< प्रेरितों के काम 4 >
1 जब वे भीड़ को संबोधित कर ही रहे थे, कि अचानक पुरोहित गण, मंदिर रखवालों का प्रधान तथा सदूकी उनके पास आ पहुंचे.
೧ಅಪೊಸ್ತಲರು ಜನರಿಗೆ ಉಪದೇಶಮಾಡುತ್ತಿರುವಾಗಲೇ ಯಾಜಕರೂ, ದೇವಾಲಯದ ಅಧಿಪತಿಯೂ, ಸದ್ದುಕಾಯರೂ ಅವರಿಗೆ ವಿರೋಧವಾಗಿ ಬಂದರು.
2 वे अत्यंत क्रोधित थे क्योंकि प्रेरित भीड़ को शिक्षा देते हुए मसीह येशु में मरे हुओं के जी उठने की घोषणा कर रहे थे.
೨ಯೇಸುವಿನ ದೃಷ್ಟಾಂತದಿಂದ ಸತ್ತವರಿಗೆ ಪುನರುತ್ಥಾನವಾಗುವುದೆಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿರುವುದನ್ನು ನೋಡಿದಾಗ ಅವರಿಗೆ ಕೋಪ ಬಂತು.
3 उन्होंने उन्हें बंदी बनाकर अगले दिन तक के लिए कारागार में डाल दिया क्योंकि दिन ढल चुका था.
೩ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.
4 उनके संदेश को सुनकर अनेकों ने विश्वास किया, जिनकी संख्या लगभग पांच हज़ार तक पहुंच गई.
೪ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.
5 अगले दिन यहूदियों के राजा, पुरनिये और शास्त्री येरूशलेम में इकट्ठा थे.
೫ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು.
6 वहां महापुरोहित हन्ना, कायाफ़स, योहन, अलेक्सान्दरॉस तथा महायाजकीय वंश के सभी सदस्य इकट्ठा थे.
೬ಅವರೊಂದಿಗೆ ಅನ್ನನೆಂಬ ಮಹಾಯಾಜಕನೂ, ಕಾಯಫನೂ, ಯೋಹಾನನೂ, ಅಲೆಕ್ಸಾಂದ್ರನೂ, ಮಹಾಯಾಜಕನ ಸಂಬಂಧಿಕರೆಲ್ಲರೂ ಇದ್ದರು.
7 उन्होंने प्रेरितों को सबके बीच खड़ा कर प्रश्न करना प्रारंभ कर दिया: “तुमने किस अधिकार से या किस नाम में यह किया है?”
೭ಇವರು ಪೇತ್ರ ಮತ್ತು ಯೋಹಾನನ್ನು ನಡುವೆ ನಿಲ್ಲಿಸಿ “ನೀವು ಯಾವ ಶಕ್ತಿಯಿಂದ ಮತ್ತು ಯಾರ ಹೆಸರಿನಿಂದ ಇದನ್ನು ಮಾಡುತ್ತಿದ್ದೀರಿ” ಎಂದು ಕೇಳಲು,
8 तब पवित्र आत्मा से भरकर पेतरॉस ने उत्तर दिया: “सम्माननीय राजागण और समाज के पुरनियों!
೮ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ; “ಅಧಿಕಾರಿಗಳೇ, ಹಿರಿಯರೇ,
9 यदि आज हमारा परीक्षण इसलिये किया जा रहा है कि एक अपंग का कल्याण हुआ है और इसलिये कि यह व्यक्ति किस प्रक्रिया द्वारा स्वस्थ हुआ है,
೯ಒಬ್ಬ ಅಂಗಹೀನನಿಗೆ ಆದ ಉಪಕಾರದ ವಿಷಯದಲ್ಲಿ ಅವನಿಗೆ ಹೇಗೆ ಸ್ವಸ್ಥವಾಯಿತು ಎಂಬುದಾಗಿ ನೀವು ನಮ್ಮನ್ನು ಈ ಹೊತ್ತು ವಿಚಾರಿಸುತ್ತಿದ್ದೀರಿ.
10 तो आप सभी को तथा, सभी इस्राएल राष्ट्र को यह मालूम हो कि यह सब नाज़रेथवासी, मसीह येशु के द्वारा किया गया है, जिन्हें आपने क्रूस का मृत्यु दंड दिया, किंतु जिन्हें परमेश्वर ने मरे हुओं में से दोबारा जीवित किया. आज उन्हीं के नाम के द्वारा स्वस्थ किया गया-यह व्यक्ति आपके सामने खड़ा है.
೧೦ನೀವು ಶಿಲುಬೆಗೆ ಹಾಕಿಸಿದಂತಹ ಮತ್ತು ದೇವರು ಸತ್ತವರೊಳಗಿಂದ ಎಬ್ಬಿಸಿದಂತಹ ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದಲೇ ಈ ಮನುಷ್ಯನು ಸೌಖ್ಯಹೊಂದಿದದವನಾಗಿ ನಿಮ್ಮೆದುರಿನಲ್ಲಿ ನಿಂತಿದ್ದಾನೆ ಎಂಬುದನ್ನು ನೀವು ಮತ್ತು ಇಸ್ರಾಯೇಲ್ ಜನರೆಲ್ಲರಿಗೂ ಈ ಸಂಗತಿ ತಿಳಿದಿರಲಿ.
11 मसीह येशु ही वह चट्टान हैं “‘जिन्हें आप भवन निर्माताओं ने ठुकरा कर अस्वीकृत कर दिया, जो कोने का प्रधान पत्थर बन गए.’
೧೧“ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು.
12 उद्धार किसी अन्य में नहीं है क्योंकि आकाश के नीचे मनुष्यों के लिए दूसरा कोई नाम दिया ही नहीं गया जिसके द्वारा हमारा उद्धार हो.”
೧೨ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.
13 पेतरॉस तथा योहन का यह साहस देख और यह जानकर कि वे दोनों अनपढ़ और साधारण व्यक्ति हैं, वे चकित रह गए. उन्हें धीरे धीरे यह याद आया कि ये वे हैं, जो मसीह येशु के साथी रहे हैं.
೧೩ಪೇತ್ರ ಮತ್ತು ಯೋಹಾನನ್ನು ಧೈರ್ಯದಿಂದ ಮಾತನಾಡುವುದನ್ನು ಆ ಜನರೆಲ್ಲರೂ ನೋಡಿ ಅವರು ಶಾಸ್ತ್ರಭ್ಯಾಸಮಾಡದ ಸಾಮಾನ್ಯರೆಂದು ತಿಳಿದು ಆಶ್ಚರ್ಯಪಟ್ಟರು.
14 किंतु स्वस्थ हुए व्यक्ति की उपस्थिति के कारण वे कुछ न कह सके;
೧೪ಇವರು ಯೇಸುವಿನ ಸಂಗಡ ಇದ್ದವರೆಂದು ಗುರುತು ಹಿಡಿದರು. ಮತ್ತು ಕ್ಷೇಮ ಹೊಂದಿದ ಆ ಮನುಷ್ಯನು ಅವರ ಸಂಗಡ ನಿಂತಿರುವುದನ್ನು ನೋಡಿ ಪ್ರತಿಯಾಗಿ ಏನೂ ಮಾತನಾಡಲಾರದೆ ಇದ್ದರು.
15 उन्होंने उन्हें सभागार से बाहर जाने की आज्ञा दी. तब वे आपस में विचार-विमर्श करने लगे,
೧೫ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,
16 “हम इनके साथ क्या करें? यह तो स्पष्ट है कि इनके द्वारा एक असाधारण चमत्कार अवश्य हुआ है और यह येरूशलेम निवासियों को भी मालूम हो चुका है. इस सच को हम नकार नहीं सकते.
೧೬“ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.
17 किंतु लोगों में इस समाचार का और अधिक प्रसार न हो, हम इन्हें यह चेतावनी दें कि अब वे किसी से भी इस नाम का वर्णन करते हुए बातचीत न करें.”
೧೭ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”
18 तब उन्होंने उन्हें भीतर बुलाकर आज्ञा दी कि वे न तो येशु नाम का वर्णन करें और न ही उसके विषय में कोई शिक्षा दें.
೧೮ಆಗ ಅವರನ್ನು ಕರೆಯಿಸಿ ಯೇಸುವಿನ ಹೆಸರನ್ನು ಎಲ್ಲೂ ಎತ್ತಬಾರದು ಹಾಗು ಉಪದೇಶ ಮಾಡಬಾರದು ಎಂದು ಅವರಿಗೆ ಖಂಡಿತವಾಗಿ ಅಪ್ಪಣೆಕೊಟ್ಟರು.
19 किंतु पेतरॉस और योहन ने उन्हें उत्तर दिया, “आप स्वयं निर्णय कीजिए कि परमेश्वर की दृष्टि में उचित क्या है: आपकी आज्ञा का पालन या परमेश्वर की आज्ञा का.
೧೯ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;
20 हमसे तो यह हो ही नहीं सकता कि जो कुछ हमने देखा और सुना है उसका वर्णन न करें.”
೨೦ನಾವಂತೂ ಕಂಡು ಕೇಳಿದ್ದನ್ನು ಹೇಳದೆ ಇರಲಾರೆವು” ಎಂದು ಉತ್ತರಕೊಟ್ಟರು.
21 इस पर यहूदी प्रधानों ने उन्हें दोबारा धमकी देकर छोड़ दिया. उन्हें यह सूझ ही नहीं रहा था कि उन्हें किस आधार पर दंड दिया जाए क्योंकि सभी लोग इस घटना के लिए परमेश्वर की स्तुति कर रहे थे.
೨೧ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.
22 उस व्यक्ति की उम्र, जो अद्भुत रूप से स्वस्थ हुआ था, चालीस वर्ष से अधिक थी.
೨೨ಈ ಸೂಚಕಕಾರ್ಯದಿಂದ ಸ್ವಸ್ಥತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.
23 मुक्त होने पर प्रेरितों ने अपने साथियों को जा बताया कि प्रधान पुरोहितों और पुरनियों ने उनसे क्या-क्या कहा था.
೨೩ಅವರು ಬಿಡುಗಡೆ ಹೊಂದಿ ಸ್ವಂತ ಜನರ ಬಳಿಗೆ ಹೋಗಿ ಮುಖ್ಯಯಾಜಕರೂ ಹಿರಿಯರೂ ತಮಗೆ ಹೇಳಿದ ಮಾತುಗಳನ್ನೆಲ್ಲಾ ತಿಳಿಸಿದರು.
24 यह विवरण सुनकर उन सबने एक मन हो ऊंचे शब्द में परमेश्वर से प्रार्थना की: “परम प्रधान प्रभु, आप ही हैं जिन्होंने स्वर्ग, पृथ्वी, समुद्र और इनमें निवास कर रहे प्राणियों की सृष्टि की है.
೨೪ಅವರು ಕೇಳಿ ಏಕಮನಸ್ಸು ಉಳ್ಳವರಾಗಿ ದೇವರನ್ನು ಗಟ್ಟಿಯಾದ ಧ್ವನಿಯಿಂದ ಹೀಗೆ ಪ್ರಾರ್ಥಿಸಿದರು; , “ಕರ್ತನೇ, ಭೂಮ್ಯಾಕಾಶಗಳನ್ನೂ, ಸಮುದ್ರಗಳನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ಉಂಟುಮಾಡಿದಾತನೇ,
25 आपने ही पवित्र आत्मा से अपने सेवक, हमारे पूर्वज दावीद के द्वारा कहा: “‘राष्ट्र क्रोधित क्यों होते हैं जातियां व्यर्थ योजनाएं क्यों करती हैं?
೨೫ನೀನು ಪವಿತ್ರಾತ್ಮನ ಮೂಲಕವಾಗಿ ನಿನ್ನ ಸೇವಕನಾಗಿದ್ದ ನಮ್ಮ ಪಿತೃವಾದ ದಾವೀದನ ಬಾಯಿಂದ, “‘ಅನ್ಯಜನಗಳು ಏಕೆ ಆಕ್ರೋಶಗೊಂಡರು? ಜನಾಂಗಗಳವರು ಏಕೆ ವ್ಯರ್ಥಕಾರ್ಯಗಳನ್ನು ಯೋಚಿಸುವರು?
26 पृथ्वी के राजागण मोर्चा बांधते और शासकलोग प्रभु के विरुद्ध और उनके अभिषिक्त के विरुद्ध एकजुट हो उठ खड़े होते हैं.’
೨೬ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು’ ಎಂದು ಹೇಳಿಸಿದಿಯಲ್ಲವೇ?
27 यह एक सच्चाई है कि इस नगर में हेरोदेस तथा पोन्तियॉस पिलातॉस दोनों ही इस्राएलियों तथा गैर-यहूदियों के साथ मिलकर आपके द्वारा अभिषिक्त, आपके पवित्र सेवक मसीह येशु के विरुद्ध एकजुट हो गए
೨೭ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು,
28 कि जो कुछ आपके सामर्थ्य और उद्देश्य के अनुसार पहले से निर्धारित था, वही हो.
೨೮ನಿನ್ನ ಕೈಯೂ ನಿನ್ನ ಸಂಕಲ್ಪವೂ ಮೊದಲು ನೇಮಿಸಿದ್ದನ್ನೇ ನಡಿಸಿದರು.
29 प्रभु, उनकी धमकियों की ओर ध्यान दीजिए और अपने दासों को यह सामर्थ्य दीजिए कि वे आपके वचन का प्रचार बिना डर के कर सकें
೨೯ಕರ್ತನೇ, ಈಗ ನೀನು ಅವರ ಬೆದರಿಕೆಗಳನ್ನು ನೋಡಿ ನಿನ್ನ ಪವಿತ್ರ ಸೇವಕನಾದ ಯೇಸುವಿನ ಹೆಸರಿನ ಮೂಲಕವಾಗಿ ರೋಗ ಪರಿಹಾರವೂ, ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜರಗುವಂತೆ
30 जब आप अपने सामर्थ्यी स्पर्श के द्वारा चंगा करते तथा अपने पवित्र सेवक मसीह येशु के द्वारा अद्भुत चिह्नों का प्रदर्शन करते जाते हैं.”
೩೦ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು” ಅಂದರು.
31 उनकी यह प्रार्थना समाप्त होते ही वह भवन, जिसमें वे इकट्ठा थे, थरथरा गया और वे सभी पवित्र आत्मा से भर गए और बिना डर के परमेश्वर के संदेश का प्रचार करने लगे.
೩೧ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು.
32 शिष्यों के इस समुदाय में सभी एक मन और एक प्राण थे. कोई भी अपने धन पर अपना अधिकार नहीं जताता था. उन सभी का धन एक में मिला हुआ था.
೩೨ಕ್ರಿಸ್ತನನ್ನು ನಂಬಿದವರ ಹೃದಯವೂ, ಪ್ರಾಣವೂ ಒಂದೇ ಆಗಿತ್ತು. ಯಾರೂ ತಮ್ಮ ಸ್ವತ್ತನ್ನು ತನ್ನದು ಎಂದು ಭಾವಿಸದೆ ಎಲ್ಲರೂ ಅದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.
33 प्रेरितगण असाधारण सामर्थ्य के साथ प्रभु येशु मसीह के दोबारा जी उठने की गवाही दिया करते थे और परमेश्वर का असीम अनुग्रह उन पर बना था.
೩೩ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು.
34 उनमें कोई भी निर्धन नहीं था क्योंकि उनमें जो खेतों व मकानों के स्वामी थे, अपनी संपत्ति बेचकर उससे प्राप्त धनराशि लाते
೩೪ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು
35 और प्रेरितों के चरणों में रख देते थे, जिसे ज़रूरत के अनुसार निर्धनों में बांट दिया जाता था.
೩೫ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು.
36 योसेफ़ नामक एक सैप्रसवासी लेवी थे, जिन्हें प्रेरितों द्वारा बारनबास नाम दिया गया था, जिसका अर्थ है प्रोत्साहन का पुत्र,
೩೬ಈ ಪ್ರಕಾರ ಮಾಡಿದವರೊಳಗೆ ಕುಪ್ರದ್ವೀಪದಲ್ಲಿ ಹುಟ್ಟಿದ ಲೇವಿಯನಾಗಿದ್ದ ಯೋಸೇಫನೆಂಬವನು ಒಬ್ಬನು. ಅವನಿಗೆ ಅಪೊಸ್ತಲರು ಬಾರ್ನಬ ಎಂದು ಹೆಸರಿಟ್ಟಿದ್ದರು, ಅಂದರೆ ಧೈರ್ಯದಾಯಕ ಎಂದರ್ಥ.
37 उन्होंने अपनी भूमि को बेच दिया और उससे प्राप्त धन लाकर प्रेरितों के चरणों में रख दिया.
೩೭ಅವನು ತನಗಿದ್ದ ಭೂಮಿಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಒಪ್ಪಿಸಿದನು.