< איוב 31 >
ברית כרתי לעיני ומה אתבונן על בתולה׃ | 1 |
“ಕನ್ನಿಕೆಯನ್ನು ಕಾಮದೃಷ್ಟಿಯಿಂದ ನೋಡುವುದಿಲ್ಲವೆಂದು ನನ್ನ ಕಣ್ಣುಗಳೊಂದಿಗೆ ನಾನು ಒಡಂಬಡಿಕೆಯನ್ನು ಮಾಡಿಕೊಂಡೆನು.
ומה חלק אלוה ממעל ונחלת שדי ממרמים׃ | 2 |
ದೇವರು ಮೇಲಣ ಲೋಕದಿಂದ ಯಾವ ಪಾಲನ್ನು ವಿಧಿಸುವರು? ಸರ್ವಶಕ್ತರು ಉನ್ನತಾಕಾಶದಿಂದ ಕೊಡುವ ಬಾಧ್ಯತೆ ಯಾವುದು?
הלא איד לעול ונכר לפעלי און׃ | 3 |
ದುಷ್ಟರಿಗೆ ವಿಪತ್ತು ಇಲ್ಲವೋ? ಕೆಡುಕರಿಗೆ ವಿನಾಶ ಇಲ್ಲವೋ?
הלא הוא יראה דרכי וכל צעדי יספור׃ | 4 |
ದೇವರು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಾರಲ್ಲವೆ?
אם הלכתי עם שוא ותחש על מרמה רגלי׃ | 5 |
“ನಾನು ಕಪಟವಾಗಿ ನಡೆದುಕೊಂಡಿದ್ದರೆ, ಮೋಸಕ್ಕೆ ನನ್ನ ಕಾಲು ತ್ವರೆಪಟ್ಟಿದ್ದರೆ,
ישקלני במאזני צדק וידע אלוה תמתי׃ | 6 |
ದೇವರು ನ್ಯಾಯದ ತಕ್ಕಡಿಯಲ್ಲಿ ನನ್ನನ್ನು ತೂಗಿ ನೋಡಲಿ; ನಾನು ನಿರ್ದೋಷಿ ಎಂದು ದೇವರು ತಿಳಿದುಕೊಳ್ಳಲಿ.
אם תטה אשרי מני הדרך ואחר עיני הלך לבי ובכפי דבק מאום׃ | 7 |
ನಾನು ದಾರಿತಪ್ಪಿ ನಡೆದಿದ್ದರೆ, ನನ್ನ ಕಣ್ಣು ಕಂಡವುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಅಂಟಿಕೊಂಡಿದ್ದರೆ,
אזרעה ואחר יאכל וצאצאי ישרשו׃ | 8 |
ನಾನು ಬಿತ್ತುವುದನ್ನು ಬೇರೊಬ್ಬನು ಉಣ್ಣಲಿ; ನನ್ನ ಬೆಳೆಯು ಬುಡಮೇಲಾಗಲಿ.
אם נפתה לבי על אשה ועל פתח רעי ארבתי׃ | 9 |
“ನನ್ನ ಹೃದಯವು ಪರಸ್ತ್ರೀಗೆ ಮರುಳಾಗಿ, ನನ್ನ ನೆರೆಯವನ ಬಾಗಿಲ ಹತ್ತಿರ ನಾನು ಹೊಂಚುಹಾಕಿದ್ದರೆ,
תטחן לאחר אשתי ועליה יכרעון אחרין׃ | 10 |
ನನ್ನ ಹೆಂಡತಿ ಮತ್ತೊಬ್ಬನಿಗೋಸ್ಕರ ಧಾನ್ಯಬೀಸಲಿ, ಮತ್ತೊಬ್ಬರು ಅವಳ ಸಂಗಡ ಮಲಗಲಿ.
כי הוא זמה והיא עון פלילים׃ | 11 |
ಏಕೆಂದರೆ ನಾನು ಹಾಗೆಲ್ಲಾ ಮಾಡಿದ್ದರೆ, ಅಂಥ ನಡತೆ ದುಷ್ಕಾರ್ಯವಾಗುತ್ತಿತ್ತು, ಆ ಅಪರಾಧವು ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾಗುತ್ತಿತ್ತು.
כי אש היא עד אבדון תאכל ובכל תבואתי תשרש׃ | 12 |
ಅದು ನಾಶಲೋಕದವರೆಗೆ ದಹಿಸುವಂಥಾ ಅಗ್ನಿಯಾಗುತ್ತಿತ್ತು, ಅದು ನನ್ನ ಆದಾಯವನ್ನೆಲ್ಲಾ ನಿರ್ಮೂಲ ಮಾಡುತ್ತಿತ್ತು.
אם אמאס משפט עבדי ואמתי ברבם עמדי׃ | 13 |
“ಒಂದು ವೇಳೆ ನನಗೂ ನನ್ನ ದಾಸದಾಸಿಯರಿಗೂ ನನ್ನ ಮೇಲೆ ವ್ಯಾಜ್ಯವಾದಾಗ, ನಾನು ಅವರ ನ್ಯಾಯವನ್ನು ತಿರಸ್ಕರಿಸಿದ್ದರೆ,
ומה אעשה כי יקום אל וכי יפקד מה אשיבנו׃ | 14 |
ದೇವರು ನ್ಯಾಯಸ್ಥಾಪನೆಗೆ ಏಳುವಾಗ ನಾನು ಏನು ಮಾಡುತ್ತಿದ್ದೆನು? ದೇವರು ವಿಚಾರಿಸುವಾಗ, ನಾನು ಅವರಿಗೆ ಏನು ಉತ್ತರಕೊಡುತ್ತಿದ್ದೆನು?
הלא בבטן עשני עשהו ויכננו ברחם אחד׃ | 15 |
ಗರ್ಭದಲ್ಲಿ ನನ್ನನ್ನು ಉಂಟುಮಾಡಿದ ದೇವರೇ ಅವರನ್ನೂ ಉಂಟು ಮಾಡಿದ್ದಾರಲ್ಲವೇ? ಅವರನ್ನೂ, ನನ್ನನ್ನೂ ತಾಯಂದಿರ ಗರ್ಭದಲ್ಲಿ ರೂಪಿಸಿದ ದೇವರು ಒಬ್ಬರೇ ಅಲ್ಲವೇ?
אם אמנע מחפץ דלים ועיני אלמנה אכלה׃ | 16 |
“ನಾನು ಬಡವರ ಬಯಕೆಗಳನ್ನು ಭಂಗಪಡಿಸಿದೆನೋ? ವಿಧವೆಯ ಕಣ್ಣುಗಳನ್ನು ನಾನು ಮಂಕಾಗಿಸಿದೆನೋ?
ואכל פתי לבדי ולא אכל יתום ממנה׃ | 17 |
ದಿಕ್ಕಿಲ್ಲದವರು ಊಟ ಉಣ್ಣದ ಹಾಗೆ, ನಾನು ಮಾತ್ರ ತುತ್ತನ್ನೆಲ್ಲಾ ಒಂಟಿಯಾಗಿ ತಿಂದೆನೋ?
כי מנעורי גדלני כאב ומבטן אמי אנחנה׃ | 18 |
ಇಲ್ಲಾ, ನನ್ನ ಯೌವನಕಾಲದಿಂದ ನಾನು ಅನಾಥರನ್ನು ತಂದೆಯಂತೆ ಬೆಳೆಸಿದೆನು. ಹುಟ್ಟಿದಂದಿನಿಂದ ವಿಧವೆಯರಿಗೆ ಮಾರ್ಗದರ್ಶಿಯಾಗಿದ್ದೆನು.
אם אראה אובד מבלי לבוש ואין כסות לאביון׃ | 19 |
ಬಟ್ಟೆ ಇಲ್ಲದೆ ಕಷ್ಟಪಡುವವರನ್ನೂ, ಹೊದಿಕೆ ಇಲ್ಲದೆ ನಡುಗುವವರನ್ನೂ ನಾನು ನೋಡಿದಾಗೆಲ್ಲಾ,
אם לא ברכוני חלצו ומגז כבשי יתחמם׃ | 20 |
ಆ ಬಡವರು ನನ್ನ ಕುರಿ ಉಣ್ಣೆಯಿಂದ ಬೆಚ್ಚಗಾಗಿ, ತಮ್ಮ ಅಂತರಾಳದಿಂದ ನನ್ನನ್ನು ಹರಸಲಿಲ್ಲವೋ?
אם הניפותי על יתום ידי כי אראה בשער עזרתי׃ | 21 |
ನ್ಯಾಯಸ್ಥಾನದಲ್ಲಿ ನನಗೆ ಬೆಂಬಲ ಉಂಟೆಂದು ಕಂಡು, ನಾನು ದಿಕ್ಕಿಲ್ಲದವರ ಮೇಲೆ ನನ್ನ ಕೈಮಾಡಿದ್ದರೆ,
כתפי משכמה תפול ואזרעי מקנה תשבר׃ | 22 |
ನನ್ನ ಹೆಗಲು, ಬೆನ್ನಿನ ಕೀಲು ತಪ್ಪಿಹೋಗಲಿ; ನನ್ನ ತೋಳು ಅದರ ಸಂದಿನಿಂದ ಕಳಚಿಬೀಳಲಿ.
כי פחד אלי איד אל ומשאתו לא אוכל׃ | 23 |
ಏಕೆಂದರೆ ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗೆ ಹೆದರಿಕೆಯಾಯಿತು; ದೇವರ ಪ್ರಭಾವದ ಭಯದ ನಿಮಿತ್ತ ನಾನು ಇಂಥ ಕೃತ್ಯವನ್ನು ಮಾಡುವುದಕ್ಕೆ ಸಾಧ್ಯವಾಗಲಿಲ್ಲ.
אם שמתי זהב כסלי ולכתם אמרתי מבטחי׃ | 24 |
“ನಾನು ಬಂಗಾರದಲ್ಲಿ ನನ್ನ ನಿರೀಕ್ಷೆಯನ್ನು ಇಟ್ಟಿದ್ದರೆ, ಅಪರಂಜಿಗೆ, ‘ನೀನು ನನ್ನ ಭದ್ರತೆ,’ ಎಂದು ಹೇಳಿದ್ದರೆ,
אם אשמח כי רב חילי וכי כביר מצאה ידי׃ | 25 |
ನನ್ನ ಐಶ್ವರ್ಯವು ಬಹಳ ಎಂದು ಕೊಚ್ಚಿಕೊಂಡಿದ್ದರೆ, ನನ್ನ ಕೈ ಬಹಳ ಸಂಪಾದಿಸಿದೆ ಎಂದು ನಾನು ಸಂತೋಷಪಟ್ಟಿದ್ದರೆ,
אם אראה אור כי יהל וירח יקר הלך׃ | 26 |
ನಾನು ಸೂರ್ಯನು ಹೊಳೆಯುವುದನ್ನು ಗಮನಿಸಿ, ಚಂದ್ರನು ಪ್ರಭೆಯಲ್ಲಿ ಚಲಿಸುವುದನ್ನು ನೋಡಿ,
ויפת בסתר לבי ותשק ידי לפי׃ | 27 |
ನನ್ನ ಹೃದಯವು ಮರುಳುಗೊಂಡು, ನನ್ನ ಕೈ ಅವುಗಳನ್ನು ನನ್ನ ಬಾಯಿಂದ ಗೌರವದಿಂದ ಮುಗಿದಿದ್ದರೆ,
גם הוא עון פלילי כי כחשתי לאל ממעל׃ | 28 |
ಇದು ಸಹ ನ್ಯಾಯಾಧಿಪತಿಯ ದಂಡನೆಗೆ ಯೋಗ್ಯವಾಗುತ್ತಿತ್ತು; ಏಕೆಂದರೆ, ಆಗ ನಾನು ಉನ್ನತದಲ್ಲಿರುವ ದೇವರಿಗೆ ದ್ರೋಹಿಯಾಗುತ್ತಿದ್ದೆನು.
אם אשמח בפיד משנאי והתעררתי כי מצאו רע׃ | 29 |
“ವೈರಿಯ ನಾಶಕ್ಕೆ ನಾನು ಸಂತೋಷಪಟ್ಟು, ವೈರಿಗೆ ಕೇಡು ಬಂದಾಗ ಹಿಗ್ಗಿಕೊಂಡು ಗರ್ವಪಟ್ಟೆನೋ?
ולא נתתי לחטא חכי לשאל באלה נפשו׃ | 30 |
ಇಲ್ಲ, ಅವನ ಸಾಯಲಿ ಎಂದು ನಾನು ಶಾಪ ಕೊಡಲಿಲ್ಲ. ನಾನು ನನ್ನ ಬಾಯಿಂದ ಅಂಥ ಪಾಪಮಾಡಲಿಲ್ಲ.
אם לא אמרו מתי אהלי מי יתן מבשרו לא נשבע׃ | 31 |
ನನ್ನ ಮನೆಯ ಕೆಲಸದವರು, ‘ಯೋಬನು ನೀಡಿದ ಭೋಜನದಿಂದ ತೃಪ್ತರಾಗದವರು ಯಾರು?’ ಎಂದು ಹೇಳಿಕೊಳ್ಳುತ್ತಿದ್ದರಲ್ಲವೆ?
בחוץ לא ילין גר דלתי לארח אפתח׃ | 32 |
ಆದರೆ ಯಾವ ಪರದೇಶಸ್ಥರೂ ಬೀದಿಯಲ್ಲಿ ತಂಗಬೇಕಾಗಿರಲಿಲ್ಲ; ಪ್ರಯಾಣಿಕರಿಗೆ ನನ್ನ ಬಾಗಿಲು ಸದಾ ತೆರೆದಿಟ್ಟಿದ್ದೆನು.
אם כסיתי כאדם פשעי לטמון בחבי עוני׃ | 33 |
ನಾನು ಹೃದಯದಲ್ಲಿ ನನ್ನ ಅಪರಾಧ ಪ್ರಜ್ಞೆಯನ್ನು ಅಡಗಿಸಿ, ಮಾನವರಂತೆ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ.
כי אערוץ המון רבה ובוז משפחות יחתני ואדם לא אצא פתח׃ | 34 |
ನಾನು ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಅವಹೇಳನಕ್ಕೆ ಕಳವಳಗೊಂಡರೂ, ಬಾಗಿಲಿನಿಂದ ಹೊರಗೆ ಹೋಗದೆ ಮೌನವಾಗಿದ್ದೆನೋ?
מי יתן לי שמע לי הן תוי שדי יענני וספר כתב איש ריבי׃ | 35 |
“ನನ್ನ ಕರೆಗೆ ಕಿವಿಗೊಡತಕ್ಕವರು ಒಬ್ಬರು ಈಗ ಇದ್ದರೆ ಎಷ್ಟೋ ಲೇಸು! ಸರ್ವಶಕ್ತರು ನನಗೆ ಉತ್ತರಕೊಡಲಿ; ನನ್ನ ವಿರೋಧಿಯು ನನ್ನ ಆಪಾದನಾ ಪತ್ರವನ್ನು ಬರೆದು ಕೊಡಲಿ.
אם לא על שכמי אשאנו אענדנו עטרות לי׃ | 36 |
ನಾನು ನನ್ನ ಹೆಗಲಲ್ಲಿ ಆ ಲಿಖಿತವನ್ನು ನಿಶ್ಚಯವಾಗಿ ಹೊತ್ತು ನಡೆಯುತ್ತಿದ್ದೆ; ಅದನ್ನು ಕಿರೀಟವಾಗಿ ಧರಿಸಿಕೊಳ್ಳುತ್ತಿದ್ದೆನು.
מספר צעדי אגידנו כמו נגיד אקרבנו׃ | 37 |
ನನ್ನ ಹೆಜ್ಜೆಗಳ ಲೆಕ್ಕವನ್ನು ದೇವರಿಗೆ ಒಪ್ಪಿಸುತ್ತಿದ್ದೆನು; ಒಬ್ಬ ಅಧಿಪತಿಯಂತೆ ನಾನು ದೇವರನ್ನು ಸಮೀಪಿಸುತ್ತಿದ್ದೆನು.
אם עלי אדמתי תזעק ויחד תלמיה יבכיון׃ | 38 |
“ನನ್ನ ಹೊಲ ನನಗೆ ವಿರೋಧವಾಗಿ ಪ್ರತಿಭಟಿಸಿದ್ದರೆ, ಅದರ ನೇಗಿಲ ಗೆರೆಗಳೆಲ್ಲಾ ದೂರಿ ಅಳುತ್ತಿದ್ದರೆ,
אם כחה אכלתי בלי כסף ונפש בעליה הפחתי׃ | 39 |
ಕೂಲಿಕೊಡದೆ ಭೂಮಿಯ ಫಲವನ್ನು ನಾನು ತಿಂದಿದ್ದರೆ, ಅದರ ಯಜಮಾನರ ಪ್ರಾಣಹಾನಿಗೆ ಕಾರಣನಾಗಿದ್ದರೆ,
תחת חטה יצא חוח ותחת שערה באשה תמו דברי איוב׃ | 40 |
ಗೋಧಿಗೆ ಬದಲಾಗಿ ಮುಳ್ಳುಗಳೂ, ಜವೆಗೋಧಿಗೆ ಬದಲಾಗಿ ಕಳೆಗಳೂ ಬೆಳೆಯಲಿ.” ಹೀಗೆ ಯೋಬನ ಮಾತುಗಳು ಮುಗಿದವು.