< תהילים 18 >
למנצח לעבד יהוה לדוד אשר דבר ליהוה את דברי השירה הזאת ביום הציל יהוה אותו מכף כל איביו ומיד שאול ויאמר ארחמך יהוה חזקי׃ | 1 |
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಯೆಹೋವ ದೇವರ ಸೇವಕನಾದ ದಾವೀದನು ಎಲ್ಲಾ ಶತ್ರುಗಳಿಂದಲೂ ಸೌಲನ ಕೈಯಿಂದಲೂ ತಪ್ಪಿಸಿಕೊಂಡಾಗ ಯೆಹೋವ ದೇವರಿಗೆ ಈ ಪದ್ಯವನ್ನು ಹಾಡಿದ್ದು. ದಾವೀದನು ಹೀಗೆ ಹೇಳಿದನು: ನನ್ನ ಬಲವಾಗಿರುವ ಯೆಹೋವ ದೇವರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ.
יהוה סלעי ומצודתי ומפלטי אלי צורי אחסה בו מגני וקרן ישעי משגבי׃ | 2 |
ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ; ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ನನ್ನ ಉನ್ನತವಾದ ದುರ್ಗ ಆಗಿದ್ದಾರೆ.
מהלל אקרא יהוה ומן איבי אושע׃ | 3 |
ಸ್ತುತಿ ಪಾತ್ರರಾಗಿರುವ ಯೆಹೋವ ದೇವರನ್ನು ನಾನು ಮೊರೆಯಿಟ್ಟದ್ದರಿಂದ, ಅವರು ನನ್ನ ಶತ್ರುಗಳಿಂದ ನನ್ನನ್ನು ಕಾಪಾಡಿದ್ದಾರೆ.
אפפוני חבלי מות ונחלי בליעל יבעתוני׃ | 4 |
ಮರಣದ ಪಾಶಗಳು ನನ್ನನ್ನು ಸುತ್ತಿಕೊಂಡವು; ವಿನಾಶಪ್ರವಾಹಗಳು ನನ್ನ ಮೇಲೆ ಹರಿದವು.
חבלי שאול סבבוני קדמוני מוקשי מות׃ (Sheol ) | 5 |
ಪಾತಾಳದ ಪಾಶಗಳು ನನ್ನನ್ನು ಸುತ್ತಿಕೊಂಡವು; ಮರಣದ ಬಲೆಗಳು ನನ್ನನ್ನು ಎದುರಿಸಿದವು. (Sheol )
בצר לי אקרא יהוה ואל אלהי אשוע ישמע מהיכלו קולי ושועתי לפניו תבוא באזניו׃ | 6 |
ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಸನ್ನಿಧಿ ಸೇರಿ ಅವರ ಕಿವಿಗೆ ಬಿತ್ತು.
ותגעש ותרעש הארץ ומוסדי הרים ירגזו ויתגעשו כי חרה לו׃ | 7 |
ದೇವರು ಬೇಸರಗೊಂಡಿದ್ದರಿಂದ ಭೂಮಿಯು ನಡುಗಿ ಕದಲಿದವು; ಪರ್ವತಗಳ ಅಸ್ತಿವಾರಗಳು ಸಹ ಕದಲಿದವು.
עלה עשן באפו ואש מפיו תאכל גחלים בערו ממנו׃ | 8 |
ಮೂಗಿನಿಂದ ಹೊಗೆ ಬಂದಂತೆಯೂ ಬಾಯಿಯೊಳಗಿಂದ ದಹಿಸುವ ಅಗ್ನಿ ಹೊರಟಂತೆಯೂ; ಕೆಂಡಗಳು ಅದರಿಂದ ಜ್ವಾಲಿಸಿದಂತೆಯೂ ಇರಲು,
ויט שמים וירד וערפל תחת רגליו׃ | 9 |
ದೇವರು ಆಕಾಶಗಳನ್ನು ಬಾಗಿಸಿ ಕೆಳಗಿಳಿದು ಬಂದರು; ಅವರ ಪಾದಗಳ ಕೆಳಗೆ ಕಾರ್ಮೋಡಗಳಿದ್ದವು.
וירכב על כרוב ויעף וידא על כנפי רוח׃ | 10 |
ಅವರು ಕೆರೂಬಿಯ ಮೇಲೆ ಕೂತು ಹಾರಿದರು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು.
ישת חשך סתרו סביבותיו סכתו חשכת מים עבי שחקים׃ | 11 |
ಅವರು ಕತ್ತಲನ್ನು ತಮ್ಮ ಹೊದಿಕೆಯನ್ನಾಗಿಯೂ ಮಳೆ ತರುವ ಆಕಾಶದ ಕಾರ್ಮೋಡಗಳನ್ನು ತಮ್ಮ ಸುತ್ತಲಿನ ಪರದೆಯನ್ನಾಗಿಯೂ ಮಾಡಿಕೊಂಡರು.
מנגה נגדו עביו עברו ברד וגחלי אש׃ | 12 |
ಅವರ ಸನ್ನಿಧಿಯ ಪ್ರಕಾಶದಿಂದ ಮೋಡಗಳು, ಕಲ್ಮಳೆ ಹಾಗೂ ಗುಡುಗು ಮಿಂಚುಗಳು ಹೊರಹೊಮ್ಮಿದವು.
וירעם בשמים יהוה ועליון יתן קלו ברד וגחלי אש׃ | 13 |
ಯೆಹೋವ ದೇವರು ಆಕಾಶಗಳಲ್ಲಿ ಗುಡುಗಿದರು; ಮಹೋನ್ನತ ದೇವರ ಧ್ವನಿಯು ಕಲ್ಮಳೆ ಹಾಗೂ ಮಿಂಚುಗಳಿಂದ ಪ್ರತಿಧ್ವನಿಸಿತು.
וישלח חציו ויפיצם וברקים רב ויהמם׃ | 14 |
ಅವರು ತಮ್ಮ ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿದರು; ಸಿಡಿಲಿನಿಂದ ವೈರಿಗಳನ್ನೆಲ್ಲ ಅಟ್ಟಿಸಿಬಿಟ್ಟರು.
ויראו אפיקי מים ויגלו מוסדות תבל מגערתך יהוה מנשמת רוח אפך׃ | 15 |
ಯೆಹೋವ ದೇವರೇ, ನಿಮ್ಮ ಗದರಿಕೆಯಿಂದಲೂ, ನಿಮ್ಮ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿದವು, ಭೂಲೋಕದ ಅಸ್ತಿವಾರಗಳು ಬಯಲಾದವು.
ישלח ממרום יקחני ימשני ממים רבים׃ | 16 |
ಅವರು ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು ಅಗಾಧವಾದ ಜಲರಾಶಿಗಳಿಂದ ಹೊರಗೆಳೆದರು.
יצילני מאיבי עז ומשנאי כי אמצו ממני׃ | 17 |
ಅವರು ನನಗಿಂತ ಶಕ್ತಿಶಾಲಿಯಾದ ಶತ್ರುಗಳಿಂದ, ದ್ವೇಷಿಸುತ್ತಿದ್ದ ವೈರಿಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದರು.
יקדמוני ביום אידי ויהי יהוה למשען לי׃ | 18 |
ನನ್ನ ಆಪತ್ತಿನ ದಿನದಲ್ಲಿ ನನ್ನನ್ನು ಆ ಶತ್ರುಗಳು ದಾಳಿಮಾಡಿದರು; ಆದರೆ ಯೆಹೋವ ದೇವರು ನನಗೆ ಆಧಾರವಾಗಿದ್ದರು.
ויוציאני למרחב יחלצני כי חפץ בי׃ | 19 |
ದೇವರು ನನ್ನನ್ನು ಹೊರಗೆ ವಿಶಾಲ ಸ್ಥಳಕ್ಕೆ ತಂದರು; ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ಕಾಪಾಡಿದರು.
יגמלני יהוה כצדקי כבר ידי ישיב לי׃ | 20 |
ಯೆಹೋವ ದೇವರು ನನ್ನ ನೀತಿಯ ಪ್ರಕಾರ ನನ್ನೊಂದಿಗೆ ವ್ಯವಹರಿಸಿದರು; ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಪ್ರತಿಫಲಕೊಟ್ಟರು.
כי שמרתי דרכי יהוה ולא רשעתי מאלהי׃ | 21 |
ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಕೈಗೊಂಡೆನು; ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.
כי כל משפטיו לנגדי וחקתיו לא אסיר מני׃ | 22 |
ದೇವರ ಆಜ್ಞೆಗಳೆಲ್ಲಾ ನನ್ನ ಮುಂದೆ ಇಟ್ಟುಕೊಂಡೆನು; ಅವರ ತೀರ್ಪುಗಳಿಂದ ನಾನು ತೊಲಗಿಹೋಗಲಿಲ್ಲ.
ואהי תמים עמו ואשתמר מעוני׃ | 23 |
ನಾನು ಅವರ ದೃಷ್ಟಿಯಲ್ಲಿ ನಿರ್ದೋಷಿಯು ನಾನು ಪಾಪದಿಂದ ನನ್ನನ್ನು ಕಾಪಾಡಿಕೊಂಡೆನು.
וישב יהוה לי כצדקי כבר ידי לנגד עיניו׃ | 24 |
ಆದ್ದರಿಂದ ಯೆಹೋವ ದೇವರು ನನ್ನ ನೀತಿಯ ಪ್ರಕಾರವೂ ಅವರ ದೃಷ್ಟಿಯಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಪ್ರತಿಫಲಕೊಟ್ಟರು.
עם חסיד תתחסד עם גבר תמים תתמם׃ | 25 |
ದಯವಂತರಿಗೆ ನೀವು ನಿಮ್ಮನ್ನು ದಯವಂತರಾಗಿ ತೋರಿಸುತ್ತೀರಿ. ನಿರ್ದೋಷಿಗೆ ನೀವು ನಿರ್ದೋಷಿಯಾಗಿ ತೋರಿಸುತ್ತೀರಿ.
עם נבר תתברר ועם עקש תתפתל׃ | 26 |
ಶುದ್ಧರಿಗೆ ನೀವು ಶುದ್ಧರಾಗಿ ತೋರಿಸುತ್ತೀರಿ. ವಕ್ರ ವ್ಯಕ್ತಿಗೆ ನಿಮ್ಮ ಬುದ್ಧಿವಂತಿಕೆಯನ್ನು ತೋರಿಸುತ್ತೀರಿ.
כי אתה עם עני תושיע ועינים רמות תשפיל׃ | 27 |
ದೀನರನ್ನು ರಕ್ಷಿಸುತ್ತೀರಿ, ಆದರೆ ನೀವು ಗರ್ವಿಷ್ಠರ ಕಣ್ಣುಗಳನ್ನು ತಗ್ಗಿಸುತ್ತೀರಿ.
כי אתה תאיר נרי יהוה אלהי יגיה חשכי׃ | 28 |
ಯೆಹೋವ ದೇವರೇ, ನೀವು ನನ್ನ ದೀಪವನ್ನು ಬೆಳಗಿಸಿರಿ. ನನ್ನ ದೇವರು ನನ್ನ ಕತ್ತಲೆಯನ್ನು ಬೆಳಕನ್ನಾಗಿ ಮಾರ್ಪಡಿಸುವರು.
כי בך ארץ גדוד ובאלהי אדלג שור׃ | 29 |
ನಿಮ್ಮ ಸಹಾಯದಿಂದ ವೈರಿಸೇನೆಯ ವಿರುದ್ಧ ಹೋಗುವೆನು, ನನ್ನ ದೇವರೊಂದಿಗೆ ಕೋಟೆಗೋಡೆಯನ್ನೂ ಹಾರುವೆನು.
האל תמים דרכו אמרת יהוה צרופה מגן הוא לכל החסים בו׃ | 30 |
ದೇವರ ಮಾರ್ಗವು ಪರಿಪೂರ್ಣವಾದದ್ದು, ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.
כי מי אלוה מבלעדי יהוה ומי צור זולתי אלהינו׃ | 31 |
ಏಕೆಂದರೆ ಯೆಹೋವ ದೇವರಲ್ಲದೆ ಬೇರೆ ದೇವರು ಯಾರು? ಮತ್ತು ನಮ್ಮ ದೇವರನ್ನು ಹೊರತುಪಡಿಸಿ ರಕ್ಷಕ ಯಾರು?
האל המאזרני חיל ויתן תמים דרכי׃ | 32 |
ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ, ನನ್ನ ಮಾರ್ಗವನ್ನು ಸುರಕ್ಷಿತಗೊಳಿಸುವ ದೇವರು ಅವರೇ.
משוה רגלי כאילות ועל במתי יעמידני׃ | 33 |
ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಚುರುಕು ಮಾಡಿ, ಅವರು ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾರೆ.
מלמד ידי למלחמה ונחתה קשת נחושה זרועתי׃ | 34 |
ಅವರು ಯುದ್ಧಕ್ಕಾಗಿ ನನ್ನ ಕೈಗಳಿಗೆ ತರಬೇತುಕೊಟ್ಟು, ನನ್ನ ಭುಜದಿಂದ ಕಂಚಿನ ಬಿಲ್ಲನ್ನು ಬಗ್ಗಿಸುವಂತೆ ಮಾಡುತ್ತಾರೆ.
ותתן לי מגן ישעך וימינך תסעדני וענותך תרבני׃ | 35 |
ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ. ನಿಮ್ಮ ಬಲಗೈ ನನಗೆ ಆಧಾರವಾಗಿದೆ; ನಿಮ್ಮ ಸಹಾಯವು ನನ್ನನ್ನು ಘನವಂತನನ್ನಾಗಿ ಮಾಡಿದೆ.
תרחיב צעדי תחתי ולא מעדו קרסלי׃ | 36 |
ನೀವು ನನ್ನ ಕಾಲಡಿಗಳಿಗೆ ವಿಶಾಲಸ್ಥಳ ಒದಗಿಸಿದ್ದೀರಿ, ಆದುದರಿಂದ ನನ್ನ ಹಿಮ್ಮಡಿಗಳು ಜಾರುವುದಿಲ್ಲ.
ארדוף אויבי ואשיגם ולא אשוב עד כלותם׃ | 37 |
ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿದ್ದೇನೆ; ಅವರನ್ನು ಸಂಹರಿಸಿಬಿಡುವವರೆಗೂ ನಾನು ಹಿಂದಿರುಗಲಿಲ್ಲ.
אמחצם ולא יכלו קום יפלו תחת רגלי׃ | 38 |
ಏಳಲಾರದಂತೆ ಅವರನ್ನು ತುಳಿದುಬಿಟ್ಟೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದರು.
ותאזרני חיל למלחמה תכריע קמי תחתי׃ | 39 |
ನೀವು ಯುದ್ಧಕ್ಕಾಗಿ ನನಗೆ ಬಲವನ್ನು ಆಯುಧವನ್ನಾಗಿ ನೀಡಿ, ನನ್ನ ಎದುರಾಳಿಗಳನ್ನು ನನಗೆ ಅಧೀನ ಮಾಡಿದ್ದೀರಿ.
ואיבי נתתה לי ערף ומשנאי אצמיתם׃ | 40 |
ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; ನಾನು ನನ್ನ ವೈರಿಗಳನ್ನು ಸಂಹರಿಸಿದೆನು.
ישועו ואין מושיע על יהוה ולא ענם׃ | 41 |
ಅವರು ಸಹಾಯಕ್ಕಾಗಿ ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇರಲಿಲ್ಲ ಯೆಹೋವ ದೇವರಿಗೂ ಮೊರೆಯಿಟ್ಟರು, ಆದರೆ ಅವರೂ ಉತ್ತರ ಕೊಡಲಿಲ್ಲ.
ואשחקם כעפר על פני רוח כטיט חוצות אריקם׃ | 42 |
ಅವರನ್ನು ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳಿನಂತೆ ಪುಡಿಪುಡಿ ಮಾಡಿದೆನು; ಬೀದಿಯಲ್ಲಿನ ಕೆಸರು ಎಂಬಂತೆ ತುಳಿದು ಎಸೆದುಬಿಟ್ಟೆನು.
תפלטני מריבי עם תשימני לראש גוים עם לא ידעתי יעבדוני׃ | 43 |
ನೀವು ನನ್ನ ಜನರ ಒಳಕಲಹದಿಂದ ನನ್ನನ್ನು ತಪ್ಪಿಸಿದ್ದೀರಿ; ನನ್ನನ್ನು ಜನಾಂಗಗಳಿಗೆ ನಾಯಕನನ್ನಾಗಿ ಮಾಡಿರುವಿರಿ. ನಾನು ಅರಿಯದ ಜನರು ನನಗೆ ವಿಧೇಯರಾಗುವರು.
לשמע אזן ישמעו לי בני נכר יכחשו לי׃ | 44 |
ವಿದೇಶಿಯರು ನನಗೆ ಅಧೀನರಾದರು; ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು.
בני נכר יבלו ויחרגו ממסגרותיהם׃ | 45 |
ಅವರು ಭಯಗೊಳ್ಳುವರು; ನಡುಗುತ್ತಾ ತಮ್ಮ ಕೋಟೆಗಳಿಂದ ಹೊರಬರುವರು.
חי יהוה וברוך צורי וירום אלוהי ישעי׃ | 46 |
ಯೆಹೋವ ದೇವರು ಜೀವಿಸುವ ದೇವರು! ನನ್ನ ಆಶ್ರಯವಾಗಿರುವ ದೇವರಿಗೆ ಸ್ತೋತ್ರವಾಗಲಿ. ನನ್ನ ರಕ್ಷಕರಾದ ದೇವರು ಮಹಿಮೆ ಹೊಂದಲಿ.
האל הנותן נקמות לי וידבר עמים תחתי׃ | 47 |
ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುವವರೂ ಜನರನ್ನು ನನಗೆ ಅಧೀನಪಡಿಸುವವರೂ ಆಗಿದ್ದಾರೆ.
מפלטי מאיבי אף מן קמי תרוממני מאיש חמס תצילני׃ | 48 |
ದೇವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ; ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ, ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ.
על כן אודך בגוים יהוה ולשמך אזמרה׃ | 49 |
ಆದ್ದರಿಂದ ಯೆಹೋವ ದೇವರೇ, ನಾನು ಜನಾಂಗಗಳಲ್ಲಿ ನಿಮ್ಮನ್ನು ಕೊಂಡಾಡುವೆನು, ನಿಮ್ಮನ್ನು ಕೊಂಡಾಡಿ ನಿಮ್ಮ ಹೆಸರನ್ನು ಕೀರ್ತಿಸುವೆನು.
מגדל ישועות מלכו ועשה חסד למשיחו לדוד ולזרעו עד עולם׃ | 50 |
ದೇವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು; ತಮ್ಮ ಅಭಿಷಿಕ್ತನಿಗೂ ದಾವೀದನಿಗೂ ಅವನ ಸಂತತಿಯವರಿಗೂ ಒಡಂಬಡಿಕೆಯ ಪ್ರೀತಿಯನ್ನು ಯುಗಯುಗಕ್ಕೂ ಅನುಗ್ರಹಿಸುವರು.