה׃ | 19 |
೧೯ಅದಕ್ಕೆ ಆರೋನನು ಮೋಶೆಗೆ, “ಇವರು ಈ ಹೊತ್ತು ಯೆಹೋವನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಯಜ್ಞವನ್ನು ಮತ್ತು ಸರ್ವಾಂಗಹೋಮವನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಾಗ ನಾನು ದೋಷಪರಿಹಾರಕ ಯಜ್ಞದ್ರವ್ಯವನ್ನು ಈ ಹೊತ್ತು ಊಟಮಾಡಿದ್ದರೆ ಅದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋರುತ್ತಿತ್ತೋ?”
וַיִּשְׁמַ֣ע מֹשֶׁ֔ה וַיִּיטַ֖ב בְּעֵינָֽיו׃ פ | 20 |
೨೦ಎಂದು ಉತ್ತರಕೊಡಲಾಗಿ ಮೋಶೆ ಆ ಮಾತನ್ನು ಕೇಳಿ ತೃಪ್ತಿಗೊಂಡನು.