< निर्गमन 24 >
1 फिर याहवेह ने मोशेह से कहा, “तुम और अहरोन, नादाब, अबीहू और इस्राएल के सत्तर अगुए याहवेह के पास ऊपर आकर दूर से याहवेह को दंडवत करना.
೧ಯೆಹೋವನು ಮೋಶೆಗೆ, “ನೀನು, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬಿದ್ದು ಆರಾಧಿಸಬೇಕು.
2 केवल मोशेह ही याहवेह के पास जायेंगे और कोई नहीं. अन्य लोगों में से कोई भी पास नहीं आये, अन्य कोई जन उनके साथ ऊपर न आये.”
೨ಮೋಶೆ ಒಬ್ಬನೇ ಯೆಹೋವನ ಸಮೀಪಕ್ಕೆ ಬರಬೇಕೇ ಹೊರತು ಬೇರೆ ಯಾರು ಸಮೀಪಕ್ಕೆ ಬರಬಾರದು. ಮಿಕ್ಕ ಜನರು ಬೆಟ್ಟವನ್ನು ಹತ್ತಲೇಬಾರದು” ಎಂದು ಹೇಳಿದನು.
3 मोशेह नीचे उतर आए तथा जब उन्होंने लोगों को याहवेह द्वारा कही सब बातें बताई तब सबने एक साथ कहा कि याहवेह की कही सब बातों के अनुसार ही हम करेंगे.
೩ಮೋಶೆ ಜನರ ಬಳಿಗೆ ಬಂದು ಯೆಹೋವನ ಎಲ್ಲಾ ಮಾತುಗಳನ್ನೂ ಮತ್ತು ಅಜ್ಞಾವಿಧಿಗಳನ್ನೂ ವಿವರಿಸಲು ಜನರೆಲ್ಲರೂ, “ಯೆಹೋವನ ಮಾತುಗಳನ್ನೆಲ್ಲಾ ಅನುಸರಿಸಿ ನಡೆಯುವೆವು” ಎಂದು ಒಕ್ಕೊರಳಿನಿಂದ ಉತ್ತರಕೊಟ್ಟರು.
4 तब मोशेह ने याहवेह की कही सब बातों को लिख लिया. मोशेह ने सुबह जल्दी उठकर पर्वत के नीचे एक वेदी बनाई, और इस्राएल के बारह गोत्रों के अनुसार बारह खंभे भी खड़े किए.
೪ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.
5 उन्होंने इस्राएलियों में से जवानों को भेजा और उन्होंने याहवेह के लिए होमबलि तथा मेल बलि चढ़ाई.
೫ಇಸ್ರಾಯೇಲರ ಯೌವನಸ್ಥರಿಗೆ ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನ ಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟು ಕಳುಹಿಸಿದನು.
6 मोशेह ने आधा रक्त बर्तन में रखा और आधा वेदी पर छिड़क दिया.
೬ಅನಂತರ ಮೋಶೆ ಆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು.
7 फिर मोशेह ने वाचा की किताब लेकर सबको पढ़कर सुनाया. उसे सुनकर लोगों ने कहा “हम याहवेह की सब बात मानेंगे और उनके साथ चलेंगे!”
೭ತರುವಾಯ ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ, “ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗುವೆವು” ಅಂದರು.
8 तब मोशेह ने रक्त लेकर लोगों पर छिड़का और कहा, “यह उस वाचा का रक्त है, जो तुम्हारे साथ याहवेह ने बांधी हैं.”
೮ಆಗ ಮೋಶೆಯು ಆ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ ಈ ಗ್ರಂಥದಲ್ಲಿ ಹೇಳಿರುವ ಎಲ್ಲಾ ಆಜ್ಞೆಗಳ ಪ್ರಕಾರ ಯೆಹೋವನು ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯ ರಕ್ತವು ಇದೇ” ಅಂದನು.
9 फिर मोशेह, अहरोन, नादाब तथा अबीहू और इस्राएल के सत्तर अगुओं को साथ लेकर ऊपर गए.
೯ಮೋಶೆ, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಜನರು ಬೆಟ್ಟವನ್ನು ಹತ್ತಿದರು.
10 वहां उन्होंने इस्राएल के परमेश्वर का दर्शन किया. उनके पांव के नीचे आकाश के जैसा साफ़ नीलमणि था.
೧೦ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.
11 परमेश्वर ने उन लोगों पर अपना हाथ नहीं बढ़ाया. उन्होंने परमेश्वर को देखा और खाया पिया.
೧೧ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು.
12 याहवेह ने मोशेह से कहा, “तुम यहां पर्वत के ऊपर मेरे पास आओ और, मैं तुम्हें मेरे नियम लिखी हुई पट्टिया दूंगा, उसे लेकर तुम इन सबको सिखाना.”
೧೨ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ನೀನು ಆ ಧರ್ಮಶಾಸ್ತ್ರವನ್ನೂ ಮತ್ತು ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು.
13 तब मोशेह यहोशू को साथ लेकर परमेश्वर के पर्वत पर गए.
೧೩ಮೋಶೆಯು ತನ್ನ ಶಿಷ್ಯನಾದ ಯೆಹೋಶುವನೊಂದಿಗೆ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.
14 किंतु मोशेह ने अगुओं से कहा, “तुम लोग हमारे वापस आने तक यहीं रहना. अहरोन तथा हूर यहां तुम्हारे साथ हैं. यदि कोई विवाद हो तो उनको बताना.”
೧೪ಇದಕ್ಕೆ ಮೊದಲು ಅವನು ಹಿರಿಯರಿಗೆ, “ನಾವು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೇ ಕಾದುಕೊಂಡಿರಿ. ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲಿರುವರು. ಯಾರಿಗಾದರೂ ವ್ಯಾಜ್ಯವಿದ್ದ ಪಕ್ಷಕ್ಕೆ ಅವರ ಹತ್ತಿರಕ್ಕೆ ಹೋಗಲಿ” ಎಂದು ಹೇಳಿದನು.
15 यह कहकर मोशेह पर्वत पर चले गए और बादल ने पर्वत को ढक दिया.
೧೫ಮೋಶೆಯು ಬೆಟ್ಟವನ್ನು ಹತ್ತಿದನು ಮತ್ತು ಮೇಘವು ಬೆಟ್ಟವನ್ನು ಆವರಿಸಿಕೊಂಡಿತು.
16 सीनायी पर्वत पर याहवेह का प्रकाश छा गया. छः दिन तक बादल उस पर्वत को ढके रहा. सातवें दिन याहवेह ने बादलों के बीच से मोशेह को बुलाया.
೧೬ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.
17 इस्राएलियों को याहवेह का प्रकाश, पर्वत पर भस्म करनेवाली आग के समान दिख रहा था.
೧೭ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು.
18 मोशेह पर्वत पर बादलों के बीच से होते हुए चढ़ गए और चालीस दिन और चालीस रात वहां रहे.
೧೮ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.