< 1 तीमुथियुस 1 >
1 परमेश्वर हमारे उद्धारकर्ता तथा हमारी आशा मसीह येशु की आज्ञा के अनुसार मसीह येशु के प्रेरित पौलॉस की ओर से,
೧ನಮ್ಮ ರಕ್ಷಕನಾದ ದೇವರ ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನ ಆಜ್ಞೆಯ ಮೇರೆಗೆ ನೇಮಿಸಲ್ಪಟ್ಟ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು
2 विश्वास में मेरे वास्तविक पुत्र तिमोथियॉस को: पिता परमेश्वर तथा हमारे प्रभु येशु मसीह की ओर से अनुग्रह, कृपा और शांति.
೨ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವುದೇನೆಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಉಂಟಾಗಲಿ.
3 मैंने मकेदोनिया प्रदेश जाते समय तुमसे विनती की थी कि, तुम इफ़ेसॉस नगर में ही रह जाओ और कुछ बताए हुए व्यक्तियों को चेतावनी दो कि वे न तो भरमानेवाली शिक्षा दें
೩ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ,
4 और न पुरानी कहानियों और अंतहीन वंशावलियों में लीन रहें. इनसे विश्वास पर आधारित परमेश्वर की योजना के उन्नत होने की बजाय मतभेद उत्पन्न होता है.
೪ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಆಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದೇನೆ. ಅಂತಹ ಕಥೆಗಳೂ, ವಂಶಾವಳಿಗಳೂ ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ.
5 हमारी आज्ञा का उद्देश्य है निर्मल हृदय से उत्पन्न प्रेम, शुद्ध अंतरात्मा तथा निष्कपट विश्वास.
೫ಶುದ್ಧಹೃದಯ, ಒಳ್ಳೆಯ ಮನಸ್ಸಾಕ್ಷಿ, ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ.
6 कुछ हैं, जो रास्ते से भटक कर व्यर्थ के वाद-विवाद में फंस गए हैं.
೬ಕೆಲವರು ಈ ಗುರಿಯನ್ನು ಬಿಟ್ಟು ವ್ಯರ್ಥವಾದ ವಿಚಾರಗಳ ಕಡೆಗೆ ತಿರುಗಿಕೊಂಡಿದ್ದಾರೆ.
7 वे व्यवस्था के शिक्षक बनने की अभिलाषा तो करते हैं परंतु वे जो कहते हैं और जिन विषयों का वे दृढ़ विश्वासपूर्वक दावा करते हैं, स्वयं ही उन्हें नहीं समझते.
೭ಅವರು ಧರ್ಮೋಪದೇಶಕರಾಗಬೇಕೆಂದು ಬಯಸುತ್ತಿದ್ದರೂ ತಾವು ಹೇಳುವುದಾಗಲಿ, ತಾವು ದೃಢವಾಗಿ ಮಾತನಾಡುವ ವಿಷಯವಾಗಲಿ ಇಂಥದೆಂದು ತಿಳಿಯದವರಾಗಿದ್ದಾರೆ.
8 हमें यह मालूम है कि व्यवस्था भली है—यदि इसका प्रयोग उचित रीति से किया जाए.
೮ಧರ್ಮಶಾಸ್ತ್ರವು ಒಳ್ಳೆಯದೆಂದು ಬಲ್ಲೆವು. ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು.
9 इस सच्चाई के प्रकाश में कि व्यवस्था का बनाया जाना धर्मियों के लिए नहीं परंतु अधर्मी, निरंकुश, दुराचारी, पापी, अपवित्र, ठग, माता-पिता के घात करनेवाले, हत्यारे,
೯ಧರ್ಮಶಾಸ್ತ್ರವು ನೀತಿವಂತರಿಗೋಸ್ಕರ ಅಲ್ಲ, ಆದರೆ ಅಕ್ರಮಗಾರರು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ಅಪವಿತ್ರರು, ಪ್ರಾಪಂಚಿಕರು, ತಂದೆತಾಯಿಗಳನ್ನು ಕೊಲ್ಲುವವರು, ನರಹತ್ಯಮಾಡುವವರು,
10 व्यभिचारी, समलैंगिक, अपहरण करनेवाले, झूठ बोलनेवाले, झूठे गवाह तथा शेष सब कुछ के लिए किया गया है, जो निर्मल उपदेश के विरोध में है.
೧೦ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.
11 वह धन्य परमेश्वर के गौरवान्वित ईश्वरीय सुसमाचार के अनुसार है, जो मुझे सौंपी गई है.
೧೧ಈ ಬೋಧನೆಯು ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು.
12 मैं हमारे प्रभु येशु मसीह के प्रति, जिन्होंने मुझे सामर्थ्य प्रदान किया है, धन्यवाद करता हूं कि उन्होंने मुझे विश्वासयोग्य समझा और अपनी सेवा में चुना.
೧೨ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು;
13 हालांकि पहले मैं परमेश्वर की निंदा करनेवाला था, अत्याचारी तथा अधर्मी था किंतु मुझ पर कृपा की गई क्योंकि अपनी अज्ञानता में उनमें अविश्वास के कारण मैंने यह सब किया था.
೧೩
14 मसीह येशु में हमारे प्रभु का बहुत अधिक अनुग्रह विश्वास और प्रेम के साथ मुझ पर हुआ.
೧೪ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.
15 यह बात सच है, जो हर प्रकार से मानने योग्य है: मसीह येशु पापियों के उद्धार के लिए संसार में आए. इनमें सबसे बड़ा पापी मैं हूं.
೧೫ಕ್ರಿಸ್ತಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಇದೆ, ಯಾಕೆಂದರೆ ಆ ಎಲ್ಲಾ ಪಾಪಿಗಳಲ್ಲಿ ನಾನೇ ಪ್ರಮುಖನು.
16 किंतु मुझ पर कृपा इसलिये हुई कि मुझ बड़े पापी में मसीह येशु आदर्श के रूप में अपनी पूरी सहनशीलता का प्रमाण उनके हित में प्रस्तुत करें, जो अनंत जीवन के लिए उनमें विश्वास करेंगे. (aiōnios )
೧೬ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು. (aiōnios )
17 सनातन राजा, अविनाशी, अनदेखे तथा एकमात्र परमेश्वर का आदर और महिमा सदा-सर्वदा होती रहे, आमेन. (aiōn )
೧೭ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. (aiōn )
18 मेरे पुत्र, तिमोथियॉस, मैं तुम्हें यह आज्ञा तुम्हारे विषय में पहले से की गई भविष्यवाणियों के अनुसार सौंप रहा हूं कि उनकी प्रेरणा से तुम निरंतर संघर्ष कर सको,
೧೮ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮೊದಲು ಉಂಟಾಗಿದ್ದ ಪ್ರವಾದನೆಗಳನ್ನು ನೆನಪಿಸಿಕೊಂಡು, ನೀನು ಅವುಗಳಿಂದ ಧೈರ್ಯಹೊಂದಿ ಒಳ್ಳೆಯ ಯುದ್ಧವನ್ನು ನಡೆಸಬೇಕೆಂದು ನಿನಗೆ ಆಜ್ಞಾಪಿಸುತ್ತಿದ್ದೇನೆ.
19 तथा विश्वास और अच्छे विवेक को थामे रखो, कुछ ने जिसकी उपेक्षा की और अपने विश्वास का सर्वनाश कर बैठे.
೧೯ನಂಬಿಕೆಯನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಗಟ್ಟಿಯಾಗಿ ಹಿಡಿದುಕೊಂಡಿರು. ಕೆಲವರು ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ವಿಷಯದಲ್ಲಿ ಹಡಗು ಒಡೆದು, ನಷ್ಟಪಟ್ಟವರಂತೆ ಇದ್ದಾರೆ.
20 ह्यूमैनेऑस तथा अलेक्सान्दरॉस इन्हीं में से हैं, जिन्हें मैंने शैतान को सौंप दिया है कि उन्हें परमेश्वर-निंदा न करने का पाठ सिखा दिया जाए.
೨೦ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.