< 2 कुरिन्थियों 10 >
1 मैं पौलॉस, जो तुम्हारे बीच उपस्थित होने पर तो दीन किंतु तुमसे दूर होने पर निडर हो जाता हूं, स्वयं मसीह की उदारता तथा कोमलता में तुमसे व्यक्तिगत विनती कर रहा हूं.
೧ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,
2 मेरी विनती यह है: जब मैं वहां आऊं तो मुझे उनके प्रति, जो यह सोचते हैं कि हमारी जीवनशैली सांसारिक है, वह कठोरता दिखानी न पड़े जिसकी मुझसे आशा की जाती है.
೨ಯಾರು ನಮ್ಮನ್ನು ಲೋಕ ರೀತಿಯಾಗಿ ಜೀವಿಸುವವರೆಂದು ಎಣಿಸುತ್ತಾರೋ ಅವರೊಂದಿಗೆ ದಿಟ್ಟತನದಿಂದಲೇ ಇರಬೇಕೆಂದು ಅಂದುಕೊಂಡಿದೇನೆ. ನಾವು ನಿಮ್ಮೊಂದಿಗಿರುವಾಗ ಅಂಥ ದಿಟ್ಟತನವನ್ನು ತೋರಿಸುವುದಕ್ಕೆ ಅವಕಾಶವುಂಟಾಗಬಾರದೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
3 हालांकि हम संसार में रहते हैं मगर हम युद्ध वैसे नहीं करते जैसे यह संसार करता है.
೩ನಾವು ಲೋಕದಲ್ಲಿದ್ದರೂ ಲೋಕಾನುಸಾರವಾಗಿ ಯುದ್ಧಮಾಡುವವರಲ್ಲ.
4 हमारे युद्ध के अस्त्र-शस्त्र सांसारिक नहीं हैं—ये परमेश्वर के सामर्थ्य में गढ़ों को ढाह देते हैं.
೪ನಾವು ಉಪಯೋಗಿಸುವ ಆಯುಧಗಳು ಲೋಕದ ಆಯುಧಗಳಲ್ಲ. ಅವು ದೇವರ ಎಣಿಕೆಯಲ್ಲಿ ಬಲವಾಗಿದ್ದು ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ.
5 इसके द्वारा हम उस हर एक विरोध को, उस हर एक गर्व करनेवाले को, जो परमेश्वर के ज्ञान के विरुद्ध सिर उठाता है, गिरा देते हैं और हर एक धारणा को मसीह का आज्ञाकारी बंदी बना देते हैं.
೫ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು,
6 तुम्हारी आज्ञाकारिता और सच्चाई की भरपूरी साबित हो जाने पर हम सभी आज्ञा न माननेवालों को दंड देने के लिए तैयार हैं.
೬ನಿಮ್ಮ ವಿಧೇಯತ್ವವು ಪರಿಪೂರ್ಣವಾದ ಮೇಲೆ ಎಲ್ಲಾ ಅವಿಧೇಯತ್ವಕ್ಕೆ ಪ್ರತಿಕಾರವನ್ನು ನೀಡುವುದಕ್ಕೆ ಸಿದ್ಧರಾಗಿದ್ದೇವೆ.
7 तुम सिर्फ जो सामने है, उसके बाहरी रूप को देखते हो. यदि किसी को अपने विषय में यह निश्चय है कि वह मसीह का है तो वह इस पर दोबारा विचार करे कि जैसे वह मसीह का है, वैसे ही हम भी मसीह के हैं.
೭ನೀವು ಬಾಹ್ಯವಾದುದ್ದುನ್ನು ಮಾತ್ರ ನೋಡುತ್ತೀರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ಒಪ್ಪಿಕೊಂಡರೆ ಅವನು ಆಲೋಚನೆಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳಿದುಕೊಳ್ಳಲಿ.
8 यदि मैं उस अधिकार का कुछ अधिक ही गर्व करता हूं, जो प्रभु ने मुझे तुम्हारे निर्माण के लिए सौंपा है, न कि तुम्हारे विनाश के लिए, तो उसमें मुझे कोई लज्जा नहीं.
೮ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾಚಿಕೆಪಡಬೇಕಾಗಿರುವುದಿಲ್ಲ. ಆದರೆ ನಿಮ್ಮನ್ನು ಕೆಡವಿಹಾಕುವುದಕ್ಕಲ್ಲ ಕಟ್ಟುವುದಕ್ಕಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟಿರುವವನು.
9 मैं नहीं चाहता कि तुम्हें यह अहसास हो कि मैं तुम्हें डराने के उद्देश्य से यह पत्र लिख रहा हूं.
೯ನಾನು ಪತ್ರಿಕೆಗಳಿಂದ ನಿಮ್ಮನ್ನು ಹೆದರಿಸುತ್ತಿದ್ದೆನೆಂದು ತಿಳಿದುಕೊಳ್ಳಬೇಡಿರಿ.
10 मेरे विषय में कुछ का कहना है, “उसके पत्र महत्वपूर्ण और प्रभावशाली तो होते हैं किंतु उसका व्यक्तित्व कमजोर है तथा बातें करना प्रभावित नहीं करता.”
೧೦“ಅವನಿಂದ ಬಂದ ಪತ್ರಿಕೆಗಳು ಕಠೋರವಾದವುಗಳೂ, ಪ್ರಬಲವಾದವುಗಳೂ ಆಗಿವೆ. ಆದರೆ ದೈಹಿಕವಾಗಿ ಅವನು ದುರ್ಬಲನು ಅವನ ಮಾತುಗಳು ನಿಂದಾತ್ಮಕವಾದವುಗಳೆಂದು ಕೆಲವರು ಹೇಳುತ್ತಾರಲ್ಲಾ.”
11 ये लोग याद रखें कि तुम्हारे साथ न होने की स्थिति में हम अपने पत्रों की अभिव्यक्ति में जो कुछ होते हैं, वही हम तुम्हारे साथ होने पर अपने स्वभाव में भी होते हैं.
೧೧ಅಂಥವರು, ನಾವು ದೂರದಲ್ಲಿರುವಾಗ ಪತ್ರಿಕೆಗಳ ಮೂಲಕ ಮಾತಿನಲ್ಲಿ ಎಂಥವರಾಗಿದ್ದೇವೋ ಹತ್ತಿರದಲ್ಲಿರುವಾಗ ಕಾರ್ಯದಲ್ಲಿಯೂ ಅಂಥವರಾಗಿಯೇ ಇದ್ದೇವೆಂದು ತಿಳಿದುಕೊಳ್ಳಲಿ.
12 हम उनके साथ अपनी गिनती या तुलना करने का साहस नहीं करते, जो अपनी ही प्रशंसा करने में लीन हैं. वे अपने ही मापदंडों के अनुसार अपने आपको मापते हैं तथा अपनी तुलना वे स्वयं से ही करते हैं. एकदम मूर्ख हैं वे!
೧೨ತಮ್ಮನ್ನು ತಾವೇ ಹೊಗಳಿಕೊಳ್ಳುವ ಕೆಲವರಲ್ಲಿ ನಮ್ಮನ್ನು ಸೇರಿಸಿಕೊಳ್ಳುವುದಕ್ಕಾಗಲಿ ಅವರೊಂದಿಗೆ ಹೋಲಿಸುವುದಕ್ಕಾಗಲಿ ನಾನು ಇಷ್ಟಪಡುವುದಿಲ್ಲ. ಅವರಂತೂ ತಮ್ಮತಮ್ಮೊಳಗೆ ತಮ್ಮನ್ನು ಅಳತೆಮಾಡಿಕೊಂಡು ತಮ್ಮನ್ನು ತಮಗೇ ಹೋಲಿಸಿಕೊಂಡು ವಿವೇಕವಿಲ್ಲದವರಾಗಿದ್ದಾರೆ.
13 हम अपनी मर्यादा के बाहर गर्व नहीं करेंगे. हम परमेश्वर द्वारा निर्धारित मर्यादा में ही सीमित रहेंगे. तुम भी इसी सीमा में सीमित हो.
೧೩ನಾವಾದರೋ ನಮ್ಮ ಯೋಗ್ಯತೆಗೆ ಮೀರಿ ಹೊಗಳಿಕೊಳ್ಳದೇ ದೇವರು ನಮಗೆ ನೇಮಿಸಿರುವಂಥ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಈ ಮೇರೆಯೊಳಗಿದ್ದು ನಿಮ್ಮ ತನಕ ಬಂದಿದ್ದೇವೆ.
14 अगर हमने गर्व किया तो भी हम अपनी सीमा का उल्लंघन नहीं कर रहे हैं, जैसा कि यदि हम तुम तक नहीं पहुंच पाते तो हो जाता. पर तुम तक मसीह येशु का सुसमाचार लेकर हम तुम्हारे पास सबसे पहले पहुंचे हैं.
೧೪ನಾವು ಕ್ರಿಸ್ತನ ಸುವಾರ್ತೆಯನ್ನು ಸಾರುತ್ತಾ ಇತರರಿಗಿಂತ ಮೊದಲು ನಿಮ್ಮ ಬಳಿಗೆ ಬಂದದ್ದರಿಂದ ನಿಮ್ಮ ಮೇಲೆ ಅಧಿಕಾರವಿಲ್ಲದವರಂತೆ ಮೇರೆಯನ್ನು ಅತಿಕ್ರಮಿಸಿಹೋಗುತ್ತಿಲ್ಲ.
15 अन्यों द्वारा किए परिश्रम का श्रेय लेकर भी हम इस आशा में सीमा पार नहीं करते कि जैसे जैसे तुम्हारा विश्वास गहरा होता जाता है, तुम्हारे बीच अपनी ही सीमा में हमारा कार्यक्षेत्र और गतिविधियां फैलती जाएं
೧೫ನಾವು ಮಿತಿಗಳನ್ನು ಮೀರಿ ಮತ್ತೊಬ್ಬರ ಪ್ರಯಾಸದ ಫಲಗಳನ್ನು ತೆಗೆದುಕೊಂಡು, ಇವು ನಮ್ಮವು ಎಂದು ಹಿಗ್ಗುವವರಲ್ಲ. ಆದರೆ ನಿಮ್ಮ ನಂಬಿಕೆಯು ಹೆಚ್ಚಿದಾಗೆಲ್ಲಾ ನಿಮ್ಮ ಮೂಲಕ ನಮ್ಮ ಮಿತಿಯು ಇನ್ನೂ ವಿಸ್ತರಿಸಿತು.
16 और हम तुम्हारी सीमाओं से परे दूर-दूर क्षेत्रों में भी ईश्वरीय सुसमाचार का प्रचार करें. हम नहीं चाहते कि हम किसी अन्य क्षेत्र में अन्य व्यक्ति द्वारा पहले ही किए जा चुके काम का गर्व करें.
೧೬ನಿಮಗೆ ಆಚೆಯಿರುವ ಸೀಮೆಗಳಲ್ಲಿಯೂ ಸುವಾರ್ತೆಯನ್ನು ಸಾರುವೆವೆಂಬ ನಿರೀಕ್ಷೆಯನ್ನಿಟ್ಟುಕೊಂಡಿದ್ದೆವಷ್ಟೇ. ಮತ್ತೊಬ್ಬರ ಜಾಗದಲ್ಲಿ ಸಿದ್ಧವಾಗಿ ನಮಗೆ ಸಿಕ್ಕಿದ ಫಲವನ್ನು ಕುರಿತು ನಾವು ಹೆಚ್ಚಳಪಡುವುದಿಲ್ಲ.
17 जो गर्व करता है, वह परमेश्वर में गर्व करे.
೧೭“ಹೆಚ್ಚಳಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ.”
18 ग्रहण वह नहीं किया जाता, जो अपनी तारीफ़ स्वयं करता है परंतु वह है, जिसकी तारीफ़ प्रभु करते हैं.
೧೮ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ. ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.