< נחמיה 1 >
דִּבְרֵ֥י נְחֶמְיָ֖ה בֶּן־חֲכַלְיָ֑ה וַיְהִ֤י בְחֹֽדֶשׁ־כסלו שְׁנַ֣ת עֶשְׂרִ֔ים וַאֲנִ֥י הָיִ֖יתִי בְּשׁוּשַׁ֥ן הַבִּירָֽה׃ | 1 |
ಹಕಲ್ಯನ ಮಗ ನೆಹೆಮೀಯನ ಮಾತುಗಳು: ಇಪ್ಪತ್ತನೆಯ ವರ್ಷದ, ಕಿಸ್ಲೇವ್ ಎಂಬ ಮಾರ್ಗಶಿರ ತಿಂಗಳಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದೆನು.
וַיָּבֹ֨א חֲנָ֜נִי אֶחָ֧ד מֵאַחַ֛י ה֥וּא וַאֲנָשִׁ֖ים מִֽיהוּדָ֑ה וָאֶשְׁאָלֵ֞ם עַל־הַיְּהוּדִ֧ים הַפְּלֵיטָ֛ה אֲשֶֽׁר־נִשְׁאֲר֥וּ מִן־הַשֶּׁ֖בִי וְעַל־יְרוּשָׁלִָֽם׃ | 2 |
ಆಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನು ಹಾಗೂ ಬೇರೆ ಕೆಲವು ಜನರು ಯೆಹೂದದಿಂದ ನನ್ನ ಬಳಿಗೆ ಬಂದರು. ಸೆರೆ ಹೋದವರಿಂದ ಉಳಿದಿರುವ ಯೆಹೂದ್ಯರ ಮತ್ತು ಯೆರೂಸಲೇಮಿನ ಸಮಾಚಾರವನ್ನು ನಾನು ಅವರಲ್ಲಿ ವಿಚಾರಿಸಿದೆನು.
וַיֹּאמְרוּ֮ לִי֒ הַֽנִּשְׁאָרִ֞ים אֲשֶֽׁר־נִשְׁאֲר֤וּ מִן־הַשְּׁבִי֙ שָׁ֣ם בַּמְּדִינָ֔ה בְּרָעָ֥ה גְדֹלָ֖ה וּבְחֶרְפָּ֑ה וְחוֹמַ֤ת יְרוּשָׁלִַ֙ם֙ מְפֹרָ֔צֶת וּשְׁעָרֶ֖יהָ נִצְּת֥וּ בָאֵֽשׁ׃ | 3 |
ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟ ನಿಂದೆಗಳಿಗೆ ಒಳಗಾಗಿದ್ದಾರೆ. ಯೆರೂಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.
וַיְהִ֞י כְּשָׁמְעִ֣י ׀ אֶת־הַדְּבָרִ֣ים הָאֵ֗לֶּה יָשַׁ֙בְתִּי֙ וָֽאֶבְכֶּ֔ה וָאֶתְאַבְּלָ֖ה יָמִ֑ים וָֽאֱהִ֥י צָם֙ וּמִתְפַּלֵּ֔ל לִפְנֵ֖י אֱלֹהֵ֥י הַשָּׁמָֽיִם׃ | 4 |
ನಾನು ಈ ಸಮಾಚಾರವನ್ನು ಕೇಳಿದಾಗ, ನೆಲದ ಮೇಲೆ ಕೂತುಕೊಂಡು ಅತ್ತೆನು. ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.
וָאֹמַ֗ר אָֽנָּ֤א יְהוָה֙ אֱלֹהֵ֣י הַשָּׁמַ֔יִם הָאֵ֥ל הַגָּד֖וֹל וְהַנּוֹרָ֑א שֹׁמֵ֤ר הַבְּרִית֙ וָחֶ֔סֶד לְאֹהֲבָ֖יו וּלְשֹׁמְרֵ֥י מִצְוֺתָֽיו׃ | 5 |
ನಾನು ನನ್ನ ಪ್ರಾರ್ಥನೆಯಲ್ಲಿ: “ಪರಲೋಕ ದೇವರಾದ ಯೆಹೋವ ದೇವರೇ, ನೀವು ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿದ್ದೀರಿ. ನಿಮ್ಮನ್ನು ಪ್ರೀತಿಸಿ ನಿಮ್ಮ ಆಜ್ಞೆಗಳಿಗೆ ವಿಧೇಯರಾಗಿರುವವರೊಂದಿಗೆ, ನಿಮ್ಮ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವವರೇ, ಭಯಭಕ್ತಿಗೆ ಪಾತ್ರರಾದ ದೇವರೇ,
תְּהִ֣י נָ֣א אָזְנְךָֽ־קַשֶּׁ֣בֶת וְֽעֵינֶ֪יךָ פְתֻוּח֟וֹת לִשְׁמֹ֣עַ אֶל־תְּפִלַּ֣ת עַבְדְּךָ֡ אֲשֶׁ֣ר אָנֹכִי֩ מִתְפַּלֵּ֨ל לְפָנֶ֤יךָ הַיּוֹם֙ יוֹמָ֣ם וָלַ֔יְלָה עַל־בְּנֵ֥י יִשְׂרָאֵ֖ל עֲבָדֶ֑יךָ וּמִתְוַדֶּ֗ה עַל־חַטֹּ֤אות בְּנֵֽי־יִשְׂרָאֵל֙ אֲשֶׁ֣ר חָטָ֣אנוּ לָ֔ךְ וַאֲנִ֥י וּבֵית־אָבִ֖י חָטָֽאנוּ׃ | 6 |
ಕೃಪೆಮಾಡಿ ನನಗೆ ಕಿವಿಗೊಡಿರಿ, ಕಟಾಕ್ಷಿಸಿ ನೋಡಿರಿ, ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿರಿ. ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಾಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ. ಅವರು ನಿಮಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆಮಾಡುತ್ತಾ ಇದ್ದೇನೆ. ನಾನೂ, ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.
חֲבֹ֖ל חָבַ֣לְנוּ לָ֑ךְ וְלֹא־שָׁמַ֣רְנוּ אֶת־הַמִּצְוֺ֗ת וְאֶת־הַֽחֻקִּים֙ וְאֶת־הַמִּשְׁפָּטִ֔ים אֲשֶׁ֥ר צִוִּ֖יתָ אֶת־מֹשֶׁ֥ה עַבְדֶּֽךָ׃ | 7 |
ನಾವು ನಿಮಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು. ನೀವು ನಿಮ್ಮ ದಾಸನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ.
זְכָר־נָא֙ אֶת־הַדָּבָ֔ר אֲשֶׁ֥ר צִוִּ֛יתָ אֶת־מֹשֶׁ֥ה עַבְדְּךָ֖ לֵאמֹ֑ר אַתֶּ֣ם תִּמְעָ֔לוּ אֲנִ֕י אָפִ֥יץ אֶתְכֶ֖ם בָּעַמִּֽים׃ | 8 |
“ದಯಮಾಡಿ ನಿಮ್ಮ ಸೇವಕನಾದ ಮೋಶೆಗೆ ಹೇಳಿದ ಈ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಮೋಶೆಯ ಮುಖಾಂತರ, ‘ನೀವು ದ್ರೋಹ ಮಾಡಿದರೆ, ನಾನು ನಿಮ್ಮನ್ನು ಜನಾಂಗಗಳ ನಡುವೆ ಚದರಿಸಿಬಿಡುವೆನು.
וְשַׁבְתֶּ֣ם אֵלַ֔י וּשְׁמַרְתֶּם֙ מִצְוֺתַ֔י וַעֲשִׂיתֶ֖ם אֹתָ֑ם אִם־יִהְיֶ֨ה נִֽדַּחֲכֶ֜ם בִּקְצֵ֤ה הַשָּׁמַ֙יִם֙ מִשָּׁ֣ם אֲקַבְּצֵ֔ם והבואתים אֶל־הַמָּק֔וֹם אֲשֶׁ֣ר בָּחַ֔רְתִּי לְשַׁכֵּ֥ן אֶת־שְׁמִ֖י שָֽׁם׃ | 9 |
ಆದರೆ ನೀವು ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ, ಅವುಗಳ ಪ್ರಕಾರ ನಡೆದರೆ, ನಿಮ್ಮಲ್ಲಿರುವವರು ಆಕಾಶದ ಅಂತ್ಯದವರೆಗೂ ಸೆರೆಯಾಗಿ ಹೋಗಿದ್ದರೂ, ನಾನು ಅಲ್ಲಿಂದ ಅವರನ್ನು ಕೂಡಿಸಿ, ನನ್ನ ಹೆಸರನ್ನಿಡಲು ಆಯ್ದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು,’ ಎಂದು ಹೇಳಿದ್ದೀರಿ.
וְהֵ֥ם עֲבָדֶ֖יךָ וְעַמֶּ֑ךָ אֲשֶׁ֤ר פָּדִ֙יתָ֙ בְּכֹחֲךָ֣ הַגָּד֔וֹל וּבְיָדְךָ֖ הַחֲזָקָֽה׃ | 10 |
“ಅವರು ನಿಮ್ಮ ಮಹಾಶಕ್ತಿಯಿಂದಲೂ, ನಿಮ್ಮ ಭುಜಪರಾಕ್ರಮಗಳಿಂದ ನೀವು ವಿಮೋಚಿಸಿದ ನಿಮ್ಮ ಸೇವಕರೂ, ನಿಮ್ಮ ಜನರೂ ಆಗಿರುತ್ತಾರೆ.
אָנָּ֣א אֲדֹנָ֗י תְּהִ֣י נָ֣א אָזְנְךָֽ־קַ֠שֶּׁבֶת אֶל־תְּפִלַּ֨ת עַבְדְּךָ֜ וְאֶל־תְּפִלַּ֣ת עֲבָדֶ֗יךָ הַֽחֲפֵצִים֙ לְיִרְאָ֣ה אֶת־שְׁמֶ֔ךָ וְהַצְלִֽיחָה־נָּ֤א לְעַבְדְּךָ֙ הַיּ֔וֹם וּתְנֵ֣הוּ לְרַחֲמִ֔ים לִפְנֵ֖י הָאִ֣ישׁ הַזֶּ֑ה וַאֲנִ֛י הָיִ֥יתִי מַשְׁקֶ֖ה לַמֶּֽלֶךְ׃ פ | 11 |
ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.