< תְהִלִּים 62 >

לַמְנַצֵּ֥חַ עַֽל־יְדוּת֗וּן מִזְמ֥וֹר לְדָוִֽד׃ אַ֣ךְ אֶל־אֱ֭לֹהִים דּֽוּמִיָּ֣ה נַפְשִׁ֑י מִ֝מֶּ֗נּוּ יְשׁוּעָתִֽי׃ 1
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ದಾವೀದನ ಕೀರ್ತನೆ. ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ನನ್ನ ರಕ್ಷಣೆಯು ಆತನಿಂದಲೇ.
אַךְ־ה֣וּא צ֭וּרִי וִֽישׁוּעָתִ֑י מִ֝שְׂגַּבִּ֗י לֹא־אֶמּ֥וֹט רַבָּֽה׃ 2
ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು.
עַד־אָ֤נָה ׀ תְּהֽוֹתְת֣וּ עַל אִישׁ֮ תְּרָצְּח֪וּ כֻ֫לְּכֶ֥ם כְּקִ֥יר נָט֑וּי גָּ֝דֵ֗ר הַדְּחוּיָֽה׃ 3
ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ?
אַ֤ךְ מִשְּׂאֵת֨וֹ ׀ יָעֲצ֣וּ לְהַדִּיחַ֮ יִרְצ֪וּ כָ֫זָ֥ב בְּפִ֥יו יְבָרֵ֑כוּ וּ֝בְקִרְבָּ֗ם יְקַלְלוּ־סֶֽלָה ׃ 4
ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. (ಸೆಲಾ)
אַ֣ךְ לֵ֭אלֹהִים דּ֣וֹמִּי נַפְשִׁ֑י כִּי־מִ֝מֶּ֗נּוּ תִּקְוָתִֽי׃ 5
ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.
אַךְ־ה֣וּא צ֭וּרִי וִֽישׁוּעָתִ֑י מִ֝שְׂגַּבִּ֗י לֹ֣א אֶמּֽוֹט׃ 6
ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ.
עַל־אֱ֭לֹהִים יִשְׁעִ֣י וּכְבוֹדִ֑י צוּר־עֻזִּ֥י מַ֝חְסִ֗י בֵּֽאלֹהִֽים׃ 7
ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ.
בִּטְח֘וּ ב֤וֹ בְכָל־עֵ֨ת ׀ עָ֗ם שִׁפְכֽוּ־לְפָנָ֥יו לְבַבְכֶ֑ם אֱלֹהִ֖ים מַחֲסֶה־לָּ֣נוּ סֶֽלָה׃ 8
ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. (ಸೆಲಾ)
אַ֤ךְ ׀ הֶ֥בֶל בְּנֵֽי־אָדָם֮ כָּזָ֪ב בְּנֵ֫י אִ֥ישׁ בְּמֹאזְנַ֥יִם לַעֲל֑וֹת הֵ֝֗מָּה מֵהֶ֥בֶל יָֽחַד׃ 9
ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.
אַל־תִּבְטְח֣וּ בְעֹשֶׁק֮ וּבְגָזֵ֪ל אַל־תֶּ֫הְבָּ֥לוּ חַ֤יִל ׀ כִּֽי־יָנ֑וּב אַל־תָּשִׁ֥יתוּ לֵֽב׃ 10
೧೦ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.
אַחַ֤ת ׀ דִּבֶּ֬ר אֱלֹהִ֗ים שְׁתַּֽיִם־ז֥וּ שָׁמָ֑עְתִּי כִּ֥י עֹ֝֗ז לֵאלֹהִֽים׃ 11
೧೧ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.
וּלְךָֽ־אֲדֹנָ֥י חָ֑סֶד כִּֽי־אַתָּ֨ה תְשַׁלֵּ֖ם לְאִ֣ישׁ כְּֽמַעֲשֵֽׂהוּ׃ 12
೧೨ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.

< תְהִלִּים 62 >