< 2 थिस्सलुनीकियों 3 >
1 अंत में, प्रिय भाई बहनो, हमारे लिए प्रार्थना करो कि प्रभु का संदेश तेज गति से हर जगह फैलता जाए और उसे महिमा प्राप्त हो, ठीक जैसी तुम्हारे बीच.
೧ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,
2 और यह भी कि हम टेढ़े मनवाले व्यक्तियों तथा दुष्ट मनुष्यों से सुरक्षित रहें क्योंकि विश्वास का वरदान सभी ने प्राप्त नहीं किया है.
೨ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ.
3 किंतु प्रभु विश्वासयोग्य हैं. वही तुम्हें स्थिर करेंगे और उस दुष्ट से तुम्हारी रक्षा करेंगे.
೩ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.
4 प्रभु में हमें तुम्हारे विषय में पूरा निश्चय है कि तुम हमारे आदेशानुसार ही स्वभाव कर रहे हो और ऐसा ही करते रहोगे.
೪ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು.
5 प्रभु तुम्हारे हृदयों को परमेश्वर के प्रेम तथा मसीह येशु के धीरज की ओर अगुवाई करें.
೫ನೀವು ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡೆಸಲಿ.
6 प्रिय भाई बहनो, प्रभु येशु मसीह के नाम में हम तुम्हें यह आज्ञा देते हैं कि तुम ऐसे हर एक व्यक्ति से दूर रहो, जो अनुचित चाल चलता है, जो हमारे द्वारा दी गई शिक्षाओं का पालन नहीं करता.
೬ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.
7 यह तुम्हें मालूम है कि तुम्हारे लिए हमारे जैसी चाल चलना सही है क्योंकि तुम्हारे बीच रहते हुए हम निकम्मे नहीं रहे.
೭ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ.
8 इतना ही नहीं, हमने किसी के यहां दाम चुकाए बिना भोजन नहीं किया परंतु हमने दिन-रात परिश्रम किया और काम करते रहे कि हम तुममें से किसी के लिए भी बोझ न बनें.
೮ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.
9 यह इसलिये नहीं कि तुमसे सहायता पाना हमारा अधिकार नहीं है परंतु इसलिये कि हम स्वयं को तुम्हारे सामने आदर्श स्वभाव प्रस्तुत करें और तुम हमारी सी चाल चलो.
೯ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಮಾದರಿಯಾಗಿರಬೇಕೆಂದೇ ಹಾಗೆ ಮಾಡಿದೆವು.
10 यहां तक कि जब हम तुम्हारे बीच में थे, हम तुम्हें यह आज्ञा दिया करते थे: “किसी आलसी को भोजन न दिया जाए.”
೧೦ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ.
11 सुनने में यह आया है कि तुममें से कुछ की जीवनशैली आलस भरी हो गई है. वे कोई भी काम नहीं कर रहे; वस्तुतः वे अन्यों के लिए बाधा बन गए हैं.
೧೧ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ.
12 ऐसे व्यक्तियों के लिए प्रभु येशु मसीह में हमारी विनती भरी आज्ञा है कि वे गंभीरता पूर्वक काम पर लग जाएं तथा वे अपने ही परिश्रम से कमाया हुआ भोजन करें.
೧೨ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ.
13 किंतु, प्रिय भाई बहनो, तुम स्वयं वह करने में पीछे न हटना, जो सही और भला है.
೧೩ಸಹೋದರರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ.
14 यदि कोई व्यक्ति हमारे इस पत्र के आदेशों को नहीं मानता है, उस पर विशेष ध्यान दो. उसका साथ न दो कि वह लज्जित हो.
೧೪ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
15 इतना सब होने पर भी उसे शत्रु न मानो परंतु एक भाई समझकर उसे समझाओ.
೧೫ಆದರೂ ಅವನನ್ನು ವೈರಿಯೆಂದು ಭಾವಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿಹೇಳಿರಿ.
16 शांति के परमेश्वर स्वयं तुम्हें हर एक परिस्थिति में निरंतर शांति प्रदान करते रहें. प्रभु तुम सबके साथ हों.
೧೬ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗಿರಲಿ.
17 मैं, पौलॉस, अपने हाथों से नमस्कार लिख रहा हूं. मेरे हर एक पत्र का पहचान चिह्न यही है. यही मेरे लिखने का तरीका है.
೧೭ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ನನ್ನ ಗುರುತು, ಹೀಗೆಯೇ ನನ್ನ ಕೈ ಬರಹ.
18 हमारे प्रभु येशु मसीह का अनुग्रह तुम सब पर बना रहे.
೧೮ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರ ಸಂಗಡವಿರಲಿ.