< תהילים 30 >
מזמור שיר חנכת הבית לדוד ארוממך יהוה כי דליתני ולא שמחת איבי לי׃ | 1 |
ದೇವಾಲಯದ ಸಮರ್ಪಣೆಗಾಗಿ ದಾವೀದನು ಸಂಯೋಜಿಸಿದ ಹಾಡು. ದಾವೀದನ ಕೀರ್ತನೆ. ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವೆನು; ನೀವು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿದ್ದೀರಿ. ನನ್ನನ್ನು ಮೇಲಕ್ಕೆ ಎತ್ತಿದ್ದೀರಿ.
יהוה אלהי שועתי אליך ותרפאני׃ | 2 |
ನನ್ನ ದೇವರಾದ ಯೆಹೋವ ದೇವರೇ, ಸಹಾಯಕ್ಕಾಗಿ ನಿಮಗೆ ಮೊರೆಯಿಡಲು, ನನ್ನನ್ನು ಸ್ವಸ್ಥಮಾಡಿದ್ದೀರಿ.
יהוה העלית מן שאול נפשי חייתני מיורדי בור׃ (Sheol ) | 3 |
ಯೆಹೋವ ದೇವರೇ, ನನ್ನ ಪ್ರಾಣವನ್ನು ಪಾತಾಳದೊಳಗಿಂದ ಎತ್ತಿದ್ದೀರಿ; ನಾನು ಸಮಾಧಿ ಸೇರದ ಹಾಗೆ ನನ್ನನ್ನು ಬದುಕಿಸಿದ್ದೀರಿ. (Sheol )
זמרו ליהוה חסידיו והודו לזכר קדשו׃ | 4 |
ಯೆಹೋವ ದೇವರ ವಿಶ್ವಾಸಿಗಳೇ ಅವರನ್ನು ಕೊಂಡಾಡಿರಿ; ಅವರ ಪರಿಶುದ್ಧ ನಾಮವನ್ನು ಕೊಂಡಾಡಿರಿ.
כי רגע באפו חיים ברצונו בערב ילין בכי ולבקר רנה׃ | 5 |
ಅವರ ಕೋಪವು ಕ್ಷಣಮಾತ್ರವೇ; ಆದರೆ ಅವರ ದಯೆಯು ಜೀವಮಾನವೆಲ್ಲಾ ಇರುತ್ತದೆ; ರಾತ್ರಿಯಲ್ಲಿ ದುಃಖ ಬಂದಿದ್ದರೂ; ಬೆಳಿಗ್ಗೆ ಆನಂದವು ಬರುವುದು.
ואני אמרתי בשלוי בל אמוט לעולם׃ | 6 |
ನಾನು ಸುರಕ್ಷಿತನಾಗಿದ್ದಾಗ, “ನಾನೆಂದೂ ಕದಲುವುದಿಲ್ಲ,” ಎಂದು ಹೇಳಿಕೊಂಡೆನು.
יהוה ברצונך העמדתה להררי עז הסתרת פניך הייתי נבהל׃ | 7 |
ಯೆಹೋವ ದೇವರೇ, ನಿಮ್ಮ ದಯೆಯಿಂದ ನನ್ನ ರಾಜ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀರಿ ಆದರೆ ನೀವು ನಿಮ್ಮ ಮುಖವನ್ನು ಮರೆಮಾಡಲು ನಾನು ಕಳವಳಗೊಂಡೆನು.
אליך יהוה אקרא ואל אדני אתחנן׃ | 8 |
ಯೆಹೋವ ದೇವರೇ, ನಾನು ನಿಮಗೆ ಮೊರೆಯಿಟ್ಟೆನು; ಕರುಣೆಗಾಗಿ ಯೆಹೋವ ಕರ್ತ ಆಗಿರುವವರಿಗೆ ಬಿನ್ನವಿಸಿದೆನು.
מה בצע בדמי ברדתי אל שחת היודך עפר היגיד אמתך׃ | 9 |
ನಾನು ಸಮಾಧಿಯಲ್ಲಿ ಇಳಿದು ಹೋಗಿ ನಾಶವಾದರೆ, ಅದರಿಂದ ನಿಮಗೆ ಆಗುವ ಲಾಭವೇನು? ಧೂಳು ನಿಮ್ಮನ್ನು ಸ್ತುತಿಸುವುದೋ? ಅದು ನಿಮ್ಮ ನಂಬಿಗಸ್ತಿಕೆಯನ್ನು ಪ್ರಕಟಿಸುವುದೋ?
שמע יהוה וחנני יהוה היה עזר לי׃ | 10 |
ಯೆಹೋವ ದೇವರೇ, ಲಾಲಿಸು; ನನ್ನನ್ನು ಕರುಣಿಸಿರಿ; ಯೆಹೋವ ದೇವರೇ, ನನಗೆ ಸಹಾಯಕರಾಗಿರಿ.
הפכת מספדי למחול לי פתחת שקי ותאזרני שמחה׃ | 11 |
ನೀವು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರುಗಿಸಿದ್ದೀರಿ; ನೀವು ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಹರ್ಷವಸ್ತ್ರವನ್ನು ನನಗೆ ಧರಿಸಿದ್ದೀರಿ.
למען יזמרך כבוד ולא ידם יהוה אלהי לעולם אודך׃ | 12 |
ಆದ್ದರಿಂದ ನನ್ನ ಹೃದಯವು ಮೌನವಿರದೆ ನಿಮ್ಮನ್ನು ಯುಗಯುಗಕ್ಕೂ ಕೊಂಡಾಡುತ್ತಿರುವುದು. ನನ್ನ ದೇವರಾದ ಯೆಹೋವ ದೇವರೇ, ನಾನು ನಿಮ್ಮನ್ನು ಸದಾಕಾಲವೂ ಸ್ತುತಿಸುವೆನು.