< उत्पत्ति 13 >
1 अब्राम अपनी पत्नी, सारी संपत्ति और लोत को लेकर कनान देश के नेगेव में आए.
೧ಹೀಗೆ ಅಬ್ರಾಮನು ತನ್ನದನ್ನೆಲ್ಲಾ ತೆಗೆದುಕೊಂಡು ಹೆಂಡತಿಯನ್ನೂ, ಲೋಟನನ್ನೂ ಸಂಗಡ ಕರೆದುಕೊಂಡು ಐಗುಪ್ತದೇಶವನ್ನು ಬಿಟ್ಟು ಕಾನಾನ್ ದೇಶದ ದಕ್ಷಿಣ ಪ್ರಾಂತ್ಯಕ್ಕೆ ಬಂದನು.
2 अब्राम के पास बहुत पशु, सोने तथा चांदी होने के कारण वे बहुत धनी हो गये थे.
೨ಅಬ್ರಾಮನು ಬಹು ಐಶ್ವರ್ಯವಂತನಾಗಿದ್ದನು; ಅವನಿಗೆ ಪಶುಗಳೂ ಬೆಳ್ಳಿಬಂಗಾರವೂ ಇದ್ದವು.
3 वे नेगेव से बेथेल तक पहुंच गए, जहां वे पहले रहते थे अर्थात् बेथेल तथा अय के बीच में.
೩ಅವನು ದಕ್ಷಿಣ ದೇಶವನ್ನು ಬಿಟ್ಟು ಮುಂದೆ ಪ್ರಯಾಣ ಮಾಡುತ್ತಾ ಬೇತೇಲಿನವರೆಗೆ ಅಂದರೆ ಬೇತೇಲಿಗೂ ಆಯಿ ಎಂಬ ಊರಿಗೂ
4 और जहां उन्होंने पहले एक वेदी बनाई थी वहां अब्राम ने याहवेह से प्रार्थना की.
೪ನಡುವೆ ಪೂರ್ವದಲ್ಲಿ ಗುಡಾರ ಹಾಕಿಸಿ ಯಜ್ಞವೇದಿಯನ್ನು ಕಟ್ಟಿದ್ದ ಸ್ಥಳಕ್ಕೆ ಅಬ್ರಾಮನು ಹಿಂತಿರುಗಿ ಬಂದು ಅಲ್ಲಿ ಯೆಹೋವನ ಹೆಸರಿನಲ್ಲಿ ಆರಾಧಿಸಿದನು.
5 लोत के पास भी बहुत भेड़-बकरियां और पशु थे. उन्होंने भी अब्राम के पास अपने तंबू लगाए.
೫ಅಬ್ರಾಮನ ಜೊತೆಯಲ್ಲಿದ್ದ ಲೋಟನಿಗೂ ಕುರಿ, ಎತ್ತು, ಕುಟುಂಬಗಳು ಇದ್ದವು.
6 पर ज़मीन की कमी के कारण वे दोनों एक साथ न रह पा रहे थे क्योंकि उनके पास बहुत अधिक संपत्ति थी.
೬ಆ ಸ್ಥಳವು ಅವರಿಬ್ಬರ ಜೀವನಕ್ಕೆ ಸಾಲದೆ ಹೋಯಿತು.
7 और अब्राम तथा लोत के चरवाहों के बीच आपस में लड़ाई हो जाती थी. और उस समय उस देश में कनानी एवं परिज्ज़ी लोग भी रहते थे.
೭ಅವರಿಬ್ಬರ ಆಸ್ತಿ ಬಹಳವಾಗಿದ್ದುದರಿಂದ ಅವರು ಒಟ್ಟಿಗೆ ವಾಸವಾಗಿರುವುದು ಅಸಾಧ್ಯವಾಯಿತು. ಇದರಿಂದ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಗುತ್ತಿತ್ತು. ಇದಲ್ಲದೆ ಕಾನಾನ್ಯರೂ ಪೆರಿಜೀಯರೂ ಆ ಕಾಲದಲ್ಲಿ ದೇಶದೊಳಗೆ ವಾಸವಾಗಿದ್ದರು.
8 इसलिये अब्राम ने लोत से कहा, “हम दोनों के बीच और हमारे चरवाहों के बीच झगड़ा न हो, क्योंकि हम एक ही परिवार के हैं.
೮ಹೀಗಿರಲು ಅಬ್ರಾಮನು ಲೋಟನಿಗೆ, “ನನಗೂ ನಿನಗೂ, ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಾಗಬಾರದು; ನಾವು ಸಹೋದರರಲ್ಲವೇ.
9 इसलिये हम दोनों अलग हो जाते हैं. यदि तुम बायीं दिशा में जाना चाहते हो, तो मैं दायीं ओर चला जाऊंगा और यदि तुम दायीं दिशा में जाना चाहते हो, तो मैं बायीं ओर चला जाऊंगा.”
೯ದೇಶವೆಲ್ಲಾ ನಿನ್ನ ಎದುರಿಗೆ ಇದೆ; ದಯವಿಟ್ಟು ನನ್ನನ್ನು ಬಿಟ್ಟು ಪ್ರತ್ಯೇಕವಾಗಿ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುವೆನು; ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುವೆನು” ಎಂದು ಹೇಳಿದನು.
10 लोत ने यरदन नदी व उसके आस-पास की हरियाली को देखा; वह चारों तरफ फैली थी और ज़ोअर की दिशा में यरदन नदी भी पानी से भरी थी. वह याहवेह का बगीचा, और मिस्र देश के समान उपजाऊ थी. (यह याहवेह के द्वारा सोदोम व अमोराह को नाश करने के पहले की बात है.)
೧೦ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.
11 इसलिये लोत ने यरदन घाटी को जो, पूर्व दिशा की ओर है, चुन लिया. इस प्रकार लोत तथा अब्राम एक दूसरे से अलग हो गए.
೧೧ಆದುದರಿಂದ ಲೋಟನು ಯೊರ್ದನ್ ಹೊಳೆಯ ಸುತ್ತಣ ಪ್ರದೇಶವನ್ನು ಆರಿಸಿಕೊಂಡು ಮೂಡಣ ಕಡೆಗೆ ಹೊರಟನು.
12 अब्राम कनान देश में बस गए तथा लोत यरदन घाटी के नगरों में. लोत ने अपने तंबू सोदोम नगर के निकट खड़े किए.
೧೨ಹೀಗೆ ಅವರಿಬ್ಬರೂ ಪ್ರತ್ಯೇಕವಾದರು. ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನು ಯೊರ್ದನ್ ಹೊಳೆಯ ಸುತ್ತಣ ಊರುಗಳಲ್ಲಿ ವಾಸ ಮಾಡುತ್ತಾ ಸೊದೋಮಿನ ಸಮೀಪದಲ್ಲಿ ಗುಡಾರ ಹಾಕಿದನು.
13 सोदोम के पुरुष दुष्ट थे और याहवेह की दृष्टि में वे बहुत पापी थे.
೧೩ಆದರೆ ಸೊದೋಮ್ ಪಟ್ಟಣದ ಜನರು ಯೆಹೋವನ ದೃಷ್ಟಿಯಲ್ಲಿ ಬಹು ದುಷ್ಟರೂ ಪಾಪಿಷ್ಠರು ಆಗಿದ್ದರು.
14 लोत से अब्राम के अलग होने के बाद याहवेह ने अब्राम से कहा, “तुम जिस स्थान पर खड़े हो, वहां से चारों ओर देखो.
೧೪ಲೋಟನು ಅಬ್ರಾಮನನ್ನು ಬಿಟ್ಟು ಬೇರೆಯಾದ ನಂತರ ಯೆಹೋವನು ಅಬ್ರಾಮನಿಗೆ, “ನೀನಿರುವ ಸ್ಥಳದಿಂದ ದಕ್ಷಿಣಕ್ಕೂ, ಉತ್ತರಕ್ಕೂ, ಪೂರ್ವಕ್ಕೂ, ಪಶ್ಚಿಮಕ್ಕೂ, ಕಣ್ಣೆತ್ತಿ ನೋಡು.
15 क्योंकि यह सारी भूमि, जो तुम्हें दिख रही है, मैं तुम्हें तथा तुम्हारे वंश को हमेशा के लिए दूंगा.
೧೫ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.
16 मैं तुम्हारे वंश को भूमि की धूल के कण के समान असंख्य बना दूंगा, तब यदि कोई इन कणों को गिन सके, तो तुम्हारे वंश को भी गिन पायेगा.
೧೬ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯವಾಗಿ ಮಾಡುವೆನು. ಭೂಮಿಯಲ್ಲಿರುವ ಧೂಳನ್ನು ಲೆಕ್ಕಮಾಡುವುದಾದರೆ ನಿನ್ನ ಸಂತಾನವನ್ನೂ ಲೆಕ್ಕಿಸಬಹುದು.
17 अब उठो, इस देश की लंबाई और चौड़ाई में चलो फिरो, क्योंकि यह मैं तुम्हें दूंगा.”
೧೭ನೀನೆದ್ದು, ಈ ದೇಶದ ಎಲ್ಲಾ ಕಡೆಯಲ್ಲಿಯೂ ತಿರುಗಾಡು; ಇದನ್ನು ನಿನಗೆ ಕೊಡುವೆನು” ಎಂದು ಹೇಳಿದನು.
18 इसलिये अब्राम ने हेब्रोन में ममरे के बांज वृक्ष के पास अपने तंबू खड़े किए और उन्होंने वहां याहवेह के लिए एक वेदी बनाई.
೧೮ತರುವಾಯ ಅಬ್ರಾಮನು ಗುಡಾರವನ್ನು ತೆಗೆದುಕೊಂಡು ಹೆಬ್ರೋನಿನಲ್ಲಿರುವ ಮಮ್ರೆ ಮೋರೆ ಎಂಬ ತೋಪಿಗೆ ಬಂದು ಅಲ್ಲೇ ವಾಸಮಾಡಿಕೊಂಡು, ಯೆಹೋವನಿಗೆ ಯಜ್ಞವೇದಿಯನ್ನು ಕಟ್ಟಿಸಿದನು.