< יונה 3 >
ויהי דבר יהוה אל יונה שנית לאמר׃ | 1 |
೧ಯೆಹೋವನ ವಾಕ್ಯವು ಯೋನನಿಗೆ ಎರಡನೆಯ ಸಾರಿ ಉಂಟಾಯಿತು.
קום לך אל נינוה העיר הגדולה וקרא אליה את הקריאה אשר אנכי דבר אליך׃ | 2 |
೨ಅದೇನೆಂದರೆ “ನೀನು ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಆಜ್ಞಾಪಿಸುವ ಸಂದೇಶವನ್ನು ಸಾರು” ಎಂದು ಹೇಳಿದನು.
ויקם יונה וילך אל נינוה כדבר יהוה ונינוה היתה עיר גדולה לאלהים מהלך שלשת ימים׃ | 3 |
೩ಆಗ ಯೋನನು ಎದ್ದು ಯೆಹೋವನ ಅಪ್ಪಣೆಯಂತೆ ನಿನೆವೆಗೆ ಹೋದನು. ನಿನೆವೆಯು ಮೂರು ದಿನದ ಪ್ರಯಾಣದಷ್ಟು ಅತಿ ವಿಸ್ತಾರವಾದ ಮಹಾದೊಡ್ಡ ಪಟ್ಟಣವಾಗಿತ್ತು.
ויחל יונה לבוא בעיר מהלך יום אחד ויקרא ויאמר עוד ארבעים יום ונינוה נהפכת׃ | 4 |
೪ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು.
ויאמינו אנשי נינוה באלהים ויקראו צום וילבשו שקים מגדולם ועד קטנם׃ | 5 |
೫ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಮಾಡಬೇಕೆಂದು ಸಾರಿ ಹೇಳಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು.
ויגע הדבר אל מלך נינוה ויקם מכסאו ויעבר אדרתו מעליו ויכס שק וישב על האפר׃ | 6 |
೬ಆ ಸುದ್ದಿಯು ನಿನೆವೆಯ ಅರಸನಿಗೆ ತಿಳಿಯಲು ಅವನು ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡನು.
ויזעק ויאמר בנינוה מטעם המלך וגדליו לאמר האדם והבהמה הבקר והצאן אל יטעמו מאומה אל ירעו ומים אל ישתו׃ | 7 |
೭ಇದಲ್ಲದೆ ಅರಸನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿ ಹೇಳಿದ್ದೇನೆಂದರೆ: “ಜನ, ಪಶು, ಮಂದೆ, ಹಿಂಡು ಇವುಗಳು ಸಹ ಏನೂ ರುಚಿ ನೋಡುವುದಾಗಲೀ, ತಿನ್ನುವುದಾಗಲೀ, ಕುಡಿಯುವುದಾಗಲೀ ಮಾಡಬಾರದು.
ויתכסו שקים האדם והבהמה ויקראו אל אלהים בחזקה וישבו איש מדרכו הרעה ומן החמס אשר בכפיהם׃ | 8 |
೮ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ.
מי יודע ישוב ונחם האלהים ושב מחרון אפו ולא נאבד׃ | 9 |
೯ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.
וירא האלהים את מעשיהם כי שבו מדרכם הרעה וינחם האלהים על הרעה אשר דבר לעשות להם ולא עשה׃ | 10 |
೧೦ದೇವರು ನಿನೆವೆಯವರ ಕೃತ್ಯಗಳನ್ನು ನೋಡಿ, ಅವರು ತಮ್ಮ ದುರ್ಮಾರ್ಗತನದಿಂದ ತಿರುಗಿಕೊಂಡರೆಂದು ತಿಳಿದು ತನ್ನ ಮನಸ್ಸನ್ನು ಬದಲಾಯಿಸಿ, ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.