< 1 शमूएल 4 >
1 शमुएल का वचन सारे इस्राएल राष्ट्र में पहुंच जाता था. यह वह समय था, जब इस्राएलियों को फिलिस्तीनियों से युद्ध करने जाना पड़ा. उन्होंने एबेन-एज़र नामक स्थान पर अपनी छावनी डाली तथा फिलिस्तीनियों ने अफेक नामक स्थान पर.
೧ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯಮಾಡಿಕೊಂಡರು; ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.
2 फिलिस्तीनी इस्राएल के विरुद्ध मोर्चा बांधकर आगे बढ़े और जब युद्ध उग्र हुआ, इस्राएली फिलिस्तीनियों के सामने हार गए. उस समय युद्ध-भूमि में लगभग चार हज़ार इस्राएली मारे गए.
೨ಇವರು ಇಸ್ರಾಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲರನ್ನು ಸಂಹರಿಸಿದರು.
3 जब सेना लौटकर छावनी में आई, इस्राएलियों के पुरनियों ने विचार किया, “क्या कारण है कि याहवेह ने आज हमें फिलिस्तीनियों से हार जाने दिया? ऐसा करें, हम शीलो से याहवेह की वाचा का संदूक ले आते हैं. संदूक के हमारे साथ रहने पर फिलिस्तीनी हमें हरा न सकेंगे.”
೩ಇಸ್ರಾಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರ ಹಿರಿಯರು ಅವರಿಗೆ, “ಯೆಹೋವನು ಈ ಹೊತ್ತು ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶೀಲೋವಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸೋಣ; ಆತನು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ತಪ್ಪಿಸಲಿ” ಎಂದು ಆಲೋಚನೆ ಹೇಳಿದ್ದರಿಂದ ಅವರು ಜನರನ್ನು ಕಳುಹಿಸಿ
4 तब कुछ लोगों को शीलो नगर भेजा गया कि वे सर्वशक्तिमान याहवेह परमेश्वर जो करूबों के बीच विराजमान हैं, उनकी वाचा के संदूक ले आएं. साथ एली के दो पुत्र होफ़नी और फिनिहास भी आये.
೪ಕೆರೂಬಿಗಳ ಮಧ್ಯದಲ್ಲಿ ಆಸೀನನಾಗಿರುವ ಸೇನಾಧೀಶ್ವರ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ್ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.
5 जब याहवेह की वाचा का संदूक छावनी में पहुंचा, सारे इस्राएलियों ने उल्लास में ऐसा ऊंचा शब्द किया, कि धरती कांप उठी.
೫ಯೆಹೋವನ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇಲ್ಯರೆಲ್ಲಾ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.
6 जब फिलिस्तीनियों ने इस हर्षनाद को सुना, वे विचार करने लगे, “इब्रियों की छावनी में यह शोर क्या है?” जब उन्हें यह अहसास हुआ कि शिविर में याहवेह का संदूक आ गया है,
೬ಫಿಲಿಷ್ಟಿಯರು ಇದನ್ನು ಕೇಳಿ, “ಇಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೇನು ಕಾರಣ” ಎಂದು ವಿಚಾರಿಸುವಲ್ಲಿ ಯೆಹೋವನ ಮಂಜೂಷವು ಪಾಳೆಯದಲ್ಲಿ ಬಂದದ್ದೇ ಕಾರಣವೆಂದು ತಿಳಿದುಕೊಂಡರು.
7 फिलिस्तीनी भयभीत हो कहने लगे, “शिविर में कोई देवता उतर आया है.” वे यह भी कहने लगे, “यह एक विपत्ति है हम पर! इसके पहले ऐसा कुछ देखा-सुना नहीं गया.
೭ದೇವರು ಇವರ ಪಾಳೆಯಕ್ಕೆ ಬಂದಿದ್ದಾನಲ್ಲಾ ಎಂದು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟು, “ಅಯ್ಯೋ! ಮುಂಚೆ ಹೀಗಾಗಿರಲ್ಲಿಲ್ಲ.
8 विपत्ति है हम पर! किसमें सामर्थ्य है जो हमें इन बलशाली देवताओं से छुड़ा सके? ये ही हैं वे देवता, जिन्होंने मरुभूमि में मिस्रियों पर सब प्रकार की मुसीबतों का प्रहार किया था.
೮ಅಯ್ಯೋ! ಪರಾಕ್ರಮವುಳ್ಳ ಈ ದೇವರ ಕೈಯಿಂದ ನಮ್ಮನ್ನು ಬಿಡಿಸುವವರು ಯಾರು? ಐಗುಪ್ತ್ಯರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ!
9 फिलिस्तीनियों, पुरुषार्थ करो. साहस न छोड़ो. ऐसा न हो कि तुम्हें इब्रियों के दास बनकर रहना पड़े, ठीक जैसे वे तुम्हारे दास बनकर रहे थे. हिम्मत बांधो और युद्ध के लिए तैयार हो जाओ!”
೯ಫಿಲಿಷ್ಟಿಯರೇ, ಬಲಗೊಳ್ಳಿರಿ, ಶೂರರಾಗಿರಿ; ನಿಮಗೆ ದಾಸರಾಗಿದ್ದ ಇಬ್ರಿಯರಿಗೆ ನೀವೇ ದಾಸರಾದೀರಿ. ಆದಕಾರಣ ಶೌರ್ಯದಿಂದ ಯುದ್ಧಮಾಡಬೇಕು” ಎಂದು ಹೇಳಿಕೊಂಡು
10 तब फिलिस्तीनी युद्धरत हो गए. इस्राएल हार गया. हर एक सैनिक ने भागकर अपने तंबू में शरण ली. उस दिन भयंकर नरसंहार हुआ; इस्राएलियों के तीस हज़ार सैनिक धराशयी हो गए.
೧೦ಫಿಲಿಷ್ಟಿಯರು ಯುದ್ಧಮಾಡಲು ಇಸ್ರಾಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.
11 परमेश्वर की वाचा के संदूक शत्रुओं द्वारा छीन लिया गया. एली के दोनों पुत्र, होफ़नी और फिनिहास युद्ध में मारे गए.
೧೧ದೇವರ ಮಂಜೂಷವು ಶತ್ರುವಶವಾಯಿತು; ಏಲಿಯ ಮಕ್ಕಳಾದ ಹೊಫ್ನಿಯೂ ಮತ್ತು ಫೀನೆಹಾಸನೂ ಹತರಾದರು.
12 उसी दिन बिन्यामिन वंश का एक व्यक्ति रणभूमि से दौड़ता हुआ शीलो नगर पहुंचा. उसके वस्त्र फट चुके थे तथा उसके सिर पर धूल समाई हुई थी.
೧೨ಅದೇ ದಿನ ಒಬ್ಬ ಬೆನ್ಯಾಮೀನನು ರಣರಂಗದಿಂದ ತಪ್ಪಿಸಿಕೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ಶೀಲೋವಿಗೆ ಬಂದು
13 जब वह शीलो नगर पहुंचा, एली मार्ग के किनारे अपने आसन पर बैठे हुए उत्कण्ठापूर्वक मार्ग पर दृष्टि लगाए हुए थे, क्योंकि वह परमेश्वर की मंजूषा के विषय में बहुत चिंतित थे. जब इस व्यक्ति ने सूचना देने के लिए नगर में प्रवेश किया, संपूर्ण नगर में हाहाकार मच गया.
೧೩ನಡೆದದ್ದನ್ನು ತಿಳಿಸಲಾಗಿ ಜನರೆಲ್ಲಾ ಗೋಳಾಡತೊಡಗಿದರು. ದೇವರ ಮಂಜೂಷವೇನಾಯಿತೋ ಎಂಬ ಚಿಂತೆಯಿಂದ ಮಂದಿರದ್ವಾರದ ಬಳಿಯಲ್ಲಿ ಆಸೀನನಾಗಿ ದಾರಿಯನ್ನು ನೋಡುತ್ತಿದ್ದ ಏಲಿಯು ಆ ದುಃಖದ ಧ್ವನಿಯನ್ನು ಕೇಳಿ
14 जब एली ने यह रोने की आवाज सुनी, वह पूछने लगे, “यह कोलाहल क्या है?” तब वह व्यक्ति तुरंत एली के पास आ गया और उन्हें स्थिति के बारे में बताया,
೧೪ಈ ಗದ್ದಲವೇನೆಂದು ವಿಚಾರಿಸಲು ಒಡನೆ ಆ ಮನುಷ್ಯನು ಏಲಿಯ ಬಳಿಗೆ ಬಂದು ನಡೆದದ್ದೆಲ್ಲವನ್ನೂ ತಿಳಿಸಿದನು. ಏಲಿಯು ತೊಂಭತ್ತೆಂಟು ವರ್ಷದವನು;
15 इस समय एली की अवस्था अट्ठानवे वर्ष की थी. उनकी आंखें धुंधली हो चुकी थी और वह देख नहीं सकता था.
೧೫ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು.
16 उस व्यक्ति ने एली को सूचना दी, “मैं रणभूमि से भागकर आया हूं; मैं आज ही युद्ध से यहां पहुंचा हूं!” एली ने उससे प्रश्न किया, “मेरे पुत्र, क्या-क्या हुआ है वहां?”
೧೬ಆ ಮನುಷ್ಯನು ಏಲಿಗೆ, “ನಾನು ರಣರಂಗದಲ್ಲಿದ್ದವನು; ಈ ಹೊತ್ತೇ ಅಲ್ಲಿಂದ ಓಡಿಬಂದೆನು” ಅನ್ನಲು ಏಲಿಯು ಅವನನ್ನು, “ನನ್ನ ಮಗನೇ, ವರ್ತಮಾನವೇನು?” ಎಂದು ಕೇಳಿದನು.
17 दूत ने उत्तर दिया, “इस्राएल फिलिस्तीनियों के सामने पीठ दिखाकर भागा है, सेना की भारी हार हुई है, आपके दोनों पुत्र, होफ़नी और फिनिहास मारे गए हैं; परमेश्वर की वाचा का संदूक शत्रु द्वारा छीन लिया गया है.”
೧೭ಅವನು ಏಲಿಗೆ, “ಇಸ್ರಾಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸರು ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು” ಎಂದು ತಿಳಿಸಿದನು.
18 जैसे ही उस व्यक्ति ने परमेश्वर की वाचा के संदूक का उल्लेख किया, एली अपने आसन के पीछे की ओर, द्वार के पास जा गिरे. इससे उनकी गर्दन टूट गई और उनकी मृत्यु हो गई, क्योंकि वह वृद्ध भी थे और भारी भी. वह चालीस वर्षों तक इस्राएल के अगुए रहे.
೧೮ಮುದುಕನೂ, ಸ್ಥೂಲಕಾಯನೂ ಆದ ಏಲಿಯು ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದೊಡನೆಯೇ ಪೀಠದಿಂದ ಹಿಂದಕ್ಕೆ ಬಾಗಿಲಿನ ಕಡೆಗೆ ಬಿದ್ದು ಕುತ್ತಿಗೆ ಮುರಿದು ಸತ್ತನು. ಅವನು ಇಸ್ರಾಯೇಲರನ್ನು ನಲ್ವತು ವರ್ಷ ಪಾಲಿಸಿದ್ದನು.
19 उनकी पुत्र-वधू, फिनिहास की पत्नी, गर्भवती थी. उसका प्रसवकाल नज़दीक था. जैसे ही उसने यह सुना कि परमेश्वर की वाचा का संदूक छीन लिया गया है, तथा यह कि उसके ससुर और पति की भी मृत्यु हो चुकी है, उसे प्रसव पीड़ा शुरू हो गई; वह झुकी और उसका प्रसव हो गया. मगर प्रसव पीड़ा उसके लिए असहनीय सिद्ध हुई!
೧೯ಅವನ ಸೊಸೆಯಾದ ಫೀನೆಹಾಸನ ಹೆಂಡತಿ ದಿನತುಂಬಿದ ಗರ್ಭಿಣಿಯಾಗಿದ್ದಳು. ಅವಳು ದೇವರ ಮಂಜೂಷವು ಶತ್ರು ವಶವಾಯಿತೆಂಬ ವರ್ತಮಾನವನ್ನೂ, ತನ್ನ ಮಾವನೂ, ತನ್ನ ಗಂಡನೂ ಹತರಾದದ್ದನ್ನೂ ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು.
20 जब उसकी मृत्यु निकट आ रही थी, उसके निकट की स्त्रियों ने उससे कहा, “डरो मत; तुमने एक पुत्र को जन्म दिया है.” मगर उसने न तो उसका कोई उत्तर दिया और न ही इस समाचार पर कोई ध्यान ही दिया.
೨೦ಆಕೆಯು ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಸ್ತ್ರೀಯರು, “ಭಯಪಡಬೇಡ, ಮಗನನ್ನು ಹಡೆದಿರುವೆ” ಎಂದು ಹೇಳಿದರು. ಆಕೆಯು ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ, ಪ್ರತ್ಯುತ್ತರಕೊಡಲಿಲ್ಲ.
21 उसने अपने पुत्र को इखाबोद नाम दिया; उसका कथन था, “महिमा इस्राएल को छोड़कर जा चुकी है.” क्योंकि परमेश्वर का संदूक छीना जा चुका था, तथा उसके ससुर और पति की मृत्यु हो गई थी.
೨೧ದೇವರ ಮಂಜೂಷವು ಶತ್ರುವಶವಾದ್ದರಿಂದಲೂ, ಮಾವನೂ, ಗಂಡನೂ ಮೃತರಾದ್ದರಿಂದಲೂ, “ಮಹಿಮೆಯು ಇಸ್ರಾಯೇಲರನ್ನು ಬಿಟ್ಟು ಹೋಯಿತೆಂದು ಹೇಳಿ ಆ ಕೂಸಿಗೆ ಈಕಾಬೋದ್” ಎಂದು ಹೆಸರಿಟ್ಟಳು.
22 उसने कहा, “इस्राएल से महिमा उठ चुकी है, क्योंकि परमेश्वर की वाचा के संदूक छीन लिया गया है.”
೨೨“ದೇವರ ಮಂಜೂಷವು ಶತ್ರುವಶವಾದ್ದರಿಂದಲೇ ಇಸ್ರಾಯೇಲರ ಮಹಿಮೆಯು ಹೊರಟುಹೋಯಿತೆಂದು” ಹೇಳಿದಳು.