< מִשְׁלֵי 17 >
טוב פת חרבה ושלוה בה מבית מלא זבחי ריב׃ | 1 |
ವಿವಾದದೊಂದಿಗೆ ತುಂಬಿದ ಔತಣದ ಮನೆಗಿಂತ, ಶಾಂತಿ ಸಮಾಧಾನದ ಒಣ ತುತ್ತು ಮೇಲು.
עבד משכיל ימשל בבן מביש ובתוך אחים יחלק נחלה׃ | 2 |
ನಾಚಿಕೆಪಡಿಸುವ ಮಗನ ಮೇಲೆ ಜಾಣನಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.
מצרף לכסף וכור לזהב ובחן לבות יהוה׃ | 3 |
ಸೋಸುವುದಕ್ಕೆ ಬೆಳ್ಳಿಗೆ ಕುಲುಮೆ ಪುಟ, ಬಂಗಾರಕ್ಕೆ ಆವಿಗೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರಿಶೋಧಿಸುತ್ತಾರೆ.
מרע מקשיב על שפת און שקר מזין על לשון הות׃ | 4 |
ಕೇಡು ಮಾಡುವವನು ಕೆಟ್ಟ ಮಾತುಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು.
לעג לרש חרף עשהו שמח לאיד לא ינקה׃ | 5 |
ಬಡವರನ್ನು ಹಾಸ್ಯಮಾಡುವವನು, ತನ್ನನ್ನು ಸೃಷ್ಟಿಸಿದ ಯೆಹೋವ ದೇವರನ್ನು ನಿಂದಿಸುತ್ತಾನೆ; ಬೇರೆಯವರ ವಿಪತ್ತುಗಳಿಗೆ ಸಂತೋಷಿಸುವವನು ಶಿಕ್ಷೆಯನ್ನು ಹೊಂದುವನು.
עטרת זקנים בני בנים ותפארת בנים אבותם׃ | 6 |
ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆತಾಯಿಗಳೇ.
לא נאוה לנבל שפת יתר אף כי לנדיב שפת שקר׃ | 7 |
ಉತ್ತಮವಾದ ಪದಗಳು ಮೂರ್ಖನಿಗೆ ಸೂಕ್ತವಲ್ಲ; ಆಳುವವನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಆಯುಕ್ತವಲ್ಲವೇ.
אבן חן השחד בעיני בעליו אל כל אשר יפנה ישכיל׃ | 8 |
ಕೊಡುವವನ ಕಣ್ಣಿಗೆ ಲಂಚವು ಆಕರ್ಷಣೆಯಾಗಿದೆ; ಪ್ರತಿ ತಿರುವಿನಲ್ಲಿಯೂ ಯಶಸ್ಸು ಬರುತ್ತದೆ ಎಂದು ಅವರು ಭಾವಿಸುತ್ತಾರೆ.
מכסה פשע מבקש אהבה ושנה בדבר מפריד אלוף׃ | 9 |
ದೋಷವನ್ನು ಕ್ಷಮಿಸುವವನು ಪ್ರೀತಿಯನ್ನು ಹುಡುಕುತ್ತಾನೆ; ಆದರೆ ದೋಷವನ್ನು ಎತ್ತಿ ಆಡುವವನು ಸ್ನೇಹಿತರಿಂದ ಪ್ರತ್ಯೇಕಗೊಳ್ಳುತ್ತಾನೆ.
תחת גערה במבין מהכות כסיל מאה׃ | 10 |
ಬುದ್ಧಿಹೀನನ ಬೆನ್ನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟುತ್ತದೆ.
אך מרי יבקש רע ומלאך אכזרי ישלח בו׃ | 11 |
ತಿರುಗಿ ಬೀಳುವವನು ಕೆಟ್ಟದ್ದಕ್ಕೇ ತವಕಪಡುತ್ತಾನೆ; ಆದಕಾರಣ ಮರಣ ದೂತರನ್ನು ಅವನ ವಿರುದ್ಧ ಕಳುಹಿಸಲಾಗುವದು.
פגוש דב שכול באיש ואל כסיל באולתו׃ | 12 |
ತನ್ನ ಮೂಢತೆಯಲ್ಲಿರುವ ಬುದ್ಧಿಹೀನನನ್ನು ಸಂಧಿಸುವುದಕ್ಕಿಂತ ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಸಂಧಿಸುವುದು ಮೇಲು.
משיב רעה תחת טובה לא תמיש רעה מביתו׃ | 13 |
ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆಯಿಂದ ಕೇಡು ತೊಲಗುವುದೇ ಇಲ್ಲ.
פוטר מים ראשית מדון ולפני התגלע הריב נטוש׃ | 14 |
ಕಲಹದ ಪ್ರಾರಂಭವು ಆಣೆಕಟ್ಟು ಒಡೆದಂತೆ ಇರುವುದು; ಆದಕಾರಣ ಆ ಕಲಹಕ್ಕೆ ಕೈಹಾಕುವುದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
מצדיק רשע ומרשיע צדיק תועבת יהוה גם שניהם׃ | 15 |
ದುಷ್ಟರನ್ನು ನೀತಿವಂತರೆಂದು ನಿರ್ಣಯಿಸುವವನು, ನೀತಿವಂತರನ್ನು ಖಂಡಿಸುವವನೂ ಇವರಿಬ್ಬರೂ ಯೆಹೋವ ದೇವರಿಗೆ ಅಸಹ್ಯ.
למה זה מחיר ביד כסיל לקנות חכמה ולב אין׃ | 16 |
ಜ್ಞಾನವನ್ನು ಸಂಪಾದಿಸುವುದಕ್ಕೆ ಬುದ್ಧಿಹೀನನ ಕೈಯಲ್ಲಿ ಹಣ ಏಕೆ? ಅವನಿಗೆ ಕಲಿಯಲು ಮನಸ್ಸಿಲ್ಲವಲ್ಲ.
בכל עת אהב הרע ואח לצרה יולד׃ | 17 |
ಸ್ನೇಹಿತನು ಎಲ್ಲಾ ಸಮಯದಲ್ಲಿ ಪ್ರೀತಿಸುತ್ತಾನೆ; ಆಪತ್ತಿನಲ್ಲಿ ಸಹಾಯಮಾಡುವಗೋಸ್ಕರ ಸಹೋದರನು ಹುಟ್ಟಿದ್ದಾನೆ.
אדם חסר לב תוקע כף ערב ערבה לפני רעהו׃ | 18 |
ಬುದ್ಧಿಹೀನನು ಕೈ ಕುಲುಕಿ ತನ್ನ ನೆರೆಯವನಿಗೆ ಜಾಮಿನನಾಗುತ್ತಾನೆ.
אהב פשע אהב מצה מגביה פתחו מבקש שבר׃ | 19 |
ಕಲಹವನ್ನು ಪ್ರೀತಿಮಾಡುವವನು ಪಾಪವನ್ನು ಪ್ರೀತಿಮಾಡುತ್ತಾನೆ; ತನ್ನ ಗೋಡೆಯನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಆಮಂತ್ರಿಸುತ್ತಾನೆ.
עקש לב לא ימצא טוב ונהפך בלשונו יפול ברעה׃ | 20 |
ವಕ್ರಹೃದಯವುಳ್ಳವನು ಸಮೃದ್ಧಿಯನ್ನು ಹೊಂದುವುದಿಲ್ಲ; ಮೋಸದ ನಾಲಿಗೆಯುಳ್ಳವನು ಹಾನಿಗೆ ಬೀಳುವನು.
ילד כסיל לתוגה לו ולא ישמח אבי נבל׃ | 21 |
ಬುದ್ಧಿಹೀನ ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವುದಿಲ್ಲ.
לב שמח ייטב גהה ורוח נכאה תיבש גרם׃ | 22 |
ಹರ್ಷಹೃದಯವು ಒಳ್ಳೆಯ ಔಷಧ; ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
שחד מחיק רשע יקח להטות ארחות משפט׃ | 23 |
ನ್ಯಾಯದ ಮಾರ್ಗಗಳನ್ನು ತಿರುಗಿಸಿಬಿಡುವುದಕ್ಕೆ ದುಷ್ಟನು ಗುಪ್ತವಾಗಿ ಲಂಚವನ್ನು ತೆಗೆದುಕೊಳ್ಳುತ್ತಾನೆ.
את פני מבין חכמה ועיני כסיל בקצה ארץ׃ | 24 |
ವಿವೇಕಿಯು ಜ್ಞಾನವನ್ನು ತನ್ನ ಮುಂದೆ ಇಟ್ಟುಕೊಳ್ಳುತ್ತಾನೆ. ಆದರೆ ಬುದ್ಧಿಹೀನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಅಲೆಯುವವು.
כעס לאביו בן כסיל וממר ליולדתו׃ | 25 |
ಬುದ್ಧಿಹೀನನಾದ ಮಗನು ತನ್ನ ತಂದೆಗೆ ದುಃಖವೂ, ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.
גם ענוש לצדיק לא טוב להכות נדיבים על ישר׃ | 26 |
ನೀತಿವಂತನಿಗೆ ದಂಡ ವಿಧಿಸುವುದು ಒಳ್ಳೆಯದಲ್ಲದಿದ್ದರೆ, ಖಂಡಿತವಾಗಿಯೂ ಪ್ರಾಮಾಣಿಕ ಅಧಿಕಾರಿಗಳನ್ನು ಹೊಡೆಯುವುದು ಸರಿಯಲ್ಲ.
חושך אמריו יודע דעת וקר רוח איש תבונה׃ | 27 |
ಪರಿಜ್ಞಾನ ಹೊಂದಿರುವವನು ಮಿತವಾಗಿ ಮಾತನಾಡುತ್ತಾನೆ; ತಿಳುವಳಿಕೆಯನ್ನು ಹೊಂದಿರುವವನು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.
גם אויל מחריש חכם יחשב אטם שפתיו נבון׃ | 28 |
ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆನಿಸಿಕೊಳ್ಳುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿ ಎನಿಸಿಕೊಳ್ಳುವನು.