< בְּמִדְבַּר 24 >

וַיַּ֣רְא בִּלְעָ֗ם כִּ֣י ט֞וֹב בְּעֵינֵ֤י יְהוָה֙ לְבָרֵ֣ךְ אֶת־יִשְׂרָאֵ֔ל וְלֹא־הָלַ֥ךְ כְּפַֽעַם־בְּפַ֖עַם לִקְרַ֣את נְחָשִׁ֑ים וַיָּ֥שֶׁת אֶל־הַמִּדְבָּ֖ר פָּנָֽיו׃ 1
ಇಸ್ರಾಯೇಲರಿಗೆ ಶುಭವಾಗಬೇಕೆಂಬುದು ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು.
וַיִּשָּׂ֨א בִלְעָ֜ם אֶת־עֵינָ֗יו וַיַּרְא֙ אֶת־יִשְׂרָאֵ֔ל שֹׁכֵ֖ן לִשְׁבָטָ֑יו וַתְּהִ֥י עָלָ֖יו ר֥וּחַ אֱלֹהִֽים׃ 2
ಬಿಳಾಮನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲರು ಅವನಿಗೆ ಕಾಣಿಸಿದರು. ಆಗ ಅವನು ದೇವರಾತ್ಮಪ್ರೇರಿತನಾಗಿ,
וַיִּשָּׂ֥א מְשָׁל֖וֹ וַיֹּאמַ֑ר נְאֻ֤ם בִּלְעָם֙ בְּנ֣וֹ בְעֹ֔ר וּנְאֻ֥ם הַגֶּ֖בֶר שְׁתֻ֥ם הָעָֽיִן׃ 3
ಹೀಗೆ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.
נְאֻ֕ם שֹׁמֵ֖עַ אִמְרֵי־אֵ֑ל אֲשֶׁ֨ר מַחֲזֵ֤ה שַׁדַּי֙ יֶֽחֱזֶ֔ה נֹפֵ֖ל וּגְל֥וּי עֵינָֽיִם׃ 4
ದೇವರ ಮಾತುಗಳನ್ನು ಕೇಳುವವನಾಗಿಯೂ, ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಪರವಶವಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು.
מַה־טֹּ֥בוּ אֹהָלֶ֖יךָ יַעֲקֹ֑ב מִשְׁכְּנֹתֶ֖יךָ יִשְׂרָאֵֽל׃ 5
ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ, ಇಸ್ರಾಯೇಲರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ.
כִּנְחָלִ֣ים נִטָּ֔יוּ כְּגַנֹּ֖ת עֲלֵ֣י נָהָ֑ר כַּאֲהָלִים֙ נָטַ֣ע יְהוָ֔ה כַּאֲרָזִ֖ים עֲלֵי־מָֽיִם׃ 6
ಅವು ಕಣಿವೆಗಳ ಹಾಗೆಯೇ ವಿಸ್ತರಿಸಿದೆ. ನದಿಯ ಬಳಿಯಲ್ಲಿರುವ ತೋಟಗಳಂತೆಯೂ, ಯೆಹೋವನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿಯಲ್ಲಿರುವ ದೇವದಾರುವೃಕ್ಷಗಳಿಗೂ ಸಮಾನವಾಗಿವೆ.
יִֽזַּל־מַ֙יִם֙ מִדָּ֣לְיָ֔ו וְזַרְע֖וֹ בְּמַ֣יִם רַבִּ֑ים וְיָרֹ֤ם מֵֽאֲגַג֙ מַלְכּ֔וֹ וְתִנַּשֵּׂ֖א מַלְכֻתֽוֹ׃ 7
ತನ್ನ ತೊಟ್ಟಿಗಳಿಂದ ನೀರು ಹರಿಯುತ್ತಲೇ ಇದೆ, ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು. ಅವರ ರಾಜ್ಯವು ಅಭಿವೃದ್ಧಿಯಲ್ಲಿರುವುದು.
אֵ֚ל מוֹצִיא֣וֹ מִמִּצְרַ֔יִם כְּתוֹעֲפֹ֥ת רְאֵ֖ם ל֑וֹ יֹאכַ֞ל גּוֹיִ֣ם צָרָ֗יו וְעַצְמֹתֵיהֶ֛ם יְגָרֵ֖ם וְחִצָּ֥יו יִמְחָֽץ׃ 8
ದೇವರು ಅವನನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಷ್ಟು ಬಲವುಳ್ಳವರು. ಅವರು ಶತ್ರುಜನರನ್ನು ನಿರ್ಮೂಲಮಾಡುವರು. ವೈರಿಗಳ ಎಲುಬುಗಳನ್ನು ಮುರಿದುಹಾಕುವರು. ಅವರನ್ನು ಬಾಣಗಳಿಂದ ಗಾಯಪಡಿಸುವರು.
כָּרַ֨ע שָׁכַ֧ב כַּאֲרִ֛י וּכְלָבִ֖יא מִ֣י יְקִימֶ֑נּוּ מְבָרֲכֶ֣יךָ בָר֔וּךְ וְאֹרְרֶ֖יךָ אָרֽוּר׃ 9
ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು.
וַיִּֽחַר־אַ֤ף בָּלָק֙ אֶל־בִּלְעָ֔ם וַיִּסְפֹּ֖ק אֶת־כַּפָּ֑יו וַיֹּ֨אמֶר בָּלָ֜ק אֶל־בִּלְעָ֗ם לָקֹ֤ב אֹֽיְבַי֙ קְרָאתִ֔יךָ וְהִנֵּה֙ בֵּרַ֣כְתָּ בָרֵ֔ךְ זֶ֖ה שָׁלֹ֥שׁ פְּעָמִֽים׃ 10
೧೦ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.
וְעַתָּ֖ה בְּרַח־לְךָ֣ אֶל־מְקוֹמֶ֑ךָ אָמַ֙רְתִּי֙ כַּבֵּ֣ד אֲכַבֶּדְךָ֔ וְהִנֵּ֛ה מְנָעֲךָ֥ יְהוָ֖ה מִכָּבֽוֹד׃ 11
೧೧ಆದಕಾರಣ ನನ್ನನ್ನು ಬಿಟ್ಟು ನಿನ್ನ ಊರಿಗೆ ಹೋಗಿಬಿಡು. ನಿನ್ನನ್ನು ಬಹಳವಾಗಿ ಸನ್ಮಾನಿಸಿ ಘನಪಡಿಸುವೆನೆಂದು ಹೇಳಿಕೊಂಡೆನು. ಆದರೆ ನಿನಗೆ ಸನ್ಮಾನಮಾಡದಂತೆ ಯೆಹೋವನು ಅಡ್ಡಿಮಾಡಿದ್ದಾನೆ” ಎಂದು ಹೇಳಿದನು.
וַיֹּ֥אמֶר בִּלְעָ֖ם אֶל־בָּלָ֑ק הֲלֹ֗א גַּ֧ם אֶל־מַלְאָכֶ֛יךָ אֲשֶׁר־שָׁלַ֥חְתָּ אֵלַ֖י דִּבַּ֥רְתִּי לֵאמֹֽר׃ 12
೧೨ಅದಕ್ಕೆ ಬಿಳಾಮನು ಬಾಲಾಕನಿಗೆ, “ನೀನು ನನ್ನ ಬಳಿ ಕಳುಹಿಸಿದ ಸೇವಕನಿಗೆ,
אִם־יִתֶּן־לִ֨י בָלָ֜ק מְלֹ֣א בֵיתוֹ֮ כֶּ֣סֶף וְזָהָב֒ לֹ֣א אוּכַ֗ל לַעֲבֹר֙ אֶת־פִּ֣י יְהוָ֔ה לַעֲשׂ֥וֹת טוֹבָ֛ה א֥וֹ רָעָ֖ה מִלִּבִּ֑י אֲשֶׁר־יְדַבֵּ֥ר יְהוָ֖ה אֹת֥וֹ אֲדַבֵּֽר׃ 13
೧೩‘ಬಾಲಾಕನು ನನಗೆ ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಒಳ್ಳೇಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡಲಾರೆ. ಯೆಹೋವನು ಏನು ಹೇಳುತ್ತಾನೋ ಅದನ್ನೇ ಮಾತನಾಡುವೆನು ಎಂದು ಹೇಳಲಿಲ್ಲವೋ?’
וְעַתָּ֕ה הִנְנִ֥י הוֹלֵ֖ךְ לְעַמִּ֑י לְכָה֙ אִיעָ֣צְךָ֔ אֲשֶׁ֨ר יַעֲשֶׂ֜ה הָעָ֥ם הַזֶּ֛ה לְעַמְּךָ֖ בְּאַחֲרִ֥ית הַיָּמִֽים׃ 14
೧೪ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು.
וַיִּשָּׂ֥א מְשָׁל֖וֹ וַיֹּאמַ֑ר נְאֻ֤ם בִּלְעָם֙ בְּנ֣וֹ בְעֹ֔ר וּנְאֻ֥ם הַגֶּ֖בֶר שְׁתֻ֥ם הָעָֽיִן׃ 15
೧೫ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನಿಗುಂಟಾದ ದೈವೋಕ್ತಿ, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.
נְאֻ֗ם שֹׁמֵ֙עַ֙ אִמְרֵי־אֵ֔ל וְיֹדֵ֖עַ דַּ֣עַת עֶלְי֑וֹן מַחֲזֵ֤ה שַׁדַּי֙ יֶֽחֱזֶ֔ה נֹפֵ֖ל וּגְל֥וּי עֵינָֽיִם׃ 16
೧೬ದೇವರ ಮಾತುಗಳನ್ನು ಕೇಳುವವನೂ, ಪರಾತ್ಪರನಾದ ದೇವರ ಜ್ಞಾನವನ್ನು ಪಡೆದವನೂ, ಪರವಶವಾಗಿ ಕಣ್ಣುತೆರೆದು, ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು.
אֶרְאֶ֙נּוּ֙ וְלֹ֣א עַתָּ֔ה אֲשׁוּרֶ֖נּוּ וְלֹ֣א קָר֑וֹב דָּרַ֨ךְ כּוֹכָ֜ב מִֽיַּעֲקֹ֗ב וְקָ֥ם שֵׁ֙בֶט֙ מִיִּשְׂרָאֵ֔ל וּמָחַץ֙ פַּאֲתֵ֣י מוֹאָ֔ב וְקַרְקַ֖ר כָּל־בְּנֵי־שֵֽׁת׃ 17
೧೭ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.
וְהָיָ֨ה אֱד֜וֹם יְרֵשָׁ֗ה וְהָיָ֧ה יְרֵשָׁ֛ה שֵׂעִ֖יר אֹיְבָ֑יו וְיִשְׂרָאֵ֖ל עֹ֥שֶׂה חָֽיִל׃ 18
೧೮ಅದಲ್ಲದೆ ಇಸ್ರಾಯೇಲರು ಎದೋಮ್ಯರ ದೇಶವನ್ನೂ ಸ್ವಾಧೀನಪಡಿಸಿಕೊಂಡಿದ್ದಾರೆ, ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.
וְיֵ֖רְדְּ מִֽיַּעֲקֹ֑ב וְהֶֽאֱבִ֥יד שָׂרִ֖יד מֵעִֽיר׃ 19
೧೯ಇಸ್ರಾಯೇಲರೋ ಬಲಗೊಂಡವರು, ಯಾಕೋಬ್ಯರಿಗೇ ದೊರೆತನವಾಯಿತು, ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು” ಎಂದನು.
וַיַּרְא֙ אֶת־עֲמָלֵ֔ק וַיִּשָּׂ֥א מְשָׁל֖וֹ וַיֹּאמַ֑ר רֵאשִׁ֤ית גּוֹיִם֙ עֲמָלֵ֔ק וְאַחֲרִית֖וֹ עֲדֵ֥י אֹבֵֽד׃ 20
೨೦ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ, ಆದರೂ ನಾಶನವೇ ಅವರ ಗತಿ.”
וַיַּרְא֙ אֶת־הַקֵּינִ֔י וַיִּשָּׂ֥א מְשָׁל֖וֹ וַיֹּאמַ֑ר אֵיתָן֙ מֽוֹשָׁבֶ֔ךָ וְשִׂ֥ים בַּסֶּ֖לַע קִנֶּֽךָ׃ 21
೨೧ಬಳಿಕ ಅವನು ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ನಿಮ್ಮ ನಿವಾಸ ಸ್ಥಳವು ಶಾಶ್ವತವಾಗಿಯೇ ತೋರುತ್ತದೆ, ಬೆಟ್ಟದ ತುದಿಯಲ್ಲಿ ಗೂಡನ್ನು ಮಾಡಿಕೊಂಡಿದ್ದೀರಿ.
כִּ֥י אִם־יִהְיֶ֖ה לְבָ֣עֵֽר קָ֑יִן עַד־מָ֖ה אַשּׁ֥וּר תִּשְׁבֶּֽךָּ׃ 22
೨೨ಆದರೂ ಕೇನ್ಯರೂ ನಾಶವಾಗುವರು. ಅದು ಎಷ್ಟು ದೂರ ಅನ್ನುತ್ತೀರೋ? ಅಶ್ಶೂರ್ಯರೇ ನಿಮ್ಮನ್ನು ಸೆರೆಹಿಡಿದುಕೊಂಡು ಹೋಗುವರು.”
וַיִּשָּׂ֥א מְשָׁל֖וֹ וַיֹּאמַ֑ר א֕וֹי מִ֥י יִחְיֶ֖ה מִשֻּׂמ֥וֹ אֵֽל׃ 23
೨೩ಅವನು ಮತ್ತೂ ಕಡೆಯದಾಗಿ ಪ್ರವಾದಿಸಿದ್ದೇನೆಂದರೆ, “ಅಯ್ಯೋ! ದೇವರು ಹೀಗೆ ಮಾಡುವಾಗ ಯಾರು ಉಳಿಯುವರು?
וְצִים֙ מִיַּ֣ד כִּתִּ֔ים וְעִנּ֥וּ אַשּׁ֖וּר וְעִנּוּ־עֵ֑בֶר וְגַם־ה֖וּא עֲדֵ֥י אֹבֵֽד׃ 24
೨೪ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಶೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶನವುಂಟಾಗುವುದು” ಎಂದನು.
וַיָּ֣קָם בִּלְעָ֔ם וַיֵּ֖לֶךְ וַיָּ֣שָׁב לִמְקֹמ֑וֹ וְגַם־בָּלָ֖ק הָלַ֥ךְ לְדַרְכּֽוֹ׃ פ 25
೨೫ತರುವಾಯ ಬಿಳಾಮನು ಸ್ವದೇಶಕ್ಕೆ ತಿರುಗಿ ಹೋದನು, ಬಾಲಾಕನೂ ಹೊರಟುಹೋದನು.

< בְּמִדְבַּר 24 >