< תהילים 37 >
לדוד אל תתחר במרעים אל תקנא בעשי עולה׃ | 1 |
ದಾವೀದನ ಕೀರ್ತನೆ. ಕೆಟ್ಟವರನ್ನು ನೋಡಿ ಕೋಪಿಸಿಕೊಳ್ಳಬೇಡ. ಇಲ್ಲವೆ ಅಕ್ರಮ ಮಾಡುವವರ ಬಗ್ಗೆ ಹೊಟ್ಟೆಕಿಚ್ಚುಪಡಬೇಡ.
כי כחציר מהרה ימלו וכירק דשא יבולון׃ | 2 |
ಏಕೆಂದರೆ, ಅವರು ಹುಲ್ಲಿನ ಹಾಗೆ ಬೇಗ ಒಣಗಿ ಹೋಗುವರು. ಹಸಿರಾದ ಸೊಪ್ಪಿನ ಹಾಗೆ ಬಾಡಿಹೋಗುವರು.
בטח ביהוה ועשה טוב שכן ארץ ורעה אמונה׃ | 3 |
ಯೆಹೋವ ದೇವರಲ್ಲಿ ಭರವಸೆ ಇಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ಹಸಿರುಗಾವಲನ್ನು ಅನುಭವಿಸುವಿ.
והתענג על יהוה ויתן לך משאלת לבך׃ | 4 |
ಯೆಹೋವ ದೇವರಲ್ಲಿ ಆನಂದವಾಗಿರು; ಆಗ ಅವರು ನಿನ್ನ ಹೃದಯದ ಅಪೇಕ್ಷೆಗಳನ್ನು ಈಡೇರಿಸುವರು.
גול על יהוה דרכך ובטח עליו והוא יעשה׃ | 5 |
ನಿನ್ನ ಮಾರ್ಗವನ್ನು ಯೆಹೋವ ದೇವರಿಗೆ ಒಪ್ಪಿಸು; ಅವರಲ್ಲಿ ಭರವಸೆ ಇಡು; ಅವರು ನಿನಗೆ ಇದನ್ನು ಮಾಡುವರು:
והוציא כאור צדקך ומשפטך כצהרים׃ | 6 |
ಅವರು ನಿನ್ನ ನೀತಿಯನ್ನು ಉದಯದ ಬೆಳಕಿನ ಹಾಗೆ ಮಾಡುವರು, ಅವರು ನಿನ್ನ ನ್ಯಾಯವನ್ನು ಮಧ್ಯಾಹ್ನದ ಸೂರ್ಯನ ಹಾಗೆ ಹೊಳೆಯುವಂತೆ ಮಾಡುವರು.
דום ליהוה והתחולל לו אל תתחר במצליח דרכו באיש עשה מזמות׃ | 7 |
ಯೆಹೋವ ದೇವರ ಮುಂದೆ ಶಾಂತನಾಗಿರು; ಮೌನವಾಗಿದ್ದು ಅವರಿಗಾಗಿ ಎದುರು ನೋಡು; ತಮ್ಮ ಮಾರ್ಗದಲ್ಲಿ ಸಫಲವಾಗುವವರನ್ನು ಕಂಡು ಸಿಡುಕಬೇಡ. ಕುಯುಕ್ತಿಗಳನ್ನು ನಡೆಸುವ ಮನುಷ್ಯರನ್ನು ಕಂಡು ಕೋಪ ಮಾಡಿಕೊಳ್ಳಬೇಡ.
הרף מאף ועזב חמה אל תתחר אך להרע׃ | 8 |
ಕೋಪವನ್ನು ಅಡಗಿಸು ಮತ್ತು ರೋಷವನ್ನು ಬಿಡು. ಸಿಡುಕಬೇಡ, ಅದು ಕೆಟ್ಟತನಕ್ಕೆ ನಡೆಸುತ್ತದೆ.
כי מרעים יכרתון וקוי יהוה המה יירשו ארץ׃ | 9 |
ಏಕೆಂದರೆ, ದುರ್ಮಾರ್ಗಿಗಳು ನಾಶವಾಗುವರು; ಯೆಹೋವ ದೇವರನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನಮಾಡಿಕೊಳ್ಳುವರು.
ועוד מעט ואין רשע והתבוננת על מקומו ואיננו׃ | 10 |
ಇನ್ನು ಸ್ವಲ್ಪ ಸಮಯದಲ್ಲಿ ದುಷ್ಟನು ಕಾಣದೆ ಹೋಗುವನು. ಅವನನ್ನು ಹುಡುಕಿದರೂ ಸಿಕ್ಕುವುದೇ ಇಲ್ಲ.
וענוים יירשו ארץ והתענגו על רב שלום׃ | 11 |
ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನಮಾಡಿಕೊಳ್ಳುವರು. ದೀನರು ಬಹಳ ಸಮಾಧಾನವನ್ನೂ ಸಮೃದ್ಧಿಯನ್ನು ಅನುಭವಿಸುವರು.
זמם רשע לצדיק וחרק עליו שניו׃ | 12 |
ದುಷ್ಟನು ನೀತಿವಂತನಿಗಾಗಿ ಒಳಸಂಚು ಮಾಡುತ್ತಾನೆ, ಆದರೆ ಅವನನ್ನು ಕಂಡು ಹಲ್ಲು ಕಡಿಯುತ್ತಾನೆ.
אדני ישחק לו כי ראה כי יבא יומו׃ | 13 |
ದುಷ್ಟನ ದಿವಸ ಬರುತ್ತದೆಂದು ತಿಳಿದು ಯೆಹೋವ ದೇವರು ನಗುತ್ತಾರೆ.
חרב פתחו רשעים ודרכו קשתם להפיל עני ואביון לטבוח ישרי דרך׃ | 14 |
ದುಷ್ಟರು ಬಡವನನ್ನೂ ದೀನನನ್ನೂ ಬೀಳಿಸಬೇಕೆಂದು ಖಡ್ಗವನ್ನು ಹಿರಿದಿದ್ದಾರೆ, ಸನ್ಮಾರ್ಗದವರನ್ನು ಕೊಲ್ಲುವುದಕ್ಕೂ ತಮ್ಮ ಬಿಲ್ಲುಗಳನ್ನು ಬಗ್ಗಿಸಿದ್ದಾರೆ.
חרבם תבוא בלבם וקשתותם תשברנה׃ | 15 |
ಆದರೆ ಅವರ ಖಡ್ಗ ಅವರ ಹೃದಯದಲ್ಲಿ ಇರಿದು ಬಿಡುವುದು; ಅವರ ಬಿಲ್ಲುಗಳು ಮುರಿದುಹೋಗುವವು.
טוב מעט לצדיק מהמון רשעים רבים׃ | 16 |
ದುಷ್ಟರ ಐಶ್ವರ್ಯಕ್ಕಿಂತ ನೀತಿವಂತರ ಅಲ್ಪವೇ ಲೇಸು.
כי זרועות רשעים תשברנה וסומך צדיקים יהוה׃ | 17 |
ಏಕೆಂದರೆ ದುಷ್ಟರ ತೋಳುಗಳು ಮುರಿದುಹೋಗುವವು, ಆದರೆ ನೀತಿವಂತರನ್ನು ಯೆಹೋವ ದೇವರು ಉದ್ಧಾರ ಮಾಡುವರು.
יודע יהוה ימי תמימם ונחלתם לעולם תהיה׃ | 18 |
ನಿರ್ದೋಷಿಗಳು ತಮ್ಮ ದಿವಸಗಳನ್ನು ಯೆಹೋವ ದೇವರ ಪರಾಮರಿಕೆಯಲ್ಲಿ ಕಳೆಯುವರು. ನಿರಪರಾಧಿಯ ಬಾಧ್ಯತೆಯು ಯುಗಯುಗಕ್ಕೂ ಇರುವುದು.
לא יבשו בעת רעה ובימי רעבון ישבעו׃ | 19 |
ಆಪತ್ಕಾಲದಲ್ಲಿ ಅವರು ಕುಂದುವುದಿಲ್ಲ; ಕ್ಷಾಮದ ದಿವಸಗಳಲ್ಲಿ ಸಮೃದ್ಧಿಯನ್ನು ಅನುಭವಿಸುವರು.
כי רשעים יאבדו ואיבי יהוה כיקר כרים כלו בעשן כלו׃ | 20 |
ಆದರೆ ದುಷ್ಟರು ನಾಶವಾಗುವರು; ಯೆಹೋವ ದೇವರ ಶತ್ರುಗಳು ಗದ್ದೆಯ ಹೂಗಳಂತೆ ಬಾಡಿಹೋಗುವರು; ಹೊಗೆಯಂತೆ ಮಾಯವಾಗುವರು.
לוה רשע ולא ישלם וצדיק חונן ונותן׃ | 21 |
ದುಷ್ಟನು ಸಾಲ ಮಾಡಿ ಹಿಂದಿರುಗಿ ಕೊಡದೆ ಹೋಗುವನು. ಆದರೆ ನೀತಿವಂತನು ಧಾರಾಳವಾಗಿ ಕೊಡುತ್ತಾನೆ.
כי מברכיו יירשו ארץ ומקלליו יכרתו׃ | 22 |
ಯೆಹೋವ ದೇವರು ಆಶೀರ್ವದಿಸುವವರು, ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವರು; ಆದರೆ ದೇವರ ಶಾಪಕ್ಕೆ ಗುರಿಯಾಗುವವರು ನಾಶವಾಗುವರು.
מיהוה מצעדי גבר כוננו ודרכו יחפץ׃ | 23 |
ಯೆಹೋವ ದೇವರಲ್ಲಿ ಯಾರು ಹರ್ಷಿಸುತ್ತಾರೋ ಅವರ ಹೆಜ್ಜೆಗಳನ್ನು ಸ್ಥಿರಪಡಿಸುವರು.
כי יפל לא יוטל כי יהוה סומך ידו׃ | 24 |
ಅವನು ಎಡವಿದರೂ ಬಿದ್ದುಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರು ತಾವೇ ತಮ್ಮ ಕೈಯಿಂದ ಅವನನ್ನು ಎತ್ತಿಹಿಡಿಯುವರು.
נער הייתי גם זקנתי ולא ראיתי צדיק נעזב וזרעו מבקש לחם׃ | 25 |
ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಟ್ಟಿರುವುದನ್ನಾಗಲಿ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆ ಬೇಡುವುದನ್ನಾಗಲಿ ಎಂದೂ ನಾನು ನೋಡಲಿಲ್ಲ.
כל היום חונן ומלוה וזרעו לברכה׃ | 26 |
ಅವರು ಯಾವಾಗಲೂ ಧಾರಾಳವಾಗಿ ಸಾಲ ಕೊಡುತ್ತಾರೆ; ನೀತಿವಂತನ ಸಂತತಿಯವರು ಆಶೀರ್ವಾದ ಹೊಂದುವರು.
סור מרע ועשה טוב ושכן לעולם׃ | 27 |
ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು, ಆಗ ಯುಗಯುಗಕ್ಕೂ ನಾಡಿನಲ್ಲಿ ವಾಸಮಾಡುವೆ.
כי יהוה אהב משפט ולא יעזב את חסידיו לעולם נשמרו וזרע רשעים נכרת׃ | 28 |
ಏಕೆಂದರೆ ಯೆಹೋವ ದೇವರು ನ್ಯಾಯವನ್ನು ಪ್ರೀತಿಸುತ್ತಾರೆ; ತಮ್ಮ ನಂಬಿಗಸ್ತ ಜನರನ್ನು ತೊರೆದುಬಿಡರು. ನೀತಿವಂತರು ಸದಾಕಾಲಕವೂ ಸುರಕ್ಷಿತರಾಗಿರುವರು; ಆದರೆ ದುಷ್ಟರ ಸಂತತಿಯು ಅಳಿದುಹೋಗುವುದು.
צדיקים יירשו ארץ וישכנו לעד עליה׃ | 29 |
ನೀತಿವಂತರು ಭೂಮಿಯನ್ನು ಸ್ವಾಧೀನಮಾಡಿಕೊಂಡು ಎಂದೆಂದಿಗೂ ಅದರಲ್ಲಿ ವಾಸವಾಗಿರುವರು.
פי צדיק יהגה חכמה ולשונו תדבר משפט׃ | 30 |
ನೀತಿವಂತನ ಬಾಯಿ ಜ್ಞಾನವನ್ನು ನುಡಿಯುವುದು; ಅವನ ನಾಲಿಗೆ ನ್ಯಾಯವನ್ನು ಮಾತನಾಡುವುದು.
תורת אלהיו בלבו לא תמעד אשריו׃ | 31 |
ಅವನ ದೇವರ ನಿಯಮವೂ ಅವನ ಹೃದಯದಲ್ಲಿ ಇದೆ; ಅವನ ಹೆಜ್ಜೆ ಕದಲುವುದಿಲ್ಲ.
צופה רשע לצדיק ומבקש להמיתו׃ | 32 |
ದುಷ್ಟನು ನೀತಿವಂತನಿಗಾಗಿ ಒಳಸಂಚು ಮಾಡುತ್ತಾನೆ; ಅವನನ್ನು ಕೊಲ್ಲಲು ಹುಡುಕುತ್ತಾನೆ.
יהוה לא יעזבנו בידו ולא ירשיענו בהשפטו׃ | 33 |
ಆದರೆ ಯೆಹೋವ ದೇವರು ಅವನನ್ನು ದುಷ್ಟನ ಕೈಯಲ್ಲಿ ಬಿಡುವುದಿಲ್ಲ; ನ್ಯಾಯ ವಿಚಾರಣೆಯಲ್ಲಿ ನೀತಿವಂತನನ್ನು ಅಪರಾಧಿಯೆಂದು ತೀರ್ಪು ಕೊಡುವುದಿಲ್ಲ.
קוה אל יהוה ושמר דרכו וירוממך לרשת ארץ בהכרת רשעים תראה׃ | 34 |
ಯೆಹೋವ ದೇವರನ್ನು ನಿರೀಕ್ಷಿಸು; ಅವರ ಮಾರ್ಗದಲ್ಲಿ ನಡೆ; ಆಗ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವಂತೆ ನಿನ್ನನ್ನು ಅವರು ಉನ್ನತಕ್ಕೆ ತರುವರು; ದುಷ್ಟರ ವಿನಾಶವನ್ನು ನೀವು ಕಾಣುವಿರಿ.
ראיתי רשע עריץ ומתערה כאזרח רענן׃ | 35 |
ದುಷ್ಟರು ದೊಡ್ಡ ಅಧಿಕಾರದಲ್ಲಿರುವುದನ್ನು ನಾನು ಕಂಡೆನು; ಅವರು ಹಸಿರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದರು.
ויעבר והנה איננו ואבקשהו ולא נמצא׃ | 36 |
ಆದರೆ ಅವರು ಅಳಿದೇ ಹೋದರು; ಅವರನ್ನು ಹುಡುಕಿದೆನು; ಆದರೆ ಅವರು ಸಿಕ್ಕಲಿಲ್ಲ.
שמר תם וראה ישר כי אחרית לאיש שלום׃ | 37 |
ನಿರ್ದೋಷಿಯನ್ನು ಗಮನಿಸು; ಯಥಾರ್ಥನನ್ನು ನೋಡು; ಸಮಾಧಾನ ಹುಡುಕುವವರಿಗೆ ಒಳ್ಳೆಯ ಭವಿಷ್ಯವಿದೆ.
ופשעים נשמדו יחדו אחרית רשעים נכרתה׃ | 38 |
ಆದರೆ ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರಿಗೆ ಒಳ್ಳೆಯ ಭವಿಷ್ಯವಿಲ್ಲ.
ותשועת צדיקים מיהוה מעוזם בעת צרה׃ | 39 |
ನೀತಿವಂತರ ರಕ್ಷಣೆಯು ಯೆಹೋವ ದೇವರಿಂದಲೇ; ಇಕ್ಕಟ್ಟಿನ ಕಾಲದಲ್ಲಿ ದೇವರೇ ಅವರ ಕೋಟೆ.
ויעזרם יהוה ויפלטם יפלטם מרשעים ויושיעם כי חסו בו׃ | 40 |
ಯೆಹೋವ ದೇವರು ಅವರಿಗೆ ಸಹಾಯಮಾಡಿ ಅವರನ್ನು ಬಿಡಿಸುವರು. ದುಷ್ಟರಿಂದ ಅವರನ್ನು ತಪ್ಪಿಸಿ ಬಿಡಿಸುವರು. ಏಕೆಂದರೆ ಅವರು ದೇವರಲ್ಲಿ ಆಶ್ರಯ ಪಡೆದಿದ್ದಾರೆ.