< यहेजकेल 1 >
1 यह घटना मेरी बंधुआई के तीसवें वर्ष के चौथे माह के पांचवें दिन की है, जब मैं बंदियों के साथ खेबर नदी के तट पर था, तब आकाश खुल गया और मुझे परमेश्वर का दर्शन हुआ.
೧ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.
2 —यह राजा यहोयाकिन के बंधुआई के पांचवें वर्ष के चौथे माह के पांचवें दिन की घटना है—
೨ಅರಸನಾದ ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ,
3 बाबेलवासियों के देश में खेबर नदी के तट पर, बुज़ी के पुत्र पुरोहित यहेजकेल के पास याहवेह का यह वचन आया. वहां याहवेह का हाथ उस पर था.
೩ಯೆಹೋವನ ವಾಕ್ಯವು ಕಸ್ದೀಯ ದೇಶದೊಳಗೆ ಕೆಬಾರ್ ನದಿಯ ಹತ್ತಿರ ಬೂಜಿಯ ಮಗನೂ, ಯಾಜಕನೂ ಆದ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಕೇಳಿಸಿತು; ಅಲ್ಲಿ ಯೆಹೋವನ ಹಸ್ತಸ್ಪರ್ಶದಿಂದ ಅವನು ಪರವಶನಾದನು.
4 मैंने देखा कि उत्तर दिशा से एक बड़ी आंधी आ रही थी—कड़कती बिजली के साथ एक बहुत बड़ा बादल और चारों तरफ तेज प्रकाश था. आग का बीच वाला भाग तपता हुआ लाल धातु के समान दिख रहा था,
೪ಆಗ ನಾನು ನೋಡಲಾಗಿ; ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿಯು ಬೀಸಿತು, ಎಡೆಬಿಡದೆ ಝಗಝಗಿಸುವ ಜ್ವಾಲೆಯುಳ್ಳ ಮಹಾಮೇಘವು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು, ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿಯು ಉಂಟಾಯಿತು.
5 और आग में चार जीवित प्राणी जैसे दिख रहे थे. दिखने में उनका स्वरूप मानव जैसे था,
೫ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ಆಕಾರಗಳು ಕಂಡುಬಂದವು; ಅವುಗಳ ರೂಪವು ಮನುಷ್ಯನ ರೂಪದಂತಿತ್ತು.
6 पर इनमें से हर एक के चार-चार मुंह और चार-चार पंख थे.
೬ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ಮತ್ತು ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು.
7 उनके पैर सीधे थे; उनके पांव बछड़े के खुर के समान थे और चिकने कांसे के समान चमक रहे थे.
೭ಅವುಗಳ ಕಾಲುಗಳು ನೆಟ್ಟಗಿದ್ದು; ಹೆಜ್ಜೆಗಳು ಕರುವಿನ ಗೊರಸಿನಂತಿದ್ದವು. ಅವುಗಳು ಬೆಳಗಿದ ತಾಮ್ರದ ಹಾಗೆ ಹೊಳೆಯುತ್ತಿದ್ದವು.
8 उनके चारों तरफ पंखों के नीचे उनके मनुष्य के समान हाथ थे. उन चारों के मुंह और पंख थे,
೮ಒಂದೊಂದು ಜೀವಿಯ ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯನ ಹಸ್ತದಂಥ ಹಸ್ತಗಳಿದ್ದವು; ಆ ನಾಲ್ಕು ಜೀವಿಗಳ ಮುಖಗಳೂ, ರೆಕ್ಕೆಗಳೂ ಹೇಗಿದ್ದವೆಂದರೆ,
9 उनके पंख एक दूसरे के पंख को छू रहे थे. हर एक आगे सीधा जा रहा था, और वे बिना मुड़े आगे बढ़ रहे थे.
೯ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಮುಂದೆ ಹೋಗುವಾಗ ತಿರುಗಿಕೊಳ್ಳದೆ ನೇರ ಮುಖವಾಗಿಯೇ ಹೋಗುತ್ತಿದ್ದವು.
10 उनका मुंह इस प्रकार दिखता था: चारों में से हर एक का एक मुंह मनुष्य का था, और दाहिने तरफ हर एक का मुंह सिंह का, और बायें तरफ हर एक मुंह बैल का; और हर एक का एक गरुड़ का मुंह भी था.
೧೦ಅವುಗಳ ಮುಖಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖವು ಮನುಷ್ಯನ ಮುಖದಂತಿತ್ತು, ಬಲಗಡೆಯ ಮುಖವು ಸಿಂಹದ ಮುಖದಂತಿತ್ತು, ಎಡಗಡೆಯ ಮುಖವು ಹೋರಿಯ ಮುಖದಂತಿತ್ತು, ಹಿಂದಿನ ಮುಖವು ಗರುಡಪಕ್ಷಿಯ ಮುಖದಂತಿತ್ತು.
11 इस प्रकार उनके मुंह थे. उनमें से हर एक के दो पंख ऊपर की ओर फैले थे, और ये पंख अपने दोनों तरफ के प्राणी को छू रहे थे और हर एक अन्य दो पंखों से अपने शरीर को ढांपे हुए थे.
೧೧ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟಿದ್ದವು; ರೆಕ್ಕೆಗಳೂ ಮೇಲ್ಗಡೆ ಪ್ರತ್ಯೇಕಪ್ರತ್ಯೇಕವಾಗಿದ್ದವು; ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕೆಗಳಿಗೆ ತಗಲುತ್ತಿದ್ದವು, ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.
12 हर एक आगे सीधा जा रहा था. जहां कहीं भी आत्मा जाती थी, वे भी बिना मुड़े उधर ही जाते थे.
೧೨ಆ ಜೀವಿಗಳೆಲ್ಲಾ ನೇರ ಮುಖವಾಗಿಯೇ ಹೋಗುತ್ತಿದ್ದವು, ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಹಿಂತಿರುಗಿನೋಡದೆ ಮುಂದೆ ಹೋದವು.
13 उन जीवित प्राणियों का रूप आग के जलते कोयलों या मशालों के समान था. वह आग प्राणियों के बीच इधर-उधर खसक रही थी; यह चमकीला था, और इससे बिजली चमक रही थी.
೧೩ಆ ಜೀವಿಗಳ ಮಧ್ಯದಲ್ಲಿ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು; ಅದು ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿಯು ತೇಜೋಮಯವಾಗಿತ್ತು, ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.
14 वे प्राणी बिजली की चमक समान तेजी से इधर-उधर हो रहे थे.
೧೪ಆ ಜೀವಿಗಳು ಮಿಂಚಿನಂತೆ ಮುಂದಕ್ಕೂ, ಹಿಂದಕ್ಕೂ ವೇಗವಾಗಿ ಚಲಿಸುತ್ತಿದ್ದವು.
15 जब मैं जीवित प्राणियों को देख रहा था, तब मैंने देखा कि उन चार मुहों वाले हर एक जीवित प्राणियों के बाजू में एक-एक पहिया था.
೧೫ಇಗೋ, ನಾನು ಆ ಜೀವಿಗಳನ್ನು ನೋಡುತ್ತಿರಲಾಗಿ ಒಂದೊಂದು ಕಡೆಯಲ್ಲಿಯೂ ಜೀವಿಗಳ ಪಕ್ಕದಲ್ಲಿ ಭೂಮಿಯ ಮೇಲೆ ಒಂದು ಚಕ್ರವು ಕಾಣಿಸಿತು.
16 उन पहियों का रूप और बनावट इस प्रकार थी: वे पुखराज के समान चमक रहे थे, और चारों एक जैसे दिखते थे. हर एक पहिया ऐसे बनाया गया दिखता था मानो एक पहिये के भीतर दूसरा पहिया हो.
೧೬ಆ ಚಕ್ರಗಳ ವರ್ಣವೂ, ರಚನೆಯೂ ಹೇಗಿದ್ದವೆಂದರೆ, ಅವುಗಳ ವರ್ಣವು ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು.
17 जब वे आगे बढ़ते थे, तो वे चारों दिशाओं में उस दिशा की ओर जाते थे, जिस दिशा में प्राणियों का चेहरा होता था; जब प्राणी चलते थे, तो पहिये अपनी दिशा नहीं बदलते थे.
೧೭ಅವು ಚಲಿಸುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ತಿರುಗುತ್ತಿದ್ದವು; ಓರೆಯಾಗಿ ತಿರುಗುತ್ತಿರಲಿಲ್ಲ.
18 इन पहियों के घेरे ऊंचे और अद्भुत थे, और चारों पहियों के घेरो में सब तरफ आंखें ही आंखें थी.
೧೮ಗಾಲಿಗಳ ಸುತ್ತಣ ಭಾಗಗಳು ಎತ್ತರವಾಗಿಯೂ, ಭಯಂಕರವಾಗಿಯೂ ಇದ್ದವು; ಈ ಭಾಗಗಳ ಎಲ್ಲಾ ಕಡೆಯಲ್ಲಿಯೂ ತುಂಬಾ ಕಣ್ಣುಗಳಿದ್ದವು;
19 जब वे जीवित प्राणी आगे बढ़ते थे, तब उनके बाजू के पहिये भी आगे बढ़ते थे; और जब वे जीवित प्राणी भूमि पर से ऊपर उठते थे, तो पहिये भी ऊपर उठते थे.
೧೯ಜೀವಿಗಳು ಮುಂದೆ ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಮುಂದೆ ಹೋಗುತ್ತಿದ್ದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೇಳುವಾಗ ಚಕ್ರಗಳೂ ಮೇಲೆ ಏಳುತ್ತಿದ್ದವು;
20 जहां कहीं भी आत्मा जाती थी, वे भी जाते थे, और वे पहिये उनके साथ ऊपर उठते थे, क्योंकि जीवित प्राणियों की आत्मा उन पहियों में थी.
೨೦ದೇವರಾತ್ಮವು ಸಾಗಿಸಿದ ಕಡೆಗೇ ಸಾಗಿದವು; ಜೀವಿಗಳ ಒಳಗಿನ ಆತ್ಮವು ಚಕ್ರಗಳಲ್ಲಿ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು.
21 जब वे प्राणी आगे बढ़ते थे, तो ये भी आगे बढ़ते थे; जब वे प्राणी खड़े होते थे, तो ये भी खड़े हो जाते थे; और जब वे प्राणी भूमि से ऊपर उठते थे, तो ये पहिये भी उनके साथ ऊपर उठते थे, क्योंकि जीवित प्राणियों की आत्मा इन पहियों में थी.
೨೧ಅವು ಮುಂದೆ ಹೋಗುವಾಗ ಇವೂ ಮುಂದೆ ಹೋಗುತ್ತಿದ್ದವು, ಅವು ನಿಂತು ಹೋಗುವಾಗ ಇವೂ ನಿಂತುಹೋಗುತ್ತಿದ್ದವು, ಅವು ನೆಲದಿಂದ ಮೇಲಕ್ಕೆ ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕೆಂದರೆ ಜೀವಿಗಳ ಆತ್ಮವು ಚಕ್ರಗಳಲ್ಲಿಯೂ ಇತ್ತು.
22 सजीव प्राणियों के सिर के ऊपर जो फैला हुआ था, वह गुम्बज के समान दिखता था, और स्फटिक के समान चमक रहा था, और अद्भुत था.
೨೨ಭೀಕರವಾದ ಮಂಜುಗಡ್ಡೆಯಂತೆ ಥಳಥಳಿಸುವ ಒಂದು ರೀತಿಯ ಗಗನಮಂಡಲ ಆ ಜೀವಿಗಳ ತಲೆಯ ಮೇಲ್ಗಡೆ ಹರಡಿತ್ತು.
23 गुम्बज के नीचे उनके पंख एक दूसरे की ओर फैले हुए थे, और हर एक प्राणी के दो पंख से उनके अपने शरीर ढके हुए थे.
೨೩ಅದರ ಕೆಳಗೆ ಜೀವಿಗಳ ರೆಕ್ಕೆಗಳು ನೇರವಾಗಿ ಚಾಚಲ್ಪಟ್ಟು ಒಂದಕ್ಕೊಂದು ತಗಲುತ್ತಿದ್ದವು; ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು.
24 जब वे प्राणी आगे बढ़ते थे, तो मैंने सुना, उनके पंखों से तेजी से बहते पानी के गर्जन जैसी, सर्वशक्तिमान के आवाज जैसी, सेना के कोलाहल जैसी आवाज आती थी. जब वे खड़े होते थे, तो वे अपने पंख नीचे कर लेते थे.
೨೪ಅವು ಮುಂದೆ ಹೋಗುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.
25 जब वे खड़े थे और उनके पंख झुके हुए थे, तब उनके सिर के ऊपर स्थित गुम्बज के ऊपर से एक आवाज आई.
೨೫ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲದ ಮೇಲಿಂದ ಒಂದು ಧ್ವನಿಯು ಕಿವಿಗೆ ಬಿತ್ತು. ಜೀವಿಗಳು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.
26 उनके सिर के ऊपर स्थित गुम्बज के ऊपर कुछ ऐसा था जो नीलमणि के सिंहासन जैसे दिखता था, और इस ऊंचे सिंहासन के ऊपर मनुष्य के जैसा कोई दिख रहा था.
೨೬ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.
27 मैंने देखा कि उसके कमर से ऊपर वह चमकते धातु की तरह दिखता था, मानो वह आग से भरा हो, और उसके कमर से नीचे वह आग के समान दिखता था, और वह चमकते प्रकाश से घिरा हुआ था.
೨೭ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತಕಾಂತಿಯನ್ನು ಕಂಡೆನು; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿಯು ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆನು; ಮತ್ತು ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು.
28 जैसे किसी बरसात के दिन बादल में धनुष दिखाई पड़ता है, वैसे ही उसके चारों ओर प्रकाश की चमक थी. याहवेह के तेज के जैसा यह रूप था. जब मैंने उसे देखा, तो मैं मुंह के बल ज़मीन पर गिरा, और मैंने किसी के बात करने की आवाज सुनी.
೨೮ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲೂ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡಾಗ ನಾನು ಅಡ್ಡಬಿದ್ದೆ; ಮಾತನಾಡುವಾತನ ವಾಣಿಯನ್ನು ಕೇಳಿದೆ.