< תהילים 7 >
שגיון לדוד אשר שר ליהוה על דברי כוש בן ימיני יהוה אלהי בך חסיתי הושיעני מכל רדפי והצילני׃ | 1 |
೧ಬೆನ್ಯಾಮೀನ್ ಕುಲದವನಾದ ಕೂಷನ ಮಾತುಗಳ ವಿಷಯದಲ್ಲಿ ದಾವೀದನು ಯೆಹೋವನಿಗಾಗಿ ಹಾಡಿದ ಗೀತೆ. ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ; ಬೆನ್ನಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು.
פן יטרף כאריה נפשי פרק ואין מציל׃ | 2 |
೨ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು, ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು.
יהוה אלהי אם עשיתי זאת אם יש עול בכפי׃ | 3 |
೩ಯೆಹೋವನೇ, ನನ್ನ ದೇವರೇ, ನಾನು ಕೈಗಳಲ್ಲಿ ಅನ್ಯಾಯವುಳ್ಳವನೂ,
אם גמלתי שולמי רע ואחלצה צוררי ריקם׃ | 4 |
೪ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು, ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ;
ירדף אויב נפשי וישג וירמס לארץ חיי וכבודי לעפר ישכן סלה׃ | 5 |
೫ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; ನಿಷ್ಕಾರಣ ವೈರಿಯನ್ನು ರಕ್ಷಿಸಿದೆನಲ್ಲ. (ಸೆಲಾ)
קומה יהוה באפך הנשא בעברות צוררי ועורה אלי משפט צוית׃ | 6 |
೬ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.
ועדת לאמים תסובבך ועליה למרום שובה׃ | 7 |
೭ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ ನೀನು ಪುನಃ ಆರೋಹಣಮಾಡು.
יהוה ידין עמים שפטני יהוה כצדקי וכתמי עלי׃ | 8 |
೮ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.
יגמר נא רע רשעים ותכונן צדיק ובחן לבות וכליות אלהים צדיק׃ | 9 |
೯ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.
מגני על אלהים מושיע ישרי לב׃ | 10 |
೧೦ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; ಆತನು ಯಥಾರ್ಥರನ್ನು ಕಾಪಾಡುತ್ತಾನೆ.
אלהים שופט צדיק ואל זעם בכל יום׃ | 11 |
೧೧ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು; ಆತನು ಯಾವಾಗಲೂ ದುಷ್ಟರ ವಿಷಯದಲ್ಲಿ ಕೋಪವುಳ್ಳವನು.
אם לא ישוב חרבו ילטוש קשתו דרך ויכוננה׃ | 12 |
೧೨ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ.
ולו הכין כלי מות חציו לדלקים יפעל׃ | 13 |
೧೩ಆತನು ಅದಕ್ಕೆ ಮರಣಕರವಾದ ಅಗ್ನಿಬಾಣಗಳನ್ನು ಹೂಡಿ ಅವನ ಮೇಲೆ ಪ್ರಯೋಗಿಸುವುದಕ್ಕೆ ಗುರಿಯಿಟ್ಟು ನಿಂತಿದ್ದಾನೆ.
הנה יחבל און והרה עמל וילד שקר׃ | 14 |
೧೪ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ, ಶೂನ್ಯವನ್ನೇ ಹೆತ್ತನು ನೋಡಿರಿ.
בור כרה ויחפרהו ויפל בשחת יפעל׃ | 15 |
೧೫ಅವನು ಅಗೆದು ಅಗೆದು ಗುಂಡಿಯನ್ನು ತೋಡಿ, ಅದರೊಳಗೆ ತಾನೇ ಬಿದ್ದುಹೋದನಲ್ಲಾ.
ישוב עמלו בראשו ועל קדקדו חמסו ירד׃ | 16 |
೧೬ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು.
אודה יהוה כצדקו ואזמרה שם יהוה עליון׃ | 17 |
೧೭ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.