< 1 कुरिन्थियों 11 >
1 जिस प्रकार मैं मसीह के जैसी चाल चलता हूं, तुम भी मेरी जैसी चाल चलो.
೧ನಾನು ಕ್ರಿಸ್ತನನ್ನು ಅನುಸರಿಸುವಂತೆಯೇ ನೀವು ನನ್ನನ್ನು ಅನುಸರಿಸುವವರಾಗಿರಿ.
2 मैं तुम्हारी तारीफ़ करता हूं कि तुम हर एक क्षेत्र में मुझे याद रखते हो तथा उन शिक्षाओं का मजबूती से पालन करते हो, जैसी मैंने तुम्हें सौंपी थी.
೨ನೀವು ಎಲ್ಲಾದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
3 मैं चाहता हूं कि तुम इस बात को समझ लो कि हर एक पुरुष के अधिष्ठाता (सिर) मसीह येशु हैं, स्त्री का सिर उसका पति है तथा मसीह के सिर परमेश्वर हैं.
೩ಆದರೂ ನೀವು ಒಂದು ಸಂಗತಿಯನ್ನು ತಿಳಿದಿರಬೇಕೆಂಬುದು ನನ್ನ ಇಷ್ಟ. ಅದೇನೆಂದರೆ ಪ್ರತಿ ಪುರುಷನಿಗೂ ಕ್ರಿಸ್ತನು ತಲೆಯಾಗಿದ್ದಾನೆ. ಸ್ತ್ರೀಗೆ ಪುರುಷನು ತಲೆಯಾಗಿದ್ದಾನೆ. ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ.
4 पुरुष का प्रार्थना या भविष्यवाणी करते समय अपना सिर ढके रहना उसके सिर का अपमान है.
೪ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ, ಪ್ರವಾದನೆಯನ್ನಾಗಲಿ ಮಾಡುವ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.
5 स्त्री का प्रार्थना या भविष्यवाणी करते समय अपना सिर उघाड़े रखना उसके सिर का अपमान है—यह सिर मूंडाने के बराबर है.
೫ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಸ್ತ್ರೀಯು ಮುಸುಕಿಲ್ಲದೆ ಇರುವುದೂ ತಲೆಬೋಳಿಸಿಕೊಂಡಿರುವುದೂ ಒಂದೇ.
6 यदि कोई स्त्री अपना सिर ढांकना नहीं चाहती, वह अपने बाल कटवा ले. बाल कटवाना या मुंडवाना लज्जास्पद होता है इसलिये वह अपना सिर ढके रहे.
೬ಸ್ತ್ರೀಯು ಮುಸುಕು ಹಾಕಿಕೊಳ್ಳದಿದ್ದರೆ ಆಕೆಯು ಕೂದಲನ್ನು ತೆಗೆಯಿಸಿಬಿಡಬೇಕಷ್ಟೆ. ಆದರೆ ಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ ತಲೆಬೋಳಿಸಿಕೊಳ್ಳುವುದಾಗಲಿ ಸ್ತ್ರೀಗೆ ಅವಮಾನಕರವಾಗಿದ್ದರೆ ಆಕೆಯು ಮುಸುಕನ್ನು ಹಾಕಿಕೊಳ್ಳಲಿ.
7 पुरुष के लिए सिर ढांकना उचित नहीं क्योंकि वह परमेश्वर का प्रतिरूप तथा गौरव है. इसी प्रकार पुरुष का गौरव स्त्री है
೭ಪುರುಷನು ದೇವರ ಪ್ರತಿರೂಪವೂ ಮತ್ತು ಪ್ರಭಾವವೂ ಆಗಿರುವುದರಿಂದ ತಲೆಯನ್ನು ಮುಚ್ಚಿಕೊಳ್ಳಬಾರದು. ಸ್ತ್ರೀಯಾದರೋ ಪುರುಷನ ಪ್ರಭಾವವಾಗಿದ್ದಾಳೆ.
8 क्योंकि नर की उत्पत्ति नारी से नहीं परंतु नारी की नर से हुई है
೮ಪುರುಷನು ಸ್ತ್ರೀಯಿಂದ ಉತ್ಪತ್ತಿಯಾಗಲಿಲ್ಲ. ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು.
9 नर को नारी के लिए नहीं बनाया गया परंतु नारी को नर के लिए बनाया गया.
೯ಇದಲ್ಲದೆ ಪುರುಷನು ಸ್ತ್ರೀಗೋಸ್ಕರವಾಗಿ ಸೃಷ್ಟಿಸಲ್ಪಡಲಿಲ್ಲ, ಆದರೆ ಸ್ತ್ರೀಯು ಪುರುಷನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಳು.
10 इसलिये स्वर्गदूतों की उपस्थिति का ध्यान रखते हुए स्त्रियों के लिए उचित है कि वे अपनी अधीनता के प्रतीक स्वरूप अपने सिर को ढांक कर रखें.
೧೦ಹೀಗಿರುವುದರಿಂದ ದೂತರ ನಿಮಿತ್ತವಾಗಿ ಸ್ತ್ರೀಯು ಪುರುಷನ ಅಧಿಕಾರವನ್ನು ಸೂಚಿಸುವ ಮುಸುಕನ್ನು ತಲೆಯ ಮೇಲೆ ಹಾಕಿಕೊಂಡಿರಬೇಕು.
11 फिर भी, प्रभु में न तो नारी पुरुष से और न पुरुष नारी से स्वतंत्र है.
೧೧ಆದರೂ ಕರ್ತನ ವಿಷಯದಲ್ಲಿ ಪುರುಷರಿಲ್ಲದೆ ಸ್ತ್ರೀಯರೂ, ಸ್ತ್ರೀಯರಿಲ್ಲದೆ ಪುರುಷರೂ ಇಲ್ಲ.
12 जिस प्रकार नारी की उत्पत्ति नर से हुई है उसी प्रकार अब नर का जन्म नारी से होता है तथा सभी सृष्टि की उत्पत्ति परमेश्वर से है.
೧೨ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು. ಹಾಗೆಯೇ ಪುರುಷನು ಸ್ತ್ರೀ ಮೂಲಕವಾಗಿ ಹುಟ್ಟುತ್ತಾನೆ. ಆದರೆ ದೇವರೇ ಸಮಸ್ತವನ್ನು ಸೃಷ್ಟಿಸಿದಾತನು.
13 तुम्हीं विचार करो: क्या बिना सिर ढके स्त्री का परमेश्वर से प्रार्थना करना शोभा देता है?
೧೩ನಿಮ್ಮೊಳಗೆ ನೀವೇ ಯೋಚಿಸಿ ತೀರ್ಮಾನಿಸಿಕೊಳ್ಳಿರಿ. ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವುದು ಯುಕ್ತವೋ
14 क्या स्वयं प्रकृति से यह स्पष्ट नहीं कि लंबे बाल रखना पुरुष के लिए लज्जा की बात है?
೧೪ಪುರುಷನು ಉದ್ದ ಕೂದಲು ಬೆಳೆಸಿಕೊಂಡರೆ ಅದು ಅವನಿಗೆ ಅವಮಾನಕರವಾಗಿದೆಯೆಂದೂ,
15 इसके विपरीत स्त्री के लंबे बाल उसकी शोभा हैं क्योंकि ये उसे ओढ़नी के रूप में दिए गए हैं.
೧೫ಸ್ತ್ರೀಯು ಉದ್ದ ಕೂದಲು ಬೆಳೆಸಿಕೊಂಡರೆ ಅದು ಅವಳಿಗೆ ಮುಸುಕಿಗೆ ಬದಲಾಗಿ ನೀಡಲಾಗಿದ್ದು ಅದು ಅವಳಿಗೆ ಗೌರವವಾಗಿದೆಯೆಂದೂ ಸ್ವಾಭಾವಿಕವಾಗಿ ನಿಮಗೆ ತಿಳಿಯುತ್ತದಲ್ಲವೋ?
16 यदि कोई इस विषय पर अब भी विवाद करना चाहे तो वह यह समझ ले कि परमेश्वर की कलीसिया में—न तो हमारे यहां या और कहीं—कोई अन्य प्रथा प्रचलित नहीं है.
೧೬ಯಾವನಾದರೂ ಇದರ ಕುರಿತು ವಾಗ್ವಾದ ಮಾಡುವುದಾದರೆ ಇಂಥ ಪದ್ಧತಿ ನಮ್ಮಲ್ಲಿ ಇಲ್ಲ ಮತ್ತು ದೇವರ ಸಭೆಗಳಲ್ಲಿಯೂ ಇಲ್ಲ ಎಂದು ತಿಳಿದುಕೊಳ್ಳಿರಿ.
17 यह आज्ञा देते हुए मैं तुम्हारी कोई बड़ाई नहीं कर रहा: आराधना सभाओं में तुम्हारे इकट्ठा होने से भलाई नहीं परंतु बुराई ही होती है.
೧೭ನಾನು ಇನ್ನು ನಿಮಗೆ ಅಪ್ಪಣೆಕೊಡುವಲ್ಲಿ ನಿಮ್ಮನ್ನು ಹೊಗಳುವುದಿಲ್ಲ. ಯಾಕೆಂದರೆ ನೀವು ಒಟ್ಟಾಗಿ ಸೇರಿಬರುತ್ತಿರುವುದು ಕೇಡಿಗಾಗಿಯೇ ಹೊರತು ಮೇಲಿಗಾಗಿಯಲ್ಲ.
18 सबसे पहले तो यह: जब तुम कलीसिया के रूप में इकट्ठा होते हो, तो मेरे सुनने में यह आया है कि तुममें फूट पड़ी रहती है और मैं एक सीमा तक इसका विश्वास भी करता हूं.
೧೮ಹೇಗೆಂದರೆ ಮೊದಲನೆಯದಾಗಿ ನೀವು ಸಭೆಯಾಗಿ ಸೇರಿಬರುವಾಗ ನಿಮ್ಮಲ್ಲಿ ಭಿನ್ನತೆ, ಭೇದಗಳು ಉಂಟಾಗುತ್ತವೆಂದು ಕೇಳಿದ್ದೇನೆ. ಮತ್ತು ಇದು ನಿಜವೆಂದು ಸ್ವಲ್ಪ ಮಟ್ಟಿಗೆ ನಂಬುತ್ತೇನೆ.
19 हां, यह सच है कि तुम्हारे बीच बंटवारा होना ज़रूरी भी है कि वे, जो परमेश्वर द्वारा चुने हुए हैं, प्रकाश में आ जाएं.
೧೯ನಿಮ್ಮಲ್ಲಿ ಕೆಲವರು ಯೋಗ್ಯರೆಂದು ಕಂಡುಬರುವುದಕ್ಕಾಗಿ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.
20 जिस रीति से तुम भोजन के लिए इकट्ठा होते हो, उसे प्रभु-भोज नहीं कहा जा सकता.
೨೦ನೀವೆಲ್ಲರು ಸೇರಿಬರುವಾಗ ನೀವು ಮಾಡುವ ಭೋಜನವು ಕರ್ತನ ಭೋಜನವಲ್ಲ.
21 उस भोज में जब भोजन का समय आता है, तुम भोजन पर टूट पड़ते हो और किसी की प्रतीक्षा किए बिना अपना अपना भोजन कर लेते हो. परिणामस्वरूप कोई तो भूखा ही रह जाता है और कोई मतवाला हो जाता है.
೨೧ಭೋಜನ ಮಾಡುವಲ್ಲಿ ಪ್ರತಿಯೊಬ್ಬನು ತಾನು ತಂದದ್ದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ. ಹೀಗೆ ಒಬ್ಬನು ಹಸಿದಿರುತ್ತಾನೆ ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.
22 क्या खाने-पीने के लिए तुम्हारे अपने घर नहीं? या तुम परमेश्वर की कलीसिया का तिरस्कार करने तथा निर्धनों को लज्जित करने पर तुले हुए हो? अब मैं क्या कहूं? क्या मैं इसके लिए तुम्हारी सराहना करूं? नहीं! बिलकुल नहीं!
೨೨ನಿಮಗೆ ತಿನ್ನುವುದಕ್ಕೂ, ಕುಡಿಯುವುದಕ್ಕೂ ಮನೆಗಳಿಲ್ಲವೋ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ಅವಮಾನಮಾಡುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ಈ ವಿಷಯದಲ್ಲಿ ಹೊಗಳುವುದಿಲ್ಲ.
23 जो मैंने प्रभु से प्राप्त किया, वह मैंने तुम्हें भी सौंप दिया: प्रभु येशु मसीह ने, जिस रात उन्हें पकड़वाया जा रहा था, रोटी ली,
೨೩ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,
24 धन्यवाद देने के बाद उसे तोड़ा और कहा, “तुम्हारे लिए यह मेरा शरीर है. यह मेरी याद में किया करना.”
೨೪“ಇದುನಿಮಗೋಸ್ಕರವಾಗಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರಹೀಗೆ ಮಾಡಿರಿ” ಅಂದನು.
25 इसी प्रकार भोजन के बाद उन्होंने प्याला लेकर कहा, “यह प्याला मेरे लहू में स्थापित नई वाचा है. जब-जब तुम इसे पियो, यह मेरी याद में किया करना.”
೨೫ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ” ಅಂದನು.
26 इसलिये जब-जब तुम यह रोटी खाते हो और इस प्याले में से पीते हो, तब-तब प्रभु के आगमन तक उनकी मृत्यु का प्रचार करते हो.
೨೬ನೀವು ಈ ರೊಟ್ಟಿಯನ್ನು ತಿಂದು ಈ ಪಾನಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.
27 परिणामस्वरूप जो कोई अनुचित रीति से इस रोटी को खाता तथा प्रभु के प्याले में से पीता है, वह प्रभु के शरीर और उनके लहू के दूषित होने का दोषी होगा.
೨೭ಹೀಗಿರುವುದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾನಪಾತ್ರೆಯಲ್ಲಿ ಪಾನ ಮಾಡಿದರೆ ಅವನು ಕರ್ತನ ದೇಹಕ್ಕೂ ಮತ್ತು ಕರ್ತನ ರಕ್ತಕ್ಕೂ ಸಂಬಂಧಿಸಿದಂತೆ ದ್ರೋಹಮಾಡಿದವನಾಗಿರುವನು.
28 इसलिये मनुष्य इस रोटी को खाने तथा इस प्याले में से पीने के पहले अपने आपको जांच ले.
೨೮ಪ್ರತಿ ಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾನಪಾತ್ರೆಯಲ್ಲಿ ಕುಡಿಯಲಿ.
29 क्योंकि जो कोई इसे खाता और पीता है, यदि वह प्रभु की कलीसिया रूपी शरीर को पहिचाने बिना खाता और पीता है, अपने ही ऊपर दंड के लिए खाता और पीता है.
೨೯ಯಾಕೆಂದರೆ ಕರ್ತನ ದೇಹವೆಂದು ವಿವೇಚಿಸದೇ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವನು.
30 यही कारण है कि तुममें से अनेक दुर्बल और रोगी हैं तथा अनेक मृत्यु में सो गए.
೩೦ಈ ಕಾರಣದಿಂದಲೇ ನಿಮ್ಮಲ್ಲಿ ಬಹು ಮಂದಿ ಬಲಹೀನರು ಮತ್ತು ರೋಗಿಗಳು ಆಗುತ್ತಾರೆ ಮತ್ತು ಅನೇಕರು ಸಾಯುತ್ತಾರೆ.
31 यदि हम अपने विवेक को सही रीति से जांच लें तो हमारी ताड़ना नहीं की जाएगी
೩೧ನಮ್ಮನ್ನು ನಾವೇ ಪರೀಕ್ಷಿಸಿಕೊಂಡರೆ ನ್ಯಾಯ ವಿಚಾರಣೆಗೊಳಗಾಗುವುದಿಲ್ಲ.
32 ताड़ना के द्वारा प्रभु हमें अनुशासित करते हैं कि हम संसार के लिए निर्धारित दंड के भागी न हों.
೩೨ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ.
33 इसलिये प्रिय भाई बहनो, जब तुम भोजन के लिए इकट्ठा होते हो तो एक दूसरे के लिए ठहरे रहो.
೩೩ಆದಕಾರಣ ನನ್ನ ಸಹೋದರರೇ, ಈ ಭೋಜನವನ್ನು ಮಾಡುವುದಕ್ಕೆ ಸೇರಿಬರುವಾಗ ಒಬ್ಬರು ಇನ್ನೊಬ್ಬರಿಗಾಗಿ ಕಾಯಿರಿ.
34 जो व्यक्ति अपनी भूख को नियंत्रित न रख सके, वह अपने घर पर ही खाए कि तुम्हारा इकट्ठा होना तुम्हारे दंड का कारण न बने. शेष विषयों का समाधान मैं वहां आने पर स्वयं करूंगा.
೩೪ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ.