< רוּת 4 >

וּבֹ֨עַז עָלָ֣ה הַשַּׁעַר֮ וַיֵּ֣שֶׁב שָׁם֒ וְהִנֵּ֨ה הַגֹּאֵ֤ל עֹבֵר֙ אֲשֶׁ֣ר דִּבֶּר־בֹּ֔עַז וַיֹּ֛אמֶר ס֥וּרָה שְׁבָה־פֹּ֖ה פְּלֹנִ֣י אַלְמֹנִ֑י וַיָּ֖סַר וַיֵּשֵֽׁב׃ 1
ಬೋವಜನು ಪಟ್ಟಣದ ಬಾಗಿಲ ಬಳಿ ಹೋಗಿ ಕುಳಿತುಕೊಂಡನು. ಆಗ ಬೋವಜನು ಹೇಳಿದ್ದ ಆ ವಿಮೋಚಕ ಬಂಧುವು ಹಾದುಹೋಗುತ್ತಿದ್ದನು. ಬೋವಜನು ಅವನಿಗೆ, “ನನ್ನ ಸ್ನೇಹಿತನೇ, ಈ ಕಡೆಗೆ ಬಂದು ಇಲ್ಲಿ ಕುಳಿತುಕೋ,” ಎಂದನು. ಅವನು ಬಂದು ಕುಳಿತುಕೊಂಡನು.
וַיִּקַּ֞ח עֲשָׂרָ֧ה אֲנָשִׁ֛ים מִזִּקְנֵ֥י הָעִ֖יר וַיֹּ֣אמֶר שְׁבוּ־פֹ֑ה וַיֵּשֵֽׁבוּ׃ 2
ಆಗ ಬೋವಜನು ಪಟ್ಟಣದ ಹಿರಿಯರಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ, “ಇಲ್ಲಿ ಕುಳಿತುಕೊಳ್ಳಿರಿ,” ಎಂದನು. ಅವರು ಕುಳಿತರು.
וַיֹּ֙אמֶר֙ לַגֹּאֵ֔ל חֶלְקַת֙ הַשָּׂדֶ֔ה אֲשֶׁ֥ר לְאָחִ֖ינוּ לֶאֱלִימֶ֑לֶךְ מָכְרָ֣ה נָעֳמִ֔י הַשָּׁ֖בָה מִשְּׂדֵ֥ה מוֹאָֽב׃ 3
ಆಗ ಬೋವಜನು ಆ ವಿಮೋಚಕ ಬಂಧುವಿಗೆ ಹೇಳಿದ್ದೇನೆಂದರೆ, “ಮೋವಾಬ್ ಸೀಮೆಯಿಂದ ತಿರುಗಿ ಬಂದ ನೊವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನಿಗೆ ಇದ್ದ ಹೊಲದ ಪಾಲನ್ನು ಮಾರಿಬಿಡಬೇಕೆಂದಿರುತ್ತಾಳೆ.
וַאֲנִ֨י אָמַ֜רְתִּי אֶגְלֶ֧ה אָזְנְךָ֣ לֵאמֹ֗ר קְ֠נֵה נֶ֥גֶד הַֽיֹּשְׁבִים֮ וְנֶ֣גֶד זִקְנֵ֣י עַמִּי֒ אִם־תִּגְאַל֙ גְּאָ֔ל וְאִם־לֹ֨א יִגְאַ֜ל הַגִּ֣ידָה לִּ֗י ואדע כִּ֣י אֵ֤ין זוּלָֽתְךָ֙ לִגְא֔וֹל וְאָנֹכִ֖י אַחֲרֶ֑יךָ וַיֹּ֖אמֶר אָנֹכִ֥י אֶגְאָֽל׃ 4
ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ. ಬಿಡಿಸಿಕೊಳ್ಳದಿದ್ದರೆ ನಾನು ತಿಳಿದುಕೊಳ್ಳುವ ಹಾಗೆ ನನಗೆ ಹೇಳು. ಏಕೆಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ,” ಎಂದು ಹೇಳಿದನು. ಅದಕ್ಕೆ ಅವನು, “ನಾನು ಬಿಡಿಸಿಕೊಳ್ಳುವೆನು,” ಎಂದನು.
וַיֹּ֣אמֶר בֹּ֔עַז בְּיוֹם־קְנוֹתְךָ֥ הַשָּׂדֶ֖ה מִיַּ֣ד נָעֳמִ֑י וּ֠מֵאֵת ר֣וּת הַמּוֹאֲבִיָּ֤ה אֵֽשֶׁת־הַמֵּת֙ קניתי לְהָקִ֥ים שֵׁם־הַמֵּ֖ת עַל־נַחֲלָתֽוֹ׃ 5
ಆಗ ಬೋವಜನು, “ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡುಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ತೆಗೆದುಕೊಳ್ಳಬೇಕು,” ಎಂದನು.
וַיֹּ֣אמֶר הַגֹּאֵ֗ל לֹ֤א אוּכַל֙ לגאול ־לִ֔י פֶּן־אַשְׁחִ֖ית אֶת־נַחֲלָתִ֑י גְּאַל־לְךָ֤ אַתָּה֙ אֶת־גְּאֻלָּתִ֔י כִּ֥י לֹא־אוּכַ֖ל לִגְאֹֽל׃ 6
ಅದಕ್ಕೆ ಆ ಬಂಧುವು, “ನಾನು ನನ್ನ ಬಾಧ್ಯತೆಯನ್ನು ನಷ್ಟಪಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು. ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ; ಏಕೆಂದರೆ ನಾನು ಬಿಡಿಸಿಕೊಳ್ಳಲಾರೆನು,” ಎಂದನು.
וְזֹאת֩ לְפָנִ֨ים בְּיִשְׂרָאֵ֜ל עַל־הַגְּאוּלָּ֤ה וְעַל־הַתְּמוּרָה֙ לְקַיֵּ֣ם כָּל־דָּבָ֔ר שָׁלַ֥ף אִ֛ישׁ נַעֲל֖וֹ וְנָתַ֣ן לְרֵעֵ֑הוּ וְזֹ֥את הַתְּעוּדָ֖ה בְּיִשְׂרָאֵֽל׃ 7
ಬಿಡಿಸಿಕೊಳ್ಳುವುದರಲ್ಲಿಯೂ ಬದಲು ಮಾಡುವುದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಒಂದು ವಾಡಿಕೆಯಿತ್ತು. ಅದು ಕೊಡುವವನು ಕೊಳ್ಳುವವನಿಗೆ ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುತ್ತಿದ್ದನು. ಇದು ಇಸ್ರಾಯೇಲಿನಲ್ಲಿ ವ್ಯವಹಾರವನ್ನು ಕಾನೂನು ಬದ್ಧಗೊಳಿಸುವ ವಿಧಾನವಾಗಿತ್ತು.
וַיֹּ֧אמֶר הַגֹּאֵ֛ל לְבֹ֖עַז קְנֵה־לָ֑ךְ וַיִּשְׁלֹ֖ף נַעֲלֽוֹ׃ 8
ಹಾಗೆಯೇ ಆ ಬಂಧುವು ಬೋವಜನಿಗೆ, “ನೀನೇ ನಿನಗೋಸ್ಕರ ಅದನ್ನು ಕೊಂಡುಕೋ,” ಎಂದು ತನ್ನ ಕೆರವನ್ನು ತೆಗೆದುಹಾಕಿದನು.
וַיֹּאמֶר֩ בֹּ֨עַז לַזְּקֵנִ֜ים וְכָל־הָעָ֗ם עֵדִ֤ים אַתֶּם֙ הַיּ֔וֹם כִּ֤י קָנִ֙יתִי֙ אֶת־כָּל־אֲשֶׁ֣ר לֶֽאֱלִימֶ֔לֶךְ וְאֵ֛ת כָּל־אֲשֶׁ֥ר לְכִלְי֖וֹן וּמַחְל֑וֹן מִיַּ֖ד נָעֳמִֽי׃ 9
ಆಗ ಬೋವಜನು ಹಿರಿಯರಿಗೂ ಸಮಸ್ತ ಜನರಿಗೂ, “ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬುದಕ್ಕೆ ಈ ದಿನ ನೀವು ಸಾಕ್ಷಿಗಳಾಗಿದ್ದೀರಿ.
וְגַ֣ם אֶת־ר֣וּת הַמֹּאֲבִיָּה֩ אֵ֨שֶׁת מַחְל֜וֹן קָנִ֧יתִי לִ֣י לְאִשָּׁ֗ה לְהָקִ֤ים שֵׁם־הַמֵּת֙ עַל־נַ֣חֲלָת֔וֹ וְלֹא־יִכָּרֵ֧ת שֵׁם־הַמֵּ֛ת מֵעִ֥ם אֶחָ֖יו וּמִשַּׁ֣עַר מְקוֹמ֑וֹ עֵדִ֥ים אַתֶּ֖ם הַיּֽוֹם׃ 10
ಇದಲ್ಲದೆ ಸತ್ತವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಸ್ವೀಕರಿಸಿದ್ದೇನೆ. ಇದರಿಂದ ಹೊಲದ ಖಾತೆಯು ಗತಿಸಿದ ಮಹ್ಲೋನನ ಹೆಸರಿನಲ್ಲಿಯೇ ಉಳಿಯುವುದು. ಅವನ ಹೆಸರೂ ಅವನ ವಂಶವೂ ಊರಲ್ಲಿಯೇ ನೆಲೆಯಾಗಿರುವುದು. ಇದಕ್ಕೆ ಈ ದಿನ ನೀವು ಸಾಕ್ಷಿಗಳಾಗಿದ್ದೀರಿ,” ಎಂದನು.
וַיֹּ֨אמְר֜וּ כָּל־הָעָ֧ם אֲשֶׁר־בַּשַּׁ֛עַר וְהַזְּקֵנִ֖ים עֵדִ֑ים יִתֵּן֩ יְהוָ֨ה אֶֽת־הָאִשָּׁ֜ה הַבָּאָ֣ה אֶל־בֵּיתֶ֗ךָ כְּרָחֵ֤ל ׀ וּכְלֵאָה֙ אֲשֶׁ֨ר בָּנ֤וּ שְׁתֵּיהֶם֙ אֶת־בֵּ֣ית יִשְׂרָאֵ֔ל וַעֲשֵׂה־ חַ֣יִל בְּאֶפְרָ֔תָה וּקְרָא־שֵׁ֖ם בְּבֵ֥ית לָֽחֶם׃ 11
ಆಗ ಊರುಬಾಗಿಲಲ್ಲಿ ಕೂಡಿದ್ದ ಸಮಸ್ತ ಜನರೂ ಹಿರಿಯರೂ, “ನಾವು ಸಾಕ್ಷಿಗಳೇ, ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಯೆಹೋವ ದೇವರು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡಲಿ. ಎಫ್ರಾತದಲ್ಲಿ ಧನವಂತನಾಗಿರು, ಬೇತ್ಲೆಹೇಮಿನಲ್ಲಿ ಘನವಂತನಾಗಿರು.
וִיהִ֤י בֵֽיתְךָ֙ כְּבֵ֣ית פֶּ֔רֶץ אֲשֶׁר־יָלְדָ֥ה תָמָ֖ר לִֽיהוּדָ֑ה מִן־הַזֶּ֗רַע אֲשֶׁ֨ר יִתֵּ֤ן יְהוָה֙ לְךָ֔ מִן־הַֽנַּעֲרָ֖ה הַזֹּֽאת׃ 12
ಈ ಹುಡುಗಿಯಿಂದ ಯೆಹೋವ ದೇವರು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯು ತಾಮಾರಳು ಯೆಹೂದನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ,” ಎಂದರು.
וַיִּקַּ֨ח בֹּ֤עַז אֶת־רוּת֙ וַתְּהִי־ל֣וֹ לְאִשָּׁ֔ה וַיָּבֹ֖א אֵלֶ֑יהָ וַיִּתֵּ֨ן יְהוָ֥ה לָ֛הּ הֵרָי֖וֹן וַתֵּ֥לֶד בֵּֽן׃ 13
ಬೋವಜನು ರೂತಳನ್ನು ಮದುವೆಯಾದನು. ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳೊಂದಿಗೆ ಬಾಳಿದಾಗ, ರೂತಳು ಯೆಹೋವ ದೇವರ ಅನುಗ್ರಹದಿಂದ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.
וַתֹּאמַ֤רְנָה הַנָּשִׁים֙ אֶֽל־נָעֳמִ֔י בָּר֣וּךְ יְהוָ֔ה אֲ֠שֶׁר לֹ֣א הִשְׁבִּ֥ית לָ֛ךְ גֹּאֵ֖ל הַיּ֑וֹם וְיִקָּרֵ֥א שְׁמ֖וֹ בְּיִשְׂרָאֵֽל׃ 14
ಆಗ ಸ್ತ್ರೀಯರು ನೊವೊಮಿಗೆ, “ಇಸ್ರಾಯೇಲಿನಲ್ಲಿ ವಿಮೋಚಿಸತಕ್ಕ ಬಾಧ್ಯಸ್ಥನನ್ನು ನಿನಗೆ ಅನುಗ್ರಹಿಸಿದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಈ ಮಗನು ಪ್ರಖ್ಯಾತನಾಗಲಿ.
וְהָ֤יָה לָךְ֙ לְמֵשִׁ֣יב נֶ֔פֶשׁ וּלְכַלְכֵּ֖ל אֶת־שֵׂיבָתֵ֑ךְ כִּ֣י כַלָּתֵ֤ךְ אֲֽשֶׁר־אֲהֵבַ֙תֶךְ֙ יְלָדַ֔תּוּ אֲשֶׁר־הִיא֙ ט֣וֹבָה לָ֔ךְ מִשִּׁבְעָ֖ה בָּנִֽים׃ 15
ಅವನು ನಿನಗೆ ಪ್ರಾಣವನ್ನು ಪುನರುಜ್ಜೀವಿಸುವವನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವನಾಗಿಯೂ ಇರುವನು. ಏಕೆಂದರೆ ನಿನ್ನನ್ನು ಪ್ರೀತಿ ಮಾಡುವ ಏಳುಮಂದಿ ಮಕ್ಕಳಿಗಿಂತ ನಿನಗೆ ಉತ್ತಮಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು,” ಎಂದರು.
וַתִּקַּ֨ח נָעֳמִ֤י אֶת־הַיֶּ֙לֶד֙ וַתְּשִׁתֵ֣הוּ בְחֵיקָ֔הּ וַתְּהִי־ל֖וֹ לְאֹמֶֽנֶת׃ 16
ನೊವೊಮಿಯು ಆ ಮಗುವನ್ನು ಎತ್ತಿ ತನ್ನ ಉಡಿಲಲ್ಲಿ ಇಟ್ಟುಕೊಂಡು ಅದಕ್ಕೆ ದಾದಿಯಾದಳು.
וַתִּקְרֶאנָה֩ ל֨וֹ הַשְּׁכֵנ֥וֹת שֵׁם֙ לֵאמֹ֔ר יֻלַּד־בֵּ֖ן לְנָעֳמִ֑י וַתִּקְרֶ֤אנָֽה שְׁמוֹ֙ עוֹבֵ֔ד ה֥וּא אֲבִי־יִשַׁ֖י אֲבִ֥י דָוִֽד׃ פ 17
ಆಗ ನೆರೆಹೊರೆಯ ಸ್ತ್ರೀಯರು ನೊವೊಮಿಗೆ, “ಒಬ್ಬ ಮಗನು ಹುಟ್ಟಿದ್ದಾನೆ,” ಎಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆಯಾದವನು.
וְאֵ֙לֶּה֙ תּוֹלְד֣וֹת פָּ֔רֶץ פֶּ֖רֶץ הוֹלִ֥יד אֶת־חֶצְרֽוֹן׃ 18
ಪೆರೆಚನ ಸಂತತಿಯ ವಿವರ: ಪೆರೆಚನು ಹೆಚ್ರೋನನ ತಂದೆಯಾಗಿದ್ದನು;
וְחֶצְרוֹן֙ הוֹלִ֣יד אֶת־רָ֔ם וְרָ֖ם הוֹלִ֥יד אֶת־עַמִּֽינָדָֽב׃ 19
ಹೆಚ್ರೋನನು ರಾಮನ ತಂದೆಯಾಗಿದ್ದನು; ರಾಮನು ಅಮ್ಮೀನಾದಾಬನ ತಂದೆಯಾಗಿದ್ದನು;
וְעַמִּֽינָדָב֙ הוֹלִ֣יד אֶת־נַחְשׁ֔וֹן וְנַחְשׁ֖וֹן הוֹלִ֥יד אֶת־שַׂלְמָֽה׃ 20
ಅಮ್ಮೀನಾದಾಬನು ನಹಶೋನನ ತಂದೆಯಾಗಿದ್ದನು; ನಹಶೋನನು ಸಲ್ಮೋನನ ತಂದೆಯಾಗಿದ್ದನು;
וְשַׂלְמוֹן֙ הוֹלִ֣יד אֶת־בֹּ֔עַז וּבֹ֖עַז הוֹלִ֥יד אֶת־עוֹבֵֽד׃ 21
ಸಲ್ಮೋನನು ಬೋವಜನ ತಂದೆಯಾಗಿದ್ದನು; ಬೋವಜನು ಓಬೇದನ ತಂದೆಯಾಗಿದ್ದನು;
וְעֹבֵד֙ הוֹלִ֣יד אֶת־יִשָׁ֔י וְיִשַׁ֖י הוֹלִ֥יד אֶת־דָּוִֽד׃ 22
ಓಬೇದನು ಇಷಯನ ತಂದೆಯಾಗಿದ್ದನು; ಇಷಯನು ದಾವೀದನ ತಂದೆಯಾಗಿದ್ದನು.

< רוּת 4 >