< תהילים 119 >
אשרי תמימי דרך ההלכים בתורת יהוה׃ | 1 |
ಯೆಹೋವ ದೇವರ ನಿಯಮಕ್ಕೆ ಅನುಸಾರವಾಗಿದ್ದು, ದೋಷರಹಿತ ಮಾರ್ಗದಲ್ಲಿ ನಡೆದುಕೊಳ್ಳುವವರೂ ಧನ್ಯರು.
אשרי נצרי עדתיו בכל לב ידרשוהו׃ | 2 |
ಸಂಪೂರ್ಣ ಹೃದಯದಿಂದ ದೇವರನ್ನು ಹುಡುಕುತ್ತಾ ಅವರ ಶಾಸನಗಳನ್ನು ಕೈಗೊಳ್ಳುವವರೂ ಧನ್ಯರು
אף לא פעלו עולה בדרכיו הלכו׃ | 3 |
ಅಂಥವರು ಅನ್ಯಾಯವನ್ನು ಮಾಡದೆ, ದೇವರ ಮಾರ್ಗಗಳಲ್ಲಿ ನಡೆದುಕೊಳ್ಳುವರು.
אתה צויתה פקדיך לשמר מאד׃ | 4 |
ದೇವರೇ, ನಿಮ್ಮ ಸೂತ್ರಗಳನ್ನು ಪೂರ್ಣವಾಗಿ ಕೈಗೊಳ್ಳಬೇಕೆಂದು ನೀವು ಆಜ್ಞಾಪಿಸಿದ್ದೀರಿ.
אחלי יכנו דרכי לשמר חקיך׃ | 5 |
ನಿಮ್ಮ ತೀರ್ಪುಗಳನ್ನು ಪಾಲಿಸುವುದರಲ್ಲಿ ನನ್ನ ಮಾರ್ಗಗಳು ಸ್ಥಿರವಾಗಿರಲಿ!
אז לא אבוש בהביטי אל כל מצותיך׃ | 6 |
ನಿಮ್ಮ ಎಲ್ಲಾ ಅಪ್ಪಣೆಗಳನ್ನು ಪರಿಗಣಿಸುವಾಗ ನಾನು ನಾಚಿಕೆಗೆ ಗುರಿಯಾಗುವುದಿಲ್ಲ.
אודך בישר לבב בלמדי משפטי צדקך׃ | 7 |
ನಾನು ನಿಮ್ಮ ನೀತಿಯುಳ್ಳ ನಿಯಮಗಳನ್ನು ಕಲಿಯುತ್ತಿರುವಾಗೆಲ್ಲಾ, ಯಥಾರ್ಥ ಹೃದಯದಿಂದ ನಿಮ್ಮನ್ನು ಕೊಂಡಾಡುವೆನು.
את חקיך אשמר אל תעזבני עד מאד׃ | 8 |
ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು; ನನ್ನನ್ನು ಸಂಪೂರ್ಣವಾಗಿ ಕೈಬಿಡಬೇಡಿರಿ.
במה יזכה נער את ארחו לשמר כדברך׃ | 9 |
ಯೌವನಸ್ಥನು ಯಾವುದರಿಂದ ತನ್ನ ನಡತೆಯನ್ನು ಶುದ್ಧವಾಗಿಟ್ಟುಕೊಳ್ಳುವನು? ನಿಮ್ಮ ವಾಕ್ಯದ ಪ್ರಕಾರ ಜೀವಿಸುವುದರಿಂದಲೇ.
בכל לבי דרשתיך אל תשגני ממצותיך׃ | 10 |
ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಹುಡುಕಿದ್ದೇನೆ; ನಿಮ್ಮ ಆಜ್ಞೆಗಳಿಂದ ನಾನು ತಪ್ಪಿಹೋಗದಂತೆ ಮಾಡಿರಿ.
בלבי צפנתי אמרתך למען לא אחטא לך׃ | 11 |
ನಿಮಗೆ ವಿರೋಧವಾಗಿ ಪಾಪಮಾಡದ ಹಾಗೆ ನನ್ನ ಹೃದಯದಲ್ಲಿ ನಿಮ್ಮ ವಾಕ್ಯವನ್ನು ಬಚ್ಚಿಟ್ಟುಕೊಂಡಿದ್ದೇನೆ.
ברוך אתה יהוה למדני חקיך׃ | 12 |
ಯೆಹೋವ ದೇವರೇ, ನಿಮಗೆ ಸ್ತುತಿಯುಂಟಾಗಲಿ; ನಿಮ್ಮ ತೀರ್ಪುಗಳನ್ನು ನನಗೆ ಕಲಿಸಿಕೊಡಿರಿ.
בשפתי ספרתי כל משפטי פיך׃ | 13 |
ನಿಮ್ಮ ಬಾಯಿಂದ ಬರುವ ನಿಯಮಗಳನ್ನೆಲ್ಲಾ ನನ್ನ ತುಟಿಗಳಿಂದ ನಾನು ವರ್ಣಿಸಿದ್ದೇನೆ.
בדרך עדותיך ששתי כעל כל הון׃ | 14 |
ಮಹಾ ಸಂಪತ್ತಿನಲ್ಲಿ ಒಬ್ಬ ವ್ಯಕ್ತಿ ಆನಂದಿಸುವ ಹಾಗೆ ನಾನು ನಿಮ್ಮ ಶಾಸನಗಳನ್ನು ಅನುಸರಿಸುವುದರಲ್ಲಿ ಆನಂದಿಸುವೆನು.
בפקדיך אשיחה ואביטה ארחתיך׃ | 15 |
ನಿಮ್ಮ ಸೂತ್ರಗಳನ್ನು ಧ್ಯಾನಮಾಡಿ, ನಿಮ್ಮ ಮಾರ್ಗಗಳನ್ನು ದೃಷ್ಟಿಸುವೆನು.
בחקתיך אשתעשע לא אשכח דברך׃ | 16 |
ನಿಮ್ಮ ತೀರ್ಪುಗಳಲ್ಲಿ ಉಲ್ಲಾಸಗೊಂಡು, ನಿಮ್ಮ ವಾಕ್ಯವನ್ನು ತಿರಸ್ಕರಿಸದಿರುವೆನು.
גמל על עבדך אחיה ואשמרה דברך׃ | 17 |
ನಾನು ಜೀವದಿಂದಿದ್ದು ನಿಮ್ಮ ವಾಕ್ಯವನ್ನು ಕೈಗೊಳ್ಳುವಂತೆ ನಿಮ್ಮ ಸೇವಕನ ಮೇಲೆ ದಯೆಯಿಡಿರಿ.
גל עיני ואביטה נפלאות מתורתך׃ | 18 |
ನಿಮ್ಮ ನಿಯಮದೊಳಗಿನ ಅದ್ಭುತಗಳನ್ನು ಕಾಣುವಂತೆ ನನ್ನ ಕಣ್ಣುಗಳನ್ನು ತೆರೆಯಿರಿ.
גר אנכי בארץ אל תסתר ממני מצותיך׃ | 19 |
ಈ ಭೂಮಿಯಲ್ಲಿ ನಾನೊಬ್ಬ ಪ್ರವಾಸಿಯಾಗಿದ್ದೇನೆ; ನಿಮ್ಮ ಆಜ್ಞೆಗಳನ್ನು ನನಗೆ ಮರೆಮಾಡಬೇಡಿರಿ.
גרסה נפשי לתאבה אל משפטיך בכל עת׃ | 20 |
ನಿಮ್ಮ ನಿಯಮಗಳನ್ನು ಯಾವಾಗಲೂ ಹಂಬಲಿಸುತ್ತಿರುವುದರಿಂದ, ನನ್ನ ಪ್ರಾಣವು ಕರಗಿಹೋಗುತ್ತಿದೆ.
גערת זדים ארורים השגים ממצותיך׃ | 21 |
ನಿಮ್ಮ ಆಜ್ಞೆಗಳನ್ನು ಅನುಸರಿಸದೆ ತಪ್ಪಿಹೋಗುವ ಶಾಪಗ್ರಸ್ತರಾದ ಗರ್ವಿಷ್ಠರನ್ನು ನೀವು ಗದರಿಸುತ್ತೀರಿ.
גל מעלי חרפה ובוז כי עדתיך נצרתי׃ | 22 |
ನಾನು ನಿಮ್ಮ ಶಾಸನಗಳನ್ನು ಕೈಗೊಂಡ ಕಾರಣ, ಗರ್ವಿಷ್ಠರ ನಿಂದೆಯನ್ನೂ, ತಿರಸ್ಕಾರವನ್ನೂ ನನ್ನಿಂದ ತೊಲಗಿಸಿರಿ.
גם ישבו שרים בי נדברו עבדך ישיח בחקיך׃ | 23 |
ಅಧಿಕಾರಿಗಳು ನನಗೆ ವಿರೋಧವಾಗಿ ಕುಳಿತುಕೊಂಡು ಮಾತನಾಡಿಕೊಂಡರೂ, ನಿಮ್ಮ ಸೇವಕನು ನಿಮ್ಮ ತೀರ್ಪುಗಳನ್ನೇ ಧ್ಯಾನಿಸುತ್ತಿರುವೆನು.
גם עדתיך שעשעי אנשי עצתי׃ | 24 |
ನಿಮ್ಮ ಶಾಸನಗಳು ನನಗೆ ಉಲ್ಲಾಸಕರವಾಗಿವೆ; ಅವೇ ನನ್ನ ಸಮಾಲೋಚಕರು.
דבקה לעפר נפשי חיני כדברך׃ | 25 |
ನಾನು ಧೂಳಿನಲ್ಲಿ ಬಿದ್ದಿದ್ದೇನೆ; ನಿಮ್ಮ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀವಿಸಿರಿ.
דרכי ספרתי ותענני למדני חקיך׃ | 26 |
ನಾನು ನನ್ನ ಮಾರ್ಗಗಳನ್ನು ಲೆಕ್ಕ ಒಪ್ಪಿಸಲು, ನೀವು ನನಗೆ ಸದುತ್ತರವನ್ನು ಕೊಟ್ಟಿರುವಿರಿ; ನಿಮ್ಮ ತೀರ್ಪುಗಳನ್ನು ನನಗೆ ಕಲಿಸಿಕೊಡಿರಿ.
דרך פקודיך הבינני ואשיחה בנפלאותיך׃ | 27 |
ನಿಮ್ಮ ಸೂತ್ರಗಳ ಮಾರ್ಗವನ್ನು ನಾನು ಅರ್ಥಮಾಡಿಕೊಳ್ಳಲು ಸಹಾಯಿಸಿರಿ, ಆಗ ನಿಮ್ಮ ಅದ್ಭುತಕಾರ್ಯಗಳನ್ನು ಧ್ಯಾನ ಮಾಡುವೆನು.
דלפה נפשי מתוגה קימני כדברך׃ | 28 |
ನನ್ನ ಪ್ರಾಣವು ದುಃಖದಿಂದ ಬಲಹೀನವಾಗಿದೆ; ನಿಮ್ಮ ವಾಕ್ಯದಿಂದ ನನ್ನನ್ನು ಬಲಪಡಿಸಿರಿ.
דרך שקר הסר ממני ותורתך חנני׃ | 29 |
ವಂಚನೆಯುಳ್ಳ ಮಾರ್ಗದಿಂದ ನನ್ನನ್ನು ಕಾಪಾಡಿರಿ; ನನಗೆ ಕೃಪೆ ನೀಡಿ ನಿಮ್ಮ ನಿಯಮವನ್ನು ನನಗೆ ಬೋಧನೆ ಮಾಡಿರಿ.
דרך אמונה בחרתי משפטיך שויתי׃ | 30 |
ನಂಬಿಗಸ್ತಿಕೆಯ ಮಾರ್ಗವನ್ನು ಆರಿಸಿಕೊಂಡಿದ್ದೇನೆ; ನಾನು ನಿಮ್ಮ ನಿಯಮಗಳ ಮೇಲೆ ನನ್ನ ಹೃದಯವನ್ನಿಟ್ಟುಕೊಂಡಿದ್ದೇನೆ.
דבקתי בעדותיך יהוה אל תבישני׃ | 31 |
ಯೆಹೋವ ದೇವರೇ, ನಾನು ನಿಮ್ಮ ಶಾಸನಗಳನ್ನು ಬಿಗಿಯಾಗಿಟ್ಟುಕೊಂಡಿದ್ದೇನೆ; ನನ್ನನ್ನು ನಾಚಿಕೆಗೆ ಗುರಿಪಡಿಸಬೇಡಿರಿ.
דרך מצותיך ארוץ כי תרחיב לבי׃ | 32 |
ನಿಮ್ಮ ಆಜ್ಞೆಗಳ ಮಾರ್ಗದಲ್ಲಿ ಓಡುವೆನು, ಏಕೆಂದರೆ ನೀವು ನನ್ನ ವಿವೇಕವನ್ನು ವಿಸ್ತಾರ ಮಾಡಿದ್ದೀರಿ.
הורני יהוה דרך חקיך ואצרנה עקב׃ | 33 |
ಯೆಹೋವ ದೇವರೇ, ನಿಮ್ಮ ತೀರ್ಪುಗಳ ವಿವರವನ್ನು ನನಗೆ ಬೋಧಿಸಿರಿ; ಆಗ ನಾನು ಅವುಗಳನ್ನು ಅಂತ್ಯದವರೆಗೂ ಹಿಂಬಾಲಿಸುವೆನು.
הבינני ואצרה תורתך ואשמרנה בכל לב׃ | 34 |
ನಿಮ್ಮ ನಿಯಮವನ್ನು ಹಿಂಬಾಲಿಸಿ, ಅದನ್ನು ಪೂರ್ಣಹೃದಯದಿಂದ ಕೈಕೊಳ್ಳಲು ನನಗೆ ವಿವೇಚನೆಯನ್ನು ನೀಡಿರಿ.
הדריכני בנתיב מצותיך כי בו חפצתי׃ | 35 |
ನಿಮ್ಮ ಆಜ್ಞೆಗಳ ಮಾರ್ಗದಲ್ಲಿ ನನ್ನನ್ನು ನಡೆಸಿರಿ, ಏಕೆಂದರೆ ನಾನು ಅದರಲ್ಲಿ ಆನಂದಿಸುತ್ತೇನೆ.
הט לבי אל עדותיך ואל אל בצע׃ | 36 |
ಸ್ವಾರ್ಥದ ಲಾಭಗಳ ಕಡೆಗಲ್ಲ, ಆದರೆ ನಿಮ್ಮ ಶಾಸನಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸಿರಿ.
העבר עיני מראות שוא בדרכך חיני׃ | 37 |
ವ್ಯರ್ಥವಾದವುಗಳಿಂದ ನನ್ನ ಕಣ್ಣುಗಳನ್ನು ತಿರುಗಿಸಿ, ನಿಮ್ಮ ವಾಕ್ಯದ ಅನುಸಾರವಾಗಿ ನನ್ನ ಜೀವವನ್ನು ಕಾಪಾಡಿರಿ.
הקם לעבדך אמרתך אשר ליראתך׃ | 38 |
ನಿಮಗೆ ಭಯಪಡುವವರಿಗಾಗಿ ನೀಡುವ ವಾಗ್ದಾನವನ್ನು ನಿಮ್ಮ ಸೇವಕನಿಗೆ ನೆರವೇರಿಸಿರಿ.
העבר חרפתי אשר יגרתי כי משפטיך טובים׃ | 39 |
ನಾನು ಭಯಪಡುವ ನನ್ನ ನಿಂದೆಯನ್ನು ನನ್ನಿಂದ ತೊಲಗಿಸಿರಿ, ಏಕೆಂದರೆ ನಿಮ್ಮ ನಿಯಮಗಳು ಒಳ್ಳೆಯವುಗಳೇ.
הנה תאבתי לפקדיך בצדקתך חיני׃ | 40 |
ಇಗೋ ನಿಮ್ಮ ಸೂತ್ರಗಳಿಗಾಗಿ ನಾನು ಎಷ್ಟೋ ಹಂಬಲಿಸುತ್ತೇನೆ! ನಿಮ್ಮ ನೀತಿಗನುಸಾರವಾಗಿ ನನ್ನ ಜೀವವನ್ನು ಕಾಪಾಡಿರಿ.
ויבאני חסדך יהוה תשועתך כאמרתך׃ | 41 |
ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ದೊರಕಲಿ, ನಿಮ್ಮ ವಾಗ್ದಾನದ ರಕ್ಷಣೆಯು ನನಗೆ ಉಂಟಾಗಲಿ;
ואענה חרפי דבר כי בטחתי בדברך׃ | 42 |
ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು, ಏಕೆಂದರೆ ನಾನು ನಿಮ್ಮ ವಾಕ್ಯದಲ್ಲಿ ಭರವಸೆಯಿಟ್ಟಿದ್ದೇನೆ.
ואל תצל מפי דבר אמת עד מאד כי למשפטך יחלתי׃ | 43 |
ಸತ್ಯವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡಿರಿ, ಏಕೆಂದರೆ ನಿಮ್ಮ ನಿಯಮಗಳಲ್ಲಿ ನಾನು ನನ್ನ ನಿರೀಕ್ಷೆಯನ್ನಿಟ್ಟಿದ್ದೇನೆ.
ואשמרה תורתך תמיד לעולם ועד׃ | 44 |
ನಾನು ನಿಮ್ಮ ನಿಯಮವನ್ನು ಯಾವಾಗಲೂ ಮತ್ತು ಎಂದೆಂದಿಗೂ ಪಾಲಿಸುವೆನು.
ואתהלכה ברחבה כי פקדיך דרשתי׃ | 45 |
ನಿಮ್ಮ ಸೂತ್ರಗಳನ್ನು ನಾನು ಹುಡುಕುವುದರಿಂದ, ನಾನು ಸ್ವತಂತ್ರವಾಗಿಯೇ ಜೀವಿಸುವೆನು.
ואדברה בעדתיך נגד מלכים ולא אבוש׃ | 46 |
ಅರಸರ ಮುಂದೆ ನಿಮ್ಮ ಶಾಸನಗಳನ್ನು ಮಾತಾಡುವೆನು, ಅವುಗಳ ಬಗ್ಗೆ ನಾನೆಂದೂ ನಾಚಿಕೆಪಡುವುದಿಲ್ಲ.
ואשתעשע במצותיך אשר אהבתי׃ | 47 |
ನಿಮ್ಮ ಆಜ್ಞೆಗಳನ್ನು ನಾನು ಪ್ರೀತಿಸುವುದರಿಂದ, ನಾನು ಅವುಗಳಲ್ಲಿ ಆನಂದಿಸುವೆನು.
ואשא כפי אל מצותיך אשר אהבתי ואשיחה בחקיך׃ | 48 |
ನಾನು ಪ್ರೀತಿಸುವ ನಿಮ್ಮ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿಮ್ಮ ತೀರ್ಪುಗಳನ್ನು ಧ್ಯಾನ ಮಾಡುವೆನು.
זכר דבר לעבדך על אשר יחלתני׃ | 49 |
ನಿಮ್ಮ ಸೇವಕನಿಗೋಸ್ಕರ ನಿಮ್ಮ ವಾಕ್ಯವನ್ನು ನೀವು ಜ್ಞಾಪಕಮಾಡಿಕೊಳ್ಳಿರಿ, ಏಕೆಂದರೆ ನೀವು ನನಗೆ ನಿರೀಕ್ಷೆಯನ್ನು ಕೊಟ್ಟಿದ್ದೀರಿ.
זאת נחמתי בעניי כי אמרתך חיתני׃ | 50 |
ನಿಮ್ಮ ವಾಗ್ದಾನವು ನನ್ನ ಜೀವದ ಸಂರಕ್ಷಣೆಯಾಗಿದೆ. ಅವು ನನ್ನ ಸಂಕಷ್ಟಗಳಲ್ಲಿ ಆದರಣೆಯಾಗಿವೆ.
זדים הליצני עד מאד מתורתך לא נטיתי׃ | 51 |
ಅಹಂಕಾರಿಗಳು ನನ್ನನ್ನು ಕರುಣಿಸದೆ ಹಾಸ್ಯ ಮಾಡಿದರೂ, ನಾನು ನಿಮ್ಮ ನಿಯಮದಿಂದ ತೊಲಗುವುದಿಲ್ಲ.
זכרתי משפטיך מעולם יהוה ואתנחם׃ | 52 |
ಯೆಹೋವ ದೇವರೇ, ನಿಮ್ಮ ಪುರಾತನ ನಿಯಮಗಳನ್ನು ನಾನು ನೆನಪು ಮಾಡಿಕೊಂಡು, ಅವುಗಳಲ್ಲಿ ಆದರಣೆಯನ್ನು ಪಡೆದುಕೊಂಡಿದ್ದೇನೆ.
זלעפה אחזתני מרשעים עזבי תורתך׃ | 53 |
ನಿಮ್ಮ ನಿಯಮವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ, ರೋಷವು ನನ್ನನ್ನು ಆವರಿಸಿಕೊಂಡಿದೆ.
זמרות היו לי חקיך בבית מגורי׃ | 54 |
ನನ್ನ ಪ್ರವಾಸದ ಮನೆಯಲ್ಲಿ ನಿಮ್ಮ ತೀರ್ಪುಗಳು ನನಗೆ ಗಾನ ವಿಷಯವಾಗಿದೆ.
זכרתי בלילה שמך יהוה ואשמרה תורתך׃ | 55 |
ಯೆಹೋವ ದೇವರೇ, ರಾತ್ರಿಯಲ್ಲಿ ನಿಮ್ಮ ನಾಮಸ್ಮರಣೆ ಮಾಡುವುದರಿಂದ, ನಿಮ್ಮ ನಿಯಮವನ್ನು ಕೈಕೊಳ್ಳುತ್ತೇನೆ.
זאת היתה לי כי פקדיך נצרתי׃ | 56 |
ನಾನು ನಿಮ್ಮ ಸೂತ್ರಗಳನ್ನು ಕೈಗೊಂಡಿದ್ದೇನೆ: ಇದೇ ನನ್ನ ಜೀವನದ ಶೈಲಿಯಾಗಿದೆ.
חלקי יהוה אמרתי לשמר דבריך׃ | 57 |
ಯೆಹೋವ ದೇವರೇ, ನೀವೇ ನನ್ನ ಪಾಲು; ನಿಮ್ಮ ವಾಕ್ಯಗಳನ್ನು ಪಾಲಿಸುವೆನೆಂದು ನಾನು ಪ್ರಮಾಣ ಮಾಡಿದ್ದೇನೆ.
חליתי פניך בכל לב חנני כאמרתך׃ | 58 |
ಪೂರ್ಣಹೃದಯದಿಂದ ನಾನು ನಿಮ್ಮ ಮುಖವನ್ನು ಹುಡುಕಿದ್ದೇನೆ; ನಿಮ್ಮ ವಾಕ್ಯದ ಪ್ರಕಾರ ನನ್ನನ್ನು ಕರುಣಿಸಿರಿ.
חשבתי דרכי ואשיבה רגלי אל עדתיך׃ | 59 |
ನಾನು ನನ್ನ ನಡತೆಯನ್ನು ಪರಿಶೋಧಿಸುತ್ತಾ ನನ್ನ ಹೆಜ್ಜೆಗಳನ್ನು ನಿಮ್ಮ ಶಾಸನಗಳ ಕಡೆಗೆ ತಿರುಗಿಸಿದ್ದೇನೆ.
חשתי ולא התמהמהתי לשמר מצותיך׃ | 60 |
ನಿಮ್ಮ ಆಜ್ಞೆಗಳನ್ನು ಪಾಲಿಸಲು ನಾನು ತಡಮಾಡದೆ ತ್ವರೆಪಟ್ಟಿದ್ದೇನೆ.
חבלי רשעים עודני תורתך לא שכחתי׃ | 61 |
ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡಿದ್ದರೂ, ನಿಮ್ಮ ನಿಯಮವನ್ನು ನಾನು ಮರೆಯಲಿಲ್ಲ.
חצות לילה אקום להודות לך על משפטי צדקך׃ | 62 |
ನಿಮ್ಮ ನೀತಿಯುಳ್ಳ ನಿಯಮಗಳಿಗಾಗಿ ನಿಮಗೆ ಕೃತಜ್ಞತೆ ಸಲ್ಲಿಸಲು ಮಧ್ಯರಾತ್ರಿಯಲ್ಲಿ ಏಳುವೆನು.
חבר אני לכל אשר יראוך ולשמרי פקודיך׃ | 63 |
ನಿಮಗೆ ಭಯಪಡುವವರೆಲ್ಲರಿಗೂ, ನಿಮ್ಮ ಸೂತ್ರಗಳನ್ನು ಹಿಂಬಾಲಿಸುವವರಿಗೂ ನಾನು ಮಿತ್ರನಾಗಿದ್ದೇನೆ.
חסדך יהוה מלאה הארץ חקיך למדני׃ | 64 |
ಯೆಹೋವ ದೇವರೇ, ಭೂಮಿಯು ನಿಮ್ಮ ಪ್ರೀತಿಯಿಂದ ತುಂಬಿದೆ; ನಿಮ್ಮ ತೀರ್ಪುಗಳನ್ನು ನನಗೆ ಬೋಧಿಸಿರಿ.
טוב עשית עם עבדך יהוה כדברך׃ | 65 |
ಯೆಹೋವ ದೇವರೇ, ನಿಮ್ಮ ವಾಕ್ಯದ ಪ್ರಕಾರ ನಿಮ್ಮ ಸೇವಕನಿಗೆ ಒಳ್ಳೆಯದನ್ನು ಮಾಡಿರಿ.
טוב טעם ודעת למדני כי במצותיך האמנתי׃ | 66 |
ತಿಳುವಳಿಕೆಯನ್ನೂ ಒಳ್ಳೆಯ ವಿವೇಚನೆಯನ್ನೂ, ನನಗೆ ಕಲಿಸಿರಿ, ಏಕೆಂದರೆ ನಿಮ್ಮ ಆಜ್ಞೆಗಳಲ್ಲಿ ಭರವಸೆ ಇಟ್ಟಿದ್ದೇನೆ.
טרם אענה אני שגג ועתה אמרתך שמרתי׃ | 67 |
ನಾನು ಬಾಧೆಪಡುವುದಕ್ಕಿಂತ ಮುಂಚೆ ದಾರಿತಪ್ಪಿಹೋಗುತ್ತಿದ್ದೆನು, ಆದರೆ ಈಗ ನಿಮ್ಮ ವಾಕ್ಯವನ್ನು ಪಾಲಿಸುತ್ತಿದ್ದೇನೆ.
טוב אתה ומטיב למדני חקיך׃ | 68 |
ನೀವು ಒಳ್ಳೆಯವರೂ, ಒಳ್ಳೆಯದನ್ನು ಮಾಡುವವರೂ ಆಗಿದ್ದೀರಿ; ನಿಮ್ಮ ತೀರ್ಪುಗಳನ್ನು ನನಗೆ ಕಲಿಸಿರಿ.
טפלו עלי שקר זדים אני בכל לב אצר פקודיך׃ | 69 |
ಅಹಂಕಾರಿಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು, ನಾನಾದರೋ ಪೂರ್ಣಹೃದಯದಿಂದ ನಿಮ್ಮ ಸೂತ್ರಗಳನ್ನು ಕೈಗೊಳ್ಳುವೆನು.
טפש כחלב לבם אני תורתך שעשעתי׃ | 70 |
ಅವರ ಹೃದಯವು ಕಠಿಣವೂ ಮಂದವೂ ಆಗಿದೆ, ನಾನಾದರೋ ನಿಮ್ಮ ನಿಯಮದಲ್ಲಿ ಆನಂದಪಡುತ್ತೇನೆ.
טוב לי כי עניתי למען אלמד חקיך׃ | 71 |
ನಾನು ಶ್ರಮೆಪಟ್ಟದ್ದು ನನಗೆ ಒಳ್ಳೆಯದಾಯಿತು ಅದರಿಂದ ನಿಮ್ಮ ತೀರ್ಪುಗಳನ್ನು ಕಲಿತೆನು.
טוב לי תורת פיך מאלפי זהב וכסף׃ | 72 |
ಸಾವಿರಾರು ಬೆಳ್ಳಿಬಂಗಾರ ನಾಣ್ಯಗಳಿಗಿಂತಲೂ ನಿಮ್ಮ ಬಾಯಿಯ ನಿಯಮವು ನನಗೆ ಹೆಚ್ಚು ಅಮೂಲ್ಯವಾದದ್ದಾಗಿದೆ.
ידיך עשוני ויכוננוני הבינני ואלמדה מצותיך׃ | 73 |
ನಿಮ್ಮ ಕೈಗಳು ನನ್ನನ್ನು ನಿರ್ಮಿಸಿ ರೂಪಿಸಿದವು; ನಿಮ್ಮ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ಅರಿವನ್ನು ನೀಡಿರಿ.
יראיך יראוני וישמחו כי לדברך יחלתי׃ | 74 |
ನಿಮಗೆ ಭಯಪಡುವವರು ನನ್ನನ್ನು ನೋಡಿ ಆನಂದಿಸಲಿ, ಏಕೆಂದರೆ ನಾನು ನಿಮ್ಮ ವಾಕ್ಯದಲ್ಲಿ ನಿರೀಕ್ಷಿಸಿಕೊಂಡಿದ್ದೇನೆ.
ידעתי יהוה כי צדק משפטיך ואמונה עניתני׃ | 75 |
ಯೆಹೋವ ದೇವರೇ, ನಿಮ್ಮ ನಿಯಮಗಳು ನೀತಿಯುಳ್ಳವುಗಳು; ನಿಮ್ಮ ನಂಬಿಗಸ್ತಿಕೆಯಿಂದಲೇ ನೀವು ನನ್ನನ್ನು ಕಷ್ಟಪಡಿಸಿದ್ದೀರಿ ಎಂದು ನನಗೆ ಗೊತ್ತಿದೆ.
יהי נא חסדך לנחמני כאמרתך לעבדך׃ | 76 |
ನೀವು ನಿಮ್ಮ ಸೇವಕನಿಗೆ ನೀಡಿದ ವಾಗ್ದಾನದ ಪ್ರಕಾರ, ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ಆದರಣೆಯಾಗಿರಲಿ.
יבאוני רחמיך ואחיה כי תורתך שעשעי׃ | 77 |
ನಾನು ಜೀವಿಸುವಂತೆ ನಿಮ್ಮ ಅನುಕಂಪವು ನನಗೆ ಬರಲಿ, ಏಕೆಂದರೆ ನಿಮ್ಮ ನಿಯಮವೇ ನನ್ನ ಆನಂದವಾಗಿದೆ.
יבשו זדים כי שקר עותוני אני אשיח בפקודיך׃ | 78 |
ಅಹಂಕಾರಿಗಳು ಕಾರಣವಿಲ್ಲದೆ ನನಗೆ ಕೇಡು ಮಾಡಿದ್ದರಿಂದ ನಾಚಿಕೆಪಡಲಿ; ಆದರೆ ನಾನು ನಿಮ್ಮ ಸೂತ್ರಗಳನ್ನು ಧ್ಯಾನಿಸುತ್ತಿರುವೆನು.
ישובו לי יראיך וידעו עדתיך׃ | 79 |
ನಿಮಗೆ ಭಯಪಡುವವರು ನನ್ನ ಬಳಿಗೆ ಬರಲಿ, ನಿಮ್ಮ ಶಾಸನಗಳನ್ನು ಅರ್ಥಮಾಡಿಕೊಳ್ಳುವವರೂ ನನ್ನ ಬಳಿಗೆ ಬರಲಿ.
יהי לבי תמים בחקיך למען לא אבוש׃ | 80 |
ನಿಷ್ಕಳಂಕ ಹೃದಯದಿಂದ ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು, ಅದರಿಂದ ನಾನು ನಾಚಿಕೆಗೆ ಗುರಿಯಾಗದಿರುವೆನು.
כלתה לתשועתך נפשי לדברך יחלתי׃ | 81 |
ನನ್ನ ಪ್ರಾಣವು ನಿಮ್ಮ ರಕ್ಷಣೆಯ ಬಯಕೆಯಿಂದಲೇ ಕುಗ್ಗಿ ಹೋಗುತ್ತಿದೆ, ಆದರೂ ನಾನು ನಿಮ್ಮ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.
כלו עיני לאמרתך לאמר מתי תנחמני׃ | 82 |
ನನ್ನ ಕಣ್ಣುಗಳು ನಿಮ್ಮ ವಾಗ್ದಾನಕ್ಕಾಗಿ ಕಾಯುತ್ತಾ ಮಂದವಾಗುತ್ತಿವೆ; “ನೀವು ಯಾವಾಗ ನನಗೆ ಆದರಣೆ ನೀಡುವಿರಿ?” ಎಂದು ನಾನು ಕೇಳುತ್ತಿರುವೆನು.
כי הייתי כנאד בקיטור חקיך לא שכחתי׃ | 83 |
ನಾನು ಹೊಗೆಯಲ್ಲಿರುವ ದ್ರಾಕ್ಷಾರಸದ ಚರ್ಮಚೀಲದಂತ್ತಿದ್ದರೂ, ನಿಮ್ಮ ತೀರ್ಪುಗಳನ್ನು ನಾನು ಮರೆಯಲಿಲ್ಲ.
כמה ימי עבדך מתי תעשה ברדפי משפט׃ | 84 |
ಎಷ್ಟು ಕಾಲ ನಿಮ್ಮ ಸೇವಕನು ಕಾಯಬೇಕು? ನನ್ನ ಹಿಂಸಕರಿಗೆ ಯಾವಾಗ ನೀವು ಶಿಕ್ಷಿಸುವಿರಿ?
כרו לי זדים שיחות אשר לא כתורתך׃ | 85 |
ನಿಮ್ಮ ನಿಯಮಕ್ಕೆ ವಿರೋಧವಾಗಿ ಅಹಂಕಾರಿಗಳು ನನಗೆ ಬಲೆಹಿಡಿಯಲು ಕುಣಿಗಳನ್ನು ಅಗೆದಿದ್ದಾರೆ.
כל מצותיך אמונה שקר רדפוני עזרני׃ | 86 |
ನಿಮ್ಮ ಆಜ್ಞೆಗಳೆಲ್ಲಾ ಭರವಸೆಗೆ ಯೋಗ್ಯವಾದವುಗಳೇ; ಕಾರಣವಿಲ್ಲದೆ ಜನರು ನನ್ನನ್ನು ಹಿಂಸಿಸುವುದರಿಂದ ನನಗೆ ಸಹಾಯಮಾಡಿರಿ.
כמעט כלוני בארץ ואני לא עזבתי פקודיך׃ | 87 |
ಅವರು ನನ್ನನ್ನು ಬಹುಮಟ್ಟಿಗೆ ಭೂಮಿಯಿಂದ ಅಳಿಸಿಹಾಕಲು ನೋಡಿದರು, ಆದರೆ ನಾನು ನಿಮ್ಮ ಸೂತ್ರಗಳನ್ನು ತಿರಸ್ಕರಿಸಲಿಲ್ಲ.
כחסדך חיני ואשמרה עדות פיך׃ | 88 |
ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನನ್ನ ಜೀವನವನ್ನು ಪರಿಪಾಲಿಸಿರಿ, ಆಗ ನಿಮ್ಮ ಬಾಯಿಂದ ಹೊರಡುವ ಶಾಸನಗಳನ್ನು ಪಾಲಿಸುವೆನು.
לעולם יהוה דברך נצב בשמים׃ | 89 |
ಯೆಹೋವ ದೇವರೇ, ನಿಮ್ಮ ವಾಕ್ಯವು ಶಾಶ್ವತವಾಗಿದೆ; ಅದು ಪರಲೋಕದಲ್ಲಿ ಸ್ಥಿರವಾಗಿದೆ.
לדר ודר אמונתך כוננת ארץ ותעמד׃ | 90 |
ನಿಮ್ಮ ನಂಬಿಗಸ್ತಿಕೆಯು ಎಲ್ಲಾ ತಲೆಮಾರಿಗೂ ಮುಂದುವರಿಯುವುದು; ನೀವು ಸ್ಥಾಪಿಸಿದ ಭೂಮಿಯು ನೆಲೆಯಾಗಿರುವುದು.
למשפטיך עמדו היום כי הכל עבדיך׃ | 91 |
ನಿಮ್ಮ ನಿಯಮಗಳು ಇಂದಿನವರೆಗೂ ನಿಂತಿರುತ್ತವೆ, ಏಕೆಂದರೆ ಸೃಷ್ಟಿಗಳೆಲ್ಲವೂ ನಿಮ್ಮ ಸೇವೆಯನ್ನು ಮಾಡುತ್ತವೆ.
לולי תורתך שעשעי אז אבדתי בעניי׃ | 92 |
ನಿಮ್ಮ ನಿಯಮವು ನನಗೆ ಆನಂದವಾಗಿರದಿದ್ದರೆ, ನನ್ನ ಕಷ್ಟದಲ್ಲಿ ನಾನು ನಾಶವಾಗುತ್ತಿದ್ದೆನು.
לעולם לא אשכח פקודיך כי בם חייתני׃ | 93 |
ನಿಮ್ಮ ಸೂತ್ರಗಳನ್ನು ನಾನು ಎಂದಿಗೂ ಮರೆಯುವುದಿಲ್ಲ, ಏಕೆಂದರೆ ಅವುಗಳಿಂದ ನನ್ನ ಜೀವವನ್ನು ಪರಿಪಾಲಿಸಿದ್ದೀರಿ.
לך אני הושיעני כי פקודיך דרשתי׃ | 94 |
ನನ್ನನ್ನು ರಕ್ಷಿಸಿರಿ, ಏಕೆಂದರೆ ನಾನು ನಿಮ್ಮವನೇ; ನಿಮ್ಮ ಸೂತ್ರಗಳನ್ನು ನಾನು ಹುಡುಕಿದ್ದೇನಲ್ಲಾ.
לי קוו רשעים לאבדני עדתיך אתבונן׃ | 95 |
ದುಷ್ಟರು ನನ್ನನ್ನು ನಾಶಮಾಡುವುದಕ್ಕೆ ನನಗಾಗಿ ಕಾಯುತ್ತಿದ್ದಾರೆ, ನಾನಾದರೋ ನಿಮ್ಮ ಶಾಸನಗಳನ್ನು ಆಲೋಚಿಸುತ್ತಿರುವೆನು.
לכל תכלה ראיתי קץ רחבה מצותך מאד׃ | 96 |
ಸರ್ವ ಸಂಪೂರ್ಣತೆಗೂ ಒಂದು ಮಿತಿಯಿರುವುದನ್ನು ನಾನು ನೋಡಿದ್ದೇನೆ; ಆದರೆ ನಿಮ್ಮ ಆಜ್ಞೆಗಳು ಮಿತಿಯಿಲ್ಲದವುಗಳಾಗಿವೆ.
מה אהבתי תורתך כל היום היא שיחתי׃ | 97 |
ನಿಮ್ಮ ನಿಯಮವನ್ನು ನಾನು ಎಷ್ಟೋ ಪ್ರೀತಿಮಾಡುತ್ತೇನೆ! ದಿನವೆಲ್ಲಾ ಅದನ್ನೇ ಧ್ಯಾನಿಸುತ್ತೇನೆ.
מאיבי תחכמני מצותך כי לעולם היא לי׃ | 98 |
ನಿಮ್ಮ ಆಜ್ಞೆಗಳು ಯಾವಾಗಲೂ ನನ್ನೊಂದಿಗೆ ಇರುವುದರಿಂದ ಅವು ನನ್ನನ್ನು ನನ್ನ ಶತ್ರುಗಳಿಗಿಂತ ಜ್ಞಾನಿಯಾಗಿ ಮಾಡಿವೆ.
מכל מלמדי השכלתי כי עדותיך שיחה לי׃ | 99 |
ನನ್ನ ಒಳನೋಟ ನನ್ನ ಬೋಧಕರೆಲ್ಲರಿಗಿಂತ ದೊಡ್ಡದಾಗಿದೆ. ಏಕೆಂದರೆ ನಿಮ್ಮ ಶಾಸನಗಳು ನನ್ನ ಧ್ಯಾನವಾಗಿವೆ.
מזקנים אתבונן כי פקודיך נצרתי׃ | 100 |
ನಿಮ್ಮ ಸೂತ್ರಗಳನ್ನು ಕೈಗೊಂಡಿರುವುದರಿಂದ ನಾನು ಹಿರಿಯರಿಗಿಂತಲೂ ವಿವೇಕಿಯಾಗಿದ್ದೇನೆ.
מכל ארח רע כלאתי רגלי למען אשמר דברך׃ | 101 |
ನಿಮ್ಮ ವಾಕ್ಯವನ್ನು ಅನುಸರಿಸಬೇಕೆಂದು, ನಾನು ಪ್ರತಿಯೊಂದು ದುರ್ಮಾರ್ಗದಿಂದ ನನ್ನ ಹೆಜ್ಜೆಗಳನ್ನು ಹಿಂದೆಗೆದಿದ್ದೇನೆ.
ממשפטיך לא סרתי כי אתה הורתני׃ | 102 |
ನಿಮ್ಮ ನಿಯಮಗಳಿಂದ ನಾನು ತಪ್ಪಿಹೋಗಲಿಲ್ಲ, ಏಕೆಂದರೆ ನೀವೇ ನನಗೆ ಉಪದೇಶಿಸಿದ್ದೀರಿ.
מה נמלצו לחכי אמרתך מדבש לפי׃ | 103 |
ನಿಮ್ಮ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿಯಾಗಿವೆ! ಅವು ನನ್ನ ಬಾಯಿಗೆ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ!
מפקודיך אתבונן על כן שנאתי כל ארח שקר׃ | 104 |
ನಾನು ನಿಮ್ಮ ಸೂತ್ರಗಳಿಂದ ತಿಳುವಳಿಕೆಯನ್ನು ಸಂಪಾದಿಸಿಕೊಂಡಿದ್ದೇನೆ; ಆದ್ದರಿಂದ ಪ್ರತಿಯೊಂದು ದುರ್ಮಾರ್ಗವನ್ನೂ ದ್ವೇಷಿಸುತ್ತೇನೆ.
נר לרגלי דברך ואור לנתיבתי׃ | 105 |
ನಿಮ್ಮ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
נשבעתי ואקימה לשמר משפטי צדקך׃ | 106 |
ನಿಮ್ಮ ನೀತಿಯ ನಿಯಮಗಳನ್ನು ಪಾಲಿಸುವೆನೆಂದು ನಾನು ಒಂದು ಶಪಥಮಾಡಿದ್ದೇನೆ; ಅದನ್ನು ನಾನು ದೃಢಪಡಿಸುವೆನು.
נעניתי עד מאד יהוה חיני כדברך׃ | 107 |
ನಾನು ಬಹಳ ಕಷ್ಟ ಅನುಭವಿಸಿದ್ದೇನೆ; ಯೆಹೋವ ದೇವರೇ, ನಿಮ್ಮ ವಾಕ್ಯದ ಅನುಸಾರವಾಗಿ ನನ್ನ ಜೀವನವನ್ನು ಕಾಪಾಡಿರಿ.
נדבות פי רצה נא יהוה ומשפטיך למדני׃ | 108 |
ಯೆಹೋವ ದೇವರೇ, ನನ್ನ ಬಾಯಿಂದ ಸಿದ್ಧಮನಸ್ಸಿನ ಸ್ತೋತ್ರಗಳನ್ನು ಸ್ವೀಕರಿಸಿರಿ, ನಿಮ್ಮ ನಿಯಮಗಳನ್ನು ನನಗೆ ಬೋಧಿಸಿರಿ.
נפשי בכפי תמיד ותורתך לא שכחתי׃ | 109 |
ನನ್ನ ಜೀವನ ಆಗಾಗ ಅಪಾಯದಲ್ಲಿದೆ, ಆದಾಗ್ಯೂ ನಾನು ನಿಮ್ಮ ನಿಯಮವನ್ನು ಮರೆಯುವುದಿಲ್ಲ.
נתנו רשעים פח לי ומפקודיך לא תעיתי׃ | 110 |
ದುಷ್ಟರು ನನಗೆ ಬಲೆಯೊಡ್ಡಿದ್ದಾರೆ; ಆದರೂ ನಾನು ನಿಮ್ಮ ಸೂತ್ರಗಳನ್ನು ಬಿಟ್ಟು ತಪ್ಪಿಹೋಗಲಿಲ್ಲ.
נחלתי עדותיך לעולם כי ששון לבי המה׃ | 111 |
ನಿಮ್ಮ ಶಾಸನಗಳನ್ನು ನಿತ್ಯ ಸೊತ್ತಾಗಿ ತೆಗೆದುಕೊಂಡಿದ್ದೇನೆ; ಏಕೆಂದರೆ ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿದೆ.
נטיתי לבי לעשות חקיך לעולם עקב׃ | 112 |
ನಿಮ್ಮ ತೀರ್ಪುಗಳನ್ನು ಕಡೆವರೆಗೂ ಪಾಲಿಸುವುದಕ್ಕೆ ನಾನು ನನ್ನ ಹೃದಯದಲ್ಲಿ ದೃಢಮಾಡಿಕೊಂಡಿದ್ದೇನೆ.
סעפים שנאתי ותורתך אהבתי׃ | 113 |
ಎರಡು ಮನಸ್ಸುಳ್ಳವರನ್ನು ನಾನು ದ್ವೇಷಿಸುತ್ತೇನೆ, ಆದರೂ ನಿಮ್ಮ ನಿಯಮವನ್ನು ನಾನು ಪ್ರೀತಿಸುತ್ತೇನೆ.
סתרי ומגני אתה לדברך יחלתי׃ | 114 |
ನೀವೇ ನನ್ನ ಆಶ್ರಯವೂ, ಗುರಾಣಿಯೂ ಆಗಿದ್ದೀರಿ; ನಾನು ನನ್ನ ನಿರೀಕ್ಷೆಯನ್ನು ನಿಮ್ಮ ವಾಕ್ಯದಲ್ಲಿ ಇಟ್ಟುಕೊಂಡಿದ್ದೇನೆ.
סורו ממני מרעים ואצרה מצות אלהי׃ | 115 |
ನಿಯಮ ಮೀರುವವರೇ, ನನ್ನಿಂದ ತೊಲಗಿರಿ, ನಾನು ನನ್ನ ದೇವರ ಆಜ್ಞೆಗಳನ್ನು ಪಾಲಿಸಲು ಬಿಡಿರಿ!
סמכני כאמרתך ואחיה ואל תבישני משברי׃ | 116 |
ನನ್ನ ದೇವರೇ, ನಿಮ್ಮ ವಾಕ್ಯದ ಪ್ರಕಾರ ನನ್ನನ್ನು ನೆಲೆಗೊಳಿಸಿರಿ, ಆಗ ನಾನು ಬದುಕುವೆನು; ನನ್ನ ನಿರೀಕ್ಷೆ ಮುರಿದುಹೋಗದಿರಲಿ.
סעדני ואושעה ואשעה בחקיך תמיד׃ | 117 |
ನನ್ನನ್ನು ಎತ್ತಿ ಹಿಡಿಯಿರಿ, ಆಗ ನಾನು ಬಿಡುಗಡೆಯಾಗುವೆನು; ನಿಮ್ಮ ತೀರ್ಪುಗಳಿಗೆ ಯಾವಾಗಲೂ ಗಮನಕೊಡುವೆನು.
סלית כל שוגים מחקיך כי שקר תרמיתם׃ | 118 |
ನಿಮ್ಮ ತೀರ್ಪುಗಳನ್ನು ಮೀರಿದವರನ್ನೆಲ್ಲಾ ನೀವು ತಿರಸ್ಕರಿಸುತ್ತೀರಿ, ಏಕೆಂದರೆ ಅವರ ಕುಯುಕ್ತಿಯು ವ್ಯರ್ಥವಾಗುವುದು.
סגים השבת כל רשעי ארץ לכן אהבתי עדתיך׃ | 119 |
ಭೂಮಿಯಲ್ಲಿರುವ ದುಷ್ಟರೆಲ್ಲರನ್ನು ಕಸದ ಹಾಗೆ ತೆಗೆದು ಹಾಕುತ್ತೀರಿ; ಆದ್ದರಿಂದ ನಾನು ನಿಮ್ಮ ಶಾಸನಗಳನ್ನು ಪ್ರೀತಿಸುತ್ತೇನೆ.
סמר מפחדך בשרי וממשפטיך יראתי׃ | 120 |
ನಿಮ್ಮ ಭಯದಿಂದ ನನ್ನ ಶರೀರವು ನಡುಗುತ್ತದೆ; ನಿಮ್ಮ ನಿಯಮಗಳಿಗೆ ನಾನು ಭಯಭಕ್ತಿಯುಳ್ಳವನಾಗಿದ್ದೇನೆ.
עשיתי משפט וצדק בל תניחני לעשקי׃ | 121 |
ನಾನು ನೀತಿನ್ಯಾಯವನ್ನು ನಡೆಸಿದ್ದೇನೆ; ನನ್ನ ಹಿಂಸಕರಿಗೆ ನನ್ನನ್ನು ಒಪ್ಪಿಸಬೇಡಿರಿ.
ערב עבדך לטוב אל יעשקני זדים׃ | 122 |
ನಿಮ್ಮ ಸೇವಕನ ಕ್ಷೇಮವನ್ನು ದೃಢಪಡಿಸಿರಿ; ಅಹಂಕಾರಿಗಳು ನನ್ನನ್ನು ಬಾಧಿಸದಿರಲಿ.
עיני כלו לישועתך ולאמרת צדקך׃ | 123 |
ನಿಮ್ಮ ರಕ್ಷಣೆಯನ್ನೂ ನಿಮ್ಮ ನೀತಿಯ ವಾಗ್ದಾನವನ್ನೂ ಕಾಯುತ್ತಾ, ನನ್ನ ಕಣ್ಣುಗಳು ಮಂದವಾದವು.
עשה עם עבדך כחסדך וחקיך למדני׃ | 124 |
ನಿಮ್ಮ ಪ್ರೀತಿಗೆ ಅನುಸಾರವಾಗಿ ನಿಮ್ಮ ಸೇವಕನೊಂದಿಗೆ ವ್ಯವಹರಿಸಿ, ನಿಮ್ಮ ತೀರ್ಪುಗಳನ್ನು ನನಗೆ ಬೋಧಿಸಿರಿ.
עבדך אני הבינני ואדעה עדתיך׃ | 125 |
ನಾನು ನಿಮ್ಮ ಸೇವಕನು, ನಿಮ್ಮ ಶಾಸನಗಳನ್ನು ನಾನು ಅರ್ಥಮಾಡಿಕೊಳ್ಳುವಂತೆ ನನಗೆ ವಿವೇಚನೆಯನ್ನು ಕೊಡಿರಿ.
עת לעשות ליהוה הפרו תורתך׃ | 126 |
ಯೆಹೋವ ದೇವರೇ, ಇದು ನೀವು ಕಾರ್ಯಸಾಧಿಸಲು ಸಮಯವಾಗಿದೆ, ಏಕೆಂದರೆ ನಿಮ್ಮ ನಿಯಮವು ಉಲ್ಲಂಘಿಸಲಾಗಿದೆ.
על כן אהבתי מצותיך מזהב ומפז׃ | 127 |
ಆದ್ದರಿಂದ ನಾನು ನಿಮ್ಮ ಆಜ್ಞೆಗಳನ್ನು ಬಂಗಾರಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಸುತ್ತೇನೆ,
על כן כל פקודי כל ישרתי כל ארח שקר שנאתי׃ | 128 |
ಅದರ ನಿಮಿತ್ತ ನಿಮ್ಮ ಸೂತ್ರಗಳೆಲ್ಲವೂ ಸರಿಯಾದವುಗಳೆಂದು ನಾನು ಅಂಗೀಕರಿಸುತ್ತೇನೆ, ಪ್ರತಿಯೊಂದು ಮೋಸ ಮಾರ್ಗವನ್ನೂ ದ್ವೇಷಿಸುತ್ತೇನೆ.
פלאות עדותיך על כן נצרתם נפשי׃ | 129 |
ನಿಮ್ಮ ಶಾಸನಗಳು ಅದ್ಭುತವಾದವುಗಳೇ; ಆದ್ದರಿಂದ ನಾನು ಅವುಗಳನ್ನು ಅನುಸರಿಸುತ್ತೇನೆ.
פתח דבריך יאיר מבין פתיים׃ | 130 |
ನಿಮ್ಮ ವಾಕ್ಯಗಳನ್ನು ತೆರೆಯುವಾಗ, ಅದು ಬೆಳಕನ್ನು ಕೊಡುವುದು; ಅದು ಮುಗ್ಧರಿಗೆ ಅರಿವನ್ನು ನೀಡುವುದು.
פי פערתי ואשאפה כי למצותיך יאבתי׃ | 131 |
ನಿಮ್ಮ ಆಜ್ಞೆಗಳಿಗಾಗಿರುವ ಬಯಕೆಯು, ನಾನು ಬಾಯಿತೆರೆದು ಹಂಬಲಿಸುವಂತೆ ಮಾಡುತ್ತದೆ.
פנה אלי וחנני כמשפט לאהבי שמך׃ | 132 |
ನಿಮ್ಮ ನಾಮವನ್ನು ಪ್ರೀತಿಸುವವರಿಗೆ ನೀವು ಯಾವಾಗಲೂ ಮಾಡುವಂತೆ, ನೀವು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕರುಣಿಸಿರಿ.
פעמי הכן באמרתך ואל תשלט בי כל און׃ | 133 |
ನನ್ನ ಹೆಜ್ಜೆಗಳನ್ನು ನಿಮ್ಮ ವಾಕ್ಯದ ಪ್ರಕಾರ ಮುನ್ನಡೆಸಿರಿ; ಯಾವ ಪಾಪವಾದರೂ ನನ್ನನ್ನು ಆಳದಿರಲಿ.
פדני מעשק אדם ואשמרה פקודיך׃ | 134 |
ಜನರ ಬಲಾತ್ಕಾರದಿಂದ ನನ್ನನ್ನು ತಪ್ಪಿಸಿರಿ, ಆಗ ನಿಮ್ಮ ಸೂತ್ರಗಳನ್ನು ನಾನು ಪಾಲಿಸುವೆನು.
פניך האר בעבדך ולמדני את חקיך׃ | 135 |
ನಿಮ್ಮ ಮುಖವನ್ನು ನಿಮ್ಮ ಸೇವಕನ ಮೇಲೆ ಪ್ರಕಾಶಿಸಿರಿ ಮತ್ತು ನಿಮ್ಮ ತೀರ್ಪುಗಳನ್ನು ನನಗೆ ಬೋಧಿಸಿರಿ.
פלגי מים ירדו עיני על לא שמרו תורתך׃ | 136 |
ನಿಮ್ಮ ನಿಯಮವನ್ನು ಕೈಗೊಳ್ಳದೇ ಇರುವಾಗ ನನ್ನ ಕಣ್ಣಿನಿಂದ ಕಣ್ಣೀರು ಧಾರೆಯಾಗಿ ಹರಿಯುತ್ತಿವೆ.
צדיק אתה יהוה וישר משפטיך׃ | 137 |
ಯೆಹೋವ ದೇವರೇ, ನೀವು ನೀತಿವಂತರು, ನಿಮ್ಮ ನಿಯಮಗಳು ಸರಿಯಾದವುಗಳೇ.
צוית צדק עדתיך ואמונה מאד׃ | 138 |
ನೀವು ಕೊಟ್ಟ ನಿಮ್ಮ ಶಾಸನಗಳು ನೀತಿಯುಳ್ಳವುಗಳು; ಪೂರ್ಣ ಭರವಸೆಗೆ ಅವು ಯೋಗ್ಯವಾದವುಗಳು.
צמתתני קנאתי כי שכחו דבריך צרי׃ | 139 |
ನನ್ನ ವೈರಿಗಳು ನಿಮ್ಮ ಮಾತುಗಳನ್ನು ತಿರಸ್ಕರಿಸುವುದರಿಂದ, ನನ್ನ ಆಸಕ್ತಿಯು ನನ್ನನ್ನು ದಹಿಸಿಬಿಟ್ಟಿದೆ.
צרופה אמרתך מאד ועבדך אהבה׃ | 140 |
ನಿಮ್ಮ ವಾಗ್ದಾನಗಳು ಬಹು ಪರಿಶೋಧಿತವಾಗಿವೆ, ಆದ್ದರಿಂದ ನಿಮ್ಮ ಸೇವಕನು ಅವುಗಳನ್ನು ಪ್ರೀತಿಸುತ್ತಾನೆ.
צעיר אנכי ונבזה פקדיך לא שכחתי׃ | 141 |
ನಾನು ಅಲ್ಪನೂ, ತಿರಸ್ಕಾರ ಹೊಂದಿದವನು ಆಗಿದ್ದರೂ, ನಿಮ್ಮ ಸೂತ್ರಗಳನ್ನು ನಾನು ಮರೆಯುವುದಿಲ್ಲ.
צדקתך צדק לעולם ותורתך אמת׃ | 142 |
ನಿಮ್ಮ ನೀತಿಯು ನಿತ್ಯವಾದದ್ದು ನಿಮ್ಮ ನಿಯಮವು ಸತ್ಯವಾದದ್ದು.
צר ומצוק מצאוני מצותיך שעשעי׃ | 143 |
ಕಷ್ಟಸಂಕಟಗಳು ನನ್ನನ್ನು ಹಿಡಿದಿವೆ, ಆದರೂ ನಿಮ್ಮ ಆಜ್ಞೆಗಳು ನನಗೆ ಆನಂದದಾಯಕವಾಗಿವೆ.
צדק עדותיך לעולם הבינני ואחיה׃ | 144 |
ನಿಮ್ಮ ಶಾಸನಗಳು ಯಾವಾಗಲೂ ನೀತಿಯುಕ್ತವಾಗಿವೆ; ನಾನು ಬದುಕುವಂತೆ ನನಗೆ ವಿವೇಕವನ್ನು ಕೊಡಿರಿ.
קראתי בכל לב ענני יהוה חקיך אצרה׃ | 145 |
ಯೆಹೋವ ದೇವರೇ, ಪೂರ್ಣಹೃದಯದಿಂದ ನಾನು ಮೊರೆಯಿಟ್ಟಿದ್ದೇನೆ; ನನಗೆ ಸದುತ್ತರ ನೀಡಿರಿ; ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು.
קראתיך הושיעני ואשמרה עדתיך׃ | 146 |
ನಿಮಗೇ ಮೊರೆಯಿಟ್ಟಿದ್ದೇನೆ; ನನ್ನನ್ನು ರಕ್ಷಿಸಿರಿ ನಾನು ನಿಮ್ಮ ಶಾಸನಗಳನ್ನು ಪಾಲಿಸುವೆನು.
קדמתי בנשף ואשועה לדבריך יחלתי׃ | 147 |
ನಾನು ಸೂರ್ಯೋದಯಕ್ಕೆ ಮೊದಲು ಎದ್ದು ನಿಮಗೆ ಮೊರೆ ಇಟ್ಟಿದ್ದೇನೆ; ನಾನು ನನ್ನ ನಿರೀಕ್ಷೆಯನ್ನು ನಿಮ್ಮ ವಾಕ್ಯದಲ್ಲಿ ಇಟ್ಟಿದ್ದೇನೆ.
קדמו עיני אשמרות לשיח באמרתך׃ | 148 |
ನಾನು ನಿಮ್ಮ ವಾಕ್ಯವನ್ನು ಧ್ಯಾನ ಮಾಡುವಂತೆ, ರಾತ್ರಿಜಾವದಲ್ಲಿ ನನ್ನ ಕಣ್ಣುಗಳು ತೆರೆದಿರುತ್ತವೆ.
קולי שמעה כחסדך יהוה כמשפטך חיני׃ | 149 |
ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನ ಮೊರೆಯನ್ನು ಕೇಳಿರಿ; ನಿಮ್ಮ ನಿಯಮಗಳ ಅನುಸಾರವಾಗಿ ನನ್ನ ಬದುಕನ್ನು ಕಾಪಾಡಿರಿ.
קרבו רדפי זמה מתורתך רחקו׃ | 150 |
ದುಷ್ಟತನಕ್ಕೆ ಒಳಸಂಚು ಮಾಡುವವರು ನನಗೆ ಸಮೀಪವಾಗಿದ್ದಾರೆ; ಆದರೆ ಅವರು ನಿಮ್ಮ ನಿಯಮಕ್ಕೆ ಅವರು ದೂರವಾಗಿದ್ದಾರೆ.
קרוב אתה יהוה וכל מצותיך אמת׃ | 151 |
ಯೆಹೋವ ದೇವರೇ, ನೀವು ಸಮೀಪವಾಗಿದ್ದೀರಿ, ನಿಮ್ಮ ಆಜ್ಞೆಗಳೆಲ್ಲಾ ಸತ್ಯವಾಗಿವೆ.
קדם ידעתי מעדתיך כי לעולם יסדתם׃ | 152 |
ನಿಮ್ಮ ಶಾಸನಗಳು ಸದಾಕಾಲಕ್ಕೂ ಇರುವಂತೆ ಅವುಗಳನ್ನು ಸ್ಥಾಪಿಸಿದ್ದೀರೆಂದು ಬಹುಕಾಲದ ಹಿಂದೆಯೇ ನಾನು ಕಲಿತುಕೊಂಡಿದ್ದೇವೆ.
ראה עניי וחלצני כי תורתך לא שכחתי׃ | 153 |
ನನ್ನ ಕಷ್ಟವನ್ನು ನೋಡಿ ನನ್ನನ್ನು ಬಿಡಿಸಿರಿ; ಏಕೆಂದರೆ ನಿಮ್ಮ ನಿಯಮವನ್ನು ನಾನು ಮರೆತಿಲ್ಲ.
ריבה ריבי וגאלני לאמרתך חיני׃ | 154 |
ನನ್ನ ಪರವಾಗಿ ವಾದಿಸಿ, ನನ್ನನ್ನು ವಿಮೋಚಿಸಿರಿ; ನಿಮ್ಮ ವಾಗ್ದಾನದ ಪ್ರಕಾರ ನನ್ನ ಬದುಕನ್ನು ಕಾಪಾಡಿರಿ.
רחוק מרשעים ישועה כי חקיך לא דרשו׃ | 155 |
ದುಷ್ಟರಿಗೆ ರಕ್ಷಣೆಯು ದೂರವಾಗಿದೆ; ಏಕೆಂದರೆ ಅವರು ನಿಮ್ಮ ತೀರ್ಪುಗಳನ್ನು ಹುಡುಕುವುದಿಲ್ಲ.
רחמיך רבים יהוה כמשפטיך חיני׃ | 156 |
ಯೆಹೋವ ದೇವರೇ, ನಿಮ್ಮ ಅನುಕಂಪವು ಮಹತ್ತಾದವುಗಳು; ನಿಮ್ಮ ನಿಯಮಗಳ ಪ್ರಕಾರ ನನ್ನ ಬದುಕನ್ನು ಕಾಪಾಡಿರಿ.
רבים רדפי וצרי מעדותיך לא נטיתי׃ | 157 |
ನನ್ನನ್ನು ಹಿಂಸಿಸುವ ನನ್ನ ವೈರಿಗಳು ಅನೇಕರಾಗಿದ್ದಾರೆ, ನಾನಾದರೋ ನಿಮ್ಮ ಶಾಸನಗಳನ್ನು ಬಿಟ್ಟುಬಿಡಲಿಲ್ಲ.
ראיתי בגדים ואתקוטטה אשר אמרתך לא שמרו׃ | 158 |
ನಾನು ಅಪನಂಬಿಗಸ್ತರನ್ನು ಕಂಡು ಅಸಹ್ಯಪಡುತ್ತೇನೆ, ಅವರು ನಿಮ್ಮ ಮಾತನ್ನು ಅಂಗೀಕರಿಸುತ್ತಾಯಿಲ್ಲಾ.
ראה כי פקודיך אהבתי יהוה כחסדך חיני׃ | 159 |
ನಿಮ್ಮ ಸೂತ್ರಗಳನ್ನು ನಾನು ಎಷ್ಟು ಪ್ರೀತಿಸುತ್ತೇನೆ ನೋಡಿರಿ; ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನ ಬದುಕನ್ನು ಕಾಪಾಡಿರಿ.
ראש דברך אמת ולעולם כל משפט צדקך׃ | 160 |
ನಿಮ್ಮ ಮಾತುಗಳೆಲ್ಲಾ ಸತ್ಯವಾದವುಗಳೇ; ನಿಮ್ಮ ನೀತಿ ನಿಯಮಗಳೆಲ್ಲಾ ನಿತ್ಯವಾದವುಗಳೇ.
שרים רדפוני חנם ומדבריך פחד לבי׃ | 161 |
ಅಧಿಕಾರಿಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ, ಆದರೆ ನನ್ನ ಹೃದಯವು ನಿಮ್ಮ ವಾಕ್ಯಗಳಿಗೆ ನಡುಗುತ್ತದೆ.
שש אנכי על אמרתך כמוצא שלל רב׃ | 162 |
ದೊಡ್ಡ ಕೊಳ್ಳೆಯನ್ನು ಕಂಡುಹಿಡಿದವರಂತೆ ನಾನು ನಿಮ್ಮ ವಾಗ್ದಾನದಲ್ಲಿ ಆನಂದಿಸುತ್ತೇನೆ.
שקר שנאתי ואתעבה תורתך אהבתי׃ | 163 |
ಸುಳ್ಳುತನವನ್ನು ನಾನು ದ್ವೇಷಿಸಿ ಅಸಹ್ಯಪಡುತ್ತೇನೆ ಆದರೆ ನಾನು ನಿಮ್ಮ ನಿಯಮವನ್ನು ಪ್ರೀತಿಸುತ್ತೇನೆ.
שבע ביום הללתיך על משפטי צדקך׃ | 164 |
ನಿಮ್ಮ ನೀತಿಯ ನಿಯಮಗಳ ನಿಮಿತ್ತ, ನಾನು ದಿನಕ್ಕೆ ಏಳು ಸಾರಿ ನಿಮ್ಮನ್ನು ಸ್ತುತಿಸುತ್ತೇನೆ.
שלום רב לאהבי תורתך ואין למו מכשול׃ | 165 |
ನಿಮ್ಮ ನಿಯಮ ಪ್ರಿಯರಿಗೆ ಅಪಾರ ಸಮಾಧಾನವಿರುತ್ತದೆ, ಅಂಥವರಿಗೆ ಆತಂಕವೇನೂ ಇರುವುದಿಲ್ಲ.
שברתי לישועתך יהוה ומצותיך עשיתי׃ | 166 |
ಯೆಹೋವ ದೇವರೇ, ನಾನು ನಿಮ್ಮ ರಕ್ಷಣೆಗಾಗಿ ಕಾದುಕೊಂಡಿದ್ದೇನೆ; ನಾನು ನಿಮ್ಮ ಆಜ್ಞೆಗಳನ್ನು ಹಿಂಬಾಲಿಸುತ್ತಿದ್ದೇನೆ.
שמרה נפשי עדתיך ואהבם מאד׃ | 167 |
ನಾನು ನಿಮ್ಮ ಶಾಸನಗಳನ್ನು ಅನುಸರಿಸುವದರಿಂದ, ಅವುಗಳನ್ನು ಅತ್ಯಧಿಕವಾಗಿ ಪ್ರೀತಿಸುತ್ತೇನೆ.
שמרתי פקודיך ועדתיך כי כל דרכי נגדך׃ | 168 |
ನಾನು ನಿಮ್ಮ ಸೂತ್ರಗಳನ್ನೂ ಶಾಸನಗಳನ್ನೂ ಪಾಲಿಸುತ್ತೇನೆ, ಏಕೆಂದರೆ ನನ್ನ ಮಾರ್ಗಗಳೆಲ್ಲವೂ ನಿಮಗೆ ತಿಳಿದಿರುತ್ತವೆ.
תקרב רנתי לפניך יהוה כדברך הבינני׃ | 169 |
ಯೆಹೋವ ದೇವರೇ, ನನ್ನ ಮೊರೆ ನಿಮ್ಮ ಸನ್ನಿಧಿ ಸೇರಲಿ; ನಿಮ್ಮ ವಾಕ್ಯದ ಪ್ರಕಾರ ನನಗೆ ಅರಿವನ್ನು ನೀಡಿರಿ.
תבוא תחנתי לפניך כאמרתך הצילני׃ | 170 |
ನನ್ನ ಬೇಡಿಕೆಯು ನಿಮ್ಮ ಸನ್ನಿಧಿ ಸೇರಲಿ; ನಿಮ್ಮ ವಾಗ್ದಾನದ ಪ್ರಕಾರ ನನ್ನನ್ನು ಬಿಡಿಸಿರಿ.
תבענה שפתי תהלה כי תלמדני חקיך׃ | 171 |
ನೀವು ನಿಮ್ಮ ತೀರ್ಪುಗಳನ್ನು ನನಗೆ ಬೋಧಿಸಿದಾಗ, ನನ್ನ ತುಟಿಗಳಿಂದ ಸ್ತೋತ್ರವು ಪ್ರವಾಹಿಸಲಿ.
תען לשוני אמרתך כי כל מצותיך צדק׃ | 172 |
ನಿಮ್ಮ ಆಜ್ಞೆಗಳೆಲ್ಲಾ ನೀತಿಯುಳ್ಳವುಗಳಾಗಿವೆ, ಆದುದರಿಂದ ನನ್ನ ನಾಲಿಗೆಯು ನಿಮ್ಮ ವಾಕ್ಯವನ್ನು ಹಾಡಿ ಹರಸಲಿ.
תהי ידך לעזרני כי פקודיך בחרתי׃ | 173 |
ನಾನು ನಿಮ್ಮ ಸೂತ್ರಗಳನ್ನು ಆರಿಸಿಕೊಂಡಿರುವುದರಿಂದ, ನಿಮ್ಮ ಕೈ ನನಗೆ ನೆರವಾಗಲಿ.
תאבתי לישועתך יהוה ותורתך שעשעי׃ | 174 |
ಯೆಹೋವ ದೇವರೇ, ನಾನು ನಿಮ್ಮ ರಕ್ಷಣೆಗಾಗಿ ಬಯಸುತ್ತಿದ್ದೇನೆ, ನಿಮ್ಮ ನಿಯಮವೇ ನನಗೆ ಆನಂದವಾಗಿದೆ.
תחי נפשי ותהללך ומשפטך יעזרני׃ | 175 |
ನಿಮ್ಮನ್ನು ಸ್ತುತಿಸಲು ನಾನು ಬದುಕಿರಲಿ; ನಿಮ್ಮ ನಿಯಮಗಳು ನನ್ನನ್ನು ಕಾಪಾಡಲಿ.
תעיתי כשה אבד בקש עבדך כי מצותיך לא שכחתי׃ | 176 |
ತಪ್ಪಿಹೋದ ಕುರಿಯಂತೆ ನಾನು ದಾರಿತಪ್ಪಿದ್ದೇನೆ. ನಿಮ್ಮ ಸೇವಕನಾದ ನನ್ನನ್ನು ಬಂದು ಹುಡುಕಿರಿ, ಏಕೆಂದರೆ ನಿಮ್ಮ ಆಜ್ಞೆಗಳನ್ನು ನಾನು ಮರೆಯುವುದಿಲ್ಲ.