< 1 शमूएल 1 >
1 एफ्राईम के पहाड़ी प्रदेश में रमाथाइम-ज़ोफ़िम नगर में एलकाना नामक एक व्यक्ति था. वह एफ्राईमवासी येरोहाम के पुत्र था और येरोहाम एलिहू के, एलिहू तोहू के तथा तोहू एफ्राईमवासी सूफ़ के पुत्र था.
೧ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ರಾಮಾತಯಿಮ್ ಚೋಫೀಮ್ ಊರಿನಲ್ಲಿ ಎಲ್ಕಾನನೆಂಬ ಒಬ್ಬ ಮನುಷ್ಯನಿದ್ದನು. ಇವನು ಯೆರೋಹಾಮನ ಮಗನೂ ಎಲೀಹುವಿನ ಮೊಮ್ಮಗನೂ ತೋಹುವಿನ ಮರಿಮಗನೂ ಆಗಿದ್ದನು. ತೋಹು ಎಂಬವನು ಎಫ್ರಾಯೀಮ್ಯನಾದ ಚೂಫನ ಮಗನು.
2 एलकाना की दो पत्नियां थी; पहली का नाम था हन्नाह और दूसरी का पेनिन्नाह. स्थिति यह थी कि पेनिन्नाह के तो बच्चे थे, मगर हन्नाह बांझ थी.
೨ಎಲ್ಕಾನನಿಗೆ ಇಬ್ಬರು ಹೆಂಡತಿಯರಿದ್ದರು. ಮೊದಲನೆಯವಳು ಹನ್ನಳು, ಎರಡನೆಯವಳು ಪೆನಿನ್ನಳು. ಪೆನಿನ್ನಳಿಗೆ ಮಕ್ಕಳಿದ್ದರು; ಹನ್ನಳಿಗೆ ಮಕ್ಕಳಿರಲಿಲ್ಲ.
3 यह व्यक्ति हर साल अपने नगर से सर्वशक्तिमान याहवेह की वंदना करने तथा उन्हें बलि चढ़ाने शीलो नगर जाया करता था. यहीं एली के दो पुत्र, होफ़नी तथा फिनिहास याहवेह के पुरोहितों के रूप में सेवा करते थे.
೩ಅವನು ಪ್ರತಿವರ್ಷವೂ ಸೇನಾಧೀಶ್ವರನಾದ ಯೆಹೋವನಿಗೆ ಯಜ್ಞವನ್ನು ಸಮರ್ಪಿಸಿ ಆತನನ್ನು ಆರಾಧಿಸುವುದಕ್ಕೋಸ್ಕರ ತನ್ನ ಊರಿನಿಂದ ಶೀಲೋವಿಗೆ ಹೋಗುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ್ ಎಂಬವರು ಯೆಹೋವನ ಯಾಜಕರಾಗಿದ್ದರು.
4 जब कभी एलकाना बलि चढ़ाता था, वह बलि में से कुछ भाग अपनी पत्नी पेनिन्नाह तथा उसकी संतान को दे दिया करता था.
೪ಎಲ್ಕಾನನು ಯಜ್ಞವನ್ನರ್ಪಿಸಿದಾಗೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲಾ ಗಂಡು ಹೆಣ್ಣುಮಕ್ಕಳಿಗೂ ಭಾಗಗಳನ್ನು ಕೊಡುತ್ತಿದ್ದನು.
5 मगर वह अपनी पत्नी हन्नाह को इसका दो गुणा भाग देता था, क्योंकि उन्हें हन्नाह ज्यादा प्रिय थी, यद्यपि याहवेह ने हन्नाह को संतान पैदा करने की क्षमता नहीं दी थी.
೫ಅವನು ಹನ್ನಳನ್ನು ಬಹಳವಾಗಿ ಪ್ರೀತಿಸಿದರೂ, ಯೆಹೋವನು ಆಕೆಯ ಗರ್ಭವನ್ನು ಮುಚ್ಚಿದ್ದರಿಂದ ಅವನು ಆಕೆಗೆ ಎರಡು ಭಾಗವನ್ನು ಕೊಡುತ್ತಿದ್ದನು.
6 हन्नाह की सौत उसे कुढ़ाने के उद्देश्य से उसे सताती रहती थी.
೬ಇದಲ್ಲದೆ ಆಕೆಯ ಸವತಿಯಾದ ಪೆನಿನ್ನಳು, “ಯೆಹೋವನು ನಿನ್ನನ್ನು ಬಂಜೆಯನ್ನಾಗಿ ಮಾಡಿದ್ದಾನೆ” ಎಂದು ಹೇಳಿ ಆಕೆಯನ್ನು ಕೆಣಕಿ ನೋಯಿಸುತ್ತಿದ್ದಳು.
7 यह काम हर साल चलता रहता था. जब कभी हन्नाह याहवेह के मंदिर जाती थी, पेनिन्नाह उसे इस प्रकार चिढ़ाती थी, कि हन्नाह रोती रह जाती थी, तथा उसके लिए भोजन करना मुश्किल हो जाता था.
೭ಅವರು ಪ್ರತಿವರ್ಷವೂ ಕುಟುಂಬವಾಗಿ ಯೆಹೋವನ ಮಂದಿರಕ್ಕೆ ಹೋದಾಗೆಲ್ಲಾ ಪೆನಿನ್ನಳು ಆಕೆಯನ್ನು ಕೆಣಕುತ್ತಿದ್ದುದರಿಂದ ಹನ್ನಳು ಊಟ ಮಾಡದೆ ಅಳುತ್ತಾ ಇದ್ದಳು.
8 यह देख उसके प्रति एलकाना ने उससे कहा, “हन्नाह, तुम क्यों रो रही हो? तुमने भोजन क्यों छोड़ रखा है? इतनी दुःखी क्यों हो रही हो? क्या मैं तुम्हारे लिए दस पुत्रों से बढ़कर नहीं हूं?”
೮ಆಗ ಆಕೆಯ ಗಂಡನಾದ ಎಲ್ಕಾನನು ಆಕೆಗೆ “ಹನ್ನಾ, ಏಕೆ ಅಳುತ್ತೀ? ಊಟ ಮಾಡದಿರುವುದಕ್ಕೆ ಕಾರಣವೇನು? ನೀನು ವ್ಯಸನಪಡುವುದೇಕೆ? ನಾನು ನಿನಗೆ ಹತ್ತು ಮಂದಿ ಗಂಡು ಮಕ್ಕಳಿಗಿಂತ ಹೆಚ್ಚಾಗಿದ್ದೇನಲ್ಲಾ” ಅಂದನು.
9 शीलो में एक मौके पर, जब वे खा-पी चुके थे, हन्नाह उठकर याहवेह के सामने चली गई. इस समय पुरोहित एली याहवेह के मंदिर के द्वार पर अपने आसन पर बैठे थे.
೯ಅವರು ಶೀಲೋವಿನಲ್ಲಿದ್ದ ಒಂದು ಸಂದರ್ಭದಲ್ಲಿ, ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ, ಹನ್ನಳು ಎದ್ದು ಯೆಹೋವನ ಮಂದಿರಕ್ಕೆ ಹೋದಳು. ಯಾಜಕನಾದ ಏಲಿಯು ಮಂದಿರದ್ವಾರದ ನಿಲುವುಗಳ ಬಳಿಯಲ್ಲಿದ್ದ ತನ್ನ ಪೀಠದ ಮೇಲೆ ಕುಳಿತ್ತಿದ್ದನು.
10 जब हन्नाह याहवेह से प्रार्थना कर रही थी, वह मन में बहुत ही दुःखी थी. उसका रोना भी बहुत तेज होता जा रहा था.
೧೦ಹನ್ನಳು ಬಹುದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನಿಗೆ,
11 प्रार्थना करते हुए उसने यह शपथ की: “सर्वशक्तिमान याहवेह, यदि आप अपनी दासी की व्यथा पर करुणा-दृष्टि करें, मुझे स्मरण करें, तथा मेरी स्थिति को भुला न दें और अपनी दासी को पुत्र दें, तो मैं उसे आजीवन के लिए आपको समर्पित कर दूंगी. उसके केश कभी काटे न जाएंगे.”
೧೧“ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನಿನ್ನ ದಾಸಿಯನ್ನು ಮರೆಯದೆ ನನ್ನನ್ನು ನೆನಪಿಸಿಕೊಂಡು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ಅವನನ್ನು ನಿನಗೆ ಪ್ರತಿಷ್ಠಿಸುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಮುಟ್ಟಗೊಡುವುದಿಲ್ಲ” ಎಂದು ಪ್ರಾರ್ಥಿಸಿ ಹರಕೆಮಾಡಿದಳು.
12 जब वह याहवेह से प्रार्थनारत थी, एली उसके मुख को ध्यान से देख रहे थे.
೧೨ಆಕೆಯು ಬಹಳ ಹೊತ್ತಿನ ವರೆಗೆ ಯೆಹೋವನ ಮುಂದೆ ಪ್ರಾರ್ಥನೆಮಾಡುತ್ತಿರುವಾಗ ಏಲಿಯು ಆಕೆಯ ಬಾಯನ್ನೇ ನೋಡುತ್ತಿದ್ದನು.
13 हन्नाह यह प्रार्थना अपने मन में कर रही थी. यद्यपि उनके ओंठ हिल रहे थे, उसका स्वर सुनाई नहीं देता था. यह देख एली यह समझे कि हन्नाह नशे में है.
೧೩ಆಕೆ ತನ್ನ ಹೃದಯದಲ್ಲಿ ಪ್ರಾರ್ಥಿಸುತ್ತಿದ್ದರಿಂದ ತುಟಿಗಳು ಮಾತ್ರ ಅಲ್ಲಾಡುತ್ತಿದ್ದವು; ಶಬ್ದ ಕೇಳಿಸುತ್ತಿರಲಿಲ್ಲ. ಆದ್ದರಿಂದ ಆಕೆಯು ಮದ್ಯಪಾನಮಾಡಿದ್ದಾಳೆಂದು ತಿಳಿದು
14 तब उन्होंने हन्नाह से कहा, “और कब तक रहेगा तुम पर यह नशा? बस करो अब यह दाखमधु पान.”
೧೪ಏಲಿಯು, “ನಿನ್ನ ಕುಡಿತದ ಅಮಲು ಇನ್ನೂ ಇಳಿಯಲಿಲ್ಲವೇ? ದ್ರಾಕ್ಷಾರಸದ ನಿಶೆ ನಿನ್ನನ್ನು ಬಿಟ್ಟು ಹೋಗಲಿ” ಅಂದನು.
15 इस पर हन्नाह ने उन्हें उत्तर दिया, “मेरे प्रभु, स्थिति यह नहीं है, मैं बहुत ही गहन वेदना में हूं. न तो मैंने दाखमधु पान किया है, और न ही द्राक्षारस. मैं अपनी पूरी वेदना याहवेह के सामने उंडेल रही थी.
೧೫ಅದಕ್ಕೆ ಹನ್ನಳು “ಸ್ವಾಮೀ, ಹಾಗಲ್ಲ; ನಾನು ಬಹು ದುಃಖಪೀಡಿತಳು; ದ್ರಾಕ್ಷಾರಸವನ್ನಾದರೂ ಬೇರೆ ಯಾವ ಮದ್ಯವನ್ನಾದರೂ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಯೆಹೋವನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.
16 अपनी सेविका को निकम्मी स्त्री न समझिए, क्योंकि यहां मैं अपनी घोर पीड़ा और संताप में यह सम्भाषण कर रही थी.”
೧೬ನಿನ್ನ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡ; ಈವರೆಗೆ ನನ್ನ ಹೆಚ್ಚಾದ ಚಿಂತೆಯನ್ನೂ, ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆನು” ಎಂದು ಹೇಳಿದಳು.
17 इस पर एली ने उससे कहा, “शांति में यहां से विदा हो. इस्राएल के परमेश्वर तुम्हारी अभिलाषित इच्छा पूरी करें.”
೧೭ಆಗ ಏಲಿಯು ಆಕೆಗೆ, “ಸಮಾಧಾನದಿಂದ ಹೋಗು; ಇಸ್ರಾಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ” ಎಂದನು.
18 हन्नाह ने उत्तर दिया, “आपकी सेविका पर आपका अनुग्रह बना रहे.” यह कहते हुए अपने स्थान को लौट गई और वहां उसने भोजन किया. अब उसके चेहरे पर उदासी नहीं देखी गई.
೧೮ಹನ್ನಳು ಏಲಿಗೆ, “ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ” ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆ ಮೇಲೆ ಆಕೆಯ ಮುಖದಲ್ಲಿ ದುಃಖವು ಕಾಣಲಿಲ್ಲ.
19 प्रातः उन्होंने जल्दी उठकर याहवेह की आराधना की और वे अपने घर रामाह लौट गए. एलकाना तथा हन्नाह के संसर्ग होने पर याहवेह ने उसे याद किया.
೧೯ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳೊಂದಿಗೆ ಸಂಗಮಿಸಲು, ಯೆಹೋವನು ಆಕೆಯ ಪ್ರಾರ್ಥನೆಯನ್ನು ಪರಿಗಣಿಸಿದ್ದರಿಂದ ಆಕೆಯು ಗರ್ಭಿಣಿಯಾದಳು.
20 सही समय पर हन्नाह ने गर्भधारण किया और एक पुत्र को जन्म दिया. उसने यह याद करते हुए शमुएल नाम दिया, “मैंने याहवेह से इसकी याचना की थी.”
೨೦ಹನ್ನಳು ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. ಯೆಹೋವನನ್ನು ಬೇಡಿ ಪಡೆದುಕೊಂಡೆನೆಂದು ಹೇಳಿ ಆ ಮಗನಿಗೆ ಸಮುವೇಲನೆಂದು ಹೆಸರಿಟ್ಟಳು.
21 एलकाना सपरिवार याहवेह को अपनी वार्षिक बलि चढ़ाने और शपथ पूरी करने चला गया,
೨೧ಎಲ್ಕಾನನು ಎಂದಿನಂತೆ ಕುಟುಂಬ ಸಹಿತವಾಗಿ ಯೆಹೋವನಿಗೆ ವಾರ್ಷಿಕಯಜ್ಞವನ್ನು ಅರ್ಪಿಸಿ ಹರಕೆಸಲ್ಲಿಸಬೇಕೆಂದು ಶೀಲೋವಿಗೆ ಹೋಗುವುದಕ್ಕೆ ಸಿದ್ಧನಾಗಲು ಹನ್ನಳು
22 मगर हन्नाह उसके साथ नहीं गई. उसने अपने पति से कहा, “जैसे ही शिशु दूध पीना छोड़ देगा, मैं उसे ले जाकर याहवेह के सामने प्रस्तुत करूंगी और फिर वह तब से हमेशा वहीं रहेगा.”
೨೨“ಮಗನು ಮೊಲೆಬಿಡುವ ವರೆಗೂ ನಾನು ಬರುವುದಿಲ್ಲ; ಅವನು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಯಾವಾಗಲೂ ಅಲ್ಲಿಯೇ ಇರುವ ಹಾಗೆ ಅವನನ್ನು ಕರೆದುಕೊಂಡು ಬರುವೆನು” ಎಂದು ಹೇಳಿದಳು.
23 उसके पति एलकाना ने उससे कहा, “तुम्हें जो कुछ सही लगे वही करो. शिशु के दूध छोड़ने तक तुम यहीं ठहरी रहो. याहवेह अपने वचन को पूरा करें.” तब हन्नाह घर पर ही ठहरी रहीं और बालक का दूध छुड़ाने तक उसका पालन पोषण करती रहीं.
೨೩ಆಕೆಯ ಗಂಡನಾದ ಎಲ್ಕಾನನು ಆಕೆಗೆ “ನಿನಗೆ ಸರಿತೋರುವ ಹಾಗೆ ಆಗಲಿ; ಮಗನು ಮೊಲೆಬಿಡುವವರೆಗೆ ಇರು. ಯೆಹೋವನು ತನ್ನ ವಾಕ್ಯವನ್ನು ದೃಢಪಡಿಸಲಿ” ಅಂದನು. ಮಗನು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಸಾಕಿದಳು.
24 जब बालक ने दूध पीना छोड़ दिया, और बालक आयु में कम ही था, हन्नाह उसे और उसके साथ तीन बछड़े दस किलो आटा तथा एक कुप्पी भर अंगूर का रस लेकर शीलो नगर में याहवेह के मंदिर को गई.
೨೪ಅನಂತರ ಆಕೆಯು ಮೂರು ವರ್ಷದ ಒಂದು ಹೋರಿಯನ್ನೂ, ಒಂದು ಏಫಾ ಹಿಟ್ಟನ್ನೂ, ಒಂದು ತಿತ್ತಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಪುತ್ರನೊಂದಿಗೆ ಶೀಲೋವಿನಲ್ಲಿದ್ದ ಯೆಹೋವನ ಮಂದಿರಕ್ಕೆ ಬಂದಳು. ಮಗನು ಇನ್ನೂ ಚಿಕ್ಕವನಾಗಿದ್ದನು.
25 जब वे बछड़ों की बलि चढ़ा चुके, वह बालक को एली के पास ले गई.
೨೫ಅವರು ಹೋರಿಯನ್ನು ಯಜ್ಞಮಾಡಿದ ಮೇಲೆ ಮಗನನ್ನು ಏಲಿಯ ಬಳಿಗೆ ಕರೆದುಕೊಂಡು ಬಂದರು.
26 हन्नाह ने एली से कहा, “मेरे स्वामी, आपके जीवन की शपथ, मैं वही स्त्री हूं, जो आपकी उपस्थिति में एक दिन याहवेह से प्रार्थना कर रही थी.
೨೬ಹನ್ನಳು ಏಲಿಗೆ “ಸ್ವಾಮೀ, ನಿನ್ನ ಜೀವದಾಣೆ; ಮೊದಲು ಯೆಹೋವನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ, ಇಲ್ಲಿ ನಿನ್ನ ಹತ್ತಿರ ನಿಂತಿದ್ದ ಸ್ತ್ರೀಯು ನಾನೇ.
27 मैंने इस पुत्र की प्राप्ति की प्रार्थना की थी, और याहवेह ने मेरी विनती स्वीकार की है.
೨೭ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ;
28 अब मैं यह बालक याहवेह को ही समर्पित कर रही हूं. आज से यह बालक आजीवन याहवेह के लिए समर्पित है.” फिर उन सभी ने वहां याहवेह की स्तुति की.
೨೮ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು” ಎಂದು ಹೇಳಿದಳು. ಆ ಮೇಲೆ ಅವರು ಶಿಲೋವಿನಲ್ಲಿ ಯೆಹೋವನನ್ನು ಆರಾಧಿಸಿದರು.