< תהילים 112 >
הללו יה אשרי איש ירא את יהוה במצותיו חפץ מאד׃ | 1 |
ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಭಯಪಟ್ಟು ಅವರ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವವರು ಧನ್ಯರು.
גבור בארץ יהיה זרעו דור ישרים יברך׃ | 2 |
ಅವರ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿಯಾಗಿರುವುದು; ಯಥಾರ್ಥರ ಸಂತತಿಯು ಆಶೀರ್ವಾದ ಹೊಂದುವುದು.
הון ועשר בביתו וצדקתו עמדת לעד׃ | 3 |
ಧನವೂ, ಐಶ್ವರ್ಯವೂ ಅವರ ಮನೆಯಲ್ಲಿ ಇರುವುದು; ಅವರ ನೀತಿಯು ಶಾಶ್ವತವಾಗಿ ಉಳಿಯುವುದು.
זרח בחשך אור לישרים חנון ורחום וצדיק׃ | 4 |
ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಮೂಡುವುದು; ಅವರು ಕೃಪೆಯೂ, ಅನುಕಂಪವೂ, ನೀತಿಯೂ ಉಳ್ಳವವರಾಗಿರುವರು.
טוב איש חונן ומלוה יכלכל דבריו במשפט׃ | 5 |
ದಯೆತೋರಿಸಿ ಸಾಲಕೊಡುವವರಿಗೆ, ಒಳ್ಳೆಯದಾಗುವುದು; ಅವರು ತಮ್ಮ ಕಾರ್ಯಗಳನ್ನು ನ್ಯಾಯದಿಂದ ನಡೆಸುವರು.
כי לעולם לא ימוט לזכר עולם יהיה צדיק׃ | 6 |
ನಿಶ್ಚಯವಾಗಿ ನೀತಿವಂತರು ಎಂದೆಂದಿಗೂ ಕದಲರು; ನೀತಿವಂತರು ನಿತ್ಯವಾಗಿ ಜ್ಞಾಪಕದಲ್ಲಿ ಇರುವರು.
משמועה רעה לא יירא נכון לבו בטח ביהוה׃ | 7 |
ಅವರಿಗೆ ಅಶುಭದ ಸುದ್ದಿಯ ಭಯ ಇರುವುದಿಲ್ಲ; ಅವರ ಹೃದಯವು ಯೆಹೋವ ದೇವರಲ್ಲಿ ಭರವಸವಿಟ್ಟು ಸ್ಥಿರವಾಗಿರುವುದು.
סמוך לבו לא יירא עד אשר יראה בצריו׃ | 8 |
ಅವರ ಹೃದಯವು ಸುರಕ್ಷಿತವಾಗಿರುವುದು. ಅವರು ತಮ್ಮ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವರು, ಭಯಪಡರು.
פזר נתן לאביונים צדקתו עמדת לעד קרנו תרום בכבוד׃ | 9 |
ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.
רשע יראה וכעס שניו יחרק ונמס תאות רשעים תאבד׃ | 10 |
ದುಷ್ಟರು ಇದನ್ನು ಕಂಡು ವ್ಯಥೆ ಪಡುವರು; ಅವರು ತಮ್ಮ ಹಲ್ಲು ಕಡಿದು ಮರೆಯಾಗಿ ಹೋಗುವರು; ದುಷ್ಟರ ಆಶೆಯು ನಾಶವಾಗುವುದು.