< איוב 39 >
הידעת עת לדת יעלי סלע חלל אילות תשמר׃ | 1 |
“ಕಾಡುಮೇಕೆಗಳು ಈಯುವ ಕಾಲವನ್ನು ನೀನು ತಿಳಿದಿರುವೆಯಾ? ಜಿಂಕೆಗಳ ಹೆರಿಗೆಯನ್ನು ನೋಡಿರುವೆಯಾ?
תספר ירחים תמלאנה וידעת עת לדתנה׃ | 2 |
ಅವುಗಳ ಗರ್ಭ ತುಂಬುವ ತಿಂಗಳುಗಳನ್ನು ಎಣಿಸಿರುವೆಯಾ? ಅವು ಈಯುವ ಕಾಲವನ್ನು ತಿಳಿದಿರುವಿಯೋ?
תכרענה ילדיהן תפלחנה חבליהם תשלחנה׃ | 3 |
ಅವು ಬಗ್ಗಿ ಮರಿಗಳನ್ನು ಹಾಕುತ್ತವೆ; ಅದರ ಪ್ರಸವ ವೇದನೆಯನ್ನು ಮರೆತುಬಿಡುತ್ತವೆ.
יחלמו בניהם ירבו בבר יצאו ולא שבו למו׃ | 4 |
ಅವುಗಳ ಮರಿಗಳು ಪುಷ್ಟಿಯಾಗಿ ಕಾಡಿನಲ್ಲಿ ಬೆಳೆಯುತ್ತವೆ; ಅವು ತಾಯಿಯನ್ನು ಅಗಲಿದ ಬಳಿಕ ತಿರುಗಿ ಬರುವುದಿಲ್ಲ.
מי שלח פרא חפשי ומסרות ערוד מי פתח׃ | 5 |
“ಕಾಡುಕತ್ತೆಗೆ ಸ್ವತಂತ್ರವನ್ನು ಕೊಟ್ಟವರು ಯಾರು? ಕಾಡುಕತ್ತೆಯ ಕಟ್ಟನ್ನು ಬಿಚ್ಚಿದವರು ಯಾರು?
אשר שמתי ערבה ביתו ומשכנותיו מלחה׃ | 6 |
ಮರುಭೂಮಿಯನ್ನು ಅದರ ನಿವಾಸವನ್ನಾಗಿ ಕೊಟ್ಟಿರುವುದು ನಾನೇ. ಸವಳುಬಯಲನ್ನು ಅದರ ವಾಸ ಸ್ಥಳವಾಗಿಯೂ ನೇಮಿಸಿದ್ದು ನಾನೇ.
ישחק להמון קריה תשאות נוגש לא ישמע׃ | 7 |
ಪಟ್ಟಣದ ಗದ್ದಲವನ್ನು ಕಾಡುಕತ್ತೆಯು ಧಿಕ್ಕರಿಸುತ್ತದೆ; ಅದು ಓಡಿಸುವವನ ಕೂಗನ್ನು ಲಕ್ಷಿಸುವುದಿಲ್ಲ.
יתור הרים מרעהו ואחר כל ירוק ידרוש׃ | 8 |
ಬೆಟ್ಟಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; ಹಸುರಾಗಿರುವುದನ್ನು ಎಲ್ಲಿದ್ದರೂ ಹುಡುಕುತ್ತಲೇ ಇರುವುದು.
היאבה רים עבדך אם ילין על אבוסך׃ | 9 |
“ಕಾಡುಕೋಣವು ನಿನ್ನ ಸೇವೆ ಮಾಡಲು ಎಂದಾದರೂ ಒಪ್ಪಿದೆಯೆ? ಅದು ರಾತ್ರಿಯಲ್ಲಿ ನಿನ್ನ ಗೋದಲಿಯ ಬಳಿಯಲ್ಲಿ ಉಳಿದುಕೊಂಡಿದೆಯೆ?
התקשר רים בתלם עבתו אם ישדד עמקים אחריך׃ | 10 |
ಕಾಡುಕೋಣವನ್ನು ಹಗ್ಗದಿಂದ ನೇಗಿಲ ಸಾಲಿಗೆ ಕಟ್ಟಿರುವೆಯಾ? ಅದು ಕಣಿವೆಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೆ?
התבטח בו כי רב כחו ותעזב אליו יגיעך׃ | 11 |
ಅದರ ಶಕ್ತಿ ಹೆಚ್ಚಾಗಿರುವುದರಿಂದ ನೀನು ಕೆಲಸಕ್ಕಾಗಿ ಅದನ್ನೇ ನಂಬಿರುವೆಯಾ? ನಿನ್ನ ಭಾರವಾದ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯಾ?
התאמין בו כי ישוב זרעך וגרנך יאסף׃ | 12 |
ಅದು ನಿನ್ನ ಧಾನ್ಯ ತೆನೆಗಳನ್ನು ಮನೆಗೆ ತರುವುದೆಂದು ನಂಬುವೆಯಾ? ನಿನ್ನ ಕಣದಲ್ಲಿ ಕಾಳು ಕೂಡಿಸುವದೆಂದೂ ಅದನ್ನು ನಿರೀಕ್ಷಿಸುವೆಯಾ?
כנף רננים נעלסה אם אברה חסידה ונצה׃ | 13 |
“ಉಷ್ಟ್ರಪಕ್ಷಿ ಸಂತೋಷದಿಂದ ರೆಕ್ಕೆ ಬಡಿಯುತ್ತದೆ. ಆದರೂ ಕೊಕ್ಕರೆಯ ರೆಕ್ಕೆ ಗರಿಗಳೊಂದಿಗೆ ಅವುಗಳನ್ನು ಹೋಲಿಸಲಾಗದು.
כי תעזב לארץ בציה ועל עפר תחמם׃ | 14 |
ಏಕೆಂದರೆ ಉಷ್ಟ್ರಪಕ್ಷಿಯು ತನ್ನ ಮೊಟ್ಟೆಗಳನ್ನು ನೆಲದಲ್ಲಿ ಬಿಟ್ಟು, ಕೇವಲ ಮರಳಿನಿಂದ ಅವುಗಳಿಗೆ ಕಾವು ಕೊಡುತ್ತದೆ.
ותשכח כי רגל תזורה וחית השדה תדושה׃ | 15 |
ಜನರು ಕಾಲಿನಿಂದ ಮೊಟ್ಟೆಗಳನ್ನು ಮೆಟ್ಟಿಯಾರು, ಇಲ್ಲವೆ ಕಾಡುಮೃಗ ಅದನ್ನು ಅವುಗಳನ್ನು ತುಳಿದೀತು ಎಂಬ ಚಿಂತೆ ಆ ಪಕ್ಷಿಗೆ ಇಲ್ಲ.
הקשיח בניה ללא לה לריק יגיעה בלי פחד׃ | 16 |
ತನ್ನ ಮರಿಗಳನ್ನು ತನ್ನವುಗಳಲ್ಲ ಎಂಬಂತೆ ಕ್ರೂರವಾಗಿ ನಡೆಸುತ್ತದೆ; ಉಷ್ಟ್ರಪಕ್ಷಿಯು ತನ್ನ ಹೆರಿಗೆ ವ್ಯರ್ಥವಾದರೂ ಅದಕ್ಕೆ ಚಿಂತೆ ಇಲ್ಲ.
כי השה אלוה חכמה ולא חלק לה בבינה׃ | 17 |
ಏಕೆಂದರೆ ದೇವರು ಉಷ್ಟ್ರಪಕ್ಷಿಗೆ ಜ್ಞಾನವನ್ನು ಮರೆಮಾಡಿ, ತಿಳುವಳಿಕೆಯನ್ನು ಅದಕ್ಕೆ ಕೊಡಲಿಲ್ಲವಷ್ಟೆ.
כעת במרום תמריא תשחק לסוס ולרכבו׃ | 18 |
ಆದರೂ ಆ ಪಕ್ಷಿ ತನ್ನ ರೆಕ್ಕೆಗಳನ್ನು ಹರಡಿ ಓಡಿದಾಗ, ಅದು ಕುದುರೆ ಸವಾರನನ್ನು ಸಹ ನೋಡಿ ಅಣಕಿಸುತ್ತದೆ.
התתן לסוס גבורה התלביש צוארו רעמה׃ | 19 |
“ಯೋಬನೇ, ಕುದುರೆಗೆ ಶಕ್ತಿ ಕೊಟ್ಟವನು ನೀನೋ? ಅದರ ಕೊರಳಿಗೆ ಜುಟ್ಟುಗುಡುಗನ್ನು ಹೊದಿಸಿದವನು ನೀನೋ?
התרעישנו כארבה הוד נחרו אימה׃ | 20 |
ಮಿಡತೆಯ ಹಾಗೆ ಅದನ್ನು ಹಾರುವಂತೆ ಮಾಡಿದವನು ನೀನೋ? ಅದರ ಕೆನೆತದ ಪ್ರಭಾವ ಭಯಂಕರವಾಗಿದೆಯಲ್ಲಾ?
יחפרו בעמק וישיש בכח יצא לקראת נשק׃ | 21 |
ಕುದುರೆಯು ನೆಲವನ್ನು ಕೆರೆಯುತ್ತಾ ತನ್ನ ಶಕ್ತಿಯಲ್ಲಿ ಹಿಗ್ಗುತ್ತದೆ; ಸನ್ನದ್ಧವಾಗಿರುವ ಸೈನ್ಯವನ್ನು ಎದುರಿಸಲು ಹೊರಡುತ್ತದೆ.
ישחק לפחד ולא יחת ולא ישוב מפני חרב׃ | 22 |
ಭಯವನ್ನು ಕಂಡು ನಗುತ್ತದೆ; ಯಾವುದಕ್ಕೂ ಹೆದರುವುದಿಲ್ಲ; ಖಡ್ಗಕ್ಕೆ ಸಹ ಹಿಂದೆಗೆಯುವುದಿಲ್ಲ.
עליו תרנה אשפה להב חנית וכידון׃ | 23 |
ಅದರ ಮೇಲೆ ಬತ್ತಳಿಕೆಯೂ, ಪ್ರಜ್ವಲಿಸುವ ಭಲ್ಲೆಯೂ, ಭರ್ಜಿಯೂ ಥಳಥಳಿಸುತ್ತವೆ.
ברעש ורגז יגמא ארץ ולא יאמין כי קול שופר׃ | 24 |
ಕುದುರೆ ಕಹಳೆಯ ನಾದವನ್ನು ಕೇಳಿದರೂ ಭೀಕರ ಉತ್ಸಾಹದಲ್ಲಿ ನೆಲನುಂಗುವಂತೆ ನಿಲ್ಲದೆ ಓಡುತ್ತದೆ.
בדי שפר יאמר האח ומרחוק יריח מלחמה רעם שרים ותרועה׃ | 25 |
ರಣಕಹಳೆ ಮೊಳಗಿದಾಗ ಕುದುರೆ ಕೆನೆಯುತ್ತದೆ. ಅದು ಅಧಿಪತಿಗಳ ಗರ್ಜನೆಯನ್ನೂ ಕಾಳಗದ ಆರ್ಭಟವನ್ನೂ ದೂರದಿಂದಲೇ ಮೂಸಿ ನೋಡಿ ತಿಳಿಯುತ್ತದೆ.
המבינתך יאבר נץ יפרש כנפו לתימן׃ | 26 |
“ಯೋಬನೇ, ಗಿಡುಗವು ತನ್ನ ರೆಕ್ಕೆಗಳನ್ನು ಹರಡಿ, ದಕ್ಷಿಣದ ಕಡೆಗೆ ಹಾರುವುದು ನಿನ್ನ ಜ್ಞಾನದಿಂದಲೋ?
אם על פיך יגביה נשר וכי ירים קנו׃ | 27 |
ರಣಹದ್ದು ಎತ್ತರಕ್ಕೆ ಹಾರುವುದೂ, ಉನ್ನತ ಸ್ಥಳದಲ್ಲಿ ಗೂಡುಕಟ್ಟುವುದು ನಿನ್ನ ಅಪ್ಪಣೆಯಿಂದಲೋ?
סלע ישכן ויתלנן על שן סלע ומצודה׃ | 28 |
ಅದು ಬಂಡೆಯ ಸಂದುಗಳಲ್ಲಿ ರಾತ್ರಿಯನ್ನು ಕಳೆಯುತ್ತದೆ; ಶಿಲಾಶಿಖರದ ದುರ್ಗಗಳಲ್ಲಿಯೂ ಅದು ತಂಗುತ್ತದೆ.
משם חפר אכל למרחוק עיניו יביטו׃ | 29 |
ಅಲ್ಲಿಂದಲೇ ಆಹಾರವನ್ನು ಹುಡುಕುತ್ತದೆ; ಅದರ ಕಣ್ಣುಗಳು ದೂರದಿಂದಲೇ ನೋಡುತ್ತವೆ.
ואפרחו יעלעו דם ובאשר חללים שם הוא׃ | 30 |
ಅದರ ಮರಿಗಳು ತಂದ ಬೇಟೆಯನ್ನು ತಿಂದುಬಿಡುತ್ತವೆ; ಹೆಣ ಬಿದ್ದಲ್ಲಿಯೇ ರಣಹದ್ದು ಇರುವುದು.”