< תהילים 78 >
משכיל לאסף האזינה עמי תורתי הטו אזנכם לאמרי פי׃ | 1 |
೧ಆಸಾಫನ ಪದ್ಯ. ನನ್ನ ಜನರೇ, ನನ್ನ ಉಪದೇಶವನ್ನು ಕೇಳಿರಿ; ನನ್ನ ನುಡಿಗಳನ್ನು ಕಿವಿಗೊಟ್ಟು ಲಾಲಿಸಿರಿ.
אפתחה במשל פי אביעה חידות מני קדם׃ | 2 |
೨ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು. ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು.
אשר שמענו ונדעם ואבותינו ספרו לנו׃ | 3 |
೩ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು, ಅವರ ಸಂತಾನದವರಿಗೆ ಮರೆಮಾಡದೆ,
לא נכחד מבניהם לדור אחרון מספרים תהלות יהוה ועזוזו ונפלאותיו אשר עשה׃ | 4 |
೪ಯೆಹೋವನ ಘನತೆಯನ್ನು, ಆತನ ಪರಾಕ್ರಮವನ್ನು, ಅದ್ಭುತಕೃತ್ಯಗಳನ್ನು ಮುಂದಣ ಸಂತತಿಯವರಿಗೆ ವಿವರಿಸುವೆವು.
ויקם עדות ביעקב ותורה שם בישראל אשר צוה את אבותינו להודיעם לבניהם׃ | 5 |
೫ಆತನು ಯಾಕೋಬವಂಶದಲ್ಲಿ ತನ್ನ ಕಟ್ಟಳೆಯನ್ನಿಟ್ಟು, ಇಸ್ರಾಯೇಲರಿಗೆ ಧರ್ಮಶಾಸ್ತ್ರವನ್ನು ಕೊಟ್ಟು, ನಮ್ಮ ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, “ಇವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ;
למען ידעו דור אחרון בנים יולדו יקמו ויספרו לבניהם׃ | 6 |
೬ಇದರಿಂದ ಅವು ಅವರ ಮುಂದಿನ ಪೀಳಿಗೆಗೆ ಗೊತ್ತಾಗಿ, ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮತ್ತು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.
וישימו באלהים כסלם ולא ישכחו מעללי אל ומצותיו ינצרו׃ | 7 |
೭ಆಗ ಅವರು ಮೊಂಡರೂ, ಅವಿಧೇಯರೂ, ಚಪಲಚಿತ್ತರೂ, ದೇವದ್ರೋಹಿಗಳೂ ಆದ ತಮ್ಮ ಪೂರ್ವಿಕರಂತೆ ಆಗದೆ,
ולא יהיו כאבותם דור סורר ומרה דור לא הכין לבו ולא נאמנה את אל רוחו׃ | 8 |
೮ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.
בני אפרים נושקי רומי קשת הפכו ביום קרב׃ | 9 |
೯ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸಿದ್ಧರಾಗಿ, ಯುದ್ಧಸಮಯದಲ್ಲಿ ಹಿಂದಿರುಗಿ ಓಡಿಹೋದರು.
לא שמרו ברית אלהים ובתורתו מאנו ללכת׃ | 10 |
೧೦ಅವರು ದೇವರ ನಿಬಂಧನೆಯನ್ನು ಪಾಲಿಸಲಿಲ್ಲ, ಆತನ ಧರ್ಮಶಾಸ್ತ್ರವನ್ನು ಅನುಸರಿಸಲು ಮನಸ್ಸು ಮಾಡಲಿಲ್ಲ.
וישכחו עלילותיו ונפלאותיו אשר הראם׃ | 11 |
೧೧ಆತನ ಕಾರ್ಯಗಳನ್ನು, ಆತನು ತಮ್ಮೆದುರಿನಲ್ಲಿ ನಡೆಸಿದ ಅದ್ಭುತಗಳನ್ನು ಮರೆತುಬಿಟ್ಟರು.
נגד אבותם עשה פלא בארץ מצרים שדה צען׃ | 12 |
೧೨ಆತನು ಐಗುಪ್ತದೇಶದ ಸೋನ್ ಸೀಮೆಯಲ್ಲಿ, ಅವರ ಪೂರ್ವಿಕರ ಸಮಕ್ಷದಲ್ಲಿಯೇ ಆಶ್ಚರ್ಯ ಕ್ರಿಯೆಗಳನ್ನು ನಡೆಸಿದನು.
בקע ים ויעבירם ויצב מים כמו נד׃ | 13 |
೧೩ಆತನು ಸಮುದ್ರವನ್ನು ವಿಭಾಗಿಸಿ, ಅದರ ನೀರನ್ನು ರಾಶಿಯಾಗಿ ನಿಲ್ಲುವಂತೆ ಮಾಡಿ, ಅವರನ್ನು ದಾಟಿಸಿದನು.
וינחם בענן יומם וכל הלילה באור אש׃ | 14 |
೧೪ಹಗಲಿನಲ್ಲಿ ಮೋಡದಿಂದಲೂ, ರಾತ್ರಿಯಲ್ಲಿ ಬೆಂಕಿಯ ಬೆಳಕಿನಿಂದಲೂ, ಆತನು ಅವರನ್ನು ಕರೆದೊಯ್ದನು.
יבקע צרים במדבר וישק כתהמות רבה׃ | 15 |
೧೫ಆತನು ಅರಣ್ಯದಲ್ಲಿ ಬಂಡೆಗಳನ್ನು ಸೀಳಿ, ಅವರಿಗೆ ಸಾಗರದಿಂದಲೋ ಎಂಬಂತೆ ಧಾರಾಳವಾಗಿ ನೀರು ಕುಡಿಸಿದನು.
ויוצא נוזלים מסלע ויורד כנהרות מים׃ | 16 |
೧೬ಗಿರಿಶಿಲೆಯಿಂದ ಜಲಪ್ರವಾಹಗಳನ್ನು ಹೊರಡಿಸಿ, ನದಿಗಳಾಗಿ ಹರಿಯಮಾಡಿದನು.
ויוסיפו עוד לחטא לו למרות עליון בציה׃ | 17 |
೧೭ಆದರೂ ಅವರು ನಿರ್ಜಲಪ್ರದೇಶದಲ್ಲಿ ಪರಾತ್ಪರನಾದ ದೇವರಿಗೆ ಪದೇಪದೇ ಅವಿಧೇಯರಾಗಿ, ಇನ್ನೂ ಹೆಚ್ಚು ಪಾಪಮಾಡುತ್ತಾ ಬಂದರು.
וינסו אל בלבבם לשאל אכל לנפשם׃ | 18 |
೧೮ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಾಗ, ಸಂಶಯ ಮನಸ್ಸಿನಿಂದ ದೇವರನ್ನು ಪರೀಕ್ಷಿಸಿದರು.
וידברו באלהים אמרו היוכל אל לערך שלחן במדבר׃ | 19 |
೧೯ಅವರು ಆತನಿಗೆ ವಿರುದ್ಧವಾಗಿ ಹೇಳಿದ್ದೇನೆಂದರೆ, “ದೇವರು ಅರಣ್ಯದಲ್ಲಿ ಊಟಕ್ಕೆ ಬಡಿಸಬಲ್ಲನೋ?
הן הכה צור ויזובו מים ונחלים ישטפו הגם לחם יוכל תת אם יכין שאר לעמו׃ | 20 |
೨೦ಬಂಡೆಯನ್ನು ಹೊಡೆದು, ನೀರು ಚಿಮ್ಮಿ ಹೊರಗೆ ಬರುವಂತೆಯೂ, ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನು ಕೊಡಲು ಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ” ಎಂಬುದೇ.
לכן שמע יהוה ויתעבר ואש נשקה ביעקב וגם אף עלה בישראל׃ | 21 |
೨೧ಯೆಹೋವನು ಇದನ್ನು ಕೇಳಿ ರೋಷಗೊಂಡನು. ಅವರು ದೇವರಲ್ಲಿ ಭರವಸವಿಡದೆಯೂ, ಆತನ ರಕ್ಷಣೆಯನ್ನು ನಂಬದೆ ಹೋದುದರಿಂದಲೂ,
כי לא האמינו באלהים ולא בטחו בישועתו׃ | 22 |
೨೨ಆತನಿಗೆ ಇಸ್ರಾಯೇಲರ ಮೇಲೆ ಕೋಪವುಂಟಾಯಿತು; ಯಾಕೋಬ್ ವಂಶದವರಲ್ಲಿ ಬೆಂಕಿ ಹತ್ತಿತು.
ויצו שחקים ממעל ודלתי שמים פתח׃ | 23 |
೨೩ಆತನು ಮೇಘಗಳಿಗೆ ಅಪ್ಪಣೆಕೊಟ್ಟು ಆಕಾಶದ್ವಾರಗಳನ್ನು ತೆರೆದು,
וימטר עליהם מן לאכל ודגן שמים נתן למו׃ | 24 |
೨೪ಸ್ವರ್ಗಧಾನ್ಯವಾದ ಮನ್ನವನ್ನು ಅವರಿಗೋಸ್ಕರ ಸುರಿಸಿ, ಉಣ್ಣಲಿಕ್ಕೆ ಕೊಟ್ಟನು.
לחם אבירים אכל איש צידה שלח להם לשבע׃ | 25 |
೨೫ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಸೇವಿಸಿದನು. ಆತನು ಅವರಿಗೆ ಭೋಜನವನ್ನು ಸಂತೃಪ್ತಿಯಾಗಿ ಅನುಗ್ರಹಿಸಿದನು.
יסע קדים בשמים וינהג בעזו תימן׃ | 26 |
೨೬ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನು ಉಂಟುಮಾಡಿ, ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು,
וימטר עליהם כעפר שאר וכחול ימים עוף כנף׃ | 27 |
೨೭ಧೂಳಿನಷ್ಟು ಮಾಂಸವೃಷ್ಟಿಯನ್ನು ಸುರಿಸಿದನು; ಸಮುದ್ರದ ಮರಳಿನಷ್ಟು ಪಕ್ಷಿಗಳು ಅವರಿದ್ದಲ್ಲಿ ಬೀಳುವಂತೆ ಮಾಡಿದನು.
ויפל בקרב מחנהו סביב למשכנתיו׃ | 28 |
೨೮ಅವು ಪಾಳೆಯದ ಮಧ್ಯದಲ್ಲಿಯೇ ಅವರ ಬಿಡಾರಗಳ ಸುತ್ತಲೂ ಬಿದ್ದವು.
ויאכלו וישבעו מאד ותאותם יבא להם׃ | 29 |
೨೯ಅವರು ತಿಂದು ಸಂತೃಪ್ತರಾದರು; ಆತನು ಅವರಿಗೆ ಬಯಸಿದ್ದನ್ನು ಕೊಟ್ಟನು.
לא זרו מתאותם עוד אכלם בפיהם׃ | 30 |
೩೦ಅವರ ಇಷ್ಟಭೋಜನವು ಅವರಿಗೆ ಅಸಹ್ಯವಾಗುವುದಕ್ಕಿಂತ ಮೊದಲು, ಅವರು ಅದನ್ನು ಇನ್ನೂ ಸೇವಿಸುತ್ತಿರುವಾಗಲೇ,
ואף אלהים עלה בהם ויהרג במשמניהם ובחורי ישראל הכריע׃ | 31 |
೩೧ದೇವರ ಕೋಪವು ಅವರಿಗೆ ವಿರುದ್ಧವಾಗಿ ಎದ್ದು, ಅವರಲ್ಲಿ ಕೊಬ್ಬಿದವರನ್ನು ವಧಿಸಿ, ಇಸ್ರಾಯೇಲರ ಪ್ರಾಯಸ್ಥರನ್ನು ನೆಲಕ್ಕುರುಳಿಸಿತು.
בכל זאת חטאו עוד ולא האמינו בנפלאותיו׃ | 32 |
೩೨ಇಷ್ಟಾದರೂ ಪುನಃ ಪುನಃ ಪಾಪಮಾಡುತ್ತಾ ಬಂದರು; ಅವರು ಆತನ ಅದ್ಭುತಕೃತ್ಯಗಳನ್ನು ನಂಬದೆ ಹೋದರು.
ויכל בהבל ימיהם ושנותם בבהלה׃ | 33 |
೩೩ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ, ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು.
אם הרגם ודרשוהו ושבו ושחרו אל׃ | 34 |
೩೪ಸಂಹಾರವಾಗುವಾಗೆಲ್ಲಾ ಅವರು ದೇವರನ್ನು ನೆನಸಿ, ಪುನಃ ಆತನ ಪ್ರಸನ್ನತೆಯನ್ನು ಬಯಸಿ,
ויזכרו כי אלהים צורם ואל עליון גאלם׃ | 35 |
೩೫ದೇವರು ತಮ್ಮ ಬಂಡೆಯು, ಪರಾತ್ಪರನಾದ ದೇವರು, ತಮ್ಮ ವಿಮೋಚಕನು ಆಗಿದ್ದಾನೆ ಎಂಬುದನ್ನು ನೆನಪಿಗೆ ತಂದುಕೊಳ್ಳುವರು.
ויפתוהו בפיהם ובלשונם יכזבו לו׃ | 36 |
೩೬ಆದರೆ ಅವರು ಆತನನ್ನು ತಮ್ಮ ಬಾಯಿಂದ ವಂಚಿಸಿ, ತಮ್ಮ ನಾಲಿಗೆಯಿಂದ ಸುಳ್ಳಾಡಿದರು.
ולבם לא נכון עמו ולא נאמנו בבריתו׃ | 37 |
೩೭ಅವರ ಹೃದಯವು ಆತನಲ್ಲಿ ನೆಲೆಗೊಳ್ಳಲಿಲ್ಲ; ಅವರು ಆತನ ನಿಬಂಧನೆಯನ್ನು ನಿಷ್ಠೆಯಿಂದ ಕೈಗೊಳ್ಳಲಿಲ್ಲ.
והוא רחום יכפר עון ולא ישחית והרבה להשיב אפו ולא יעיר כל חמתו׃ | 38 |
೩೮ಆದರೂ ಆತನು ಕರುಣಾಳುವೂ, ಅಪರಾಧಿಗಳನ್ನು ಸಂಹರಿಸದೆ ಕ್ಷಮಿಸುವವನೂ ಆಗಿ, ತನ್ನ ಸಿಟ್ಟನ್ನೆಲ್ಲಾ ಏರಗೊಡಿಸದೆ, ಅದನ್ನು ಹಲವು ಸಾರಿ ತಡೆಯುತ್ತಾ ಬಂದನು.
ויזכר כי בשר המה רוח הולך ולא ישוב׃ | 39 |
೩೯ಅವರು ಮಾಂಸಮಾತ್ರದವರೂ, ಶ್ವಾಸವನ್ನು ತಿರುಗಿ ಪಡೆಯದವರಾಗಿದ್ದಾರೆ ಎಂಬುದನ್ನು ನೆನಪುಮಾಡಿಕೊಳ್ಳುತ್ತಿದ್ದನು.
כמה ימרוהו במדבר יעציבוהו בישימון׃ | 40 |
೪೦ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು.
וישובו וינסו אל וקדוש ישראל התוו׃ | 41 |
೪೧ಆತನನ್ನು ಪದೇಪದೇ ಪರೀಕ್ಷಿಸಿ, ಇಸ್ರಾಯೇಲರ ಸದಮಲಸ್ವಾಮಿಯನ್ನು ಕೋಪಕ್ಕೆ ಗುರಿಮಾಡಿದರು.
לא זכרו את ידו יום אשר פדם מני צר׃ | 42 |
೪೨ಅವರು ಆತನ ಭುಜಬಲವನ್ನೂ, ತಮ್ಮನ್ನು ಶತ್ರುಗಳಿಂದ ಬಿಡಿಸಿದ ಸಮಯವನ್ನೂ,
אשר שם במצרים אתותיו ומופתיו בשדה צען׃ | 43 |
೪೩ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು, ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು.
ויהפך לדם יאריהם ונזליהם בל ישתיון׃ | 44 |
೪೪ಅವರು ಹಳ್ಳದ ನೀರನ್ನು ಕುಡಿಯಲಾಗದಂತೆ, ಆತನು ಅಲ್ಲಿನ ನದಿಗಳನ್ನು ರಕ್ತವನ್ನಾಗಿ ಮಾರ್ಪಡಿಸಿದನು.
ישלח בהם ערב ויאכלם וצפרדע ותשחיתם׃ | 45 |
೪೫ಅವರನ್ನು ನಾಶಮಾಡುವ ವಿಷದ ಹುಳಗಳನ್ನು, ಹಾಳುಮಾಡುವ ಕಪ್ಪೆಗಳನ್ನು ಕಳುಹಿಸಿಕೊಟ್ಟನು.
ויתן לחסיל יבולם ויגיעם לארבה׃ | 46 |
೪೬ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ, ಕಷ್ಟಫಲವನ್ನು ಮಿಡತೆಗಳಿಗೂ ಕೊಟ್ಟುಬಿಟ್ಟನು.
יהרג בברד גפנם ושקמותם בחנמל׃ | 47 |
೪೭ಅವರ ದ್ರಾಕ್ಷಾಲತೆಗಳನ್ನು ಆನೆಕಲ್ಲಿನಿಂದಲೂ, ಅತ್ತಿಮರಗಳನ್ನು ಕಲ್ಮಳೆಯಿಂದಲೂ ಹಾಳುಮಾಡಿದನು.
ויסגר לברד בעירם ומקניהם לרשפים׃ | 48 |
೪೮ಅವರ ದನಗಳನ್ನು ಕಲ್ಮಳೆಗೂ, ಕುರಿಹಿಂಡುಗಳನ್ನು ಸಿಡಿಲಿಗೂ ಒಪ್ಪಿಸಿದನು.
ישלח בם חרון אפו עברה וזעם וצרה משלחת מלאכי רעים׃ | 49 |
೪೯ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು, ಉಗ್ರಹಿಂಸೆಗಳನ್ನು ಸಂಹಾರಕ ದೂತಗಣವನ್ನೋ ಎಂಬಂತೆ ಕಳುಹಿಸಿದನು.
יפלס נתיב לאפו לא חשך ממות נפשם וחיתם לדבר הסגיר׃ | 50 |
೫೦ತನ್ನ ರೌದ್ರಕ್ಕೆ ಎಡೆಗೊಟ್ಟು ಅವರನ್ನು ಬದುಕಗೊಡಿಸದೆ, ಅವರ ಜೀವವನ್ನು ಮರಣವ್ಯಾಧಿಗೆ ಆಹುತಿಕೊಟ್ಟನು.
ויך כל בכור במצרים ראשית אונים באהלי חם׃ | 51 |
೫೧ಹಾಮನ ವಂಶದವರ ಪ್ರಥಮಫಲವಾಗಿರುವ ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು.
ויסע כצאן עמו וינהגם כעדר במדבר׃ | 52 |
೫೨ಆತನು ಕುರಿಗಳನ್ನೋ ಎಂಬಂತೆ ತನ್ನ ಜನವನ್ನು ಹೊರತಂದು, ಅಡವಿಯಲ್ಲಿ ಹಿಂಡನ್ನು ಪೋಷಿಸಿ ನಡೆಸಿದನು.
וינחם לבטח ולא פחדו ואת אויביהם כסה הים׃ | 53 |
೫೩ಆತನು ಸುರಕ್ಷಿತವಾಗಿ ನಡೆಸಿದ್ದರಿಂದ ಅವರು ಭಯಪಡಲಿಲ್ಲ; ಅವರ ಶತ್ರುಗಳನ್ನು ಸಮುದ್ರವು ಮುಚ್ಚಿಬಿಟ್ಟಿತು;
ויביאם אל גבול קדשו הר זה קנתה ימינו׃ | 54 |
೫೪ಅವರನ್ನು ತನ್ನ ಪವಿತ್ರದೇಶಕ್ಕೆ ಅಂದರೆ ತನ್ನ ಭುಜಬಲದಿಂದ ಸಂಪಾದಿಸಿದ ಈ ಪರ್ವತಸೀಮೆಗೆ ಕರೆದುಕೊಂಡು ಬಂದನು.
ויגרש מפניהם גוים ויפילם בחבל נחלה וישכן באהליהם שבטי ישראל׃ | 55 |
೫೫ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.
וינסו וימרו את אלהים עליון ועדותיו לא שמרו׃ | 56 |
೫೬ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. ಆತನ ವಿಧಿಗಳನ್ನು ಕೈಗೊಳ್ಳದೆ,
ויסגו ויבגדו כאבותם נהפכו כקשת רמיה׃ | 57 |
೫೭ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು. ಮೋಸದ ಬಿಲ್ಲಿನಂತೆ ತಿರುಗಿಕೊಂಡರು.
ויכעיסוהו בבמותם ובפסיליהם יקניאוהו׃ | 58 |
೫೮ಅವರು ತಮ್ಮ ಪೂಜಾಸ್ಥಳಗಳಿಂದ ಆತನನ್ನು ಬೇಸರಗೊಳಿಸಿ, ವಿಗ್ರಹಗಳಿಂದ ರೇಗಿಸಿದರು.
שמע אלהים ויתעבר וימאס מאד בישראל׃ | 59 |
೫೯ದೇವರು ಇದನ್ನು ತಿಳಿದು ರೌದ್ರನಾಗಿ ಇಸ್ರಾಯೇಲರನ್ನು ಸಂಪೂರ್ಣವಾಗಿ ನಿರಾಕರಿಸಿಬಿಟ್ಟನು.
ויטש משכן שלו אהל שכן באדם׃ | 60 |
೬೦ತಾನು ಜನರ ಮಧ್ಯದಲ್ಲಿ ವಾಸಿಸುವುದಕ್ಕೋಸ್ಕರ, ಶಿಲೋವ್ ಪಟ್ಟಣದಲ್ಲಿ ಹಾಕಿಸಿದ ನಿವಾಸಸ್ಥಾನವನ್ನು ತ್ಯಜಿಸಿಬಿಟ್ಟು,
ויתן לשבי עזו ותפארתו ביד צר׃ | 61 |
೬೧ತನ್ನ ಪ್ರತಾಪವನ್ನು ಸೆರೆಯಾಗುವುದಕ್ಕೂ, ಮಹಿಮೆಯನ್ನು ವಿರೋಧಿಗಳಿಗೂ ಒಪ್ಪಿಸಿಬಿಟ್ಟನು.
ויסגר לחרב עמו ובנחלתו התעבר׃ | 62 |
೬೨ಆತನು ತನ್ನ ಪ್ರಜೆಯನ್ನು ಖಡ್ಗಕ್ಕೆ ಗುರಿಮಾಡಿ, ತನ್ನ ಬಾಧ್ಯತೆಯ ಮೇಲೆ ಉಗ್ರನಾದನು.
בחוריו אכלה אש ובתולתיו לא הוללו׃ | 63 |
೬೩ಅವರ ಯೌವನಸ್ಥರು ಅಗ್ನಿಗೆ ಆಹುತಿಯಾದರು; ಅವರ ಕನ್ಯೆಯರು ವಿವಾಹವಾಗಲಿಲ್ಲ.
כהניו בחרב נפלו ואלמנתיו לא תבכינה׃ | 64 |
೬೪ಯಾಜಕರು ಕತ್ತಿಯಿಂದ ಸಂಹೃತರಾದರು; ಇವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸಲಿಲ್ಲ.
ויקץ כישן אדני כגבור מתרונן מיין׃ | 65 |
೬೫ಆ ವರೆಗೆ ನಿದ್ರಿಸುವವನಂತೆಯೂ, ದ್ರಾಕ್ಷಾರಸದಿಂದ ಮೈಮರೆತ ವೀರನಂತೆಯೂ ಇದ್ದ ಕರ್ತನು ಫಕ್ಕನೆ ಎಚ್ಚೆತ್ತು,
ויך צריו אחור חרפת עולם נתן למו׃ | 66 |
೬೬ತನ್ನ ಶತ್ರುಗಳನ್ನು ಸದೆಬಡಿದು, ನಿತ್ಯನಿಂದೆಗೆ ಅವರನ್ನು ಗುರಿಮಾಡಿದನು.
וימאס באהל יוסף ובשבט אפרים לא בחר׃ | 67 |
೬೭ಯೋಸೇಫನ ಕುಲದ ಗುಡಾರವನ್ನು ತಿರಸ್ಕರಿಸಿ, ಎಫ್ರಾಯೀಮ್ ಕುಲವನ್ನು ತ್ಯಜಿಸಿ,
ויבחר את שבט יהודה את הר ציון אשר אהב׃ | 68 |
೬೮ಯೆಹೂದ ಕುಲವನ್ನೂ ಮತ್ತು ತನ್ನ ಪ್ರಿಯವಾದ ಚೀಯೋನ್ ಗಿರಿಯನ್ನೂ ಆರಿಸಿಕೊಂಡನು.
ויבן כמו רמים מקדשו כארץ יסדה לעולם׃ | 69 |
೬೯ಆತನು ತನ್ನ ಆಲಯವನ್ನು ಪರ್ವತದಂತೆಯೂ, ತಾನು ಸ್ಥಾಪಿಸಿದ ಭೂಮಿಯಂತೆಯೂ ಶಾಶ್ವತವಾಗಿ ಕಟ್ಟಿದನು.
ויבחר בדוד עבדו ויקחהו ממכלאת צאן׃ | 70 |
೭೦ಇದಲ್ಲದೆ ಆತನು ತನ್ನ ಸೇವಕನಾದ ದಾವೀದನನ್ನು ಆರಿಸಿಕೊಂಡು, ಕುರಿಹಟ್ಟಿಯಿಂದ ತೆಗೆದುಕೊಂಡು,
מאחר עלות הביאו לרעות ביעקב עמו ובישראל נחלתו׃ | 71 |
೭೧ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ, ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವತ್ತಾಗಿರುವ ಇಸ್ರಾಯೇಲರನ್ನು ಸಾಕುವುದಕ್ಕೆ ನೇಮಿಸಿದನು.
וירעם כתם לבבו ובתבונות כפיו ינחם׃ | 72 |
೭೨ಇವನು ಅವರನ್ನು ಯಥಾರ್ಥಹೃದಯದಿಂದ ಸಾಕಿ, ತನ್ನ ಹಸ್ತಕೌಶಲ್ಯದಿಂದ ನಡೆಸಿದನು.