< תהילים 89 >
משכיל לאיתן האזרחי חסדי יהוה עולם אשירה לדר ודר אודיע אמונתך בפי׃ | 1 |
ಮಾಸ್ಕಿಲ ರಾಗದಿಂದ ಹಾಡತಕ್ಕದ್ದು. ಜೇರಹ ಕುಲದವನಾದ ಏತಾನನ ಪದ್ಯ. ಯೆಹೋವ ದೇವರ ಮಹಾ ಪ್ರೀತಿಯನ್ನು ಯುಗಯುಗಕ್ಕೂ ಹಾಡುವೆನು. ತಲತಲಾಂತರಕ್ಕೂ ನಿಮ್ಮ ನಂಬಿಗಸ್ತಿಕೆಯನ್ನು ನನ್ನ ಬಾಯಿ ತಿಳಿಯಪಡಿಸುವುದು.
כי אמרתי עולם חסד יבנה שמים תכן אמונתך בהם׃ | 2 |
ಎಂದೆಂದಿಗೂ ನಿಮ್ಮ ಪ್ರೀತಿಯನ್ನು ಸಾರುವೆನು. ಪರಲೋಕದಲ್ಲಿ ನಿಮ್ಮ ನಂಬಿಗಸ್ತಿಕೆಯನ್ನು ಸ್ಥಿರಪಡಿಸಿದ್ದೀರಿ ಎಂದು ಘೋಷಿಸುವೆನು.
כרתי ברית לבחירי נשבעתי לדוד עבדי׃ | 3 |
ನೀವು ಹೇಳಿದ್ದೇನಂದರೆ, “ನಾನು ಆಯ್ದುಕೊಂಡವನ ಸಂಗಡ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ. ನಾನು ನನ್ನ ಸೇವಕನಾದ ದಾವೀದನಿಗೆ ಪ್ರಮಾಣ ಮಾಡಿದ್ದೇನೆ.
עד עולם אכין זרעך ובניתי לדר ודור כסאך סלה׃ | 4 |
‘ಎಂದೆಂದಿಗೂ ನಿಮ್ಮ ಸಂತತಿಯನ್ನು ಸ್ಥಿರಪಡಿಸುವೆನು ತಲತಲಾಂತರಕ್ಕೂ ನಿಮ್ಮ ಸಿಂಹಾಸನವನ್ನು ಕಟ್ಟುವೆನು.’”
ויודו שמים פלאך יהוה אף אמונתך בקהל קדשים׃ | 5 |
ಯೆಹೋವ ದೇವರೇ, ಆಕಾಶಗಳು ನಿಮ್ಮ ಅದ್ಭುತಗಳನ್ನೂ ಪರಿಶುದ್ಧರ ಸಭೆಯಲ್ಲಿ ನಿಮ್ಮ ನಂಬಿಗಸ್ತಿಕೆಯನ್ನೂ ಕೊಂಡಾಡುವುವು.
כי מי בשחק יערך ליהוה ידמה ליהוה בבני אלים׃ | 6 |
ಪ್ರಪಂಚದಲ್ಲಿ ಯೆಹೋವ ದೇವರಿಗೆ ಸಮಾನನಾದವನು ಯಾರು? ಪರಲೋಕ ಜೀವಿಗಳಲ್ಲಿ ಯೆಹೋವ ದೇವರಿಗೆ ಸಮಾನನಾದವನು ಯಾರು?
אל נערץ בסוד קדשים רבה ונורא על כל סביביו׃ | 7 |
ಅವರು ಪರಿಶುದ್ಧರ ಸಭೆಯಲ್ಲಿ ಭಯಭಕ್ತಿಗೆ ಪಾತ್ರರಾದ ದೇವರು. ತಮ್ಮ ಎಲ್ಲಾ ಪರಿವಾರದವರಿಗಿಂತ ಅವರು ಅತಿಶಯವಾದವರು.
יהוה אלהי צבאות מי כמוך חסין יה ואמונתך סביבותיך׃ | 8 |
ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮ ಹಾಗೆ ಶಕ್ತರು ಯಾರು ಇದ್ದಾರೆ? ಯೆಹೋವ ದೇವರೇ, ನೀವು ಶಕ್ತರು, ನಿಮ್ಮ ನಂಬಿಗಸ್ತಿಕೆಯು ನಿಮ್ಮನ್ನು ಸುತ್ತುವರಿದಿದೆ.
אתה מושל בגאות הים בשוא גליו אתה תשבחם׃ | 9 |
ನೀವು ಸಮುದ್ರದ ಏರುವಿಕೆಯನ್ನು ಆಳುತ್ತೀರಿ. ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀರಿ.
אתה דכאת כחלל רהב בזרוע עזך פזרת אויביך׃ | 10 |
ಹತನಾದವನಂತೆ ನೀವು ರಹಬನ್ನು ಜಯಿಸಿದ್ದೀರಿ. ನಿಮ್ಮ ಭುಜಬಲದಿಂದ ನಿಮ್ಮ ಶತ್ರುಗಳನ್ನು ಚದರಿಸಿದ್ದೀರಿ.
לך שמים אף לך ארץ תבל ומלאה אתה יסדתם׃ | 11 |
ಆಕಾಶಗಳು ನಿಮ್ಮವು, ಭೂಮಿಯು ಸಹ ನಿಮ್ಮದು. ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನೀವು ಉಂಟುಮಾಡಿದ್ದೀರಿ.
צפון וימין אתה בראתם תבור וחרמון בשמך ירננו׃ | 12 |
ಉತ್ತರವನ್ನೂ ದಕ್ಷಿಣವನ್ನೂ ನೀವೇ ನಿರ್ಮಿಸಿದ್ದೀರಿ. ತಾಬೋರೂ, ಹೆರ್ಮೋನೂ ನಿಮ್ಮ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
לך זרוע עם גבורה תעז ידך תרום ימינך׃ | 13 |
ನಿಮ್ಮ ಭುಜವು ಶಕ್ತಿಯುತವಾದದ್ದು. ನಿಮ್ಮ ಕೈ ಬಲವುಳ್ಳದ್ದು; ನಿಮ್ಮ ಬಲಗೈ ಉನ್ನತವಾದದ್ದು.
צדק ומשפט מכון כסאך חסד ואמת יקדמו פניך׃ | 14 |
ನೀತಿಯೂ, ನ್ಯಾಯವೂ ನಿಮ್ಮ ಸಿಂಹಾಸನದ ಅಸ್ತಿವಾರವಾಗಿವೆ. ಪ್ರೀತಿಯೂ, ಸತ್ಯತೆಯೂ ನಿಮ್ಮ ಮುಂದೆ ಹೋಗುತ್ತವೆ.
אשרי העם יודעי תרועה יהוה באור פניך יהלכון׃ | 15 |
ನಿಮ್ಮ ಉತ್ಸಾಹ ಧ್ವನಿಯನ್ನು ಕೇಳಿದ ಜನರು ಧನ್ಯರು. ಯೆಹೋವ ದೇವರೇ, ನಿಮ್ಮ ಸನ್ನಿಧಿಯ ಬೆಳಕಿನಲ್ಲಿ ನಡೆಯುವವರು ಧನ್ಯರು.
בשמך יגילון כל היום ובצדקתך ירומו׃ | 16 |
ನಿಮ್ಮ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು, ನಿಮ್ಮ ನೀತಿಯಲ್ಲಿ ಅವರು ಉನ್ನತಕ್ಕೇರುವರು.
כי תפארת עזמו אתה וברצנך תרים קרננו׃ | 17 |
ಏಕೆಂದರೆ ಅವರ ಬಲವೂ ಮಹಿಮೆಯೂ ನೀವೇ. ನಿಮ್ಮ ಮೆಚ್ಚುಗೆಯಿಂದ ನಮ್ಮ ಬಲವೆಂಬ ಕೊಂಬು ಉನ್ನತವಾಗುವುದು.
כי ליהוה מגננו ולקדוש ישראל מלכנו׃ | 18 |
ನಮ್ಮ ಗುರಾಣಿಯು ಯೆಹೋವ ದೇವರದೇ. ನಮ್ಮ ಅರಸರು ಇಸ್ರಾಯೇಲರ ಪರಿಶುದ್ಧರಾಗಿರುವರು.
אז דברת בחזון לחסידיך ותאמר שויתי עזר על גבור הרימותי בחור מעם׃ | 19 |
ಆ ಕಾಲದಲ್ಲಿ ನೀವು ದರ್ಶನದಲ್ಲಿ ನಿಮ್ಮ ಭಕ್ತರಿಗೆ ಹೇಳಿದ್ದೇನೆಂದರೆ: “ಒಬ್ಬ ಶೂರನಿಗೆ ನಾನು ಬಲವನ್ನು ಅನುಗ್ರಹಿಸಿದ್ದೇನೆ. ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತ ಸ್ಥಾನದಲ್ಲಿಟ್ಟಿದ್ದೇನೆ.
מצאתי דוד עבדי בשמן קדשי משחתיו׃ | 20 |
ನನ್ನ ಸೇವಕನಾದ ದಾವೀದನನ್ನು ಕಂಡು, ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.
אשר ידי תכון עמו אף זרועי תאמצנו׃ | 21 |
ನನ್ನ ಕೈ ಅವನನ್ನು ಪರಿಪಾಲಿಸುವುದು; ನನ್ನ ಭುಜವು ಅವನನ್ನು ಬಲಪಡಿಸುವುದು.
לא ישא אויב בו ובן עולה לא יעננו׃ | 22 |
ಶತ್ರುವು ಅವನನ್ನು ಜಯಿಸಲಾರನು. ಯಾವ ದುಷ್ಟನೂ ಅವನನ್ನು ಹಿಂಸೆಪಡಿಸನು.
וכתותי מפניו צריו ומשנאיו אגוף׃ | 23 |
ಅವನ ಮುಂದೆ ಅವನ ವೈರಿಗಳನ್ನು ಓಡಿಸಿಬಿಡುವೆನು; ಅವನ ವಿರೋಧಿಗಳನ್ನು ದಂಡಿಸುವೆನು.
ואמונתי וחסדי עמו ובשמי תרום קרנו׃ | 24 |
ನನ್ನ ನಂಬಿಗಸ್ತಿಕೆಯೂ ಪ್ರೀತಿಯೂ ಅವನ ಸಂಗಡ ಇರುವುವು. ನನ್ನ ಹೆಸರಿನಲ್ಲಿ ಅವನ ಬಲವೆಂಬ ಕೊಂಬು ಉನ್ನತವಾಗುವುದು.
ושמתי בים ידו ובנהרות ימינו׃ | 25 |
ಸಮುದ್ರ ಹಾಗು ನದಿಗಳ ಮೇಲೆ ಅವನ ಬಲಗೈಯನ್ನೂ ಇರಿಸುವೆನು.
הוא יקראני אבי אתה אלי וצור ישועתי׃ | 26 |
ಅವನು, ‘ನೀವು ನನ್ನ ತಂದೆಯೂ ನನ್ನ ದೇವರೂ ನನ್ನ ರಕ್ಷಣೆಯ ಬಂಡೆಯೂ ಆಗಿದ್ದೀರಿ’ ಎಂದು ನನಗೆ ಮೊರೆಯಿಡುವನು.
אף אני בכור אתנהו עליון למלכי ארץ׃ | 27 |
ನಾನು ಆತನನ್ನು ನನ್ನ ಚೊಚ್ಚಲ ಮಗನನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.
לעולם אשמור לו חסדי ובריתי נאמנת לו׃ | 28 |
ಎಂದೆಂದಿಗೂ ಆತನಿಗೋಸ್ಕರ ನನ್ನ ಪ್ರೀತಿಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಆತನೊಂದಿಗೆ ದೃಢವಾಗಿರುವುದು.
ושמתי לעד זרעו וכסאו כימי שמים׃ | 29 |
ಆತನ ಸಂತತಿಯನ್ನು ಸಹ ಎಂದೆಂದಿಗೂ ಆತನ ಸಿಂಹಾಸನವನ್ನು ಆಕಾಶ ಇರುವವರೆಗೂ ಮಾಡುವೆನು.
אם יעזבו בניו תורתי ובמשפטי לא ילכון׃ | 30 |
“ಆತನ ಸಂತತಿಯು ನನ್ನ ನಿಯಮವನ್ನು ಬಿಟ್ಟು, ನನ್ನ ಶಾಸನಗಳನ್ನು ಅನುಸರಿಸಿ ನಡೆಯದೆ,
אם חקתי יחללו ומצותי לא ישמרו׃ | 31 |
ಅವರು ನನ್ನ ತೀರ್ಪುಗಳನ್ನು ಮುರಿದು, ನನ್ನ ಆಜ್ಞೆಗಳನ್ನು ಕೈಗೊಳ್ಳದೆ ಹೋದರೆ,
ופקדתי בשבט פשעם ובנגעים עונם׃ | 32 |
ಕೋಲಿನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು.
וחסדי לא אפיר מעמו ולא אשקר באמונתי׃ | 33 |
ಆದರೂ ನನ್ನ ಪ್ರೀತಿ, ಕರುಣೆಯನ್ನು ಆತನಿಂದ ಸಂಪೂರ್ಣವಾಗಿ ತೊಲಗಿಸೆನು. ಇಲ್ಲವೆ ನನ್ನ ನಂಬಿಗಸ್ತಿಕೆಯಿಂದ ನಾನು ಜಾರಿಹೋಗೆನು.
לא אחלל בריתי ומוצא שפתי לא אשנה׃ | 34 |
ನನ್ನ ಒಡಂಬಡಿಕೆಯನ್ನು ನಾನು ಮುರಿಯೆನು. ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.
אחת נשבעתי בקדשי אם לדוד אכזב׃ | 35 |
ಒಂದೇ ಸಾರಿ ನನ್ನ ಪರಿಶುದ್ಧತ್ವದಿಂದ ಆಣೆಯಿಟ್ಟು ಹೇಳಿದ್ದೇನೆ. ದಾವೀದನಿಗೆ ಸುಳ್ಳಾಡೆನು.
זרעו לעולם יהיה וכסאו כשמש נגדי׃ | 36 |
ಆತನ ಸಂತತಿಯು ಯುಗಯುಗಕ್ಕೂ ಇರುವುದು. ಆತನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವುದು.
כירח יכון עולם ועד בשחק נאמן סלה׃ | 37 |
ಚಂದ್ರನ ಹಾಗೆ ಅದು ಯುಗಯುಗಕ್ಕೂ ಸ್ಥಿರವಾಗಿರುವುದು; ಆಕಾಶದಲ್ಲಿರುವ ಸಾಕ್ಷಿಯ ಹಾಗೆ ನಂಬಿಗಸ್ತಿಕೆಯುಳ್ಳದ್ದಾಗಿರುವುದು.”
ואתה זנחת ותמאס התעברת עם משיחך׃ | 38 |
ಆದರೆ ನೀವು ತಿರಸ್ಕರಿಸಿ ಬಿಟ್ಟುಬಿಟ್ಟ, ನಿಮ್ಮ ಅಭಿಷಿಕ್ತನಿಗೆ ವಿರೋಧವಾಗಿ ಬೇಸರವಾದಿರಿ.
נארתה ברית עבדך חללת לארץ נזרו׃ | 39 |
ನಿಮ್ಮ ಸೇವಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ಮಣ್ಣುಪಾಲು ಮಾಡಿದ್ದೀರಿ.
פרצת כל גדרתיו שמת מבצריו מחתה׃ | 40 |
ಅವನ ಗೋಡೆಗಳನ್ನೆಲ್ಲಾ ಮುರಿದು, ಅವನ ಕೋಟೆಗಳನ್ನು ಹಾಳುಮಾಡಲು ಅನುಮತಿಸಿದ್ದೀರಿ.
שסהו כל עברי דרך היה חרפה לשכניו׃ | 41 |
ದಾರಿಯಲ್ಲಿ ಹೋಗುವವರು ಅವನನ್ನು ಕೊಳ್ಳೆ ಹೊಡೆಯುತ್ತಾರೆ. ತನ್ನ ನೆರೆಯವರಿಗೆ ಅವನು ನಿಂದೆಯಾಗಿದ್ದಾನೆ.
הרימות ימין צריו השמחת כל אויביו׃ | 42 |
ಅವನ ವೈರಿಗಳ ಬಲಗೈ ಉನ್ನತವಾಗಿದೆ. ಅವನ ವೈರಿಗಳೆಲ್ಲಾ ಆನಂದಿಸುತ್ತಿದ್ದಾರೆ.
אף תשיב צור חרבו ולא הקימתו במלחמה׃ | 43 |
ಅವನ ಖಡ್ಗದ ಮೊನೆ ಮೊಂಡಾಗಿದೆ. ಯುದ್ಧದಲ್ಲಿ ನೀವು ಅವನನ್ನು ನಿಲ್ಲುವಂತೆ ಮಾಡಲಿಲ್ಲ.
השבת מטהרו וכסאו לארץ מגרתה׃ | 44 |
ಅವನ ಪ್ರಭೆ ಮುಗಿದು ಹೋಗಿದೆ. ಅವನ ಸಿಂಹಾಸನ ಉರುಳಿಬಿಟ್ಟಿದೆ.
הקצרת ימי עלומיו העטית עליו בושה סלה׃ | 45 |
ಅವನ ಯೌವನದ ದಿವಸಗಳು ಕಡಿಮೆಯಾಗಿದೆ. ನಾಚಿಕೆ ಎಂಬ ವಸ್ತ್ರ ಅವನನ್ನು ಮುಚ್ಚಲು ನೀವು ಅನುಮತಿಸಿದ್ದೀರಿ.
עד מה יהוה תסתר לנצח תבער כמו אש חמתך׃ | 46 |
ಯೆಹೋವ ದೇವರೇ, ಇನ್ನೂ ಎಷ್ಟರವರೆಗೆ? ಸದಾಕಾಲಕ್ಕೆ ನೀವು ಅಡಗಿಕೊಳ್ಳುವಿರಾ? ನಿಮ್ಮ ಬೇಸರವು ಬೆಂಕಿಯ ಹಾಗೆ ಉರಿಯುವುದು ಎಷ್ಟರವರೆಗೆ?
זכר אני מה חלד על מה שוא בראת כל בני אדם׃ | 47 |
ನನ್ನ ಆಯುಸ್ಸು ಎಷ್ಟು ಕಡಿಮೆ ಎಂದು ಜ್ಞಾಪಕಮಾಡಿಕೊಳ್ಳಿರಿ. ನಿರ್ಮಿಸಿದ ಎಲ್ಲಾ ಮನುಷ್ಯರೂ ವ್ಯರ್ಥವಾಗಿದ್ದಾರೆ.
מי גבר יחיה ולא יראה מות ימלט נפשו מיד שאול סלה׃ (Sheol ) | 48 |
ಮರಣವನ್ನು ಕಾಣದೆ ಬದುಕುವಂಥವರು ಯಾರು? ಸಮಾಧಿಯ ಶಕ್ತಿಯಿಂದ ಪ್ರಾಣವನ್ನು ತಪ್ಪಿಸಿಕೊಳ್ಳುವಂಥವರು ಯಾರು? (Sheol )
איה חסדיך הראשנים אדני נשבעת לדוד באמונתך׃ | 49 |
ಯೆಹೋವ ದೇವರೇ, ನಿಮ್ಮ ಸತ್ಯದಲ್ಲಿ ನೀವು ದಾವೀದನಿಗೆ ಆಣೆಯಿಟ್ಟೆ. ನಿಮ್ಮ ಮೊದಲಿನ ಮಹಾ ಪ್ರೀತಿ ಎಲ್ಲಿ?
זכר אדני חרפת עבדיך שאתי בחיקי כל רבים עמים׃ | 50 |
ಯೆಹೋವ ದೇವರೇ, ನಿಮ್ಮ ಸೇವಕನು ನಿಂದೆ ಹೊಂದಿರುವದನ್ನು ನೆನಸಿಕೊಳ್ಳಿರಿ. ಎಲ್ಲಾ ರಾಷ್ಟ್ರಗಳ ಅಪಹಾಸ್ಯವನ್ನು ನಾನು ಹೇಗೆ ಸಹಿಸಿದೆನೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.
אשר חרפו אויביך יהוה אשר חרפו עקבות משיחך׃ | 51 |
ಯೆಹೋವ ದೇವರೇ, ನಿಮ್ಮ ಶತ್ರುಗಳು ನಿಂದಿಸುತ್ತಿದ್ದಾರೆ. ನಿಮ್ಮ ಅಭಿಷಿಕ್ತನ ಹೆಜ್ಜೆ ಹೆಜ್ಜೆಗೂ ನಿಂದಿಸುತ್ತಾರಲ್ಲಾ?
ברוך יהוה לעולם אמן ואמן׃ | 52 |
ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯಾಗಲಿ.