< תהילים 73 >
מזמור לאסף אך טוב לישראל אלהים לברי לבב׃ | 1 |
ಆಸಾಫನ ಕೀರ್ತನೆ. ದೇವರು ನಿಜವಾಗಿಯೂ ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವರು.
ואני כמעט נטוי רגלי כאין שפכה אשרי׃ | 2 |
ನನ್ನ ಪಾದಗಳು ಬಹಳಮಟ್ಟಿಗೆ ತಪ್ಪುವ ಹಾಗಿದ್ದವು. ನನ್ನ ಹೆಜ್ಜೆಗಳು ಜಾರುವುದಕ್ಕೆ ಬಹು ಸಮೀಪವಾಗಿದ್ದವು.
כי קנאתי בהוללים שלום רשעים אראה׃ | 3 |
ಏಕೆಂದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡಾಗ ಮೂರ್ಖರ ಮೇಲೆ ಹೊಟ್ಟೆಕಿಚ್ಚುಪಟ್ಟೆನು.
כי אין חרצבות למותם ובריא אולם׃ | 4 |
ಏಕೆಂದರೆ ಅವರಿಗೆ ಹೋರಾಟಗಳು ಇಲ್ಲ. ಅವರ ದೇಹವು ಆರೋಗ್ಯಕರ ಮತ್ತು ದೃಢವಾಗಿದೆ.
בעמל אנוש אינמו ועם אדם לא ינגעו׃ | 5 |
ಇತರರ ಹಾಗೆ ಅವರಿಗೆ ಯಾವುದೇ ಹೊರೆ ಇಲ್ಲ ಮಾನವರಿಗೆ ತಗುಲುವ ಯಾವುದೇ ವ್ಯಾಧಿಯೂ ಅವರಿಗೆ ತಗುಲುವುದಿಲ್ಲ.
לכן ענקתמו גאוה יעטף שית חמס למו׃ | 6 |
ಆದ್ದರಿಂದ ಗರ್ವವು ಕಂಠಮಾಲೆಯಂತೆ ಅವರನ್ನು ಸುತ್ತಿದೆ. ದಬ್ಬಾಳಿಕೆ ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತಿದೆ.
יצא מחלב עינמו עברו משכיות לבב׃ | 7 |
ಅವರ ಹೃದಯವು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ದುಷ್ಕಲ್ಪನೆಗಳಿಗೆ ಮಿತಿಯೇ ಇಲ್ಲ.
ימיקו וידברו ברע עשק ממרום ידברו׃ | 8 |
ಅವರು ಹಾಸ್ಯಮಾಡುವವರಾಗಿ ಕೇಡನ್ನೇ ಮಾತನಾಡುತ್ತಾರೆ ದಬ್ಬಾಳಿಕೆ ಮಾಡಲು ಗರ್ವದಿಂದ ಅವರು ಬೆದರಿಕೆ ಹಾಕುತ್ತಾರೆ.
שתו בשמים פיהם ולשונם תהלך בארץ׃ | 9 |
ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ. ಭೂಲೋಕದಲ್ಲೆಲ್ಲಾ ಅವರ ಮಾತು ಮುಂದುವರೆದಿದೆ.
לכן ישיב עמו הלם ומי מלא ימצו למו׃ | 10 |
ಆದ್ದರಿಂದ ಜನರು ಅವರ ಕಡೆಗೆ ತಿರುಗುತ್ತಾರೆ. ಜನರಿಗೆ ಅವರ ಮಾತು ಬಹಳವಾಗಿ ದೊರೆಯುತ್ತದೆ.
ואמרו איכה ידע אל ויש דעה בעליון׃ | 11 |
ಅವರು, “ದೇವರಿಗೆ ಹೇಗೆ ಗೊತ್ತಾಗುವುದು? ಮಹೋನ್ನತನಿಗೆ ಏನಾದರೂ ತಿಳಿಯಲು ಸಾಧ್ಯವೇ?” ಎನ್ನುತ್ತಾರೆ.
הנה אלה רשעים ושלוי עולם השגו חיל׃ | 12 |
ದುಷ್ಟರು ನಿಶ್ಚಿಂತರಾಗಿ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.
אך ריק זכיתי לבבי וארחץ בנקיון כפי׃ | 13 |
ನನ್ನ ಹೃದಯವನ್ನು ಶುದ್ಧ ಮಾಡಿಕೊಂಡಿದ್ದು ವ್ಯರ್ಥವೋ? ನನ್ನ ಅಂಗೈಗಳನ್ನು ನಿರಪರಾಧದಲ್ಲಿ ತೊಳೆದಿದ್ದೂ ವ್ಯರ್ಥವೋ?
ואהי נגוע כל היום ותוכחתי לבקרים׃ | 14 |
ಏಕೆಂದರೆ ನಾನು ದಿನವೆಲ್ಲಾ ಬಾಧೆಪಡುತ್ತಿದ್ದೇನೆ. ಪ್ರತಿ ಉದಯವೂ ನನಗೆ ಹೊಸ ಶಿಕ್ಷೆಯಾಗುತ್ತಿದೆ.
אם אמרתי אספרה כמו הנה דור בניך בגדתי׃ | 15 |
ನಾನು ಈ ಪ್ರಕಾರ ಬಾಯಿತೆರೆದು ಮಾತಾಡಿದ್ದರೆ, ನಿಮ್ಮ ಪ್ರಜೆಗೆ ದ್ರೋಹಿಯಾಗುತ್ತಿದ್ದೆನು.
ואחשבה לדעת זאת עמל היא בעיני׃ | 16 |
ಇದನ್ನೆಲ್ಲಾ ತಿಳಿದುಕೊಳ್ಳುವುದಕ್ಕೆ ನಾನು ಪ್ರಯತ್ನಿಸಿದಾಗ, ಅದು ನನಗೆ ಬಹಳವಾಗಿ ಕಷ್ಟಕರವಾಗಿತ್ತು.
עד אבוא אל מקדשי אל אבינה לאחריתם׃ | 17 |
ನಾನು ದೇವರ ಪರಿಶುದ್ಧ ಆಲಯಕ್ಕೆ ಬರುವವರೆಗೆ ನನಗೆ ಅರ್ಥವಾಗಲಿಲ್ಲ. ಅನಂತರ ಅವರ ಅಂತ್ಯವನ್ನು ನನಗೆ ಅರ್ಥವಾಯಿತು.
אך בחלקות תשית למו הפלתם למשואות׃ | 18 |
ನಿಶ್ಚಯವಾಗಿ ನೀವು ಜಾರುವ ಸ್ಥಳಗಳಲ್ಲಿ ಅವರನ್ನು ಬಿಟ್ಟಿದ್ದೀರಿ. ಅವರನ್ನು ದಂಡಿಸಿಬಿಡು.
איך היו לשמה כרגע ספו תמו מן בלהות׃ | 19 |
ಕ್ಷಣಮಾತ್ರದಲ್ಲಿ ಅವರು ನಾಶವಾದರು. ಅವರು ದಿಗಿಲುಬಿದ್ದು ಸಂಪೂರ್ಣವಾಗಿ ನಾಶವಾದರು.
כחלום מהקיץ אדני בעיר צלמם תבזה׃ | 20 |
ಅವರು ನಿದ್ದೆಯಿಂದ ಎಚ್ಚರಗೊಂಡ ಕನಸಿನಂತೆ ಇರುತ್ತಾರೆ. ಯೆಹೋವ ದೇವರೇ, ನಿಮ್ಮ ದೃಷ್ಟಿಯಲ್ಲಿ ಅವರು ಅಲ್ಪರಾಗಿರಲಿ.
כי יתחמץ לבבי וכליותי אשתונן׃ | 21 |
ನನ್ನ ಹೃದಯವು ದುಃಖಗೊಂಡು, ನನ್ನ ಆತ್ಮವು ಕಹಿಗೊಂಡಿತು.
ואני בער ולא אדע בהמות הייתי עמך׃ | 22 |
ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿಮ್ಮ ಮುಂದೆ ಪಶುವಿನಂತೆ ಇದ್ದೆನು.
ואני תמיד עמך אחזת ביד ימיני׃ | 23 |
ಆದರೂ ನಾನು ನಿಮ್ಮ ಸಂಗಡ ಯಾವಾಗಲೂ ಇದ್ದೇನೆ. ನೀವು ನನ್ನ ಬಲಗೈಯನ್ನು ಹಿಡಿದಿದ್ದೀರಿ.
בעצתך תנחני ואחר כבוד תקחני׃ | 24 |
ನಿಮ್ಮ ಆಲೋಚನೆಯಂತೆ ನನ್ನನ್ನು ನಡೆಸಿ, ತರುವಾಯ ಮಹಿಮೆಗೆ ನನ್ನನ್ನು ಸೇರಿಸುವಿರಿ.
מי לי בשמים ועמך לא חפצתי בארץ׃ | 25 |
ಪರಲೋಕದಲ್ಲಿ ನನಗೆ ನೀವಲ್ಲದೆ ಮತ್ಯಾರಿದ್ದಾರೆ? ಇಹಲೋಕದಲ್ಲಿ ನಿಮ್ಮನ್ನಲ್ಲದೆ ಇನ್ನಾರನ್ನೂ ನಾನು ಬಯಸುವುದಿಲ್ಲ.
כלה שארי ולבבי צור לבבי וחלקי אלהים לעולם׃ | 26 |
ನನ್ನ ತನುಮನಗಳು ಕುಂದುತ್ತವೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ, ನನ್ನ ಪಾಲೂ ಆಗಿದ್ದಾರೆ.
כי הנה רחקיך יאבדו הצמתה כל זונה ממך׃ | 27 |
ದೇವರೇ, ನಿಮ್ಮಿಂದ ದೂರವಾಗಿರುವವರು ನಾಶವಾಗುತ್ತಾರೆ; ನಿಮ್ಮನ್ನು ಬಿಟ್ಟು ದ್ರೋಹ ಮಾಡುವವರೆಲ್ಲರೂ ದಂಡನೆಗೆ ಗುರಿಯಾಗುವರು.
ואני קרבת אלהים לי טוב שתי באדני יהוה מחסי לספר כל מלאכותיך׃ | 28 |
ನನಗಾದರೋ ದೇವರ ಸಮೀಪಕ್ಕೆ ಬರುವುದೇ ಒಳ್ಳೆಯದು. ನಿಮ್ಮ ಕ್ರಿಯೆಗಳನ್ನೆಲ್ಲಾ ಸಾರುವುದಕ್ಕೆ ಸಾರ್ವಭೌಮ ಯೆಹೋವ ದೇವರಲ್ಲಿ ನನ್ನ ಭರವಸೆಯನ್ನು ಇಟ್ಟಿದ್ದೇನೆ.