< שיר השירים 6 >
אנה הלך דודך היפה בנשים אנה פנה דודך ונבקשנו עמך׃ | 1 |
ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವಂತೆ ನಿನ್ನ ಪ್ರಿಯನು ಯಾವ ಕಡೆಗೆ ಹೋಗಿದ್ದಾನೆ?
דודי ירד לגנו לערוגות הבשם לרעות בגנים וללקט שושנים׃ | 2 |
ನನ್ನ ಪ್ರಿಯನು ತೋಟಗಳಲ್ಲಿ ಮಂದೆ ಮೇಯಿಸುವುದಕ್ಕೂ, ನೆಲದಾವರೆಗಳನ್ನು ಕೊಯ್ದು ತರುವುದಕ್ಕೂ, ಸುಗಂಧ ಸಸ್ಯಗಳಿರುವ ಉದ್ಯಾನವನಕ್ಕೆ ಹೋಗಿದ್ದಾನೆ.
אני לדודי ודודי לי הרעה בשושנים׃ | 3 |
ನನ್ನ ಪ್ರಿಯನು ನನ್ನವನೇ, ನಾನು ಅವನವಳೇ. ಅವನು ನೆಲದಾವರೆಗಳ ನಡುವೆ ಮಂದೆಯನ್ನು ಮೇಯಿಸುತ್ತಾನೆ.
יפה את רעיתי כתרצה נאוה כירושלם אימה כנדגלות׃ | 4 |
ನನ್ನ ಪ್ರಿಯಳೇ, ನೀನು ತಿರ್ಚ ನಗರದಂತೆ ಸುಂದರಿ, ಯೆರೂಸಲೇಮಿನ ಹಾಗೆ ರಮ್ಯಳು, ಧ್ವಜಗಳಿರುವ ದಂಡಿನ ಹಾಗೆ ಗಂಭೀರಳೂ ಆಗಿರುವೆ.
הסבי עיניך מנגדי שהם הרהיבני שערך כעדר העזים שגלשו מן הגלעד׃ | 5 |
ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು, ಏಕೆಂದರೆ ಅವು ನನ್ನನ್ನು ಜಯಿಸಿವೆ. ನಿನ್ನ ತಲೆಗೂದಲು ಗಿಲ್ಯಾದ್ ಪರ್ವತದಿಂದ ಇಳಿಯುವ ಮೇಕೆಯ ಮಂದೆಯಂತಿದೆ.
שניך כעדר הרחלים שעלו מן הרחצה שכלם מתאימות ושכלה אין בהם׃ | 6 |
ನಿನ್ನ ಹಲ್ಲುಗಳ ಹೊಳಪು ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಗೆ ಸಮಾನ. ಅವು ಜೊತೆಯಾಗಿಯೇ ಇರುತ್ತವೆ. ಅವುಗಳಲ್ಲಿ ಒಂದೂ ಒಂಟಿಯಾಗಿರದು.
כפלח הרמון רקתך מבעד לצמתך׃ | 7 |
ಮುಸುಕಿನೊಳಗಿನ ನಿನ್ನ ಕೆನ್ನೆ ವಿಭಾಗಿಸಿದ ದಾಳಿಂಬೆಯ ಹಣ್ಣಿನ ಹಾಗೆ ಇದೆ.
ששים המה מלכות ושמנים פילגשים ועלמות אין מספר׃ | 8 |
ಅರಸನಿಗೆ ಅರವತ್ತು ಮಂದಿ ರಾಣಿಯರೂ ಎಂಬತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ.
אחת היא יונתי תמתי אחת היא לאמה ברה היא ליולדתה ראוה בנות ויאשרוה מלכות ופילגשים ויהללוה׃ | 9 |
ಆದರೆ ನನಗೆ ನನ್ನ ಪಾರಿವಾಳವು, ನನ್ನ ಪರಿಪೂರ್ಣಳು ಒಬ್ಬಳೇ. ಇವಳು ತನ್ನ ತಾಯಿಗೆ ಒಬ್ಬಳೇ ಮಗಳು. ತನ್ನ ಹೆತ್ತವಳಿಗೆ ಪ್ರಿಯಳು. ಕನ್ನಿಕೆಯರು ಇವಳನ್ನು ಕಂಡು ಆಶೀರ್ವದಿಸಿದರು. ಹೌದು, ರಾಣಿಯರೂ ಉಪಪತ್ನಿಯರೂ ಇವಳನ್ನು ಹೀಗೆಂದು ಹೊಗಳಿದರು:
מי זאת הנשקפה כמו שחר יפה כלבנה ברה כחמה אימה כנדגלות׃ | 10 |
ಮೆರವಣೆಗೆಯಲ್ಲಿ ನಕ್ಷತ್ರಗಳ ಹಾಗೆ ಗಂಭೀರಳೂ, ಚಂದ್ರನ ಹಾಗೆ ಸುಂದರಿಯೂ, ಸೂರ್ಯನ ಹಾಗೆ ಪ್ರಕಾಶಿಸುವವಳೂ ಆಗಿರುವ ಈ ಉದಯವಂತೆ ಯಾರು?
אל גנת אגוז ירדתי לראות באבי הנחל לראות הפרחה הגפן הנצו הרמנים׃ | 11 |
ದ್ರಾಕ್ಷಿಬಳ್ಳಿಯು ಚಿಗುರಿದೆಯೋ, ದಾಳಿಂಬೆ ಗಿಡ ಹೂಬಿಟ್ಟಿದೆಯೋ ಎಂದು ಕಣಿವೆಯಲ್ಲಿನ ಫಲಗಳನ್ನು ನೋಡಲು ನಾನು ಬಾದಾಮಿಯ ತೋಟಕ್ಕೆ ಹೋದೆನು.
לא ידעתי נפשי שמתני מרכבות עמי נדיב׃ | 12 |
ನಾನು ಅದನ್ನು ಅರಿತುಕೊಳ್ಳುವ ಮೊದಲು, ನನ್ನ ಆಸೆ ನನ್ನ ಜನ ಪ್ರಧಾನರ ನಡುವೆ ರಥದ ಮೇಲೆ ಕೂತಿರುವಂತೆ ನನ್ನನ್ನು ನಡೆಸಿತು.
שובי שובי השולמית שובי שובי ונחזה בך מה תחזו בשולמית כמחלת המחנים׃ | 13 |
ತಿರುಗಿ ಬಾ, ತಿರುಗಿ ಬಾ, ಶೂಲಮ್ ಊರಿನವಳೇ, ನಾವು ನಿನ್ನನ್ನು ನೋಡುವಂತೆ ತಿರುಗಿ ಬಾ, ತಿರುಗಿ ಬಾ! ಪ್ರಿಯಕರ ಎರಡು ಗುಂಪಿನ ನರ್ತಕಿಯರ ನಡುವೆ ಕುಣಿಯುತ್ತಿರುವ, ಶೂಲಮ್ ಊರಿನವಳನ್ನು ನೀವು ನೋಡುವುದೇಕೆ?