< תהילים 149 >
הללו יה שירו ליהוה שיר חדש תהלתו בקהל חסידים׃ | 1 |
ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ, ಭಕ್ತರ ಸಭೆಯಲ್ಲಿ ದೇವರ ಸ್ತೋತ್ರವನ್ನೂ ಹಾಡಿರಿ.
ישמח ישראל בעשיו בני ציון יגילו במלכם׃ | 2 |
ಇಸ್ರಾಯೇಲು ತನ್ನನ್ನು ಉಂಟುಮಾಡಿದ ದೇವರಲ್ಲಿ ಸಂತೋಷಿಸಲಿ; ಚೀಯೋನಿನ ಜನರು ತಮ್ಮ ಅರಸರಲ್ಲಿ ಉಲ್ಲಾಸಿಸಲಿ.
יהללו שמו במחול בתף וכנור יזמרו לו׃ | 3 |
ದೇವರ ಹೆಸರನ್ನು ನರ್ತಿಸುತ್ತಾ ಸ್ತುತಿಸಲಿ; ದಮ್ಮಡಿಯಿಂದಲೂ ಕಿನ್ನರಿಯಿಂದಲೂ ದೇವರನ್ನು ಕೀರ್ತಿಸಲಿ.
כי רוצה יהוה בעמו יפאר ענוים בישועה׃ | 4 |
ಏಕೆಂದರೆ ಯೆಹೋವ ದೇವರು ತಮ್ಮ ಜನರಲ್ಲಿ ಹರ್ಷಿಸುತ್ತಾರೆ. ದೀನರನ್ನು ಜಯದ ಕಿರೀಟದಿಂದ ಅಲಂಕರಿಸುತ್ತಾರೆ.
יעלזו חסידים בכבוד ירננו על משכבותם׃ | 5 |
ಇಂಥಾ ಸನ್ಮಾನದಲ್ಲಿ ನಂಬಿಗಸ್ತರು ಸಂತೋಷಪಡಲಿ ಹಾಸಿಗೆಯಲ್ಲಿರುವಾಗಲೂ ಆನಂದಗಾನ ಹಾಡಲಿ.
רוממות אל בגרונם וחרב פיפיות בידם׃ | 6 |
ಉನ್ನತ ದೇವರ ಸ್ತೋತ್ರವು ಅವರ ಬಾಯಿಯಲ್ಲಿ ಇರಲಿ. ಇಬ್ಬಾಯಿ ಖಡ್ಗ ಅವರ ಕೈಯಲ್ಲಿಯೂ ಇರಲಿ.
לעשות נקמה בגוים תוכחת בל אמים׃ | 7 |
ಜನಾಂಗಗಳಲ್ಲಿ ನ್ಯಾಯ ಪ್ರತೀಕಾರವಾಗಲಿ, ಅಪರಾಧಿಗಳಿಗೆ ಶಿಕ್ಷೆಯಾಗಲಿ.
לאסר מלכיהם בזקים ונכבדיהם בכבלי ברזל׃ | 8 |
ಅಪರಾಧದ ಅರಸರನ್ನು ಸಂಕೋಲೆಗಳಿಂದಲೂ, ಪ್ರಮುಖರನ್ನು ಕಬ್ಬಿಣದ ಬೇಡಿಗಳಿಂದಲೂ ಬಂಧಿಸಲಿ.
לעשות בהם משפט כתוב הדר הוא לכל חסידיו הללו יה׃ | 9 |
ಬರೆದಿರುವ ನ್ಯಾಯವಿಧಿಯು ಅವರಲ್ಲಿ ನೆರವೇರಲಿ, ದೇವರ ಭಕ್ತರೆಲ್ಲರಿಗೆ ಈ ಗೌರವವಿರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.