< וַיִּקְרָא 25 >

וַיְדַבֵּ֤ר יְהוָה֙ אֶל־מֹשֶׁ֔ה בְּהַ֥ר סִינַ֖י לֵאמֹֽר׃ 1
ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಗೆ ಹೇಳಿದ್ದೇನೆಂದರೆ,
דַּבֵּ֞ר אֶל־בְּנֵ֤י יִשְׂרָאֵל֙ וְאָמַרְתָּ֣ אֲלֵהֶ֔ם כִּ֤י תָבֹ֙אוּ֙ אֶל־הָאָ֔רֶץ אֲשֶׁ֥ר אֲנִ֖י נֹתֵ֣ן לָכֶ֑ם וְשָׁבְתָ֣ה הָאָ֔רֶץ שַׁבָּ֖ת לַיהוָֽה׃ 2
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ನಾನು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ ಆ ದೇಶವೂ ಯೆಹೋವನ ಗೌರವಾರ್ಥವಾಗಿ ಸಬ್ಬತ್ ಕಾಲವನ್ನು ಆಚರಿಸಬೇಕು.
שֵׁ֤שׁ שָׁנִים֙ תִּזְרַ֣ע שָׂדֶ֔ךָ וְשֵׁ֥שׁ שָׁנִ֖ים תִּזְמֹ֣ר כַּרְמֶ֑ךָ וְאָסַפְתָּ֖ אֶת־תְּבוּאָתָֽהּ׃ 3
ಆರು ವರ್ಷಗಳು ನೀವು ಹೊಲದಲ್ಲಿ ಬೀಜವನ್ನು ಬಿತ್ತಬಹುದು, ದ್ರಾಕ್ಷಿ ತೋಟದ ಕೆಲಸವನ್ನು ನಡೆಸಬಹುದು ಮತ್ತು ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು.
וּבַשָּׁנָ֣ה הַשְּׁבִיעִ֗ת שַׁבַּ֤ת שַׁבָּתוֹן֙ יִהְיֶ֣ה לָאָ֔רֶץ שַׁבָּ֖ת לַיהוָ֑ה שָֽׂדְךָ֙ לֹ֣א תִזְרָ֔ע וְכַרְמְךָ֖ לֹ֥א תִזְמֹֽר׃ 4
ಆದರೆ ಏಳನೆಯ ವರ್ಷ ಯಾವ ವ್ಯವಸಾಯ ಮಾಡಬಾರದ ವಿಶ್ರಾಂತಿ ಕಾಲವಾಗಿಯೂ ಮತ್ತು ಯೆಹೋವನಿಗೆ ಆಚರಿಸಬೇಕಾದ ಸಬ್ಬತ್ ಕಾಲವಾಗಿಯೂ ಇರಬೇಕು. ಹೊಲದಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು.
אֵ֣ת סְפִ֤יחַ קְצִֽירְךָ֙ לֹ֣א תִקְצ֔וֹר וְאֶת־עִנְּבֵ֥י נְזִירֶ֖ךָ לֹ֣א תִבְצֹ֑ר שְׁנַ֥ת שַׁבָּת֖וֹן יִהְיֶ֥ה לָאָֽרֶץ׃ 5
ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು, ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರ್ಷವೆಲ್ಲಾ ಭೂಮಿಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು.
וְ֠הָיְתָה שַׁבַּ֨ת הָאָ֤רֶץ לָכֶם֙ לְאָכְלָ֔ה לְךָ֖ וּלְעַבְדְּךָ֣ וְלַאֲמָתֶ֑ךָ וְלִשְׂכִֽירְךָ֙ וּלְתוֹשָׁ֣בְךָ֔ הַגָּרִ֖ים עִמָּֽךְ׃ 6
ಆದರೆ ಅಂತಹ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂಮಿಯಲ್ಲಿ ಹುಟ್ಟಿದ್ದು ನಿಮಗೂ, ನಿಮ್ಮ ದಾಸದಾಸಿಯರಿಗೂ, ಕೂಲಿಯವರಿಗೂ,
וְלִ֨בְהֶמְתְּךָ֔ וְלַֽחַיָּ֖ה אֲשֶׁ֣ר בְּאַרְצֶ֑ךָ תִּהְיֶ֥ה כָל־תְּבוּאָתָ֖הּ לֶאֱכֹֽל׃ ס 7
ನಿಮ್ಮ ಬಳಿಯಲ್ಲಿ ವಾಸವಾಗಿರುವವರಿಗೂ, ನಿಮ್ಮ ಪಶುಗಳಿಗೂ ಮತ್ತು ದೇಶದಲ್ಲಿರುವ ಕಾಡುಮೃಗಗಳಿಗೂ ಆಹಾರವಾಗಬಹುದು.
וְסָפַרְתָּ֣ לְךָ֗ שֶׁ֚בַע שַׁבְּתֹ֣ת שָׁנִ֔ים שֶׁ֥בַע שָׁנִ֖ים שֶׁ֣בַע פְּעָמִ֑ים וְהָי֣וּ לְךָ֗ יְמֵי֙ שֶׁ֚בַע שַׁבְּתֹ֣ת הַשָּׁנִ֔ים תֵּ֥שַׁע וְאַרְבָּעִ֖ים שָׁנָֽה׃ 8
“‘ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು.
וְהַֽעֲבַרְתָּ֞ שׁוֹפַ֤ר תְּרוּעָה֙ בַּחֹ֣דֶשׁ הַשְּׁבִעִ֔י בֶּעָשׂ֖וֹר לַחֹ֑דֶשׁ בְּיוֹם֙ הַכִּפֻּרִ֔ים תַּעֲבִ֥ירוּ שׁוֹפָ֖ר בְּכָל־אַרְצְכֶֽם׃ 9
ಆಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ದೇಶದಲ್ಲೆಲ್ಲಾ ಗಟ್ಟಿಯಾಗಿ ಕೊಂಬನ್ನು ಊದಿಸಬೇಕು. ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬನ್ನು ಊದಿಸಬೇಕು.
וְקִדַּשְׁתֶּ֗ם אֵ֣ת שְׁנַ֤ת הַחֲמִשִּׁים֙ שָׁנָ֔ה וּקְרָאתֶ֥ם דְּר֛וֹר בָּאָ֖רֶץ לְכָל־יֹשְׁבֶ֑יהָ יוֹבֵ֥ל הִוא֙ תִּהְיֶ֣ה לָכֶ֔ם וְשַׁבְתֶּ֗ם אִ֚ישׁ אֶל־אֲחֻזָּת֔וֹ וְאִ֥ישׁ אֶל־מִשְׁפַּחְתּ֖וֹ תָּשֻֽׁבוּ׃ 10
೧೦ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು.
יוֹבֵ֣ל הִ֗וא שְׁנַ֛ת הַחֲמִשִּׁ֥ים שָׁנָ֖ה תִּהְיֶ֣ה לָכֶ֑ם לֹ֣א תִזְרָ֔עוּ וְלֹ֤א תִקְצְרוּ֙ אֶת־סְפִיחֶ֔יהָ וְלֹ֥א תִבְצְר֖וּ אֶת־נְזִרֶֽיהָ׃ 11
೧೧ಆ ಐವತ್ತನೆಯ ವರ್ಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು, ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬೆಳದ ಹಣ್ಣನ್ನು ಸಂಗ್ರಹಿಸಬಾರದು.
כִּ֚י יוֹבֵ֣ל הִ֔וא קֹ֖דֶשׁ תִּהְיֶ֣ה לָכֶ֑ם מִן־הַ֨שָּׂדֶ֔ה תֹּאכְל֖וּ אֶת־תְּבוּאָתָֽהּ ׃ 12
೧೨ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬೇಕು.
בִּשְׁנַ֥ת הַיּוֹבֵ֖ל הַזֹּ֑את תָּשֻׁ֕בוּ אִ֖ישׁ אֶל־אֲחֻזָּתֽוֹ׃ 13
೧೩“‘ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು.
וְכִֽי־תִמְכְּר֤וּ מִמְכָּר֙ לַעֲמִיתֶ֔ךָ א֥וֹ קָנֹ֖ה מִיַּ֣ד עֲמִיתֶ֑ךָ אַל־תּוֹנ֖וּ אִ֥ישׁ אֶת־אָחִֽיו׃ 14
೧೪ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.
בְּמִסְפַּ֤ר שָׁנִים֙ אַחַ֣ר הַיּוֹבֵ֔ל תִּקְנֶ֖ה מֵאֵ֣ת עֲמִיתֶ֑ךָ בְּמִסְפַּ֥ר שְׁנֵֽי־תְבוּאֹ֖ת יִמְכָּר־לָֽךְ׃ 15
೧೫ಹಿಂದಿನ ಜೂಬಿಲಿ ಸಂವತ್ಸರದಿಂದ ಎಷ್ಟು ವರ್ಷವಾಯಿತೆಂದು ಲೆಕ್ಕಿಸಿ, ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು; ಅದರಂತೆ ಮಾರುವವನು ಎಷ್ಟು ವರ್ಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು.
לְפִ֣י ׀ רֹ֣ב הַשָּׁנִ֗ים תַּרְבֶּה֙ מִקְנָת֔וֹ וּלְפִי֙ מְעֹ֣ט הַשָּׁנִ֔ים תַּמְעִ֖יט מִקְנָת֑וֹ כִּ֚י מִסְפַּ֣ר תְּבוּאֹ֔ת ה֥וּא מֹכֵ֖ר לָֽךְ׃ 16
೧೬ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು, ಕಡಿಮೆಯಾದರೆ ಕಡಿಮೆ ಮಾಡಬೇಕು; ಏಕೆಂದರೆ ಅವನು ಮಾರುವುದು ಭೂಮಿಯನ್ನಲ್ಲ, ಲೆಕ್ಕದ ಪ್ರಕಾರ ಬೆಳೆಗಳನ್ನೇ ಮಾರುತ್ತಾನಲ್ಲಾ.
וְלֹ֤א תוֹנוּ֙ אִ֣ישׁ אֶת־עֲמִית֔וֹ וְיָרֵ֖אתָ מֵֽאֱלֹהֶ֑יךָ כִּ֛י אֲנִ֥י יְהֹוָ֖ה אֱלֹהֵיכֶֽם׃ 17
೧೭ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.
וַעֲשִׂיתֶם֙ אֶת־חֻקֹּתַ֔י וְאֶת־מִשְׁפָּטַ֥י תִּשְׁמְר֖וּ וַעֲשִׂיתֶ֣ם אֹתָ֑ם וִֽישַׁבְתֶּ֥ם עַל־הָאָ֖רֶץ לָבֶֽטַח׃ 18
೧೮“‘ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ಆ ದೇಶದಲ್ಲಿ ನಿರ್ಭಯವಾಗಿ ವಾಸವಾಗಿರುವಿರಿ.
וְנָתְנָ֤ה הָאָ֙רֶץ֙ פִּרְיָ֔הּ וַאֲכַלְתֶּ֖ם לָשֹׂ֑בַע וִֽישַׁבְתֶּ֥ם לָבֶ֖טַח עָלֶֽיהָ׃ 19
೧೯ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.
וְכִ֣י תֹאמְר֔וּ מַה־נֹּאכַ֤֖ל בַּשָּׁנָ֣ה הַשְּׁבִיעִ֑ת הֵ֚ן לֹ֣א נִזְרָ֔ע וְלֹ֥א נֶאֱסֹ֖ף אֶת־תְּבוּאָתֵֽנוּ׃ 20
೨೦“‘ಏಳನೆಯ ವರ್ಷದಲ್ಲಿ ಬೀಜವನ್ನು ಬಿತ್ತುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆ ಇಲ್ಲವಲ್ಲಾ; ಆ ವರ್ಷದಲ್ಲಿ ಏನು ತಿನ್ನಬೇಕು?’ ಎಂದು ವಿಚಾರಿಸುತ್ತೀರೋ
וְצִוִּ֤יתִי אֶת־בִּרְכָתִי֙ לָכֶ֔ם בַּשָּׁנָ֖ה הַשִּׁשִּׁ֑ית וְעָשָׂת֙ אֶת־הַתְּבוּאָ֔ה לִשְׁלֹ֖שׁ הַשָּׁנִֽים׃ 21
೨೧ಕೇಳಿರಿ, ಆರನೆಯ ವರ್ಷದ ಬೆಳೆ ನನ್ನ ಅನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.
וּזְרַעְתֶּ֗ם אֵ֚ת הַשָּׁנָ֣ה הַשְּׁמִינִ֔ת וַאֲכַלְתֶּ֖ם מִן־הַתְּבוּאָ֣ה יָשָׁ֑ן עַ֣ד ׀ הַשָּׁנָ֣ה הַתְּשִׁיעִ֗ת עַד־בּוֹא֙ תְּב֣וּאָתָ֔הּ תֹּאכְל֖וּ יָשָֽׁן׃ 22
೨೨ನೀವು ಎಂಟನೆಯ ವರ್ಷದಲ್ಲಿ ಬೀಜವನ್ನು ಬಿತ್ತಿ, ಅದರ ಬೆಳೆ ದೊರೆಯುವ ತನಕ ಅಂದರೆ ಒಂಭತ್ತನೆಯ ವರ್ಷದ ವರೆಗೆ ಹಿಂದಿನ ವರ್ಷಗಳಲ್ಲಿ ನೀವು ಸಂಗ್ರಹಿಸಿದ ಬೆಳೆಯಿಂದಲೇ ಜೀವನಮಾಡುವಿರಿ.
וְהָאָ֗רֶץ לֹ֤א תִמָּכֵר֙ לִצְמִתֻ֔ת כִּי־לִ֖י הָאָ֑רֶץ כִּֽי־גֵרִ֧ים וְתוֹשָׁבִ֛ים אַתֶּ֖ם עִמָּדִֽי׃ 23
೨೩“‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.
וּבְכֹ֖ל אֶ֣רֶץ אֲחֻזַּתְכֶ֑ם גְּאֻלָּ֖ה תִּתְּנ֥וּ לָאָֽרֶץ׃ ס 24
೨೪ನಿಮ್ಮಲ್ಲಿ ಮತ್ತೊಬ್ಬನ ಸ್ವತ್ತಿನ ಭೂಮಿ ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು.
כִּֽי־יָמ֣וּךְ אָחִ֔יךָ וּמָכַ֖ר מֵאֲחֻזָּת֑וֹ וּבָ֤א גֹֽאֲלוֹ֙ הַקָּרֹ֣ב אֵלָ֔יו וְגָאַ֕ל אֵ֖ת מִמְכַּ֥ר אָחִֽיו׃ 25
೨೫“‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.
וְאִ֕ישׁ כִּ֛י לֹ֥א יִֽהְיֶה־לּ֖וֹ גֹּאֵ֑ל וְהִשִּׂ֣יגָה יָד֔וֹ וּמָצָ֖א כְּדֵ֥י גְאֻלָּתֽוֹ׃ 26
೨೬ಬಿಡಿಸುವ ಬಂಧುವು ಇಲ್ಲದೆಹೋದ ಪಕ್ಷಕ್ಕೆ ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಷ್ಟು ಹಣವನ್ನು ಸಂಪಾದಿಸಿದರೆ,
וְחִשַּׁב֙ אֶת־שְׁנֵ֣י מִמְכָּר֔וֹ וְהֵשִׁיב֙ אֶת־הָ֣עֹדֵ֔ף לָאִ֖ישׁ אֲשֶׁ֣ר מָֽכַר־ל֑וֹ וְשָׁ֖ב לַאֲחֻזָּתֽוֹ׃ 27
೨೭ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು ಉಳಿದ ಕ್ರಯವನ್ನು ಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು.
וְאִ֨ם לֹֽא־מָֽצְאָ֜ה יָד֗וֹ דֵּי֮ הָשִׁ֣יב לוֹ֒ וְהָיָ֣ה מִמְכָּר֗וֹ בְּיַד֙ הַקֹּנֶ֣ה אֹת֔וֹ עַ֖ד שְׁנַ֣ת הַיּוֹבֵ֑ל וְיָצָא֙ בַּיֹּבֵ֔ל וְשָׁ֖ב לַאֲחֻזָּתֽוֹ׃ 28
೨೮ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು.
וְאִ֗ישׁ כִּֽי־יִמְכֹּ֤ר בֵּית־מוֹשַׁב֙ עִ֣יר חוֹמָ֔ה וְהָיְתָה֙ גְּאֻלָּת֔וֹ עַד־תֹּ֖ם שְׁנַ֣ת מִמְכָּר֑וֹ יָמִ֖ים תִּהְיֶ֥ה גְאֻלָּתֽוֹ׃ 29
೨೯“‘ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು.
וְאִ֣ם לֹֽא־יִגָּאֵ֗ל עַד־מְלֹ֣את לוֹ֮ שָׁנָ֣ה תְמִימָה֒ וְ֠קָם הַבַּ֨יִת אֲשֶׁר־בָּעִ֜יר אֲשֶׁר־לא חֹמָ֗ה לַצְּמִיתֻ֛ת לַקֹּנֶ֥ה אֹת֖וֹ לְדֹרֹתָ֑יו לֹ֥א יֵצֵ֖א בַּיֹּבֵֽל׃ 30
೩೦ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರ್ಷದೊಳಗಾಗಿ ಬಿಡಿಸಿಕೊಳ್ಳಲು ಸಾಧ್ಯವಾಗದೆ ಹೋದರೆ, ಅದು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗಿ ಮಾರಿದವನಿಗೆ ಮತ್ತು ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು.
וּבָתֵּ֣י הַחֲצֵרִ֗ים אֲשֶׁ֨ר אֵין־לָהֶ֤ם חֹמָה֙ סָבִ֔יב עַל־שְׂדֵ֥ה הָאָ֖רֶץ יֵחָשֵׁ֑ב גְּאֻלָּה֙ תִּהְיֶה־לּ֔וֹ וּבַיֹּבֵ֖ל יֵצֵֽא׃ 31
೩೧ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಲ್ಪಡಬೇಕು; ಅವುಗಳನ್ನು ಬಿಡಿಸುವ ಅಧಿಕಾರವಿದ್ದು, ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು.
וְעָרֵי֙ הַלְוִיִּ֔ם בָּתֵּ֖י עָרֵ֣י אֲחֻזָּתָ֑ם גְּאֻלַּ֥ת עוֹלָ֖ם תִּהְיֶ֥ה לַלְוִיִּֽם׃ 32
೩೨ಆದರೆ ಲೇವಿಯರ ಸ್ವತ್ತಾಗಿರುವ ಪಟ್ಟಣಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸುವ ಅಧಿಕಾರವು ಲೇವಿಯರಿಗೆ ಯಾವಾಗಲೂ ಇರುವುದು.
וַאֲשֶׁ֤ר יִגְאַל֙ מִן־הַלְוִיִּ֔ם וְיָצָ֧א מִמְכַּר־בַּ֛יִת וְעִ֥יר אֲחֻזָּת֖וֹ בַּיֹּבֵ֑ל כִּ֣י בָתֵּ֞י עָרֵ֣י הַלְוִיִּ֗ם הִ֚וא אֲחֻזָּתָ֔ם בְּת֖וֹךְ בְּנֵ֥י יִשְׂרָאֵֽל׃ 33
೩೩ಲೇವಿಯರೊಳಗೆ ಯಾರೂ ಅದನ್ನು ಬಿಡಿಸದೆಹೋದರೆ, ಲೇವಿಯರ ಸ್ವಂತವಾಗಿರುವ ಅಂತಹ ಪಟ್ಟಣಗಳಲ್ಲಿ ಮಾರಲ್ಪಟ್ಟ ಮನೆ ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವುದು. ಲೇವಿಯರ ಪಟ್ಟಣಗಳಲ್ಲಿನ ಮನೆಗಳು ಇಸ್ರಾಯೇಲರ ಮಧ್ಯದಲ್ಲಿರುವ ಅವರ ಸ್ವಾಸ್ತ್ಯವಷ್ಡೆ.
וּֽשְׂדֵ֛ה מִגְרַ֥שׁ עָרֵיהֶ֖ם לֹ֣א יִמָּכֵ֑ר כִּֽי־אֲחֻזַּ֥ת עוֹלָ֛ם ה֖וּא לָהֶֽם׃ ס 34
೩೪ಅವರು ತಮ್ಮ ಪಟ್ಟಣಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಬಾರದು. ಅವು ಅವರಿಗೆ ಶಾಶ್ವತವಾದ ಸ್ವತ್ತು.
וְכִֽי־יָמ֣וּךְ אָחִ֔יךָ וּמָ֥טָה יָד֖וֹ עִמָּ֑ךְ וְהֶֽחֱזַ֣קְתָּ בּ֔וֹ גֵּ֧ר וְתוֹשָׁ֛ב וָחַ֖י עִמָּֽךְ׃ 35
೩೫“‘ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ, ಅವನು ಬದುಕಿಕೊಳ್ಳುವಂತೆ ನೀವು ಅವನನ್ನು ನಿಮ್ಮ ನಡುವೆ ಇಳಿದುಕೊಂಡ ವಿದೇಶೀಯನೆಂದು ಅಥವಾ ಪ್ರವಾಸಿಯೆಂದು ಭಾವಿಸಿ ಸಹಾಯಮಾಡಬೇಕು.
אַל־תִּקַּ֤ח מֵֽאִתּוֹ֙ נֶ֣שֶׁךְ וְתַרְבִּ֔ית וְיָרֵ֖אתָ מֵֽאֱלֹהֶ֑יךָ וְחֵ֥י אָחִ֖יךָ עִמָּֽךְ׃ 36
೩೬ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.
אֶ֨ת־כַּסְפְּךָ֔ לֹֽא־תִתֵּ֥ן ל֖וֹ בְּנֶ֑שֶׁךְ וּבְמַרְבִּ֖ית לֹא־תִתֵּ֥ן אָכְלֶֽךָ׃ 37
೩೭ನೀವು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ದವಸಕೊಟ್ಟರೆ ಲಾಭವನ್ನು ಕೇಳಬಾರದು.
אֲנִ֗י יְהוָה֙ אֱלֹ֣הֵיכֶ֔ם אֲשֶׁר־הוֹצֵ֥אתִי אֶתְכֶ֖ם מֵאֶ֣רֶץ מִצְרָ֑יִם לָתֵ֤ת לָכֶם֙ אֶת־אֶ֣רֶץ כְּנַ֔עַן לִהְי֥וֹת לָכֶ֖ם לֵאלֹהִֽים׃ ס 38
೩೮ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವುದಕ್ಕೂ ಮತ್ತು ನಿಮಗೆ ಕಾನಾನ್ ದೇಶವನ್ನು ಕೊಡುವುದಕ್ಕೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದವನು ನಾನೇ.
וְכִֽי־יָמ֥וּךְ אָחִ֛יךָ עִמָּ֖ךְ וְנִמְכַּר־לָ֑ךְ לֹא־תַעֲבֹ֥ד בּ֖וֹ עֲבֹ֥דַת עָֽבֶד׃ 39
೩೯“‘ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ಕೆಲಸ ಮಾಡಿಸಿಕೊಳ್ಳಬಾರದು.
כְּשָׂכִ֥יר כְּתוֹשָׁ֖ב יִהְיֶ֣ה עִמָּ֑ךְ עַד־שְׁנַ֥ת הַיֹּבֵ֖ל יַעֲבֹ֥ד עִמָּֽךְ׃ 40
೪೦ಅವನು ಕೂಲಿಯವನಂತೆಯೂ ಇಲ್ಲವೇ ಪ್ರವಾಸಿಯಂತೆಯೂ ನಿಮ್ಮ ಬಳಿಯಲ್ಲಿದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಯನ್ನು ಮಾಡಲಿ.
וְיָצָא֙ מֵֽעִמָּ֔ךְ ה֖וּא וּבָנָ֣יו עִמּ֑וֹ וְשָׁב֙ אֶל־מִשְׁפַּחְתּ֔וֹ וְאֶל־אֲחֻזַּ֥ת אֲבֹתָ֖יו יָשֽׁוּב׃ 41
೪೧ಆಗ ಅವನನ್ನೂ ಮತ್ತು ಅವನ ಮಕ್ಕಳನ್ನೂ ಬಿಟ್ಟುಬಿಡಬೇಕು; ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸ್ವತ್ತಿಗೂ ಹೋಗಬಹುದು.
כִּֽי־עֲבָדַ֣י הֵ֔ם אֲשֶׁר־הוֹצֵ֥אתִי אֹתָ֖ם מֵאֶ֣רֶץ מִצְרָ֑יִם לֹ֥א יִמָּכְר֖וּ מִמְכֶּ֥רֶת עָֽבֶד׃ 42
೪೨ಅವರು ನನಗೆ ಗುಲಾಮರಾಗಿದ್ದಾರೆ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನು; ದಾಸರನ್ನು ಮಾರುವಂತೆ ಅವರನ್ನು ಮಾರಬಾರದು.
לֹא־תִרְדֶּ֥ה ב֖וֹ בְּפָ֑רֶךְ וְיָרֵ֖אתָ מֵאֱלֹהֶֽיךָ׃ 43
೪೩ಅವರಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು; ನಿಮ್ಮ ದೇವರಿಗೆ ಭಯಪಡಬೇಕು.
וְעַבְדְּךָ֥ וַאֲמָתְךָ֖ אֲשֶׁ֣ר יִהְיוּ־לָ֑ךְ מֵאֵ֣ת הַגּוֹיִ֗ם אֲשֶׁר֙ סְבִיבֹ֣תֵיכֶ֔ם מֵהֶ֥ם תִּקְנ֖וּ עֶ֥בֶד וְאָמָֽה׃ 44
೪೪ನಿಮಗೆ ದಾಸದಾಸಿಯರು ಬೇಕಾಗಿದ್ದರೆ ಸುತ್ತಲಿರುವ ಅನ್ಯರನ್ನು ಕ್ರಯಕ್ಕೆ ತೆಗೆದುಕೊಳ್ಳಬಹುದು.
וְ֠גַם מִבְּנֵ֨י הַתּוֹשָׁבִ֜ים הַגָּרִ֤ים עִמָּכֶם֙ מֵהֶ֣ם תִּקְנ֔וּ וּמִמִּשְׁפַּחְתָּם֙ אֲשֶׁ֣ר עִמָּכֶ֔ם אֲשֶׁ֥ר הוֹלִ֖ידוּ בְּאַרְצְכֶ֑ם וְהָי֥וּ לָכֶ֖ם לַֽאֲחֻזָּֽה׃ 45
೪೫ನಿಮ್ಮ ನಡುವೆ ಇರುವ ವಿದೇಶಿಯರನ್ನೂ ಮತ್ತು ನಿಮ್ಮ ದೇಶದಲ್ಲಿ ಅವರಿಂದ ಹುಟ್ಟಿದವರನ್ನೂ ಕ್ರಯಕ್ಕೆ ತೆಗೆದುಕೊಳ್ಳಬಹುದು; ಅಂಥವರು ನಿಮಗೆ ಸೊತ್ತಾಗಬಹುದು.
וְהִתְנַחֲלְתֶּ֨ם אֹתָ֜ם לִבְנֵיכֶ֤ם אַחֲרֵיכֶם֙ לָרֶ֣שֶׁת אֲחֻזָּ֔ה לְעֹלָ֖ם בָּהֶ֣ם תַּעֲבֹ֑דוּ וּבְאַ֨חֵיכֶ֤ם בְּנֵֽי־יִשְׂרָאֵל֙ אִ֣ישׁ בְּאָחִ֔יו לֹא־תִרְדֶּ֥ה ב֖וֹ בְּפָֽרֶךְ׃ ס 46
೪೬ನೀವು ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸ್ವತ್ತಾಗಿ ಕೊಟ್ಟು ಬಿಡಬಹುದು. ಅವರನ್ನು ಶಾಶ್ವತ ದಾಸರನ್ನಾಗಿ ಮಾಡಿಕೊಳ್ಳಬಹುದು. ಇಸ್ರಾಯೇಲರಾದ ನೀವಾದರೋ ಎಲ್ಲರೂ ಸಹೋದರರಾಗಿರುವುದರಿಂದ ಒಬ್ಬರಿಂದ ಒಬ್ಬರು ಕಠಿಣವಾಗಿ ಸೇವೆಮಾಡಿಸಿಕೊಳ್ಳಬಾರದು.
וְכִ֣י תַשִּׂ֗יג יַ֣ד גֵּ֤ר וְתוֹשָׁב֙ עִמָּ֔ךְ וּמָ֥ךְ אָחִ֖יךָ עִמּ֑וֹ וְנִמְכַּ֗ר לְגֵ֤ר תּוֹשָׁב֙ עִמָּ֔ךְ א֥וֹ לְעֵ֖קֶר מִשְׁפַּ֥חַת גֵּֽר׃ 47
೪೭“‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿದ್ದು ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅಥವಾ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.
אַחֲרֵ֣י נִמְכַּ֔ר גְּאֻלָּ֖ה תִּהְיֶה־לּ֑וֹ אֶחָ֥ד מֵאֶחָ֖יו יִגְאָלֶֽנּוּ׃ 48
೪೮ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು.
אוֹ־דֹד֞וֹ א֤וֹ בֶן־דֹּדוֹ֙ יִגְאָלֶ֔נּוּ אֽוֹ־מִשְּׁאֵ֧ר בְּשָׂר֛וֹ מִמִּשְׁפַּחְתּ֖וֹ יִגְאָלֶ֑נּוּ אֽוֹ־הִשִּׂ֥יגָה יָד֖וֹ וְנִגְאָֽל׃ 49
೪೯ಅವನ ದೊಡ್ಡಪ್ಪ, ಚಿಕ್ಕಪ್ಪಂದಿರಾಗಲಿ, ಇವರ ಮಕ್ಕಳಾಗಲಿ ಅಥವಾ ಸಮೀಪಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.
וְחִשַּׁב֙ עִם־קֹנֵ֔הוּ מִשְּׁנַת֙ הִמָּ֣כְרוֹ ל֔וֹ עַ֖ד שְׁנַ֣ת הַיֹּבֵ֑ל וְהָיָ֞ה כֶּ֤סֶף מִמְכָּרוֹ֙ בְּמִסְפַּ֣ר שָׁנִ֔ים כִּימֵ֥י שָׂכִ֖יר יִהְיֶ֥ה עִמּֽוֹ׃ 50
೫೦ಅವನು ತನ್ನನ್ನು ಮಾರಿಕೊಂಡ ವರ್ಷ ಮೊದಲುಗೊಂಡು ಮುಂದಣ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರ್ಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕ ಮಾಡುವಂತೆ ಅವನ ವಿಷಯದಲ್ಲಿಯೂ ಲೆಕ್ಕ ಮಾಡಬೇಕು.
אִם־ע֥וֹד רַבּ֖וֹת בַּשָּׁנִ֑ים לְפִיהֶן֙ יָשִׁ֣יב גְּאֻלָּת֔וֹ מִכֶּ֖סֶף מִקְנָתֽוֹ׃ 51
೫೧ಜೂಬಿಲಿ ಸಂವತ್ಸರವು ಬರುವುದಕ್ಕೆ ಇನ್ನು ಅನೇಕ ವರ್ಷಗಳಿದ್ದರೆ ಅವುಗಳ ಪ್ರಕಾರವೇ ತನ್ನ ಬಿಡುಗಡೆಯ ಕ್ರಯವನ್ನೂ ಕೊಡಬೇಕು.
וְאִם־מְעַ֞ט נִשְׁאַ֧ר בַּשָּׁנִ֛ים עַד־שְׁנַ֥ת הַיֹּבֵ֖ל וְחִשַּׁב־ל֑וֹ כְּפִ֣י שָׁנָ֔יו יָשִׁ֖יב אֶת־גְּאֻלָּתֽוֹ׃ 52
೫೨ಕೆಲವು ವರ್ಷಗಳು ಮಾತ್ರ ಉಳಿದರೆ ಸ್ವಲ್ಪಭಾಗವನ್ನೂ ದಣಿಗೆ ಕೊಟ್ಟು ತನ್ನನ್ನು ಬಿಡಿಸಿಕೊಳ್ಳಬೇಕು.
כִּשְׂכִ֥יר שָׁנָ֛ה בְּשָׁנָ֖ה יִהְיֶ֣ה עִמּ֑וֹ לֹֽא־יִרְדֶּ֥נּֽוּ בְּפֶ֖רֶךְ לְעֵינֶֽיךָ׃ 53
೫೩ಅವನು ವರ್ಷವರ್ಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆಮಾಡಿಸಿಕೊಳ್ಳುವುದನ್ನು ನೀವು ನೋಡಿ ಸುಮ್ಮನೆ ಇರಬಾರದು.
וְאִם־לֹ֥א יִגָּאֵ֖ל בְּאֵ֑לֶּה וְיָצָא֙ בִּשְׁנַ֣ת הַיֹּבֵ֔ל ה֖וּא וּבָנָ֥יו עִמּֽוֹ׃ 54
೫೪ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಮತ್ತು ಅವನ ಮಕ್ಕಳೂ ಬಿಡುಗಡೆಯಾಗಬೇಕು.
כִּֽי־לִ֤י בְנֵֽי־יִשְׂרָאֵל֙ עֲבָדִ֔ים עֲבָדַ֣י הֵ֔ם אֲשֶׁר־הוֹצֵ֥אתִי אוֹתָ֖ם מֵאֶ֣רֶץ מִצְרָ֑יִם אֲנִ֖י יְהוָ֥ה אֱלֹהֵיכֶֽם׃ 55
೫೫ಏಕೆಂದರೆ ಇಸ್ರಾಯೇಲರು ನನ್ನ ದಾಸರೇ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು’” ಎಂದು ಹೇಳಿದನು.

< וַיִּקְרָא 25 >