< תהילים 105 >
הודו ליהוה קראו בשמו הודיעו בעמים עלילותיו׃ | 1 |
ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ; ಜನರಲ್ಲಿ ದೇವರ ಕ್ರಿಯೆಗಳನ್ನು ತಿಳಿಯಪಡಿಸಿರಿ.
שירו לו זמרו לו שיחו בכל נפלאותיו׃ | 2 |
ದೇವರಿಗೆ ಹಾಡಿರಿ, ದೇವರಿಗೆ ಕೀರ್ತನೆ ಹಾಡಿರಿ; ದೇವರ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.
התהללו בשם קדשו ישמח לב מבקשי יהוה׃ | 3 |
ದೇವರ ಪರಿಶುದ್ಧ ನಾಮವನ್ನು ಹೊಗಳಿರಿ; ಯೆಹೋವ ದೇವರನ್ನು ಹುಡುಕುವವರ ಹೃದಯವು ಸಂತೋಷಿಸಲಿ.
דרשו יהוה ועזו בקשו פניו תמיד׃ | 4 |
ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ, ಅವರ ಮುಖವನ್ನು ಯಾವಾಗಲೂ ಹುಡುಕಿರಿ.
זכרו נפלאותיו אשר עשה מפתיו ומשפטי פיו׃ | 5 |
ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ, ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
זרע אברהם עבדו בני יעקב בחיריו׃ | 6 |
ದೇವರ ಸೇವಕನಾದ ಅಬ್ರಹಾಮನ ಸಂತತಿಯೇ, ಅವರು ಆಯ್ದುಕೊಂಡ ಯಾಕೋಬನ ಮಕ್ಕಳೇ,
הוא יהוה אלהינו בכל הארץ משפטיו׃ | 7 |
ಅವರೇ ನಮ್ಮ ದೇವರಾದ ಯೆಹೋವ ಆಗಿದ್ದಾರೆ. ಅವರ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಇವೆ.
זכר לעולם בריתו דבר צוה לאלף דור׃ | 8 |
ದೇವರು ತಮ್ಮ ಒಡಂಬಡಿಕೆಯನ್ನೂ, ಸಾವಿರ ತಲಾಂತರಗಳಿಗೆ ಆಜ್ಞಾಪಿಸಿದ ತಮ್ಮ ಮಾತನ್ನೂ,
אשר כרת את אברהם ושבועתו לישחק׃ | 9 |
ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಇಸಾಕನಿಗೆ ಇಟ್ಟ ಆಣೆಯನ್ನೂ ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾರೆ.
ויעמידה ליעקב לחק לישראל ברית עולם׃ | 10 |
ದೇವರು ಅದನ್ನು ಯಾಕೋಬನಿಗೆ ತೀರ್ಪನ್ನಾಗಿ ದೃಢಪಡಿಸಿದರು; ಅವರು ಇಸ್ರಾಯೇಲರಿಗೆ ನಿತ್ಯ ಒಡಂಬಡಿಕೆಯಾಗಿ ಸ್ಥಾಪಿಸಿ ಹೇಳಿದ್ದೇನೆಂದರೆ:
לאמר לך אתן את ארץ כנען חבל נחלתכם׃ | 11 |
“ನಾನು ನಿಮಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.”
בהיותם מתי מספר כמעט וגרים בה׃ | 12 |
ಆಗ ಅವರು ಅಲ್ಪಸಂಖ್ಯಾತರೂ, ಬಹು ಸ್ವಲ್ಪ ಮಂದಿಯಾಗಿಯೂ, ಪರದೇಶಸ್ಥರಾಗಿಯೂ ನಾಡಿನಲ್ಲಿ ಇದ್ದರು.
ויתהלכו מגוי אל גוי מממלכה אל עם אחר׃ | 13 |
ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋಗುತ್ತಿದ್ದರು.
לא הניח אדם לעשקם ויוכח עליהם מלכים׃ | 14 |
ಜನರು ಅವರಿಗೆ ಕೇಡು ಮಾಡದಂತೆ ದೇವರು ತಡೆದರು. ಹೌದು, ಅವರಿಗೋಸ್ಕರ ದೇವರು ಅರಸರನ್ನು ಗದರಿಸಿ ಹೀಗೆ ಹೇಳಿದರು:
אל תגעו במשיחי ולנביאי אל תרעו׃ | 15 |
“ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.”
ויקרא רעב על הארץ כל מטה לחם שבר׃ | 16 |
ದೇವರು ಕ್ಷಾಮವನ್ನು ದೇಶದಲ್ಲಿ ಅನುಮತಿಸಿದರು. ಆಹಾರದ ಒದಗುವಿಕೆಯನ್ನು ಸ್ವಲ್ಪಕಾಲ ನಿಲ್ಲಿಸಿದ್ದರು.
שלח לפניהם איש לעבד נמכר יוסף׃ | 17 |
ಆಗ ದೇವರು ಅವರ ಮುಂದೆ ಒಬ್ಬ ಮನುಷ್ಯನನ್ನು ಕಳುಹಿಸಿದರು. ಅವನೇ ದಾಸನಾಗಿ ಮಾರಲಾದ ಯೋಸೇಫನು.
ענו בכבל רגליו ברזל באה נפשו׃ | 18 |
ಸಂಕೋಲೆಗಳಿಂದ ಅವನ ಕಾಲನ್ನು ನೋಯಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಇರಿಸಿದರು.
עד עת בא דברו אמרת יהוה צרפתהו׃ | 19 |
ಯೆಹೋವ ದೇವರ ಮುಂತಿಳಿಸಿದ ವಾಕ್ಯವು ನೆರವೇರುವವರೆಗೆ ಅವನು ದೇವರ ಮಾತಿನಿಂದ ಪರಿಶೋಧಿತನಾದನು.
שלח מלך ויתירהו משל עמים ויפתחהו׃ | 20 |
ಅರಸನು ಅವನನ್ನು ಕರೆದು ಸೆರೆಯಿಂದ ಬಿಡಿಸಿದನು. ಹೌದು, ಜನಗಳ ಅಧಿಪತಿಯಿಂದ ಅವನು ಬಿಡುಗಡೆಯಾದನು.
שמו אדון לביתו ומשל בכל קנינו׃ | 21 |
ಅರಸನು ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ, ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ,
לאסר שריו בנפשו וזקניו יחכם׃ | 22 |
ತನ್ನ ಪ್ರಧಾನರಿಗೆ ತನ್ನ ಇಷ್ಟ ಪ್ರಕಾರ ಶಿಕ್ಷಣ ಕೊಡುವುದಕ್ಕೂ, ತನ್ನ ಜ್ಞಾನವನ್ನು ಮಂತ್ರಿಗಳಿಗೆ ಬೋಧಿಸುವುದಕ್ಕೂ ಯೋಸೇಫನನ್ನು ನೇಮಿಸಿದನು.
ויבא ישראל מצרים ויעקב גר בארץ חם׃ | 23 |
ಅನಂತರ ಇಸ್ರಾಯೇಲನು ಈಜಿಪ್ಟಿಗೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.
ויפר את עמו מאד ויעצמהו מצריו׃ | 24 |
ದೇವರು ತಮ್ಮ ಜನರನ್ನು ಬಹಳ ಅಭಿವೃದ್ಧಿಗೊಳಿಸಿ, ಅವರನ್ನು ವೈರಿಗಳಿಗಿಂತ ಬಲಿಷ್ಟರನ್ನಾಗಿ ಮಾಡಿದರು.
הפך לבם לשנא עמו להתנכל בעבדיו׃ | 25 |
ತಮ್ಮ ಜನರನ್ನು ದ್ವೇಷಿಸುವಂತೆಯೂ, ತಮ್ಮ ಸೇವಕರನ್ನು ಕುಯುಕ್ತಿಯಿಂದ ನಡೆಸುವಂತೆಯೂ ದೇವರು ಅವರ ಹೃದಯವನ್ನು ಮಾರ್ಪಡಿಸಿದನು.
שלח משה עבדו אהרן אשר בחר בו׃ | 26 |
ದೇವರು ತಮ್ಮ ಸೇವಕ ಮೋಶೆಯನ್ನೂ, ಆಯ್ದುಕೊಂಡ ಆರೋನನನ್ನೂ ಕಳುಹಿಸಿದರು.
שמו בם דברי אתותיו ומפתים בארץ חם׃ | 27 |
ಇವರು ದೇವರ ಸೂಚಕಕಾರ್ಯಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು.
שלח חשך ויחשך ולא מרו את דבריו׃ | 28 |
ದೇವರು ಕತ್ತಲೆಯನ್ನು ಕಳುಹಿಸಿ, ದೇಶವನ್ನೆಲ್ಲಾ ಕತ್ತಲು ಮಾಡಿದರು. ದೇವರ ಮಾತಿಗೆ ಈಜಿಪ್ಟನವರು ವಿರೋಧವಾಗಿ ತಿರುಗಿ ಬಿದ್ದರಲ್ಲವೇ?
הפך את מימיהם לדם וימת את דגתם׃ | 29 |
ದೇವರು ಅವರ ನೀರನ್ನು ರಕ್ತವಾಗಿ ಮಾರ್ಪಡಿಸಿದರು. ಅವರ ಮೀನುಗಳನ್ನು ನಾಶಮಾಡಿದರು.
שרץ ארצם צפרדעים בחדרי מלכיהם׃ | 30 |
ಅವರ ದೇಶವು ಕಪ್ಪೆಗಳಿಂದ ತುಂಬಿಕೊಂಡಿತು; ಅವರ ಅರಸುಗಳ ಕೊಠಡಿಗಳಲ್ಲಿ ಸಹ ಅವು ನುಗ್ಗಿದವು.
אמר ויבא ערב כנים בכל גבולם׃ | 31 |
ದೇವರು ಆಜ್ಞಾಪಿಸಲು ನೊಣದ ಗುಂಪುಗಳೂ, ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು.
נתן גשמיהם ברד אש להבות בארצם׃ | 32 |
ದೇವರು ಕಲ್ಮಳೆಯನ್ನೂ, ಅಗ್ನಿ ಜ್ವಾಲೆಗಳನ್ನೂ ಅವರ ದೇಶದಲ್ಲಿ ಬರಮಾಡಿದರು.
ויך גפנם ותאנתם וישבר עץ גבולם׃ | 33 |
ಅವರ ದ್ರಾಕ್ಷಿಯ ಬಳ್ಳಿ, ಅಂಜೂರದ ಗಿಡಗಳು ಹಾಗೂ ಅವರ ಮೇರೆಗಳ ಮರಗಳು ಮುರಿದು ಬಿದ್ದವು.
אמר ויבא ארבה וילק ואין מספר׃ | 34 |
ದೇವರು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದ ಕಂಬಳಿ ಹುಳುಗಳೂ ಬಂದವು.
ויאכל כל עשב בארצם ויאכל פרי אדמתם׃ | 35 |
ಅವು ಈಜಿಪ್ಟ್ ದೇಶದಲ್ಲಿ ಎಲ್ಲಾ ಸಸ್ಯಗಳನ್ನು ತಿಂದುಬಿಟ್ಟವು; ಅವರ ಭೂಮಿಯ ಫಲಗಳನ್ನು ಸಹ ತಿಂದುಬಿಟ್ಟವು.
ויך כל בכור בארצם ראשית לכל אונם׃ | 36 |
ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲ ಮಕ್ಕಳೂ ಅವರ ಎಲ್ಲಾ ಪ್ರಮುಖರೂ ದೇವರ ಬಾಧೆಗೆ ಒಳಗಾದರು.
ויוציאם בכסף וזהב ואין בשבטיו כושל׃ | 37 |
ದೇವರು ಬೆಳ್ಳಿ ಬಂಗಾರಗಳ ಸಂಗಡ ಇಸ್ರಾಯೇಲರನ್ನು ಹೊರಗೆ ಬರಮಾಡಿದರು. ಅವರ ಗೋತ್ರಗಳಲ್ಲಿ ಬಲಹೀನನಾದ ಒಬ್ಬನೂ ಇರಲಿಲ್ಲ.
שמח מצרים בצאתם כי נפל פחדם עליהם׃ | 38 |
ಅವರೆಲ್ಲರೂ ಹೊರಗೆ ಹೋಗುವಾಗ ಈಜಿಪ್ಟ್ ದೇಶವು ಸಂತೋಷಿಸಿತು; ಏಕೆಂದರೆ ಈಜಿಪ್ಟಿನವರಿಗೆ ಅವರನ್ನು ಕುರಿತು ಹೆದರಿಕೆ ಇತ್ತು.
פרש ענן למסך ואש להאיר לילה׃ | 39 |
ದೇವರು ಇಸ್ರಾಯೇಲರ ನೆರಳಿಗೋಸ್ಕರ ಮೇಘವನ್ನೂ, ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ಏರ್ಪಡಿಸಿದರು.
שאל ויבא שלו ולחם שמים ישביעם׃ | 40 |
ಅವರು ಕೇಳಿದಾಗ ದೇವರು ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ಆಹಾರದಿಂದ ಅವರನ್ನು ತೃಪ್ತಿಪಡಿಸಿದರು.
פתח צור ויזובו מים הלכו בציות נהר׃ | 41 |
ದೇವರು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಮರುಭೂಮಿಯಲ್ಲಿ ನದಿಯಾಗಿ ಹರಿಯಿತು.
כי זכר את דבר קדשו את אברהם עבדו׃ | 42 |
ಹೀಗೆ ದೇವರು ತಮ್ಮ ಪರಿಶುದ್ಧ ವಾಗ್ದಾನವನ್ನೂ, ತಮ್ಮ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕಮಾಡಿಕೊಂಡರು.
ויוצא עמו בששון ברנה את בחיריו׃ | 43 |
ದೇವರು ತಮ್ಮ ಜನರನ್ನು ಆನಂದದಿಂದಲೂ, ತಾವು ಆಯ್ದುಕೊಂಡವರನ್ನು ಉತ್ಸಾಹದಿಂದಲೂ ಹೊರತಂದರು.
ויתן להם ארצות גוים ועמל לאמים יירשו׃ | 44 |
ದೇವರು ಜನಾಂಗಗಳ ದೇಶಗಳನ್ನು ಅವರಿಗೆ ಕೊಟ್ಟರು. ಇಸ್ರಾಯೇಲರು ಇತರರ ಕಷ್ಟಾರ್ಜಿತವನ್ನು ತಮಗಾಗಿ ಸ್ವಾಧೀನಮಾಡಿಕೊಂಡರು.
בעבור ישמרו חקיו ותורתיו ינצרו הללו יה׃ | 45 |
ದೇವರ ಸೂತ್ರಗಳನ್ನು ಕೈಗೊಂಡು, ಅವರ ನಿಯಮಗಳನ್ನು ಇಸ್ರಾಯೇಲರು ಕಾಯಬೇಕೆಂಬ ಉದ್ದೇಶದಿಂದಲೇ ಹೀಗೆಲ್ಲಾ ಆಯಿತು. ಯೆಹೋವ ದೇವರನ್ನು ಸ್ತುತಿಸಿರಿ.