< यहेजकेल 8 >
1 छठवें वर्ष के छठवें माह के पांचवें दिन, जब मैं अपने घर में बैठा हुआ था और यहूदिया के अगुए मेरे सामने बैठे हुए थे, तब वहां परम प्रधान याहवेह का हाथ मेरे ऊपर आया.
೧ಯೆಹೋಯಾಖೀನನು ಸೆರೆಯಾದ ಆರನೆಯ ವರ್ಷದ, ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ ಮತ್ತು ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರಾಗಿ ಕುಳಿತಿರಲು ಕರ್ತನಾದ ಯೆಹೋವನ ಹಸ್ತಸ್ಪರ್ಶದಿಂದ ನಾನು ಪರವಶನಾದೆನು.
2 मैंने एक आकृति देखी, जो एक मनुष्य के जैसी थी. उसकी कमर से नीचे का रूप आग के जैसा था, और उसकी कमर के ऊपर का भाग चमकते धातु की तरह उजला था.
೨ಇಗೋ, ನಾನು ನೋಡಲಾಗಿ ಬೆಂಕಿಯು ಉರಿಯುತ್ತದೋ ಎಂಬಂತೆ ನನಗೆ ತೇಜೋರೂಪವು ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ ಎಂಬಂತೆ ಅದ್ಭುತಕಾಂತಿಯು ಹೊಳೆಯಿತು.
3 उसने अपने हाथ जैसे चीज़ को बढ़ाकर मेरे सिर के बाल को पकड़ लिया. तब आत्मा ने मुझे पृथ्वी और आकाश के बीच उठा लिया और परमेश्वर के दर्शन में वह मुझे येरूशलेम में भीतरी आंगन के उत्तर के द्वार के प्रवेश स्थल पर ले गया, जहां जलन की भावना उत्तेजित करनेवाली मूर्ति थी.
೩ಆಗ ಆ ತೇಜೋರೂಪಿಯು ಮನುಷ್ಯ ಹಸ್ತದಂಥ ಹಸ್ತವನ್ನು ಚಾಚಿ ನನ್ನ ತಲೆಯ ಕೂದಲಿನಿಂದ ಹಿಡಿಯಲು ದೇವರಾತ್ಮವು ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಯೆರೂಸಲೇಮಿನವರೆಗೆ ಒಯ್ದು, ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡು ಬಂದಿತು.
4 और वहां इस्राएल के परमेश्वर का वैसा ही तेज था, जैसा कि मैदान में दर्शन में देखा था.
೪ಆಹಾ, ಇಸ್ರಾಯೇಲಿನ ದೇವರ ಮಹಿಮೆಯ ದರ್ಶನವು ಬಯಲು ಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.
5 तब उसने मुझसे कहा, “हे मनुष्य के पुत्र, उत्तर दिशा की ओर देखो.” अतः मैंने दृष्टि की, और वेदी के द्वार के उत्तर में प्रवेश स्थल पर मैंने जलन उपजानेवाली उस मूर्ति को देखा.
೫ಆಗ ಆತನು ನನಗೆ, “ನರಪುತ್ರನೇ, ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡು” ಎಂದು ಹೇಳಿದನು; ಹಾಗೆ ನಾನು ಉತ್ತರ ದಿಕ್ಕಿಗೆ ಕಣ್ಣೆತ್ತಿ ನೋಡಲು, ಇಗೋ, ದೇವರನ್ನು ರೋಷಗೊಳಿಸುವ ಆ ವಿಗ್ರಹವು ಯಜ್ಞವೇದಿಯ ಉತ್ತರದಿಕ್ಕಿನ ಬಾಗಿಲಿನ ಪ್ರವೇಶದ್ವಾರದ ಮುಂದೆ ನಿಂತಿತ್ತು.
6 और उसने मुझसे कहा, “हे मनुष्य के पुत्र, क्या तुम देख रहे हो कि वे क्या कर रहे हैं—इस्राएली लोग यहां बहुत ही घृणित काम कर रहे हैं, ऐसा काम जो मुझे मेरे पवित्र स्थान से दूर ले जाएगा? पर तुम इनसे भी ज्यादा घृणित काम देखोगे.”
೬ಆಗ ಆತನು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಾಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನು ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರ ಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.
7 तब वह मुझे आंगन के प्रवेश स्थल पर ले आया. वहां मैंने देखा कि दीवार में एक छेद था.
೭ಆಮೇಲೆ ಆತನು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರ ಮಾಡಿದನು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು.
8 उसने मुझे कहा, “हे मनुष्य के पुत्र, दीवार को फोड़ो.” इसलिये मैंने दीवार को फोड़ा और वहां मुझे एक प्रवेश द्वार दिखाई दिया.
೮ಆಗ ಆತನು ನನಗೆ, “ನರಪುತ್ರನೇ, ಗೋಡೆಯನ್ನು ತೋಡು” ಎಂದು ಹೇಳಿದನು. ನಾನು ಗೋಡೆಯನ್ನು ತೋಡಲಾಗಿ ಅಲ್ಲಿ, ಒಂದು ಬಾಗಿಲು ಕಾಣಿಸಿತು.
9 तब उसने मुझसे कहा, “अंदर जाओ और जो दुष्ट और घृणित कार्य वे यहां कर रहे हैं, उसे देखो.”
೯ಆತನು ನನಗೆ, “ನೀನು ಒಳಕ್ಕೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯವಾದ ದುಷ್ಕಾರ್ಯಗಳನ್ನು ನೋಡು” ಎಂದು ಹೇಳಿದಾಗ ನಾನು ಹೋಗಿ ನೋಡಿದೆನು.
10 इसलिये मैं अंदर गया, और देखा कि दीवारों पर सब तरफ सब प्रकार के रेंगनेवाले जंतुओं और अशुद्ध पशुओं और इस्राएल के सब मूर्तियों के चित्र बनाए गये हैं.
೧೦ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ ಮತ್ತು ಇಸ್ರಾಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿಸಲ್ಪಟ್ಟಿದ್ದವು.
11 उनके सामने इस्राएल के सत्तर अगुए खड़े थे, और उनके बीच शापान का पुत्र यात्सानिया खड़ा हुआ था. हर एक व्यक्ति अपने हाथ में धूपदान लिये हुए था, और वहां धूप का सुगंधित धुआं उठ रहा था.
೧೧ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.
12 तब उसने मुझसे कहा, “हे मनुष्य के पुत्र, क्या तुमने देखा है कि इस्राएल के अगुए अंधेरे में, हर एक अपने मूर्ति की जगह में क्या कर रहे हैं? वे कहते हैं, ‘याहवेह हमें नहीं देखते; याहवेह ने हमारे देश को त्याग दिया है.’”
೧೨ಆಗ ಆತನು ನನಗೆ, “ನರಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರೂ ನಾನಾ ರೂಪಗಳಿಂದ ಚಿತ್ರಿಸಲ್ಪಟ್ಟ ತಮ್ಮ ತಮ್ಮ ಕೋಣೆಗಳೊಳಗೆ ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವನು ನಮ್ಮನ್ನು ನೋಡುವುದಿಲ್ಲ, ಯೆಹೋವನು ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ಮಾತನಾಡಿಕೊಳ್ಳುತ್ತಾರಷ್ಟೆ” ಎಂಬುದಾಗಿ ಹೇಳಿದನು.
13 फिर उसने मुझसे कहा, “तुम उन्हें और भी ज्यादा घृणित काम करते हुए देखोगे.”
೧೩ಆಮೇಲೆ ಆತನು ನನಗೆ, “ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವಿ” ಎಂದು ಹೇಳಿದನು.
14 तब वह मुझे याहवेह के भवन के उत्तरी द्वार के प्रवेश स्थल पर ले आया, और मैंने देखा कि वहां स्त्रियां बैठी हुई तम्मुत्स देवता के लिए रो रही थी.
೧೪ಆತನು ನನ್ನನ್ನು ಯೆಹೋವನ ಆಲಯದ ಉತ್ತರದ ಬಾಗಿಲ ಮುಂದಕ್ಕೆ ಕರೆತಂದನು; ಇಗೋ, ಅಲ್ಲಿ ಸ್ತ್ರೀಯರು “ತಮ್ಮೂಜ್” ದೇವತೆಗಾಗಿ ಅಳುತ್ತಾ ಕುಳಿತಿದ್ದರು.
15 उसने मुझसे कहा, “हे मनुष्य के पुत्र, क्या तुम यह सब देख रहे हो? तुम इससे भी ज्यादा घृणित चीज़ें देखोगे.”
೧೫ಇದಾದ ಮೇಲೆ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವೆ” ಎಂದು ಹೇಳಿದನು.
16 तब वह मुझे याहवेह के भवन के भीतरी आंगन में ले आया, और वहां मंदिर के प्रवेश द्वार पर, मंडप और वेदी के बीच लगभग पच्चीस पुरुष थे. उनकी पीठ याहवेह के मंदिर की ओर और उनका मुंह पूर्व दिशा की ओर था, और वे पूर्व में सूर्य को दंडवत कर रहे थे.
೧೬ಆತನು ಯೆಹೋವನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆತಂದನು; ಇಗೋ, ಯೆಹೋವನ ಆಲಯದ ಬಾಗಿಲ ಮುಂದೆ ಮಂಟಪಕ್ಕೂ ಮತ್ತು ಯಜ್ಞವೇದಿಗೂ ನಡುವೆ ಸುಮಾರು ಇಪ್ಪತ್ತೈದು ಜನರು ಯೆಹೋವನ ಆಲಯಕ್ಕೆ ಬೆನ್ನು ಮಾಡಿ ಪೂರ್ವದ ಕಡೆಗೆ ಮುಖ ಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.
17 उसने मुझसे कहा, “हे मनुष्य के पुत्र, क्या तुमने यह देखा? यहूदिया के लोगों के लिये घृणित काम करना, जिसे वे यहां कर रहे हैं, क्या कोई छोटी बात है? निश्चित रूप से वे देश को हिंसा से भर देते हैं और लगातार मेरे क्रोध को भड़काते हैं. देखो, वे पेड़ की डाली को अपनी नाक पर रखे हुए हैं!
೧೭ಆಗ ಆತನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಯೆಹೂದ ವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಕೊಂಬೆಗಳನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.
18 इसलिये मैं उनके साथ क्रोध से पेश आऊंगा; मैं उन दया दृष्टि नहीं करूंगा या उन्हें नहीं छोड़ूंगा. चाहे वे आकर मेरे कान में ऊंची आवाज में पुकारें, फिर भी मैं उनकी बात न सुनूंगा.”
೧೮ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”