< इफिसियों 1 >
1 पौलॉस की ओर से, जो परमेश्वर की इच्छा के अनुसार मसीह येशु का प्रेरित है, उन पवित्र लोगों को, जो इफ़ेसॉस नगर में मसीह येशु के विश्वासी हैं:
೧ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವುದೇನಂದರೆ,
2 तुम्हें हमारे पिता परमेश्वर और हमारे प्रभु येशु मसीह की ओर से अनुग्रह और शांति प्राप्त होती रहे.
೨ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯು ಶಾಂತಿಯೂ ಉಂಟಾಗಲಿ.
3 हमारे प्रभु येशु मसीह के परमेश्वर और पिता की स्तुति हो, जिन्होंने हमें मसीह में स्वर्गीय स्थानों में हर एक आत्मिक आशीष से आशीषित किया है.
೩ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
4 उन्होंने संसार की सृष्टि से पूर्व ही हमें मसीह में चुन लिया कि हम उनकी दृष्टि में पवित्र व निष्कलंक हों. प्रेम में
೪ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.
5 उन्होंने हमें अपनी इच्छा के भले उद्देश्य के अनुसार अपने लिए मसीह येशु के द्वारा आदि से ही अपनी संतान होने के लिए नियत किया,
೫ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು.
6 कि उनके अद्भुत अनुग्रह की स्तुति हो, जो उन्होंने हमें अपने उस प्रिय पुत्र में उदारतापूर्वक प्रदान किया है.
೬ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.
7 और उन्हीं में हमें उनके बहुत अनुग्रह के अनुसार उनके लहू के द्वारा छुटकारा तथा अपराधों की क्षमा प्राप्त हुई
೭ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.
8 यह अनुग्रह उन्होंने हम पर बहुतायत से बरसाया, उन्होंने सारी बुद्धिमानी और विवेक में,
೮ಈ ಕೃಪೆಯನ್ನು ಆತನು ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ.
9 अपनी इच्छा का भेद हम पर अपने भले उद्देश्य के अनुसार प्रकट किया, जो उन्होंने स्वयं मसीह में स्थापित की थी,
೯ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.
10 यह इंतजाम उन्होंने समयों को पूरा होने को ध्यान में रखकर मसीह में स्वर्ग तथा पृथ्वी की सभी वस्तुओं को इकट्ठा करने के लिए किया.
೧೦ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು.
11 उन्हीं में उनके उद्देश्य के अनुरूप, जो अपनी इच्छा के अनुसार सभी कुछ संचालित करते हैं, हमने पहले से ठहराए जाकर एक मीरास प्राप्त की है,
೧೧ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.
12 कि अंत में हम, जिन्होंने पहले से मसीह में आशा रखी, उनकी महिमा की स्तुति के साधन हो जाएं.
೧೨ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.
13 जिनमें तुम्हें भी, जिन्होंने सत्य का वचन अर्थात् अपने उद्धार का ईश्वरीय सुसमाचार सुनकर प्रभु येशु मसीह में विश्वास किया है, उन्हीं में प्रतिज्ञा किए हुए पवित्र आत्मा से छाप लगाई गई,
೧೩ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.
14 यह हमारी मीरास के बयाने के रूप में, परमेश्वर की निज प्रजा के रूप में छुटकारे, और उनकी महिमा की स्तुति के लिए हमें प्रदान किए गए हैं.
೧೪ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ.
15 यही कारण है कि मैं भी प्रभु येशु मसीह में तुम्हारे विश्वास और पवित्र लोगों के प्रति तुम्हारे प्रेम के विषय में सुनकर,
೧೫ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ,
16 अपनी प्रार्थनाओं में तुम्हें याद करते हुए परमेश्वर को धन्यवाद देना नहीं छोड़ता.
೧೬ನಾನು ನಿಮಗೋಸ್ಕರ ನನ್ನ ಪ್ರಾರ್ಥನೆಗಳಲ್ಲಿ ವಿಜ್ಞಾಪನೆ ಮಾಡುವಾಗ ದೇವರಿಗೆ ಎಡೆಬಿಡದೆ ಸ್ತೋತ್ರ ಮಾಡುತ್ತೇನೆ.
17 मेरी प्रार्थना यह है कि हमारे प्रभु येशु मसीह के परमेश्वर और प्रतापमय पिता तुम्हें ज्ञान व प्रकाशन की आत्मा प्रदान करें कि तुम उन्हें उत्तम रीति से जान सको.
೧೭ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.
18 और मैं प्रार्थना करता हूं कि अपने मन की आंखों के प्रकाशन से तुम जान सको कि उनकी बुलाहट की आशा और उनके पवित्र लोगों की मीरास के वैभव का धन क्या है,
೧೮ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,
19 और हम विश्वासियों के प्रति उनका सामर्थ्य कैसा महान है. यह सामर्थ्य उनकी महाशक्ति की काम-प्रणाली के अनुरूप है
೧೯ಮತ್ತು ನಂಬುವವರಾದ ನಮ್ಮಲ್ಲಿ ಕಾರ್ಯ ಸಾಧಿಸುವ ಆತನ ಪರಾಕ್ರಮ ಶಕ್ತಿಯ ಅಪಾರವಾದ ಮಹತ್ವವು ಎಂಥದೆಂಬುದನ್ನೂ ನೀವು ತಿಳಿಯುವಂತೆ ದೇವರು ನಿಮಗೆ ಅನುಗ್ರಹಿಸಲಿ.
20 जिसे उन्होंने मसीह में प्रकाशित किया, जब उन्होंने उन्हें मरे हुओं में से जीवित कर स्वर्गीय स्थानों में अपनी दायीं ओर बैठाया,
೨೦ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ
21 सभी सत्ता, प्रधानता, सामर्थ्य, अधिकार और हर एक नाम के ऊपर, चाहे इस युग के या आनेवाले युग के. (aiōn )
೨೧ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು. (aiōn )
22 उन्होंने सब कुछ उनके अधीन कर दिया तथा कलीसिया के लिए सभी वस्तुओं का शिरोमणि ठहरा दिया
೨೨ಇದಲ್ಲದೆ ದೇವರು ಸಮಸ್ತವನ್ನೂ ಯೇಸುಕ್ರಿಸ್ತನ ಪಾದದ ಕೆಳಗೆ ಅಧೀನಮಾಡಿ, ಸಭೆಗಾಗಿ ಎಲ್ಲಾದರ ಮೇಲೆ ಆತನನ್ನು ಶಿರಸ್ಸಾಗಿ ನೇಮಿಸಿದನು.
23 कलीसिया, जो उनका शरीर, उनकी परिपूर्णता है, जो सब में सब कुछ भरकर करते हैं.
೨೩ಸಭೆಯು ಕ್ರಿಸ್ತನ ದೇಹವಾಗಿದೆ, ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಸಂಪೂರ್ಣತೆಯುಳ್ಳದ್ದಾಗಿದೆ.