< תהילים 37 >

לדוד אל תתחר במרעים אל תקנא בעשי עולה׃ 1
ದಾವೀದನ ಕೀರ್ತನೆ. ಕೆಟ್ಟ ನಡತೆಯುಳ್ಳವರನ್ನು ನೋಡಿ ತಳಮಳಗೊಳ್ಳಬೇಡ; ದುರಾಚಾರಿಗಳನ್ನು ನೋಡಿ ಅಸೂಯೆಪಡಬೇಡ.
כי כחציר מהרה ימלו וכירק דשא יבולון׃ 2
ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು; ಹಸಿರು ಸಸಿಯಂತೆ ಬಾಡಿಹೋಗುವರು.
בטח ביהוה ועשה טוב שכן ארץ ורעה אמונה׃ 3
ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.
והתענג על יהוה ויתן לך משאלת לבך׃ 4
ನೀನು ಯೆಹೋವನಲ್ಲಿ ಸಂತೋಷಿಸು; ಆಗ ಆತನು ನಿನ್ನ ಇಷ್ಟಾರ್ಥಗಳನ್ನು ನೆರವೇರಿಸುವನು.
גול על יהוה דרכך ובטח עליו והוא יעשה׃ 5
ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.
והוציא כאור צדקך ומשפטך כצהרים׃ 6
ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ, ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು.
דום ליהוה והתחולל לו אל תתחר במצליח דרכו באיש עשה מזמות׃ 7
ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.
הרף מאף ועזב חמה אל תתחר אך להרע׃ 8
ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.
כי מרעים יכרתון וקוי יהוה המה יירשו ארץ׃ 9
ಕೆಡುಕರು ತೆಗೆದುಹಾಕಲ್ಪಡುವರು; ಯೆಹೋವನನ್ನು ನಿರೀಕ್ಷಿಸುವವರೇ ದೇಶವನ್ನು ಅನುಭವಿಸುವರು.
ועוד מעט ואין רשע והתבוננת על מקומו ואיננו׃ 10
೧೦ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ.
וענוים יירשו ארץ והתענגו על רב שלום׃ 11
೧೧ಆದರೆ ದೀನರು ದೇಶವನ್ನು ಅನುಭವಿಸುವರು; ಅವರು ಮಹಾಸೌಖ್ಯದಿಂದ ಆನಂದಿಸುವರು.
זמם רשע לצדיק וחרק עליו שניו׃ 12
೧೨ದುಷ್ಟನು ನೀತಿವಂತನಿಗೆ ವಿರುದ್ಧವಾಗಿ ಆಲೋಚಿಸುತ್ತಾನೆ; ಅವನನ್ನು ನೋಡಿ ಹಲ್ಲುಕಡಿಯುತ್ತಾನೆ.
אדני ישחק לו כי ראה כי יבא יומו׃ 13
೧೩ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.
חרב פתחו רשעים ודרכו קשתם להפיל עני ואביון לטבוח ישרי דרך׃ 14
೧೪ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ.
חרבם תבוא בלבם וקשתותם תשברנה׃ 15
೧೫ಆದರೆ ಅವರ ಕತ್ತಿ ಅವರ ಎದೆಯನ್ನೇ ಇರಿದುಬಿಡುವುದು; ಅವರ ಬಿಲ್ಲುಗಳು ಸಿಡಿದು ಮುರಿದುಹೋಗುವವು;
טוב מעט לצדיק מהמון רשעים רבים׃ 16
೧೬ದುಷ್ಟರ ಮಹಾಸಮೃದ್ಧಿಗಿಂತಲೂ ನೀತಿವಂತನ ಬಡತನವೇ ಲೇಸು.
כי זרועות רשעים תשברנה וסומך צדיקים יהוה׃ 17
೧೭ದುಷ್ಟರ ತೋಳುಗಳು ಮುರಿದುಹೋಗುವವು; ನೀತಿವಂತರನ್ನು ಯೆಹೋವನೇ ಉದ್ಧರಿಸುವನು.
יודע יהוה ימי תמימם ונחלתם לעולם תהיה׃ 18
೧೮ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.
לא יבשו בעת רעה ובימי רעבון ישבעו׃ 19
೧೯ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ.
כי רשעים יאבדו ואיבי יהוה כיקר כרים כלו בעשן כלו׃ 20
೨೦ದುಷ್ಟರೋ ನಾಶವಾಗಿ ಹೋಗುವರು; ಯೆಹೋವನ ವೈರಿಗಳು ಹುಲ್ಲುಗಾವಲುಗಳ ಸೊಗಸಿನಂತಿದ್ದು ಮಾಯವಾಗುವರು. ಅವರು ಹಬೆಯಂತೆ ತೋರಿ ಅಡಗಿಹೋಗುವರು.
לוה רשע ולא ישלם וצדיק חונן ונותן׃ 21
೨೧ದುಷ್ಟನು ಸಾಲಮಾಡಿಕೊಂಡು ತೀರಿಸಲಾರದೆ ಹೋಗುವನು; ನೀತಿವಂತನು ಪರೋಪಕಾರಿಯಾಗಿ ಧರ್ಮಕೊಡುವನು.
כי מברכיו יירשו ארץ ומקלליו יכרתו׃ 22
೨೨ಯೆಹೋವನ ಆಶೀರ್ವಾದವು ಯಾರಿಗಿರುವುದೋ ಅವರು ದೇಶವನ್ನು ಅನುಭವಿಸುವರು; ಆತನ ಶಾಪವು ಯಾರಿಗಿರುವುದೋ ಅವರು ತೆಗೆದುಹಾಕಲ್ಪಡುವರು.
מיהוה מצעדי גבר כוננו ודרכו יחפץ׃ 23
೨೩ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.
כי יפל לא יוטל כי יהוה סומך ידו׃ 24
೨೪ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು.
נער הייתי גם זקנתי ולא ראיתי צדיק נעזב וזרעו מבקש לחם׃ 25
೨೫ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.
כל היום חונן ומלוה וזרעו לברכה׃ 26
೨೬ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; ಅವನ ಸಂತತಿಯವರು ಆಶೀರ್ವಾದ ಹೊಂದುವರು.
סור מרע ועשה טוב ושכן לעולם׃ 27
೨೭ಕೆಟ್ಟದ್ದಕ್ಕೆ ಹೋಗದೆ ಒಳ್ಳೆಯದನ್ನೇ ಮಾಡು; ಆಗ ನೀನು ಯಾವಾಗಲೂ ದೇಶದಲ್ಲಿ ವಾಸವಾಗಿರುವಿ.
כי יהוה אהב משפט ולא יעזב את חסידיו לעולם נשמרו וזרע רשעים נכרת׃ 28
೨೮ಯೆಹೋವನು ನ್ಯಾಯವನ್ನು ಮೆಚ್ಚುವವನು; ತನ್ನ ಭಕ್ತರನ್ನು ಎಂದಿಗೂ ಕೈಬಿಡುವವನಲ್ಲ. ಅವರು ಸದಾಕಾಲವೂ ಸುರಕ್ಷಿತರಾಗಿರುವರು. ದುಷ್ಟರ ಸಂತತಿ ತೆಗೆದುಹಾಕಲ್ಪಡುವುದು.
צדיקים יירשו ארץ וישכנו לעד עליה׃ 29
೨೯ನೀತಿವಂತರೋ ದೇಶವನ್ನು ಅನುಭವಿಸುವವರಾಗಿ, ಅದರಲ್ಲಿ ಶಾಶ್ವತವಾಗಿ ವಾಸಿಸುವರು.
פי צדיק יהגה חכמה ולשונו תדבר משפט׃ 30
೩೦ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ.
תורת אלהיו בלבו לא תמעד אשריו׃ 31
೩೧ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವುದು; ಅವನು ಜಾರುವುದೇ ಇಲ್ಲ.
צופה רשע לצדיק ומבקש להמיתו׃ 32
೩೨ದುಷ್ಟನು ಹೊಂಚುಹಾಕಿ ನೀತಿವಂತನನ್ನು ಕೊಲ್ಲಬೇಕೆಂದು ಸಮಯನೋಡುತ್ತಾನೆ.
יהוה לא יעזבנו בידו ולא ירשיענו בהשפטו׃ 33
೩೩ಆದರೆ ಯೆಹೋವನು ಅವನನ್ನು ಅವರ ಕೈಗೆ ಸಿಕ್ಕಗೊಡಿಸುವುದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವುದಿಲ್ಲ.
קוה אל יהוה ושמר דרכו וירוממך לרשת ארץ בהכרת רשעים תראה׃ 34
೩೪ಯೆಹೋವನನ್ನು ನಿರೀಕ್ಷಿಸುವವನಾಗಿ ಆತನ ಮಾರ್ಗವನ್ನೇ ಅನುಸರಿಸು; ಆಗ ಆತನು ನಿನ್ನನ್ನು ಮುಂದಕ್ಕೆ ತಂದು ದೇಶವನ್ನು ಅನುಭವಿಸುವಂತೆ ಮಾಡುವನು; ದುಷ್ಟರು ತೆಗೆದುಹಾಕಲ್ಪಡುವುದನ್ನು ನೀನು ನೋಡುವಿ.
ראיתי רשע עריץ ומתערה כאזרח רענן׃ 35
೩೫ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.
ויעבר והנה איננו ואבקשהו ולא נמצא׃ 36
೩೬ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ, ಅವನು ಇಲ್ಲದೆ ಹೋಗಿದ್ದನು, ಅವನನ್ನು ಹುಡುಕಿದರೂ ಸಿಕ್ಕಲಿಲ್ಲ.
שמר תם וראה ישר כי אחרית לאיש שלום׃ 37
೩೭ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವುದು.
ופשעים נשמדו יחדו אחרית רשעים נכרתה׃ 38
೩೮ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರ ಸಂತಾನವು ತೆಗೆದುಹಾಕಲ್ಪಡುವುದು.
ותשועת צדיקים מיהוה מעוזם בעת צרה׃ 39
೩೯ನೀತಿವಂತರ ರಕ್ಷಣೆ ಯೆಹೋವನಿಂದಲೇ; ಇಕ್ಕಟ್ಟಿನಲ್ಲಿ ಆತನೇ ಅವರಿಗೆ ದುರ್ಗಸ್ಥಾನ.
ויעזרם יהוה ויפלטם יפלטם מרשעים ויושיעם כי חסו בו׃ 40
೪೦ಯೆಹೋವನು ಸಹಾಯಕನಾಗಿ ಅವರನ್ನು ತಪ್ಪಿಸಿ ಬಿಡುವನು; ಅವರು ಆತನ ಆಶ್ರಿತರಾದುದರಿಂದ, ಆತನು ಅವರನ್ನು ದುಷ್ಟರ ಕೈಯಿಂದ ತಪ್ಪಿಸಿ ರಕ್ಷಿಸುವನು.

< תהילים 37 >