< איוב 26 >

ויען איוב ויאמר׃ 1
ಆಗ ಯೋಬನು ಹೀಗೆ ಉತ್ತರಕೊಟ್ಟನು,
מה עזרת ללא כח הושעת זרוע לא עז׃ 2
“ನಿನ್ನಿಂದ ಅಶಕ್ತನಿಗೆ ಎಷ್ಟೋ ಸಹಾಯವಾಯಿತು! ಬಲಹೀನವಾದ ಕೈಗೆ ಮಹಾ ಸಹಾಯ ದೊರಕಿತು.
מה יעצת ללא חכמה ותושיה לרב הודעת׃ 3
ಬುದ್ಧಿಯಿಲ್ಲದವನಿಗೆ ನೀನು ಹೇಳಿದ ಬುದ್ಧಿಯನ್ನು ಎಷ್ಟೆಂದು ಹೇಳಲಿ! ಸುಜ್ಞಾನವನ್ನು ಧಾರಾಳವಾಗಿ ಉಪದೇಶಿಸಿದ್ದಿ!
את מי הגדת מלין ונשמת מי יצאה ממך׃ 4
ಯಾರಿಗೆ ಮಾತುಗಳನ್ನು ಕಲಿಸಿದ್ದಿ? ನಿನ್ನಿಂದ ಹೊರಟ ನುಡಿಗಳನ್ನು ಯಾವ ಆತ್ಮವು ಪ್ರೇರೇಪಿಸಿತು?”
הרפאים יחוללו מתחת מים ושכניהם׃ 5
ಅದಕ್ಕೆ ಬಿಲ್ದದನು, “ಜಲಚರಗಳಿಂದ ತುಂಬಿರುವ ಸಾಗರದ ಕೆಳಗಿನ ಲೋಕದಲ್ಲಿ, ಪ್ರೇತಗಳು ಆತನ ಭಯದಿಂದ ಯಾತನೆಪಡುವವು.
ערום שאול נגדו ואין כסות לאבדון׃ (Sheol h7585) 6
ಪಾತಾಳವು ದೇವರ ದೃಷ್ಟಿಗೆ ತೆರೆದಿದೆ, ನಾಶಲೋಕವು ಮರೆಯಾಗಿಲ್ಲ. (Sheol h7585)
נטה צפון על תהו תלה ארץ על בלי מה׃ 7
ಆತನು ಶೂನ್ಯದ ಮೇಲೆ ಆಕಾಶದ ಉತ್ತರ ದಿಕ್ಕನ್ನು ವಿಸ್ತರಿಸಿ, ಭೂಲೋಕವನ್ನು ಯಾವ ಆಧಾರವೂ ಇಲ್ಲದೆ ತೂಗು ಹಾಕಿದ್ದಾನೆ.
צרר מים בעביו ולא נבקע ענן תחתם׃ 8
ತನ್ನ ಮೇಘಗಳೊಳಗೆ ನೀರನ್ನು ತುಂಬಿ ಕಟ್ಟುವನು, ಯಾವ ಮೋಡವೂ ಅದರ ಭಾರದಿಂದ ಒಡೆದು ಹೋಗದು.
מאחז פני כסה פרשז עליו עננו׃ 9
ತನ್ನ ಸಿಂಹಾಸನಕ್ಕೆ ಮರೆಯಾಗಿ, ಮುಂಭಾಗದಲ್ಲಿ ಮೋಡವನ್ನು ಕವಿಸಿರುವನು.
חק חג על פני מים עד תכלית אור עם חשך׃ 10
೧೦ಬೆಳಕು ಕತ್ತಲುಗಳ ಸಂಧಿಸ್ಥಾನದಲ್ಲಿ ಸಮುದ್ರದ ಮೇಲೆ, ಸುತ್ತಲೂ ಮೇರೆಯನ್ನೂ ಹಾಕಿದ್ದಾನೆ.
עמודי שמים ירופפו ויתמהו מגערתו׃ 11
೧೧ಆಕಾಶಮಂಡಲದ ಸ್ತಂಭಗಳು, ಆತನ ಗದರಿಕೆಯಿಂದ ಬೆರಗಾಗಿ ಕದಲುವವು.
בכחו רגע הים ובתובנתו מחץ רהב׃ 12
೧೨ಆತನು ತನ್ನ ವಿವೇಕ ಶಕ್ತಿಯಿಂದ ಘಟಸರ್ಪವನ್ನು ಹೊಡೆದುಹಾಕಿದನು; ತನ್ನ ಪರಾಕ್ರಮದಿಂದ ಸಾಗರವನ್ನು ಶಾಂತಗೊಳಿಸಿದನು.
ברוחו שמים שפרה חללה ידו נחש בריח׃ 13
೧೩ಆತನ ಶ್ವಾಸವು ಆಕಾಶಮಂಡಲವನ್ನು ಶುಭ್ರಮಾಡುವುದು, ಆತನ ಹಸ್ತವು ವೇಗವಾಗಿ ಓಡುವ ಸರ್ಪವನ್ನು ಇರಿಯುವುದು.
הן אלה קצות דרכו ומה שמץ דבר נשמע בו ורעם גבורתו מי יתבונן׃ 14
೧೪ಆಹಾ, ಈ ಅದ್ಭುತಗಳು ಆತನ ಮಾರ್ಗಗಳ ಕಟ್ಟಕಡೆಯಾಗಿವೆ. ಆತನ ವಿಷಯವಾಗಿ ಸೂಕ್ಷ್ಮ ಶಬ್ದವನ್ನು ಮಾತ್ರ ಕೇಳಿದ್ದೇವೆ, ಆತನ ಪ್ರಾಬಲ್ಯದ ಘನಗರ್ಜನೆಯನ್ನು ಯಾರು ಗ್ರಹಿಸಬಲ್ಲರು?”

< איוב 26 >