< 1 कुरिन्थियों 16 >
1 अब पवित्र लोगों की सहायता के लिए धनराशि के संबंध में: इस विषय में मैंने, जो आज्ञा गलातिया प्रदेश की कलीसियाओं को दी थी, उन्हीं आज्ञाओं का पालन तुम भी करो.
೧ಈಗ ದೇವಜನರಿಗೋಸ್ಕರ ಹಣ ಸಂಗ್ರಹಣೆ ವಿಚಾರದ ಕುರಿತು, ನಾನು ಗಲಾತ್ಯ ಪ್ರಾಂತ್ಯದ ಸಭೆಗಳಿಗೆ ಹೇಳಿಕೊಟ್ಟಿರುವ ಕ್ರಮದಂತೆ ನೀವೂ ಮಾಡಿರಿ.
2 सप्ताह के पहले दिन तुममें से हर एक अपनी आय के अनुसार कुछ धनराशि अलग रख छोड़े कि मेरे वहां आने पर तुम्हें धन इकट्ठा न करना पड़े.
೨ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.
3 जब मैं वहां आऊंगा, तुम्हारे द्वारा चुने गए व्यक्तियों को पत्रों के साथ भेज दूंगा कि वे इकट्ठा राशि को येरूशलेम पहुंचा दें.
೩ಮತ್ತು ನಾನು ಬಂದ ಮೇಲೆ ನೀವು ಯಾರನ್ನು ಪ್ರಾಮಾಣಿಕರೆಂದು ಸೂಚಿಸುವಿರೋ, ಅವರೊಂದಿಗೆ ನಿಮ್ಮ ಕೊಡುಗೆಯನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವುದಕ್ಕೆ ಪತ್ರಗಳನ್ನು ಕೊಟ್ಟು ಕಳುಹಿಸುವೆನು.
4 यदि मेरा जाना भी सही हुआ तो वे मेरे साथ जा सकेंगे.
೪ಮತ್ತೆ ನಾನು ಸಹ ಹೋಗುವುದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಬರಬಹುದು.
5 में मकेदोनिया यात्रा के बाद तुम्हारे पास आऊंगा क्योंकि मैं मकेदोनिया यात्रा की योजना बना रहा हूं.
೫ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟುವಾಗ ನಿಮ್ಮ ಬಳಿಗೆ ಬಂದು ಬಹುಶಃ ನಿಮ್ಮ ಬಳಿಯಲ್ಲೇ ಉಳಿದುಕೊಳ್ಳುವೆನು.
6 संभवतः मैं आकर तुम्हारे साथ कुछ समय व्यतीत करूं या पूरी शीत ऋतु ही कि तुम मुझे मेरे आगे के सफर की ओर, मैं जहां कहीं जाऊं, विदा कर सको.
೬ಅಥವಾ ನಿಮ್ಮಲ್ಲಿ ಹಿಮಕಾಲವನ್ನಾದರೂ ಕಳೆಯುವೆನು; ಹಾಗೆಯೇ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗಕಳುಹಿಸಲು ಸಹಾಯಮಾಡಬಹುದು.
7 मैं नहीं चाहता कि तुमसे केवल चलते-चलते मिलूं परंतु मेरी आशा है कि यदि परमेश्वर चाहें तो मैं तुम्हारे साथ कुछ समय व्यतीत करूं.
೭ನಾನು ಹಾದುಹೋಗುವ ಈ ಸ್ವಲ್ಪ ಸಮಯದಲ್ಲಿ ನಿಮ್ಮನ್ನು ನೋಡಲು ಬಯಸುವುದಿಲ್ಲ. ಕರ್ತನ ಅಪ್ಪಣೆಯಾದರೆ ನಿಮ್ಮ ಬಳಿಯಲ್ಲಿ ಕೆಲವು ಕಾಲ ತಂಗಲು ಬಯಸುತ್ತೇನೆ.
8 मैं पेन्तेकॉस्त पर्व तक इफ़ेसॉस नगर में ही रहूंगा
೮ಪಂಚಾಶತ್ತಮ ದಿನ ಹಬ್ಬದ ತನಕ ಎಫೆಸದಲ್ಲಿರುವೆನು;
9 क्योंकि मेरे लिए वहां उपयोगी सेवा का द्वार खुला है. इसके अतिरिक्त वहां मेरे अनेक विरोधी भी हैं.
೯ಯಾಕೆಂದರೆ ಸೇವೆಗೆ ಅನುಕೂಲವೂ, ಸಫಲವೂ ಆಗಿರುವ ಹೆಬ್ಬಾಗಿಲೊಂದು ನನಗಾಗಿ ತೆರೆಯಲ್ಪಟ್ಟಿದೆ. ಹಾಗೆಯೇ ವಿರೋಧಿಗಳೂ ಅನೇಕರಿದ್ದಾರೆ.
10 जब तिमोथियॉस वहां आए तो यह सुनिश्चित करना कि वह तुम्हारे साथ निश्चिंत रहे क्योंकि मेरे समान वह भी प्रभु के काम में जुड़ा है.
೧೦ತಿಮೊಥೆಯನು ಬಂದರೆ ಅವನು ನಿಮ್ಮಲ್ಲಿ ನಿರ್ಭಯನಾಗಿರುವಂತೆ ನೋಡಿಕೊಳ್ಳಿರಿ; ಅವನು ಸಹ ನನ್ನ ಹಾಗೆಯೇ ಕರ್ತನ ಸೇವೆಯನ್ನು ಮಾಡುತ್ತಿದ್ದಾನಲ್ಲಾ.
11 ध्यान रहे कि कोई उसे तुच्छ न समझे. उसे सकुशल विदा करना कि वह मेरे पास लौट आए. मैं अन्य भाइयों के साथ उसकी प्रतीक्षा में हूं.
೧೧ಆದ್ದರಿಂದ ಯಾರೂ ಅವನನ್ನು ತಿರಸ್ಕರಿಸಬಾರದು. ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವುದನ್ನು ಎದುರುನೋಡುತ್ತಾ ಇದ್ದೇನೆ.
12 अब हमारे भाई अपोल्लॉस के संबंध में: मैंने उनसे बार-बार विनती की कि वह अन्य भाइयों के साथ तुम्हारे पास आएं किंतु वह इस समय यात्रा के लिए तैयार नहीं किंतु सही अवसर प्राप्त होते ही वह वहां आएंगे.
೧೨ಸಹೋದರ ಅಪೊಲ್ಲೋಸನ ಕುರಿತು; ಅವನು ಸಹೋದರರೊಂದಿಗೆ ನಿಮ್ಮನ್ನು ಭೇಟಿಮಾಡಬೇಕೆಂದು ನಾನು ಬಹಳವಾಗಿ ಅವನನ್ನು ಪ್ರೋತ್ಸಾಹಿಸಿದೆನು. ಆದರೆ ಅವನು ಈಗ ಬರುವುದಿಲ್ಲ ಎಂದು ನಿರ್ಧರಿಸಿದನು. ಆದರೆ ಒಳ್ಳೆ ಅವಕಾಶ ಸಿಕ್ಕಿದಾಗ ಬರುವನು.
13 जागते रहो, विश्वास में स्थिर रहो, निडर बनो, निश्चय करो
೧೩ಎಚ್ಚರವಾಗಿರಿ, ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ. ಧೈರ್ಯವಂತರಾಗಿರಿ, ಬಲಗೊಳ್ಳಿರಿ.
14 तथा हर एक काम प्रेम भाव में ही करो.
೧೪ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
15 स्तेफ़ानॉस के कुटुंबियों के विषय में तो तुम्हें मालूम ही है कि वे आखाया प्रदेश के पहले फल हैं. उन्होंने स्वयं को पवित्र लोगों की सेवा के लिए समर्पित किया हुआ है. इसलिये प्रिय भाई बहनो, मेरी तुमसे विनती है
೧೫ಸ್ತೆಫನನ ಮನೆಯವರು ಅಖಾಯದಲ್ಲಿನ ಪ್ರಥಮಫಲವೆಂದು ಹಾಗೂ ಅವರು ದೇವಜನರ ಸೇವೆಗೋಸ್ಕರ ತಮ್ಮನ್ನು ಅರ್ಪಿಸಿದ್ದಾರೆಂದು ನೀವು ಬಲ್ಲವರಾಗಿದ್ದೀರಿ.
16 कि तुम उनका तथा ऐसे व्यक्तियों का नेतृत्व स्वीकार करो, जो मेरे काम में सहायक तथा परिश्रम करते हैं.
೧೬ನಾನು ನಿಮ್ಮಲ್ಲಿ ಬೇಡುವುದೇನಂದರೆ, ಸೇವೆಯಲ್ಲಿ ನಮಗೆ ಸಹಾಯಮಾಡುವ ಹಾಗೂ ಪ್ರಯಾಸಪಡುವವರೆಲ್ಲರಿಗೂ ನೀವು ಅಧೀನರಾಗಿರಬೇಕು.
17 स्तेफ़ानॉस, फ़ॉरतुनातॉस तथा अखियाकॉस का यहां आना मेरे लिए आनंद का विषय है. उनके कारण तुम्हारी ओर से जो कमी थी, वह पूरी हो गई.
೧೭ಸ್ತೆಫನನೂ, ಪೊರ್ತುನಾತೊಸನೂ, ಅಖಾಯಿಕನೂ ಬಂದದ್ದು ನನಗೆ ಸಂತೋಷವನ್ನುಂಟುಮಾಡಿದೆ. ನಿಮ್ಮಿಂದ ಆಗಿರುವ ಕೊರತೆಯನ್ನು ಅವರು ನೀಗಿಸಿರುವರು.
18 उनके कारण मेरे और तुम्हारे मन में नई ताज़गी का संचार हुआ है. ऐसे व्यक्तियों को मान्यता अवश्य दी जाए.
೧೮ಅವರು ನನ್ನ ಆತ್ಮವನ್ನೂ ಮತ್ತು ನಿಮ್ಮ ಆತ್ಮಗಳನ್ನೂ ಚೈತನ್ಯಗೊಳಿಸಿದರಲ್ಲ. ಹೀಗಿರುವುದರಿಂದ ಇಂಥವರನ್ನು ಸನ್ಮಾನಿಸಿರಿ.
19 आसिया प्रदेश की कलीसियाओं का तुम्हें नमस्कार. अकुलॉस और प्रिस्का तथा उस कलीसिया की ओर से, जो उनके घर पर आराधना के लिए इकट्ठा होती है, प्रभु में तुम्हें बहुत-बहुत नमस्कार.
೧೯ಆಸ್ಯಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡಿ ಬರುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ಬಹಳವಾಗಿ ನಿಮ್ಮನ್ನು ವಂದಿಸುತ್ತಿದ್ದಾರೆ.
20 यहां सभी भाई बहनों की ओर से तुम्हें नमस्कार. पवित्र चुंबन के साथ एक दूसरे का नमस्कार करो.
೨೦ಸಹೋದರರೆಲ್ಲರೂ ನಿಮಗೆ ವಂದನೆ ಹೇಳುತ್ತಿದ್ದಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
21 मैं, पौलॉस तुम्हें अपने हाथ से यह नमस्कार लिख रहा हूं.
೨೧ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ.
22 जो कोई प्रभु से प्रेम नहीं करता, वह शापित हो. हे हमारे प्रभु आ!
೨೨ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ನಮ್ಮ ಕರ್ತನೇ ಬಾ!
23 तुम पर प्रभु येशु मसीह का अनुग्रह हो.
೨೩ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ
24 मसीह येशु में मेरा प्रेम तुम पर हमेशा रहे, आमेन.
೨೪ಕ್ರಿಸ್ತ ಯೇಸುವಿನಲ್ಲಿ ನನ್ನ ಪ್ರೀತಿಯು ನಿಮ್ಮೆಲ್ಲರೊಂದಿಗೆ ಇರಲಿ. ಅಮೆನ್.