< תהילים 34 >
לדוד בשנותו את טעמו לפני אבימלך ויגרשהו וילך אברכה את יהוה בכל עת תמיד תהלתו בפי׃ | 1 |
ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಕ್ಕೆ ಕಳುಹಿಸಿ ರಚಿಸಿದ ಕೀರ್ತನೆ. ನಾನು ಎಲ್ಲಾ ಕಾಲಗಳಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು; ಅವರ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.
ביהוה תתהלל נפשי ישמעו ענוים וישמחו׃ | 2 |
ಯೆಹೋವ ದೇವರಲ್ಲಿ ನನ್ನ ಪ್ರಾಣವು ಹಿಗ್ಗುವುದು; ಇದನ್ನು ದೀನರು ಕೇಳಿ ಸಂತೋಷಪಡುವರು.
גדלו ליהוה אתי ונרוממה שמו יחדו׃ | 3 |
ನನ್ನ ಸಂಗಡ ಯೆಹೋವ ದೇವರನ್ನು ಮಹಿಮೆಪಡಿಸಿರಿ; ನಾವು ಒಟ್ಟಾಗಿ ಅವರ ಹೆಸರನ್ನು ಘನಪಡಿಸೋಣ.
דרשתי את יהוה וענני ומכל מגורותי הצילני׃ | 4 |
ನಾನು ಯೆಹೋವ ದೇವರನ್ನು ಹುಡುಕಿದೆನು; ಆಗ ಅವರು ನನಗೆ ಉತ್ತರಕೊಟ್ಟು, ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದರು.
הביטו אליו ונהרו ופניהם אל יחפרו׃ | 5 |
ದೇವರನ್ನು ದೃಷ್ಟಿಸಿದವರು ಪ್ರಕಾಶ ಹೊಂದಿದರು; ಅಂಥವರ ಮುಖಗಳು ನಾಚಿಕೆಯಿಂದ ಕುಂದಿಹೋಗುವುದಿಲ್ಲ.
זה עני קרא ויהוה שמע ומכל צרותיו הושיעו׃ | 6 |
ಬಡವನಾದ ನಾನು ಕರೆಯಲು ಯೆಹೋವ ದೇವರು ಕೇಳಿ ನನ್ನ ಎಲ್ಲಾ ಇಕ್ಕಟ್ಟುಗಳೊಳಗಿಂದ ನನ್ನನ್ನು ರಕ್ಷಿಸಿದರು.
חנה מלאך יהוה סביב ליראיו ויחלצם׃ | 7 |
ದೇವರಿಗೆ ಭಯಪಡುವವರ ಸುತ್ತಲೂ ಯೆಹೋವ ದೇವರ ದೂತನು ಇಳಿದುಕೊಂಡು ಅವರನ್ನು ಕಾಪಾಡುತ್ತಾನೆ.
טעמו וראו כי טוב יהוה אשרי הגבר יחסה בו׃ | 8 |
ಯೆಹೋವ ದೇವರು ಒಳ್ಳೆಯವರೆಂದು ರುಚಿಸಿ ನೋಡಿರಿ; ಅವರನ್ನು ಆಶ್ರಯಿಸುವ ಮನುಷ್ಯನು ಭಾಗ್ಯವಂತನು.
יראו את יהוה קדשיו כי אין מחסור ליראיו׃ | 9 |
ದೇವರ ಭಕ್ತರೇ, ನೀವು ಯೆಹೋವ ದೇವರಿಗೆ ಭಯಪಡಿರಿ; ಏಕೆಂದರೆ ದೇವಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇಲ್ಲ.
כפירים רשו ורעבו ודרשי יהוה לא יחסרו כל טוב׃ | 10 |
ಸಿಂಹಗಳು ಹಸಿದು ಬಳಲಬಹುದು, ಆದರೆ ಯೆಹೋವ ದೇವರನ್ನು ಹುಡುಕುವವರಿಗೆ ಯಾವ ಒಳ್ಳೆಯದರ ಕೊರತೆಯೂ ಇರುವುದಿಲ್ಲ.
לכו בנים שמעו לי יראת יהוה אלמדכם׃ | 11 |
ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಯೆಹೋವ ದೇವರ ಬಗ್ಗೆ ಭಯವನ್ನು ನಿಮಗೆ ಕಲಿಸುವೆನು.
מי האיש החפץ חיים אהב ימים לראות טוב׃ | 12 |
ನಿಮ್ಮಲ್ಲಿ ಜೀವನವನ್ನು ಪ್ರೀತಿಸುವವನು ಮತ್ತು ಬಹಳ ದಿನಗಳವರೆಗೆ ಬದುಕಬೇಕೆ?
נצר לשונך מרע ושפתיך מדבר מרמה׃ | 13 |
ನೀನು ಕೇಡಿನಿಂದ ನಿನ್ನ ನಾಲಿಗೆಯನ್ನು, ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ನಿಯಂತ್ರಿಸಿಕೋ.
סור מרע ועשה טוב בקש שלום ורדפהו׃ | 14 |
ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
עיני יהוה אל צדיקים ואזניו אל שועתם׃ | 15 |
ನೀತಿವಂತರ ಮೇಲೆ ಯೆಹೋವ ದೇವರು ದೃಷ್ಟಿ ಇಡುತ್ತಾರೆ, ಅವರು ಮೊರೆಯಿಡುವಾಗ ದೇವರು ಕಿವಿಗೊಡುತ್ತಾರೆ.
פני יהוה בעשי רע להכרית מארץ זכרם׃ | 16 |
ಆದರೆ ಕೆಟ್ಟದ್ದನ್ನು ಮಾಡುವವರಿಗೆ ಯೆಹೋವ ದೇವರು ವಿಮುಖರಾಗಿದ್ದಾರೆ, ಅಂಥವರ ಹೆಸರನ್ನು ಭೂಮಿಯೊಳಗಿಂದ ತೆಗೆದುಹಾಕುವರು.
צעקו ויהוה שמע ומכל צרותם הצילם׃ | 17 |
ನೀತಿವಂತರ ಕೂಗನ್ನು ಯೆಹೋವ ದೇವರು ಕೇಳಿ, ಅವರನ್ನು ಎಲ್ಲಾ ಇಕ್ಕಟ್ಟುಗಳೊಳಗಿಂದ ಬಿಡಿಸುತ್ತಾರೆ.
קרוב יהוה לנשברי לב ואת דכאי רוח יושיע׃ | 18 |
ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ; ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ.
רבות רעות צדיק ומכלם יצילנו יהוה׃ | 19 |
ನೀತಿವಂತನಿಗೆ ತೊಂದರೆಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಯೆಹೋವ ದೇವರು ಅವನನ್ನು ಬಿಡಿಸುತ್ತಾರೆ.
שמר כל עצמותיו אחת מהנה לא נשברה׃ | 20 |
ಅವರು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾರೆ; ಅವುಗಳಲ್ಲಿ ಒಂದಾದರೂ ಮುರಿದು ಹೋಗುವುದಿಲ್ಲ.
תמותת רשע רעה ושנאי צדיק יאשמו׃ | 21 |
ಕೇಡು ದುಷ್ಟನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಶಿಕ್ಷೆಗೆ ಒಳಗಾಗುವರು.
פודה יהוה נפש עבדיו ולא יאשמו כל החסים בו׃ | 22 |
ಯೆಹೋವ ದೇವರು ತಮ್ಮ ಸೇವಕರ ಪ್ರಾಣವನ್ನು ವಿಮೋಚಿಸುತ್ತಾರೆ; ದೇವರನ್ನು ಆಶ್ರಯಿಸುವವರು ಯಾರೂ ಶಿಕ್ಷೆಗೆ ಒಳಗಾಗುವುದಿಲ್ಲ.