< מִשְׁלֵי 25 >
גם אלה משלי שלמה אשר העתיקו אנשי חזקיה מלך יהודה׃ | 1 |
ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳೇ.
כבד אלהים הסתר דבר וכבד מלכים חקר דבר׃ | 2 |
ವಿಷಯವನ್ನು ರಹಸ್ಯ ಮಾಡುವುದು ದೇವರ ಮಹಿಮೆ. ಒಂದು ವಿಷಯವನ್ನು ಹುಡುಕುವುದು ರಾಜರ ಮಹಿಮೆ.
שמים לרום וארץ לעמק ולב מלכים אין חקר׃ | 3 |
ಆಕಾಶದ ಎತ್ತರವನ್ನು, ಭೂಮಿಯ ಆಳವನ್ನು ಯಾರೂ ಗ್ರಹಿಸಲು ಸಾಧ್ಯವಿಲ್ಲ. ಹಾಗೆಯೇ ಅರಸರ ಹೃದಯವು ಅಗೋಚರ.
הגו סיגים מכסף ויצא לצרף כלי׃ | 4 |
ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ, ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ರೂಪಗೊಳ್ಳುವುದು.
הגו רשע לפני מלך ויכון בצדק כסאו׃ | 5 |
ಅರಸನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ, ಆಗ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವುದು.
אל תתהדר לפני מלך ובמקום גדלים אל תעמד׃ | 6 |
ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರಿಗೆ ಏರ್ಪಡಿಸಿದ ಸ್ಥಾನವನ್ನು ಕೇಳಬೇಡ.
כי טוב אמר לך עלה הנה מהשפילך לפני נדיב אשר ראו עיניך׃ | 7 |
ಘನವಂತರ ಸನ್ನಿಧಿಯಲ್ಲಿ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ, “ಮೇಲಕ್ಕೆ ಬಾ,” ಎಂದು ಅರಸನು ನಿನಗೆ ಹೇಳುವುದು ಲೇಸು. ನೀವು ಏನನ್ನೋ ಕಂಡಿದ್ದರಿಂದ,
אל תצא לרב מהר פן מה תעשה באחריתה בהכלים אתך רעך׃ | 8 |
ದುಡುಕಿ ವ್ಯಾಜ್ಯಮಾಡುವುದಕ್ಕಾಗಿ ಹೋಗಬೇಡ. ಏಕೆಂದರೆ ನಿನ್ನ ನೆರೆಯವನು ನಿನ್ನನ್ನು ಅವಮಾನ ಮಾಡಿದಾಗ, ನೀನು ಕಡೆಯಲ್ಲಿ ಏನು ಮಾಡುವೆ?
ריבך ריב את רעך וסוד אחר אל תגל׃ | 9 |
ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಇನ್ನೊಬ್ಬರ ಗುಟ್ಟನ್ನು ಬಹಿರಂಗಪಡಿಸಬೇಡ,
פן יחסדך שמע ודבתך לא תשוב׃ | 10 |
ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು; ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು.
תפוחי זהב במשכיות כסף דבר דבר על אפניו׃ | 11 |
ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.
נזם זהב וחלי כתם מוכיח חכם על אזן שמעת׃ | 12 |
ಕೇಳುವ ಕಿವಿಗೆ ಜ್ಞಾನಿಯ ತಿದ್ದುವಿಕೆಯು ಬಂಗಾರದ ಮುರು; ಚೊಕ್ಕ ಬಂಗಾರದ ಆಭರಣ.
כצנת שלג ביום קציר ציר נאמן לשלחיו ונפש אדניו ישיב׃ | 13 |
ಸುಗ್ಗಿಯ ಕಾಲದಲ್ಲಿ ಹಿಮದ ಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ತನಾದ ಸೇವಕನಿದ್ದಾನೆ; ಏಕೆಂದರೆ ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
נשיאים ורוח וגשם אין איש מתהלל במתת שקר׃ | 14 |
ದಾನ ಕೊಡದೆ ಕೊಟ್ಟಿದ್ದೇನೆಂದು ಹೊಗಳಿಕೊಳ್ಳುವವನು, ಮಳೆ ಇಲ್ಲದ ಮೋಡಗಳ ಮತ್ತು ಗಾಳಿಯ ಹಾಗೆ ಇದ್ದಾನೆ.
בארך אפים יפתה קצין ולשון רכה תשבר גרם׃ | 15 |
ತಾಳ್ಮೆಯ ಮೂಲಕ ಪ್ರಭುವನ್ನು ಒಲಿಸಿಕೊಳ್ಳಬಹುದು; ಮೃದುವಾದ ಮಾತು ಎಲುಬನ್ನು ಮುರಿಯುತ್ತದೆ.
דבש מצאת אכל דיך פן תשבענו והקאתו׃ | 16 |
ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟೇ ತಿನ್ನು; ಹೊಟ್ಟೆ ತುಂಬಾ ತಿಂದರೆ ಕಾರಬೇಕಾದೀತು.
הקר רגלך מבית רעך פן ישבעך ושנאך׃ | 17 |
ನಿನ್ನ ನೆರೆಯವನ ಮನೆಗೆ ಅಪರೂಪಕ್ಕೆ ಹೆಜ್ಜೆ ಇಡು; ಇಲ್ಲವಾದರೆ ನಿನ್ನ ವಿಷಯವಾಗಿ ಅವನು ಬೇಸರಗೊಂಡು ನಿನ್ನನ್ನು ಹಗೆಮಾಡಾನು.
מפיץ וחרב וחץ שנון איש ענה ברעהו עד שקר׃ | 18 |
ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಖಡ್ಗ, ಹರಿತವಾದ ಬಾಣವಾಗಿದ್ದಾನೆ.
שן רעה ורגל מועדת מבטח בוגד ביום צרה׃ | 19 |
ಕಷ್ಟಕಾಲದಲ್ಲಿ ಅಪನಂಬಿಗಸ್ತನಾದ ಮನುಷ್ಯನಲ್ಲಿಯ ಭರವಸೆಯು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.
מעדה בגד ביום קרה חמץ על נתר ושר בשרים על לב רע׃ | 20 |
ಮನಗುಂದಿದವನಿಗೆ ಸಂಗೀತ ಹಾಡುವುದು ಚಳಿಯಲ್ಲಿ ಬಟ್ಟೆ ಬಿಚ್ಚಿದ ಹಾಗೆಯೂ ಹುಳಿ ಉಪ್ಪನ್ನು ಗಾಯಕ್ಕೆ ಹಚ್ಚಿದಂತೆಯೂ.
אם רעב שנאך האכלהו לחם ואם צמא השקהו מים׃ | 21 |
ನಿನ್ನ ಶತ್ರು ಹಸಿದಿದ್ದರೆ ಉಣ್ಣುವುದಕ್ಕೆ ಅವನಿಗೆ ಊಟಕೊಡು; ಅವನು ಬಾಯಾರಿದ್ದರೆ ಕುಡಿಯುವುದಕ್ಕೆ ನೀರು ಕೊಡು.
כי גחלים אתה חתה על ראשו ויהוה ישלם לך׃ | 22 |
ಏಕೆಂದರೆ ಅದು ಅವನ ತಲೆಯ ಮೇಲೆ ಉರಿಯುವ ಬೆಂಕಿಯ ಕೆಂಡಗಳನ್ನು ಸುರಿಯುವಂತಿರುವುದು; ಯೆಹೋವ ದೇವರು ನಿನಗೆ ಪ್ರತಿಫಲ ಕೊಡುವರು.
רוח צפון תחולל גשם ופנים נזעמים לשון סתר׃ | 23 |
ಅನಿರೀಕ್ಷಿತ ಮಳೆಯನ್ನು ತರುವ ಉತ್ತರದ ಗಾಳಿಯಂತೆ ಚಾಡಿಯ ನಾಲಿಗೆ ಕೋಪದ ಮುಖ ಮಾಡುತ್ತದೆ.
טוב שבת על פנת גג מאשת מדונים ובית חבר׃ | 24 |
ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದು ಲೇಸು.
מים קרים על נפש עיפה ושמועה טובה מארץ מרחק׃ | 25 |
ಬಾಯಾರಿದವನಿಗೆ ತಣ್ಣೀರು ಹೇಗೋ ದೂರದೇಶದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
מעין נרפש ומקור משחת צדיק מט לפני רשע׃ | 26 |
ದುಷ್ಟರ ಮುಂದೆ ನೀತಿವಂತನು ಸೋಲುವುದು, ಕೆಸರಿನ ಬುಗ್ಗೆಗೂ ಕೊಳಕು ಒರತೆಗೂ ಸಮಾನ.
אכל דבש הרבות לא טוב וחקר כבדם כבוד׃ | 27 |
ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವುದು ಗೌರವವಲ್ಲ.
עיר פרוצה אין חומה איש אשר אין מעצר לרוחו׃ | 28 |
ತನ್ನ ಸ್ವಂತ ಆತ್ಮವನ್ನು ಆಳದಿರುವವನು, ಗೋಡೆ ಬಿದ್ದ ಹಾಳೂರಿಗೆ ಸಮಾನ.