< תהילים 2 >
למה רגשו גוים ולאמים יהגו ריק׃ | 1 |
ರಾಷ್ಟ್ರಗಳು ಒಳಸಂಚು ಮಾಡುವುದೂ ಜನಾಂಗಗಳು ವ್ಯರ್ಥವಾಗಿ ಕುತಂತ್ರ ಮಾಡುವುದೂ ಏಕೆ?
יתיצבו מלכי ארץ ורוזנים נוסדו יחד על יהוה ועל משיחו׃ | 2 |
ಯೆಹೋವ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ, ಭೂಲೋಕದ ಅರಸರು ನಿಂತುಕೊಳ್ಳುತ್ತಾರೆ. ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.
ננתקה את מוסרותימו ונשליכה ממנו עבתימו׃ | 3 |
“ಅವರು ಹಾಕಿದ ಬೇಡಿಗಳನ್ನು ಮುರಿದು ಬಂಧಗಳನ್ನು ಹರಿದು ಬೀಸಾಡೋಣ,” ಎನ್ನುತ್ತಾರೆ.
יושב בשמים ישחק אדני ילעג למו׃ | 4 |
ಪರಲೋಕದಲ್ಲಿ ಕೂತಿರುವ ದೇವರು ಅದಕ್ಕೆ ನಗುವರು, ಕರ್ತದೇವರು ಅವರನ್ನು ಕಂಡು ಅಪಹಾಸ್ಯ ಮಾಡುವರು.
אז ידבר אלימו באפו ובחרונו יבהלמו׃ | 5 |
ಕರ್ತದೇವರು ತಮ್ಮ ಕೋಪದಿಂದ ಅವರನ್ನು ಗದರಿಸುತ್ತಾ, ತಮ್ಮ ಬೇಸರದಿಂದ ಅವರನ್ನು ಕಳವಳಪಡಿಸಿ ಹೀಗೆ ಹೇಳುವರು,
ואני נסכתי מלכי על ציון הר קדשי׃ | 6 |
“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”
אספרה אל חק יהוה אמר אלי בני אתה אני היום ילדתיך׃ | 7 |
ನಾನು ಯೆಹೋವ ದೇವರ ತೀರ್ಪನ್ನು ಹೀಗೆ ಪ್ರಕಟಿಸುವೆನು: ಅವರು ನನಗೆ ಹೇಳಿದ್ದು, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ.
שאל ממני ואתנה גוים נחלתך ואחזתך אפסי ארץ׃ | 8 |
ನನ್ನನ್ನು ಕೇಳು, ಆಗ ನಾನು ರಾಷ್ಟ್ರಗಳನ್ನು ನಿನ್ನ ವಾರಸಾಗಿಯೂ, ಭೂಮಿಯ ಕಟ್ಟಕಡೆಯವರೆಗೂ ಇರುವ ದೇಶಗಳನ್ನೂ ನಿಮ್ಮ ಸೊತ್ತಾಗಿಯೂ ಕೊಡುವೆನು.
תרעם בשבט ברזל ככלי יוצר תנפצם׃ | 9 |
ಕಬ್ಬಿಣದ ಗದೆಯಿಂದ ನೀನು ಅವರನ್ನು ದಂಡಿಸಿ, ಮಣ್ಣಿನ ಮಡಕೆಯಂತೆ ಚೂರುಚೂರಾಗಿ ಅವರನ್ನು ಒಡೆದುಹಾಕುವೆ.”
ועתה מלכים השכילו הוסרו שפטי ארץ׃ | 10 |
ಆದ್ದರಿಂದ, ರಾಜರುಗಳೇ, ಈಗ ಜ್ಞಾನವಂತರಾಗಿರಿ. ಭೂಲೋಕದ ಅಧಿಕಾರಿಗಳೇ, ಎಚ್ಚರಿಕೆಯಿಂದಿರಿ.
עבדו את יהוה ביראה וגילו ברעדה׃ | 11 |
ಭಯಭಕ್ತಿಯಿಂದ ಯೆಹೋವ ದೇವರ ಸೇವೆಮಾಡಿರಿ, ನಡುಗುತ್ತಾ ಅವರ ಆಳ್ವಿಕೆಯಲ್ಲಿ ಉಲ್ಲಾಸಪಡಿರಿ.
נשקו בר פן יאנף ותאבדו דרך כי יבער כמעט אפו אשרי כל חוסי בו׃ | 12 |
ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.