< 1 थिस्सलुनीकियों 2 >
1 प्रिय भाई बहनो, तुम्हें यह अहसास तो है ही कि तुमसे भेंट करने के लिए हमारा आना व्यर्थ नहीं था.
೧ಸಹೋದರರೇ, ನಾವು ವ್ಯರ್ಥವಾಗಿ ನಿಮ್ಮಲ್ಲಿಗೆ ಬರಲಿಲ್ಲವೆಂಬುದು ನಿಮಗೆ ತಿಳಿದಿರುವ ಪ್ರಕಾರವೇ,
2 जैसा कि तुम्हें मालूम ही है कि फ़िलिप्पॉय नगर में दुःख उठाने और उपद्रव सहने के बाद घोर विरोध की स्थिति में भी तुम्हें परमेश्वर का ईश्वरीय सुसमाचार सुनाने के लिए हमें परमेश्वर के द्वारा साहस प्राप्त हुआ.
೨ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.
3 हमारा उपदेश न तो भरमा देनेवाली शिक्षा थी, न अशुद्ध उद्देश्य से प्रेरित और न ही छलावा.
೩ಯಾಕೆಂದರೆ ನಮ್ಮ ಬೋಧನೆಯು ತಪ್ಪಾದದ್ದಲ್ಲ, ಅಶುದ್ಧವಾದದ್ದೂ ಅಲ್ಲ, ಮೋಸವೂ ಅಲ್ಲ.
4 परंतु ठीक जिस प्रकार परमेश्वर के समर्थन में हमें ईश्वरीय सुसमाचार सौंपा गया. हम मनुष्यों की प्रसन्नता के लिए नहीं परंतु परमेश्वर की संतुष्टि के लिए, जिनकी दृष्टि हृदय पर लगी रहती है, ईश्वरीय सुसमाचार का संबोधन करते हैं.
೪ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.
5 यह तो तुम्हें मालूम ही है कि न तो हमारी बातों में चापलूसी थी और न ही हमने लोभ से प्रेरित हो कुछ किया—परमेश्वर गवाह हैं;
೫ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಯಾರ ಮುಖಸ್ತುತಿಯನ್ನೂ ಮಾಡಿಲ್ಲ ಮತ್ತು ದುರಾಶೆಯನ್ನು ಮರೆಮಾಡುವುಕ್ಕಾಗಿ ವೇಷವನ್ನು ಹಾಕಿಕೊಂಡಿಲ್ಲ. ಇದಕ್ಕೆ ದೇವರೇ ಸಾಕ್ಷಿ.
6 हमने मनुष्यों से सम्मान पाने की भी कोशिश नहीं की; न तुमसे और न किसी और से, मसीह के प्रेरित होने के कारण तुमसे सहायता पाना हमारा अधिकार था.
೬ಇದಲ್ಲದೆ ನಾವು ಯೇಸು ಕ್ರಿಸ್ತನ ಅಪೊಸ್ತಲರಾಗಿರುವುದರಿಂದ ನಮಗೆ ಗೌರವವನ್ನು ತೋರಿಸಬೇಕೆಂದು ಹೇಳಬಹುದಾಗಿದ್ದರೂ, ಮನುಷ್ಯರಿಂದ ಬರುವ ಮಾನವನ್ನು ನಿಮ್ಮಿಂದಾಗಲಿ, ಇತರರಿಂದಾಗಲಿ ಪಡೆದುಕೊಳ್ಳಲು ಅಪೇಕ್ಷಿಸಲಿಲ್ಲ.
7 तुम्हारे प्रति हमारा व्यवहार वैसा ही कोमल था, जैसा एक शिशु का पोषण करती माता का, जो स्वयं बड़ी कोमलतापूर्वक अपने बालकों का पोषण करती है.
೭ಆದರೆ ತಾಯಿಯೂ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸುವ ಹಾಗೆ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೇವೆ.
8 इस प्रकार तुम्हारे प्रति एक मधुर लगाव होने के कारण हम न केवल तुम्हें ईश्वरीय सुसमाचार देने के लिए परंतु तुम्हारे साथ स्वयं अपना जीवन सहर्ष मिल-बांट कर संगति करने के लिए भी लालायित थे—क्योंकि तुम हमारे लिए अत्यंत प्रिय बन चुके थे.
೮ನೀವು ನಮಗೆ ಅತಿಪ್ರಿಯರಾದ ಕಾರಣ ನಾವು ನಿಮ್ಮಲ್ಲಿ ಮಮತೆಯುಳ್ಳವರಾಗಿ ದೇವರ ಸುವಾರ್ತೆಯನ್ನು ಹೇಳುವುದಕ್ಕೆ ಮಾತ್ರವಲ್ಲದೆ ನಿಮಗಾಗಿ ಪ್ರಾಣವನ್ನೇ ಕೊಡಲೂ ಸಂತೋಷದಿಂದ ಸಿದ್ಧರಾಗಿದ್ದೆವು.
9 प्रिय भाई बहनो, जिस समय हम तुम्हारे बीच ईश्वरीय सुसमाचार का प्रचार कर रहे थे, तुम्हें उस समय का हमारा परिश्रम तथा हमारी कठिनाइयां याद होंगी कि कैसे हमने रात-दिन श्रम किया कि हम तुममें से किसी पर भी बोझ न बन जाएं.
೯ಸಹೋದರರೇ, ನಾವು ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳು ದುಡಿಯುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು. ಆ ನಮ್ಮ ಕಷ್ಟವೂ ಪ್ರಯಾಸಗಳು ನಿಮ್ಮ ನೆನಪಿನಲ್ಲಿರಲಿ.
10 तुम इसके गवाह हो और परमेश्वर भी कि तुम सभी विश्वासियों के साथ हमारा स्वभाव कितना सच्चा, धर्मी और निर्दोष था.
೧೦ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.
11 तुम्हें यह भी मालूम है कि जैसे पिता अपनी निज संतान के लिए करता है, उसी प्रकार हम तुममें से हर एक को
೧೧ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ,
12 प्रोत्साहित करते हुए, सांत्वना और प्रेरणा देते हुए रहे, कि तुम्हारा स्वभाव परमेश्वर के योग्य हो, जिन्होंने तुम्हें अपने राज्य और महिमा में बुलाया है.
೧೨ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.
13 यही कारण है कि हम भी परमेश्वर के प्रति निरंतर धन्यवाद प्रकट करते हैं कि जिस समय तुमने हमसे परमेश्वर के वचन के संदेश को स्वीकार किया, तुमने इसे किसी मनुष्य के संदेश के रूप में नहीं परंतु उसकी सच्चाई में अर्थात् परमेश्वर ही के वचन के रूप में ग्रहण किया, जो तुममें, जिन्होंने विश्वास किया है, कार्य भी कर रहा है.
೧೩ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ.
14 क्योंकि प्रिय भाई बहनो, तुम मसीह येशु में परमेश्वर की उन कलीसियाओं के शिष्य बन गए हो, जो यहूदिया प्रदेश में हैं—तुमने भी स्वदेशवासियों द्वारा दिए गये उसी प्रकार के दुःखों को सहा है, जैसे यहूदिया प्रदेशवासियों ने यहूदियों द्वारा दिए गए दुःखों को,
೧೪ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾಗಿದ್ದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
15 जिन्होंने प्रभु येशु मसीह तथा भविष्यद्वक्ताओं दोनों ही की हत्या की. इसके अलावा उन्होंने हमें भी वहां से निकाल दिया. वे परमेश्वर को क्रोधित कर रहे हैं तथा वे सभी के विरोधी हैं.
೧೫ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.
16 जब हम अन्यजातियों को उनके उद्धार के विषय में संदेश देने का काम करते हैं, वे हमारी उद्धार की बातें बताने में बाधा खड़ी करते हैं. इसके फलस्वरूप वे स्वयं अपने ही पापों का घड़ा भर रहे हैं. अंततः उन पर परमेश्वर का क्रोध आ ही पड़ा है.
೧೬ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.
17 किंतु, प्रिय भाई बहनो, जब हम तुमसे थोड़े समय के लिए अलग हुए थे (शारीरिक रूप से, न कि आत्मिक रूप से), तुम्हें सामने देखने की हमारी लालसा और भी अधिक प्रबल हो गई थी.
೧೭ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ ಹೃದಯದಲ್ಲಿ ಅಗಲದೆ ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು.
18 हम चाहते थे कि आकर तुमसे भेंट करें—विशेषकर मैं, पौलॉस, तो एक नहीं, अनेक बार चाह रहा था किंतु शैतान ने हमारे प्रयास निष्फल कर दिए.
೧೮ಯಾಕೆಂದರೆ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವುದಕ್ಕೆ ಪ್ರಯತ್ನ ಮಾಡಿದ್ದೆನು. ಆದರೆ ಸೈತಾನನು ನನಗೆ ಅಡ್ಡಿ ಮಾಡಿದನು.
19 कौन हैं हमारी आशा, आनंद तथा उल्लास का मुकुट? क्या हमारे प्रभु येशु मसीह के दोबारा आगमन के अवसर पर उनकी उपस्थिति में तुम ही नहीं?
೧೯ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ.
20 हां, तुम्हीं तो हमारा गौरव तथा आनंद हो.
೨೦ಹೀಗಿರಲಾಗಿ ನೀವೇ ನಮ್ಮ ಮಹಿಮೆ ಮತ್ತು ಸಂತೋಷವೂ ಆಗಿದ್ದೀರಿ.