< ויקרא 3 >
ואם זבח שלמים קרבנו אם מן הבקר הוא מקריב אם זכר אם נקבה תמים יקריבנו לפני יהוה׃ | 1 |
೧“‘ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು.
וסמך ידו על ראש קרבנו ושחטו פתח אהל מועד וזרקו בני אהרן הכהנים את הדם על המזבח סביב׃ | 2 |
೨ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
והקריב מזבח השלמים אשה ליהוה את החלב המכסה את הקרב ואת כל החלב אשר על הקרב׃ | 3 |
೩ಆ ಯಜ್ಞಪಶುವಿನ ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
ואת שתי הכלית ואת החלב אשר עלהן אשר על הכסלים ואת היתרת על הכבד על הכליות יסירנה׃ | 4 |
೪ಎರಡು ಮೂತ್ರಪಿಂಡಗಳ ಮೇಲೆ, ಸೊಂಟದಲ್ಲಿರುವ ಕೊಬ್ಬನ್ನು, ಕಳಿಜದ ಹತ್ತಿರ ಮೂತ್ರಪಿಂಡದ ತನಕ ಇರುವ ಕೊಬ್ಬನ್ನು ತೆಗೆದು ಅವುಗಳನ್ನು ಯೆಹೋವನಿಗೆ ಹೋಮಮಾಡಬೇಕು.
והקטירו אתו בני אהרן המזבחה על העלה אשר על העצים אשר על האש אשה ריח ניחח ליהוה׃ | 5 |
೫ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮ ದ್ರವ್ಯದೊಡನೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮ ಆಗಿರುವುದು.
ואם מן הצאן קרבנו לזבח שלמים ליהוה זכר או נקבה תמים יקריבנו׃ | 6 |
೬“‘ಸಮಾಧಾನಯಜ್ಞಕ್ಕಾಗಿ ಯೆಹೋವನಿಗೆ ಸಮರ್ಪಿಸುವಂಥದು ಕುರಿ ಅಥವಾ ಆಡು ಆಗಿರುವ ಪಕ್ಷದಲ್ಲಿ, ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಪೂರ್ಣಾಂಗವಾಗಿರಬೇಕು.
אם כשב הוא מקריב את קרבנו והקריב אתו לפני יהוה׃ | 7 |
೭ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
וסמך את ידו על ראש קרבנו ושחט אתו לפני אהל מועד וזרקו בני אהרן את דמו על המזבח סביב׃ | 8 |
೮ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
והקריב מזבח השלמים אשה ליהוה חלבו האליה תמימה לעמת העצה יסירנה ואת החלב המכסה את הקרב ואת כל החלב אשר על הקרב׃ | 9 |
೯ಆ ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನು, ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
ואת שתי הכלית ואת החלב אשר עלהן אשר על הכסלים ואת היתרת על הכבד על הכלית יסירנה׃ | 10 |
೧೦ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಮೇಲೆ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ತೆಗೆಯಬೇಕು.
והקטירו הכהן המזבחה לחם אשה ליהוה׃ | 11 |
೧೧ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು.
ואם עז קרבנו והקריבו לפני יהוה׃ | 12 |
೧೨“‘ಸಮರ್ಪಿಸುವಂಥದ್ದು ಆಡು ಆಗಿದ್ದರೆ ಅರ್ಪಿಸುವವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.
וסמך את ידו על ראשו ושחט אתו לפני אהל מועד וזרקו בני אהרן את דמו על המזבח סביב׃ | 13 |
೧೩ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು, ದೇವದರ್ಶನ ಗುಡಾರದ ಎದುರಾಗಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.
והקריב ממנו קרבנו אשה ליהוה את החלב המכסה את הקרב ואת כל החלב אשר על הקרב׃ | 14 |
೧೪ಅದರ ಅಂಗಾಂಶದ ಕೊಬ್ಬನ್ನು ಮತ್ತು ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,
ואת שתי הכלית ואת החלב אשר עלהן אשר על הכסלים ואת היתרת על הכבד על הכלית יסירנה׃ | 15 |
೧೫ಎರಡು ಮೂತ್ರಪಿಂಡಗಳನ್ನು, ಇವುಗಳ ಮೇಲೆ ಸೊಂಟದಲ್ಲಿರುವ ಕೊಬ್ಬನ್ನು ಮತ್ತು ಕಳಿಜದ ಹತ್ತಿರ ಮೂತ್ರಪಿಂಡಗಳ ತನಕ ಇರುವ ಕೊಬ್ಬನ್ನು ಯೆಹೋವನಿಗೋಸ್ಕರ ಅಗ್ನಿಯ ಮೂಲಕ ಸಮರ್ಪಿಸಬೇಕು.
והקטירם הכהן המזבחה לחם אשה לריח ניחח כל חלב ליהוה׃ | 16 |
೧೬ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.
חקת עולם לדרתיכם בכל מושבתיכם כל חלב וכל דם לא תאכלו׃ | 17 |
೧೭ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.