< תְהִלִּים 45 >

לַמְנַצֵּ֣חַ עַל־שֹׁ֭שַׁנִּים לִבְנֵי־קֹ֑רַח מַ֝שְׂכִּ֗יל שִׁ֣יר יְדִידֹֽת׃ רָ֘חַ֤שׁ לִבִּ֨י ׀ דָּ֘בָ֤ר ט֗וֹב אֹמֵ֣ר אָ֭נִי מַעֲשַׂ֣י לְמֶ֑לֶךְ לְ֝שׁוֹנִ֗י עֵ֤ט ׀ סוֹפֵ֬ר מָהִֽיר׃ 1
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. “ಲಿಲಿಹೂಗಳು” ರಾಗವನ್ನು ಆಧರಿಸಿದೆ. ಕೋರಹೀಯನ ಪುತ್ರರ ಸಂಯೋಜನೆ. ಒಂದು ಮಸ್ಕಿಲ್. ಒಂದು ಮದುವೆಯ ಹಾಡು. ನನ್ನ ಹೃದಯವು ಸೊಗಸಾದ ವಿಷಯದಿಂದ ಮಿಡಿಯುತ್ತಿದೆ. ಮಹಾರಾಜನನ್ನು ಕುರಿತು ನಾನು ರಚಿಸುವೆನು ಗೀತಾಂಜಲಿ. ನನ್ನ ನಾಲಿಗೆಯು ನಿಪುಣ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.
יָפְיָפִ֡יתָ מִבְּנֵ֬י אָדָ֗ם ה֣וּצַק חֵ֭ן בְּשְׂפְתוֹתֶ֑יךָ עַל־כֵּ֤ן בֵּֽרַכְךָ֖ אֱלֹהִ֣ים לְעוֹלָֽם׃ 2
ನೀವು ಎಲ್ಲಾ ಮನುಷ್ಯರಿಗಿಂತ ಅತಿ ಸುಂದರರಾಗಿದ್ದೀರಿ. ನಿಮ್ಮ ತುಟಿಗಳಲ್ಲಿ ಕೃಪೆಯ ಅಭಿಷೇಕವಿದೆ; ಆದ್ದರಿಂದ ದೇವರು ಎಂದೆಂದಿಗೂ ನಿಮ್ಮನ್ನು ಆಶೀರ್ವದಿಸಿದ್ದಾರೆ.
חֲגֽוֹר־חַרְבְּךָ֣ עַל־יָרֵ֣ךְ גִּבּ֑וֹר ה֝וֹדְךָ֗ וַהֲדָרֶֽךָ׃ 3
ಪರಾಕ್ರಮಶಾಲಿಯೇ, ನಿಮ್ಮ ಖಡ್ಗವನ್ನು ಸೊಂಟಕ್ಕೆ ಬಿಗಿದುಕೊಳ್ಳಿರಿ. ನಿಮ್ಮ ಮಹಿಮೆಯನ್ನೂ ಘನತೆಯನ್ನೂ ಧರಿಸಿಕೊಳ್ಳಿರಿ.
וַהֲדָ֬רְךָ֨ ׀ צְלַ֬ח רְכַ֗ב עַֽל־דְּבַר־אֱ֭מֶת וְעַנְוָה־צֶ֑דֶק וְתוֹרְךָ֖ נוֹרָא֣וֹת יְמִינֶֽךָ׃ 4
ನೀವು ಸತ್ಯತೆ ದೀನತ್ವ ಹಾಗು ನೀತಿಗೋಸ್ಕರ ನಿಮ್ಮ ಘನತೆಯಿಂದ ಜಯದ ಸವಾರಿ ಮಾಡಿರಿ. ನಿಮ್ಮ ಬಲಗೈ ಮಹಾಕೃತ್ಯಗಳನ್ನು ಪ್ರಕಾಶಪಡಿಸಲಿ.
חִצֶּ֗יךָ שְׁנ֫וּנִ֥ים עַ֭מִּים תַּחְתֶּ֣יךָ יִפְּל֑וּ בְּ֝לֵ֗ב אוֹיְבֵ֥י הַמֶּֽלֶךְ׃ 5
ನಿಮ್ಮ ಹದವಾದ ಬಾಣಗಳು ರಾಜದ್ರೋಹಿಗಳನ್ನು ಇರಿಯಲಿ. ಜನಾಂಗಗಳು ನಿಮ್ಮ ಪಾದಕ್ಕೆ ಬೀಳಲಿ.
כִּסְאֲךָ֣ אֱ֭לֹהִים עוֹלָ֣ם וָעֶ֑ד שֵׁ֥בֶט מִ֝ישֹׁ֗ר שֵׁ֣בֶט מַלְכוּתֶֽךָ׃ 6
ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನ್ಯಾಯದಂಡವೇ ನಿಮ್ಮ ರಾಜದಂಡವಾಗಿದೆ.
אָהַ֣בְתָּ צֶּדֶק֮ וַתִּשְׂנָ֫א רֶ֥שַׁע עַל־כֵּ֤ן ׀ מְשָׁחֲךָ֡ אֱלֹהִ֣ים אֱ֭לֹהֶיךָ שֶׁ֥מֶן שָׂשׂ֗וֹן מֵֽחֲבֵרֶֽיךָ׃ 7
ನೀವು ನೀತಿಯನ್ನು ಪ್ರೀತಿಸುತ್ತೀರಿ, ಅನೀತಿಯನ್ನು ದ್ವೇಷಿಸುತ್ತೀರಿ. ಆದ್ದರಿಂದ ದೇವರೇ, ನಿಮ್ಮ ದೇವರು, ನಿಮ್ಮ ಸಂಗಡಿಗರಿಗಿಂತ ನಿಮ್ಮನ್ನು ಉನ್ನತಗೊಳಿಸಿ ಆನಂದ ತೈಲದಿಂದ ಅಭಿಷೇಕಿಸಿದ್ದಾರೆ.
מֹר־וַאֲהָל֣וֹת קְ֭צִיעוֹת כָּל־בִּגְדֹתֶ֑יךָ מִֽן־הֵ֥יכְלֵי שֵׁ֝֗ן מִנִּ֥י שִׂמְּחֽוּךָ׃ 8
ನಿಮ್ಮ ವಸ್ತ್ರಗಳೆಲ್ಲಾ ರಸಗಂಧವೂ ಅಗರೂ ಚಂದನ ಇವುಗಳ ಸುವಾಸನೆ ಬೀರುತ್ತದೆ. ದಂತದ ಅರಮನೆಯೊಳಗಿಂದ ಉನ್ನತ ವಾದ್ಯಗಳು ನಿಮ್ಮನ್ನು ಆನಂದಗೊಳಿಸುವುದು.
בְּנ֣וֹת מְ֭לָכִים בְּיִקְּרוֹתֶ֑יךָ נִצְּבָ֥ה שֵׁגַ֥ל לִֽ֝ימִינְךָ֗ בְּכֶ֣תֶם אוֹפִֽיר׃ 9
ರಾಜ ಪುತ್ರಿಯರು ನಿಮ್ಮ ಗೌರವ ಸ್ತ್ರೀಯರಲ್ಲಿ ಇದ್ದಾರೆ. ನಿಮ್ಮ ಬಲಗಡೆ ರಾಣಿಯು ಓಫೀರ್ ಬಂಗಾರವನ್ನು ಧರಿಸಿದ್ದಾಳೆ.
שִׁמְעִי־בַ֣ת וּ֭רְאִי וְהַטִּ֣י אָזְנֵ֑ךְ וְשִׁכְחִ֥י עַ֝מֵּ֗ךְ וּבֵ֥ית אָבִֽיךְ׃ 10
ಕೇಳು ಮಗಳೇ, ಇದನ್ನು ಆಲೋಚಿಸಿ, ಕಿವಿಗೊಡು. ನಿಮ್ಮ ಜನರನ್ನೂ, ನಿಮ್ಮ ತಂದೆಯ ಮನೆಯನ್ನೂ ಮರೆತುಬಿಡು.
וְיִתְאָ֣ו הַמֶּ֣לֶךְ יָפְיֵ֑ךְ כִּי־ה֥וּא אֲ֝דֹנַ֗יִךְ וְהִשְׁתַּֽחֲוִי־לֽוֹ׃ 11
ನಿನ್ನ ಸೌಂದರ್ಯವನ್ನು ಮಹಾರಾಜರು ಮೆಚ್ಚಲಿ, ಅವರೇ ನಿನ್ನ ಒಡೆಯ ಅವರನ್ನು ಗೌರವಿಸು.
וּבַֽת־צֹ֨ר ׀ בְּ֭מִנְחָה פָּנַ֥יִךְ יְחַלּ֗וּ עֲשִׁ֣ירֵי עָֽם׃ 12
ಟೈರಿನ ಮಗಳು ಕಾಣಿಕೆಯೊಂದಿಗೆ ಬರುವಳು; ಐಶ್ವರ್ಯವಂತರು ನಿನ್ನನ್ನು ವರಿಸಲು ಹುಡುಕಿ ಬರುವರು.
כָּל־כְּבוּדָּ֣ה בַת־מֶ֣לֶךְ פְּנִ֑ימָה מִֽמִּשְׁבְּצ֖וֹת זָהָ֣ב לְבוּשָֽׁהּ׃ 13
ಅರಸನ ಮಗಳು ತನ್ನ ಅಂತಃಪುರದಲ್ಲಿ ಪೂರ್ಣ ವೈಭವದಿಂದ ಇದ್ದಾಳೆ. ಅವಳ ವಸ್ತ್ರವು ಚಿನ್ನದಿಂದ ನೇಯ್ದಿದೆ.
לִרְקָמוֹת֮ תּוּבַ֪ל לַ֫מֶּ֥לֶךְ בְּתוּל֣וֹת אַ֭חֲרֶיהָ רֵעוֹתֶ֑יהָ מ֖וּבָא֣וֹת לָֽךְ׃ 14
ಕಸೂತಿ ಉಡುಪುಗಳಲ್ಲಿ ಮಹಾರಾಜರ ಬಳಿಗೆ ಆಕೆಯು ಹೊರಡುತ್ತಾಳೆ, ಅವಳ ಸಂಗಡ ಸಖಿಯರಾದ ಕನ್ಯೆಯರು ಸಹ ಹೊರಡುವರು.
תּ֭וּבַלְנָה בִּשְׂמָחֹ֣ת וָגִ֑יל תְּ֝בֹאֶ֗ינָה בְּהֵ֣יכַל מֶֽלֶךְ׃ 15
ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ಆಕೆಯನ್ನು ತರುತ್ತಿದ್ದಾರೆ. ಹೀಗೆ ಅವರು ರಾಜಭವನದೊಳಗೆ ಪ್ರವೇಶಿಸುವರು.
תַּ֣חַת אֲ֭בֹתֶיךָ יִהְי֣וּ בָנֶ֑יךָ תְּשִׁיתֵ֥מוֹ לְ֝שָׂרִ֗ים בְּכָל־הָאָֽרֶץ׃ 16
ನಿಮ್ಮ ಪಿತೃಗಳ ಸ್ಥಳಗಳನ್ನು ನಿಮ್ಮ ಮಕ್ಕಳು ತೆಗೆದುಕೊಳ್ಳುವರು. ಮಹಾರಾಜರು ಅವರನ್ನು ಭೂಮಿಯ ದೇಶದಲ್ಲೆಲ್ಲಾ ರಾಜಪುತ್ರರಾಗಿ ಇರಿಸುವರು.
אַזְכִּ֣ירָה שִׁ֭מְךָ בְּכָל־דֹּ֣ר וָדֹ֑ר עַל־כֵּ֥ן עַמִּ֥ים יְ֝הוֹדֻ֗ךָ לְעֹלָ֥ם וָעֶֽד׃ 17
ತಲತಲಾಂತರವೂ ನಿಮ್ಮ ಹೆಸರನ್ನು ನಾನು ಸ್ಮರಿಸುವಂತೆ ಮಾಡುವೆನು. ಆದ್ದರಿಂದ ಜನರು ಯುಗಯುಗಾಂತರವೂ ನಿಮ್ಮನ್ನು ಹೊಗಳುವರು.

< תְהִלִּים 45 >