< מִשְׁלֵי 11 >
מֹאזְנֵ֣י מִ֭רְמָה תּוֹעֲבַ֣ת יְהוָ֑ה וְאֶ֖בֶן שְׁלֵמָ֣ה רְצוֹנֽוֹ׃ | 1 |
ಮೋಸದ ತಕ್ಕಡಿ ಯೆಹೋವ ದೇವರಿಗೆ ಅಸಹ್ಯವಾಗಿದೆ; ಆದರೆ ನ್ಯಾಯದ ತೂಕ ಅವರಿಗೆ ಮೆಚ್ಚುಗೆ.
בָּֽא־זָ֭דוֹן וַיָּבֹ֣א קָל֑וֹן וְֽאֶת־צְנוּעִ֥ים חָכְמָֽה׃ | 2 |
ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ಆದರೆ ದೀನತೆಯೊಂದಿಗೆ ಜ್ಞಾನ ಬರುವುದು.
תֻּמַּ֣ת יְשָׁרִ֣ים תַּנְחֵ֑ם וְסֶ֖לֶף בּוֹגְדִ֣ים ושדם׃ | 3 |
ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡೆಸುವುದು; ಅಪನಂಬಿಗಸ್ತರ ಕಪಟತನವೇ ಅವರನ್ನು ನಾಶಪಡಿಸುವುದು.
לֹא־יוֹעִ֣יל ה֭וֹן בְּי֣וֹם עֶבְרָ֑ה וּ֝צְדָקָ֗ה תַּצִּ֥יל מִמָּֽוֶת׃ | 4 |
ಉಗ್ರತೆಯ ದಿನದಲ್ಲಿ ಸಂಪತ್ತು ಲಾಭಕರವಾಗುವುದಿಲ್ಲ; ಆದರೆ ನೀತಿಯ ನಡತೆ ಮರಣದಿಂದ ವಿಮೋಚಿಸುವುದು.
צִדְקַ֣ת תָּ֭מִים תְּיַשֵּׁ֣ר דַּרְכּ֑וֹ וּ֝בְרִשְׁעָת֗וֹ יִפֹּ֥ל רָשָֽׁע׃ | 5 |
ನಿಷ್ಕಳಂಕರ ನೀತಿಯು ಅವರ ಮಾರ್ಗವನ್ನು ಸರಾಗ ಮಾಡುವುದು; ಆದರೆ ದುಷ್ಟರು ತಮ್ಮ ದುಷ್ಟತ್ವದಿಂದಲೇ ಬೀಳುವರು.
צִדְקַ֣ת יְ֭שָׁרִים תַּצִּילֵ֑ם וּ֝בְהַוַּ֗ת בֹּגְדִ֥ים יִלָּכֵֽדוּ׃ | 6 |
ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವುದು; ಆದರೆ ಅಪನಂಬಿಗಸ್ತರು ದುಷ್ಟ ಆಸೆಗಳಿಂದ ಸಿಕ್ಕಿಹಾಕಿಕೊಳ್ಳುತ್ತಾರೆ.
בְּמ֤וֹת אָדָ֣ם רָ֭שָׁע תֹּאבַ֣ד תִּקְוָ֑ה וְתוֹחֶ֖לֶת אוֹנִ֣ים אָבָֽדָה׃ | 7 |
ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವುವು; ತನ್ನ ಬಲದಿಂದ ನಿರೀಕ್ಷಿಸಿದ್ದೆಲ್ಲವೂ ಇಲ್ಲದಂತಾಗುವುದು.
צַ֭דִּיק מִצָּרָ֣ה נֶחֱלָ֑ץ וַיָּבֹ֖א רָשָׁ֣ע תַּחְתָּֽיו׃ | 8 |
ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ, ದುಷ್ಟನು ಅದರ ಸ್ಥಳದಲ್ಲಿ ಸಿಕ್ಕಿಬೀಳುವನು.
בְּפֶ֗ה חָ֭נֵף יַשְׁחִ֣ת רֵעֵ֑הוּ וּ֝בְדַ֗עַת צַדִּיקִ֥ים יֵחָלֵֽצוּ׃ | 9 |
ಒಬ್ಬ ಭಕ್ತಿಹೀನನು ಬಾಯಿಂದ ತನ್ನ ನೆರೆಯವನನ್ನು ಹಾಳು ಮಾಡುತ್ತಾನೆ, ಆದರೆ ನೀತಿವಂತನು ತಿಳುವಳಿಕೆಯ ಮೂಲಕ ಬಿಡಿಸಲಾಗುವನು.
בְּט֣וּב צַ֭דִּיקִים תַּעֲלֹ֣ץ קִרְיָ֑ה וּבַאֲבֹ֖ד רְשָׁעִ֣ים רִנָּֽה׃ | 10 |
ನೀತಿವಂತರು ಅಭಿವೃದ್ಧಿಹೊಂದಿದರೆ, ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ, ಜಯೋತ್ಸವ ಉಂಟಾಗುತ್ತದೆ.
בְּבִרְכַּ֣ת יְ֭שָׁרִים תָּר֣וּם קָ֑רֶת וּבְפִ֥י רְ֝שָׁעִ֗ים תֵּהָרֵֽס׃ | 11 |
ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಪ್ರಗತಿಯಾಗುತ್ತದೆ, ಆದರೆ ದುಷ್ಟರ ಬಾಯಿಂದ ಅದು ನಾಶವಾಗುತ್ತದೆ.
בָּז־לְרֵעֵ֥הוּ חֲסַר־לֵ֑ב וְאִ֖ישׁ תְּבוּנ֣וֹת יַחֲרִֽישׁ׃ | 12 |
ಜ್ಞಾನವಿಲ್ಲದವನು ತನ್ನ ನೆರಯವನನ್ನು ಹೀನೈಸುತ್ತಾನೆ, ಆದರೆ ತಿಳುವಳಿಕೆಯುಳ್ಳವನು ಮೌನವಾಗಿರುತ್ತಾನೆ.
הוֹלֵ֣ךְ רָ֭כִיל מְגַלֶּה־סּ֑וֹד וְנֶאֱמַן־ר֝֗וּחַ מְכַסֶּ֥ה דָבָֽר׃ | 13 |
ಚಾಡಿಕೋರನು ರಹಸ್ಯಗಳನ್ನು ಬಹಿರಂಗಪಡಿಸುತ್ತಾನೆ, ಆದರೆ ನಂಬಿಗಸ್ತನು ಆ ಸಂಗತಿಯನ್ನು ಮುಚ್ಚುತ್ತಾನೆ.
בְּאֵ֣ין תַּ֭חְבֻּלוֹת יִפָּל־עָ֑ם וּ֝תְשׁוּעָ֗ה בְּרֹ֣ב יוֹעֵֽץ׃ | 14 |
ಆಲೋಚನೆ ಇಲ್ಲದೆ ಇರುವಲ್ಲಿ ಜನರು ಬೀಳುತ್ತಾರೆ, ಆದರೆ ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.
רַע־יֵ֭רוֹעַ כִּי־עָ֣רַב זָ֑ר וְשֹׂנֵ֖א תֹקְעִ֣ים בּוֹטֵֽחַ׃ | 15 |
ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ, ಹೊಣೆಗಾರನಾಗಿರದವನು ಸುರಕ್ಷಿತವಾಗಿರುವನು.
אֵֽשֶׁת־חֵ֭ן תִּתְמֹ֣ךְ כָּב֑וֹד וְ֝עָרִיצִ֗ים יִתְמְכוּ־עֹֽשֶׁר ׃ | 16 |
ದಯೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಸಂಪಾದಿಸಿಕೊಳ್ಳುತ್ತಾಳೆ, ನಿಷ್ಕರುಣ ವ್ಯಕ್ತಿ ಸಂಪತ್ತನ್ನು ಮಾತ್ರ ಪಡೆದುಕೊಳ್ಳುತ್ತಾನೆ.
גֹּמֵ֣ל נַ֭פְשׁוֹ אִ֣ישׁ חָ֑סֶד וְעֹכֵ֥ר שְׁ֝אֵר֗וֹ אַכְזָרִֽי׃ | 17 |
ದಯೆಯುಳ್ಳವನು ತನಗೆ ತಾನೇ ಒಳ್ಳೆಯದನ್ನು ಮಾಡಿಕೊಳ್ಳುತ್ತಾನೆ, ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.
רָשָׁ֗ע עֹשֶׂ֥ה פְעֻלַּת־שָׁ֑קֶר וְזֹרֵ֥עַ צְ֝דָקָ֗ה שֶׂ֣כֶר אֱמֶֽת׃ | 18 |
ದುಷ್ಟನು ಮೋಸದ ಸಂಬಳವನ್ನು ಸಂಪಾದಿಸುತ್ತಾನೆ, ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹವಾದ ಬಹುಮಾನವಿರುವುದು.
כֵּן־צְדָקָ֥ה לְחַיִּ֑ים וּמְרַדֵּ֖ף רָעָ֣ה לְמוֹתֽוֹ׃ | 19 |
ನೀತಿವಂತನ ಮಾರ್ಗಗಳಲ್ಲಿ ಅಚಲವಾಗಿರುವವನು ಜೀವ ಹೊಂದುತ್ತಾನೆ, ಕೆಟ್ಟದ್ದನ್ನು ಬೆನ್ನಟ್ಟುವವನು ತನ್ನ ಮರಣವನ್ನು ಬೆನ್ನಟ್ಟುತ್ತಾನೆ.
תּוֹעֲבַ֣ת יְ֭הוָה עִקְּשֵׁי־לֵ֑ב וּ֝רְצוֹנ֗וֹ תְּמִ֣ימֵי דָֽרֶךְ׃ | 20 |
ವಕ್ರ ಹೃದಯವುಳ್ಳವರು ಯೆಹೋವ ದೇವರಿಗೆ ಅಸಹ್ಯವಾದವರು, ಆದರೆ, ಸನ್ಮಾರ್ಗದಲ್ಲಿ ಯಥಾರ್ಥವಾಗಿ ಇರುವವರಲ್ಲಿ ಅವರು ಆನಂದಿಸುತ್ತಾರೆ.
יָ֣ד לְ֭יָד לֹא־יִנָּ֣קֶה רָּ֑ע וְזֶ֖רַע צַדִּיקִ֣ים נִמְלָֽט׃ | 21 |
ದುಷ್ಟನಿಗೆ ಶಿಕ್ಷೆ ತಪ್ಪುವುದಿಲ್ಲ; ನೀತಿವಂತರ ವಂಶವು ಬಿಡುಗಡೆ ಹೊಂದುವುದು.
נֶ֣זֶם זָ֭הָב בְּאַ֣ף חֲזִ֑יר אִשָּׁ֥ה יָ֝פָ֗ה וְסָ֣רַת טָֽעַם׃ | 22 |
ಹಂದಿಯ ಮೂಗಿಗೆ ಬಂಗಾರದ ಮೂಗುತಿಯು ಹೇಗೋ, ಹಾಗೆಯೇ ವಿವೇಕವಿಲ್ಲದ ಸ್ತ್ರೀಗೆ ಸೌಂದರ್ಯವು.
תַּאֲוַ֣ת צַדִּיקִ֣ים אַךְ־ט֑וֹב תִּקְוַ֖ת רְשָׁעִ֣ים עֶבְרָֽה׃ | 23 |
ನೀತಿವಂತರ ಅಪೇಕ್ಷೆಯು ಶುಭಕ್ಕಾಸ್ಪದ, ದುಷ್ಟರ ಅಪೇಕ್ಷೆಯು ತೀರ್ಪಿಗೀಡು.
יֵ֣שׁ מְ֭פַזֵּר וְנוֹסָ֥ף ע֑וֹד וְחוֹשֵׂ֥ךְ מִ֝יֹּ֗שֶׁר אַךְ־לְמַחְסֽוֹר׃ | 24 |
ಒಬ್ಬನು ತನ್ನ ಸಂಪತ್ತನ್ನು ಉದಾರವಾಗಿ ವ್ಯಯಮಾಡಿದರೂ ಅವನು ವೃದ್ಧಿಯಾಗುತ್ತಾನೆ, ಆದರೆ ಇನ್ನೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನು ಬಡತನಕ್ಕೆ ಬರುತ್ತಾನೆ.
נֶֽפֶשׁ־בְּרָכָ֥ה תְדֻשָּׁ֑ן וּ֝מַרְוֶ֗ה גַּם־ה֥וּא יוֹרֶֽא׃ | 25 |
ಉದಾರಿಯು ಅಭಿವೃದ್ಧಿ ಹೊಂದುವನು; ಬೇರೆಯವರಿಗೆ ಚೈತನ್ಯ ಕೊಡುವವನು ಚೈತನ್ಯ ಹೊಂದುವನು.
מֹ֣נֵֽעַ בָּ֭ר יִקְּבֻ֣הוּ לְא֑וֹם וּ֝בְרָכָ֗ה לְרֹ֣אשׁ מַשְׁבִּֽיר׃ | 26 |
ಧಾನ್ಯವನ್ನು ಬಚ್ಚಿಟ್ಟುಕೊಳ್ಳುವವನನ್ನು ಜನರು ಶಪಿಸುವರು; ಆದರೆ ಅದನ್ನು ಮಾರುವವನ ಮೇಲೆ ಆಶೀರ್ವಾದವು ನೆಲೆಯಾಗಿರುವುದು.
שֹׁ֣חֵֽר ט֭וֹב יְבַקֵּ֣שׁ רָצ֑וֹן וְדֹרֵ֖שׁ רָעָ֣ה תְבוֹאֶֽנּוּ׃ | 27 |
ಒಳ್ಳೆಯದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದುತ್ತಾನೆ; ಆದರೆ ಕೇಡನ್ನು ಹುಡುಕುವವನಿಗೆ ಕೇಡೇ ಆಗುವುದು.
בּוֹטֵ֣חַ בְּ֭עָשְׁרוֹ ה֣וּא יִפֹּ֑ל וְ֝כֶעָלֶ֗ה צַדִּיקִ֥ים יִפְרָֽחוּ׃ | 28 |
ತನ್ನ ಐಶ್ವರ್ಯದಲ್ಲಿ ಭರವಸೆ ಇಡುವವನು ಬಿದ್ದುಹೋಗುವನು, ಆದರೆ ನೀತಿವಂತರು ಹಸಿರೆಲೆಯ ಹಾಗೆ ಚಿಗುರುವರು.
עוֹכֵ֣ר בֵּ֭יתוֹ יִנְחַל־ר֑וּחַ וְעֶ֥בֶד אֱ֝וִ֗יל לַחֲכַם־לֵֽב׃ | 29 |
ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಮೂರ್ಖನು ಜ್ಞಾನನಿಗೆ ಸೇವಕನಾಗಿರುವನು.
פְּֽרִי־צַ֭דִּיק עֵ֣ץ חַיִּ֑ים וְלֹקֵ֖חַ נְפָשׂ֣וֹת חָכָֽם׃ | 30 |
ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲುವವನು ಜ್ಞಾನಿಯಾಗಿದ್ದಾನೆ.
הֵ֣ן צַ֭דִּיק בָּאָ֣רֶץ יְשֻׁלָּ֑ם אַ֝֗ף כִּֽי־רָשָׁ֥ע וְחוֹטֵֽא׃ | 31 |
ಇಗೋ, ಭೂಮಿಯ ಮೇಲೆ ನೀತಿವಂತರು ತಮ್ಮ ಫಲವನ್ನು ಹೊಂದಲಿಕ್ಕಿರುವಾಗ, ದುಷ್ಟರು ಮತ್ತು ಪಾಪಿಗಳು ಎಷ್ಟೋ ಹೆಚ್ಚಾಗಿ ತಮ್ಮ ಫಲವನ್ನು ಹೊಂದುತ್ತಾರೆ.