< תהילים 67 >

למנצח בנגינת מזמור שיר אלהים יחננו ויברכנו יאר פניו אתנו סלה׃ 1
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು. ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. (ಸೆಲಾ)
לדעת בארץ דרכך בכל גוים ישועתך׃ 2
ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.
יודוך עמים אלהים יודוך עמים כלם׃ 3
ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
ישמחו וירננו לאמים כי תשפט עמים מישור ולאמים בארץ תנחם סלה׃ 4
ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. (ಸೆಲಾ)
יודוך עמים אלהים יודוך עמים כלם׃ 5
ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.
ארץ נתנה יבולה יברכנו אלהים אלהינו׃ 6
ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ;
יברכנו אלהים וייראו אתו כל אפסי ארץ׃ 7
ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.

< תהילים 67 >