< 2 राजा 25 >

1 राजा सीदकियाहू के शासन के नवें साल के दसवें महीने के दसवें दिन, बाबेल के राजा नबूकदनेज्ज़र ने अपनी सारी सेना के साथ आकर येरूशलेम को घेर लिया, उसके आस-पास छावनी ड़ाल दी और इसके चारों ओर घेराबंदी की दीवार बना ली.
ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.
2 राजा सीदकियाहू के शासन के ग्यारहवें साल तक नगर घिरा रहा.
ಅವನು ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
3 चौथे महीने के नवें दिन से नगर में अकाल ऐसा भयंकर हो गया कि नागरिकों के लिए कुछ भी भोजन न बचा.
ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೇ ಹೋಯಿತು.
4 तब उन्होंने शहरपनाह को तोड़ डाली और रात में सारे योद्धा दो दीवारों के बीच की द्वार से, जो राजा की वाटिका के पास थी, निकल भागे. कसदी इस समय नगर को घेरे हुए थे. ये योद्धा अराबाह की दिशा में आगे बढ़ते गए,
ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.
5 मगर कसदियों की सेना ने राजा का पीछा किया और येरीख़ो के मैदान में उसे पकड़ लिया, इस कारण सारी यहूदी सेना बिखर गई.
ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬಯಲಿನಲ್ಲಿ ಅವನನ್ನು ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿ ಹೋಗಿದ್ದರು.
6 उन्होंने राजा को बंदी बनाकर रिबलाह में बाबेल के राजा के सामने पेश किया. उस पर दंड की आज्ञा दी गई.
ಅನಂತರ ಕಸ್ದೀಯರು ಬಾಬೆಲಿನ ಅರಸನನ್ನು ಹಿಡಿದು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ತೆಗೆದುಕೊಂಡು ಬಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.
7 उन्होंने सीदकियाहू के पुत्रों का वहीं, उसी के देखते-देखते वध कर दिया. इसके बाद उन्होंने सीदकियाहू की आंखें निकाल लीं और उसे कांसे की सांकलों में बांधकर बाबेल ले गए.
ಚಿದ್ಕೀಯನ ಇಬ್ಬರು ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರಲ್ಲದೆ ಅವನಿಗೆ ಬೇಡಿಹಾಕಿ, ಅವನ ಎರಡು ಕಣ್ಣುಗಳನ್ನು ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.
8 बाबेल के राजा नबूकदनेज्ज़र के राज्य-काल का उन्‍नीसवां वर्ष, पांचवें माह के सातवां दिन, बाबेल के राजा का सेवक, अंगरक्षकों को प्रधान, नेबुज़रादान येरूशलेम आ गया.
ಐದನೆಯ ತಿಂಗಳಿನ ಏಳನೆಯ ದಿನದಲ್ಲಿ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ ಬಾಬೆಲಿನ ಅರಸನ ಸೇವಕನೂ, ಕಾವಲುದಂಡಿನ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವವನು ಯೆರೂಸಲೇಮಿಗೆ ಬಂದನು.
9 उसने याहवेह के भवन में, राजमहल में और येरूशलेम के सभी भवनों में आग लगा दी. हर एक अच्छा भवन भस्म कर दिया गया.
ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.
10 अंगरक्षकों के प्रधान के साथ आई हुई कसदी सेना ने मिलकर येरूशलेम के चारों ओर बनाई हुई दीवारों को ढाह दिया.
೧೦ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯರ ಸೈನ್ಯದವರು ಯೆರೂಸಲೇಮಿನ ಸುತ್ತುಗೋಡೆಗಳನ್ನು ಕೆಡವಿದರು.
11 उन सभी को, जो नगर में बाकी रह गए थे, और जो बाबेल के राजा की ओर भाग गये थे, और दूसरे लोगों को भी, अंगरक्षकों का प्रधान नेबुज़रादान बंदी बनाकर बंधुआई में ले गया;
೧೧ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.
12 मगर देश के कुछ कंगाल लोगों को अंगरक्षकों के प्रधान ने वहीं छोड़ दिया कि वे वहां रहकर अंगूर की उपज की देखभाल करें और भूमि पर हल चलाते रहें.
೧೨ಹೊಲಗಳನ್ನೂ, ದ್ರಾಕ್ಷಿ ತೋಟಗಳನ್ನೂ, ವ್ಯವಸಾಯಮಾಡುವುದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.
13 याहवेह के मंदिर के कांस्य स्तंभ, कांस्य के आधार तथा कांस्य जलबर्तनों को कसदी तोड़कर उनके टुकड़ों को बाबेल ले गए.
೧೩ಕಸ್ದೀಯರು ಯೆಹೋವನ ಆಲಯದಲ್ಲಿದ್ದ ತಾಮ್ರದ ಕಂಬಗಳನ್ನು, ಪೀಠಗಳನ್ನೂ, ಕಡಲಿನ ಆಕಾರದ ಪಾತ್ರೆಯನ್ನೂ ಒಡೆದು ಅವುಗಳ ತಾಮ್ರವನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.
14 वे याहवेह के भवन के पवित्र बर्तन, फावड़े, चिमटे तथा सभी कांस्य बर्तन, जो मंदिर में आराधना के लिए उपयोग होते थे, ये सब अपने साथ ले गए;
೧೪ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ತೆಗೆದುಕೊಂಡು ಹೋದರು.
15 इनके अलावा आग के लिए इस्तेमाल किए जानेवाले बर्तन और कटोरे भी. अंगरक्षकों का प्रधान वह सब जो सोने और चांदी का था, अपने साथ ले गया.
೧೫ಕಾವಲುದಂಡಿನ ಅಧಿಪತಿಯು ಬೆಳ್ಳಿಬಂಗಾರದ ಅಗ್ಗಿಷ್ಟಿಕೆ, ಬಟ್ಟಲು ಮೊದಲಾದವುಗಳನ್ನು ತೆಗೆದುಕೊಂಡನು.
16 दो स्तंभ, एक विशाल जल बर्तन, उनके आधार, जो शलोमोन द्वारा याहवेह के भवन में उपयोग के लिए निर्मित किए गए थे, इन सबका कांस्य अतुलनीय था.
೧೬ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಡಲೆನಿಸಿಕೊಂಡ ಪಾತ್ರೆಯು, ಪೀಠಗಳು, ಇವುಗಳಿಗೆ ಲೆಕ್ಕವಿಲ್ಲದಷ್ಟು ತಾಮ್ರವನ್ನು ಬಳಸಲಾಗಿತ್ತು.
17 एक-एक खंभे की ऊंचाई लगभग आठ मीटर थी, जिसका सिर कांसे का था. इस सिर की ऊंचाई लगभग डेढ़ मीटर थी. सिर के चारों ओर जाली और अनार की आकृति गढ़ी हुई थी. यह सभी कुछ कांसे का था. दूसरे खंभे पर भी इसी प्रकार की जालीदार आकृतियां थी.
೧೭ಪ್ರತಿಯೊಂದು ಕಂಬವು ಹದಿನೆಂಟು ಮೊಳ ಎತ್ತರವಿತ್ತು. ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ದಾಳಿಂಬೆ ಹಣ್ಣುಗಳೂ ಇದ್ದವು.
18 इसके बाद अंगरक्षकों के प्रधान ने प्रमुख पुरोहित सेराइयाह, सहपुरोहित ज़ेफनियाह, और तीन मंदिर द्वारपालों को,
೧೮ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡು ಹೋಗಿದ್ದ ಜನರಲ್ಲಿ ಮಹಾಯಾಜಕನಾದ ಸೆರಾಯನು, ಎರಡನೆಯ ಯಾಜಕನಾದ ಚೆಫನ್ಯನು ಮೂರು ಮಂದಿ ದ್ವಾರಪಾಲಕರು,
19 नगर में से सैनिकों के पर्यवेक्षक अधिकारी तथा राजा के पांच सलाहकारों को जो वहीं नगर में थे, तथा सेनापति के सचिव को, जो देश के लोगों को सेना में भर्ती करता था, तथा देश के साठ व्यक्तियों को जो उस समय नगर में पाए गए थे, अपने साथ बंदी बनाकर ले गया.
೧೯ಸೈನ್ಯ ಸಂಬಂಧವಾದ ಎಲ್ಲಾ ವ್ಯವಸ್ಥೆಯನ್ನು ಮಾಡುತ್ತಿದ್ದ ಕಂಚುಕಿ, ಪಟ್ಟಣದಲ್ಲಿ ಉಳಿದಿದ್ದ ಅರಸನಿಗೆ ಆಪ್ತರಾಗಿದ್ದ ಐದು ಮಂದಿ ಮಂತ್ರಿಗಳು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಯನ್ನು ಮಾಡುವ ಸೇನಾಧಿಪತಿಯ ಲೇಖಕನು, ಪಟ್ಟಣದಲ್ಲಿದ್ದ ಅರುವತ್ತು ಮಂದಿ ಜನರೂ ಇದ್ದರು.
20 नेबुज़रादान, जो अंगरक्षकों का प्रधान था, उसने इन सभी को रिबलाह ले जाकर बाबेल के राजा के समक्ष प्रस्तुत कर दिया.
೨೦ನಂತರ ನೆಬೂಜರದಾನನು, ಇವರನ್ನೆಲ್ಲಾ ಹಿಡಿದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು,
21 तब बाबेल के राजा ने हामाथ देश के रिबलाह नगर में इन सभी का वध कर दिया. इस प्रकार यहूदिया के निवासी अपने देश से बंधुआई में ले जाया गया.
೨೧ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.
22 कुछ प्रजा के लोग, जिन्हें बाबेल के राजा नबूकदनेज्ज़र ने यहूदिया में रहने के लिए छोड़ दिया था, उनके लिए नबूकदनेज्ज़र ने शापान के पोते, अहीकाम के पुत्र, गेदालियाह को राज्यपाल बना दिया.
೨೨ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಅಹೀಕಾಮನ ಮಗನೂ, ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬುವನನ್ನು ಅಧಿಪತಿಯನ್ನಾಗಿ ನೇಮಿಸಿದನು.
23 जब सारे सेनाधिकारियों और उनके सैनिकों ने यह सुना कि बाबेल के राजा ने गेदालियाह को राज्यपाल बना दिया है, वे सब अपने सैनिकों के साथ गेदालियाह से मिलने मिज़पाह आ गए, उनमें ये भी शामिल थे: नेथनियाह का पुत्र इशमाएल, कोरियाह का पुत्र योहानन नेतोफ़ातवासी तनहूमेथ का पुत्र सेराइयाह, एक माकाहथिवासी का पुत्र यात्सानिया.
೨೩ತಪ್ಪಿಸಿಕೊಂಡು ಉಳಿದಿದ್ದ ಯೆಹೂದ ಸೇನಾಧಿಪತಿಗಳು ಗೆದಲ್ಯನು ಬಾಬೆಲಿನ ಅರಸನಿಂದ ಅಧಿಪತಿಯಾಗಿ ನೇಮಿಸಲ್ಪಟ್ಟಿದ್ದಾನೆಂಬ ವರ್ತಮಾನವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು. ಅವರು ಯಾರೆಂದರೆ, ನೆತನ್ಯನ ಮಗನಾದ ಇಷ್ಮಾಯೇಲನು, ಕಾರೇಹನ ಮಗನಾದ ಯೋಹಾನಾನ್, ನೆಟೋಫದವನಾದ, ತನ್ಹುಮೆತನ ಮಗನಾದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು ಇವರೇ.
24 गेदालियाह ने उनके और सैनिकों के सामने शपथ लेते हुए कहा, “कसदी सैनिकों से डरने की ज़रूरत नहीं. यहीं देश में रहो, और बाबेल के राजा की सेवा में बने रहो, तो तुम्हारा भला ही होगा.”
೨೪ಗೆದಲ್ಯನು ಇವರಿಗೂ ಇವರ ಜನರಿಗೂ, “ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ, ಬಾಬೆಲಿನ ಅರಸನಿಗೆ ವಿಧೇಯರಾಗಿದ್ದು ಸೇವೆಮಾಡಿಕೊಂಡು ಇಲ್ಲಿಯೇ ವಾಸಮಾಡಿರಿ. ಆಗ ನಿಮಗೆ ಒಳಿತಾಗುವಾಗುವುದು” ಎಂದು ಹೇಳಿದನು.
25 मगर सातवें महीने में राजपरिवार के एलीशामा के पोते, नेथनियाह के पुत्र, इशमाएल ने दस सैनिकों के साथ जाकर गेदालियाह पर ऐसा वार किया कि उसकी मृत्यु हो गई. उसके अलावा उन यहूदियों और कसदियों का भी वध कर दिया, जो उस समय मिज़पाह में उसके साथ थे.
೨೫ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತು ಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಕಸ್ದೀಯರನ್ನೂ ಸಂಹರಿಸಿದನು.
26 इसके कारण सभी प्रजा के लोग; सामान्य और विशेष, सेना अधिकारियों के साथ मिस्र देश को भाग गए क्योंकि उन्हें कसदियों का डर था.
೨೬ಆಗ ಎಲ್ಲಾ ಚಿಕ್ಕವರೂ, ದೊಡ್ಡವರೂ, ಸೇನಾಧಿಪತಿಗಳೂ ಕಸ್ದೀಯರಿಗೆ ಹೆದರಿ ಐಗುಪ್ತಕ್ಕೆ ಓಡಿಹೋದರು.
27 यहूदिया के राजा यहोइयाखिन के बंधुआई के सैंतीसवें साल के बारहवें महीने के सत्ताईसवें दिन, बाबेल के राजा एवील-मेरोदाख ने, जिस साल उसने शासन शुरू किया, यहूदिया के राजा यहोइयाखिन को जेल से रिहा कर दिया.
೨೭ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನು ಸೆರೆಯಾಗಿದ್ದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಕಟಾಕ್ಷಿಸಿ ಅವನನ್ನು ಸೆರೆಮನೆಯಿಂದ ಬಿಡಿಸಿ, ಅವನನ್ನು ಅಭಿವೃದ್ಧಿಗೆ ತಂದನು.
28 उसने उससे कृपाभाव में वार्तालाप किया तथा उसके लिए उन राजाओं से उच्चतर स्थान पर सिंहासन स्थापित किया, जो बाबेल में इस समय उसके साथ थे.
೨೮ಅಲ್ಲದೆ ಅವನೊಡನೆ ಪ್ರೀತಿಯಿಂದ ಮಾತನಾಡಿ ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.
29 तब यहोइयाखिन ने कारागार के वस्त्र छोड़ दिए, और वह मृत्युपर्यंत राजा के साथ भोजन करता रहा.
೨೯ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು.
30 बाबेल के राजा की ओर से उसे नियमित रूप से उपवेतन दिया जाता रहा, तथा मृत्युपर्यंत उसकी दैनिक आवश्यकताएं पूर्ण की जाती रहीं.
೩೦ಅವನು ಬದುಕಿರುವವರೆಗೂ ಅವನಿಗೆ ಬೇಕಾಗುವ ಎಲ್ಲಾ ಪದಾರ್ಥಗಳು ಪ್ರತಿನಿತ್ಯವೂ ಅರಸನಿಂದಲೇ ಅವನಿಗೆ ಕೊಡಲಾಗುತ್ತಿತ್ತು.

< 2 राजा 25 >